Property: ಮಂಗಳೂರು ಸೇರಿ ಕರಾವಳಿ ಭಾಗಕ್ಕೆ ಡಿ.ಕೆ ಶಿವಕುಮಾರ್ ಭರ್ಜರಿ ಗುಡ್‌ನ್ಯೂಸ್: ರಿಯಲ್ ಎಸ್ಟೇಟ್‌ಗೂ ಬಂಪರ್

ನೂತನ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಕರಾವಳಿ ಭಾಗದ ಜನರಿಗೆ ಭರ್ಜರಿ ಗುಡ್‌ನ್ಯೂಸ್ ಕೊಟ್ಟಿದ್ದಾರೆ. ಕರ್ನಾಟಕದ ಪ್ರವಾಸೋದ್ಯಮ ಸೇರಿದಂತೆ ವಿವಿಧ ಕ್ಷೇತ್ರಗಳ ಅಭಿವೃದ್ಧಿಗೆ ಡಿ.ಕೆ ಶಿವಕುಮಾರ್ ಅವರು ಆದ್ಯತೆ ಕೊಡುತ್ತಿದ್ದಾರೆ. ಉಪ ಮುಖ್ಯಮಂತ್ರಿ ಆಗಿರುವಾಗಲೇ ಡಿ.ಕೆ ಶಿವಕುಮಾರ್ ಅವರು, ಕರಾವಳಿಯ ಅಭಿವೃದ್ಧಿ ಹಾಗೂ ಪ್ರವಾಸೋದ್ಯಮಕ್ಕೆ ಸಂಬಂಧಿಸಿದಂತೆ ವಿಧಾನಸಭೆಯಲ್ಲಿಯೇ ವಿಷಯ ಪ್ರಸ್ತಾಪಿಸಿದ್ದರು. ಇದೀಗ ಕರಾವಳಿ ಭಾಗದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಸುಸ್ಥಿರ ಪ್ರವಾಸೋದ್ಯಮ, ಸಮೃದ್ಧ ಕರಾವಳಿ ಎಂದು ಸೋಶಿಯಲ್ ಮೀಡಿಯಾ ಎಕ್ಸ್‌ನಲ್ಲಿ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಟ್ವೀಟ್ ಮಾಡಿದ್ದಾರೆ.

ಕರಾವಳಿ ಪ್ರವಾಸೋದ್ಯಮಕ್ಕೆ ಸಂಬಂಧಿಸಿದಂತೆ ಸೋಶಿಯಲ್ ಮೀಡಿಯಾ ಎಕ್ಸ್‌ನಲ್ಲಿ ಟ್ವೀಟ್ ಮಾಡಿರುವ ಡಿ.ಕೆ ಶಿವಕುಮಾರ್ ಅವರು, "ಸುಸ್ಥಿರ ಪ್ರವಾಸೋದ್ಯಮ, ಸಮೃದ್ಧ ಕರಾವಳಿ!. ದೇಶದಲ್ಲೇ ಅತ್ಯಂತ ಸುಂದರ ಹಾಗೂ ಸುದೀರ್ಘ ಇತಿಹಾಸ ಹೊಂದಿರುವ ನಮ್ಮ ಹೆಮ್ಮೆಯ ಕರಾವಳಿ ಭಾಗವನ್ನು ಜಾಗತಿಕ ಮಟ್ಟದ ಪ್ರವಾಸೋದ್ಯಮ ಹಬ್‌ ಆಗಿ ಪರಿವರ್ತಿಸಲು ನಮ್ಮ ಸರ್ಕಾರ ದೃಢ ಸಂಕಲ್ಪ ಮಾಡಿದೆ. ಸ್ಥಳೀಯ ಸಂಸ್ಕೃತಿಯ ಗರಿಮೆ ಹಾಗೂ ನೈಸರ್ಗಿಕ ಸೌಂದರ್ಯವನ್ನು ಜಗತ್ತಿಗೆ ಪರಿಚಯಿಸುವುದರೊಂದಿಗೆ, ಸುಸ್ಥಿರ ಮತ್ತು ಪರಿಸರಸ್ನೇಹಿ ಅಭಿವೃದ್ಧಿಗೆ ನಾವು ಬದ್ಧರಾಗಿದ್ದೇವೆ" ಎಂದಿದ್ದಾರೆ.

Property

ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿ ಕುರಿತಂತೆ ವಿಧಾನಸೌಧದಲ್ಲಿ ನಡೆದ ಸಭೆಯ ಮುಖ್ಯ ಅಂಶಗಳು

ಕರಾವಳಿಯಲ್ಲೇ ಸಂಪುಟ ಸಭೆ: ಕರಾವಳಿಯ ಸ್ಥಳೀಯ ಸಮಸ್ಯೆಗಳನ್ನು ಅರಿತು ತಕ್ಷಣದ ನಿರ್ಧಾರ ಕೈಗೊಳ್ಳಲು ಶೀಘ್ರದಲ್ಲೇ ಕರಾವಳಿ ಭಾಗದಲ್ಲೇ ಕ್ಯಾಬಿನೆಟ್ ಸಭೆ ನಡೆಸಲಾಗುವುದು.

Bidadi Land Acquisition: ಬಿಡದಿ ಟೌನ್‌ಶಿಪ್ ನಿರ್ಮಾಣ ದೇವನಹಳ್ಳಿ ಮಾದರಿ ಅನುಸರಿಸಲು ಡಿಮ್ಯಾಂಡ್
Bidadi Land Acquisition: ಬಿಡದಿ ಟೌನ್‌ಶಿಪ್ ನಿರ್ಮಾಣ ದೇವನಹಳ್ಳಿ ಮಾದರಿ ಅನುಸರಿಸಲು ಡಿಮ್ಯಾಂಡ್

ತಾಂತ್ರಿಕ ತಕರಾರುಗಳಿಗೆ ಬ್ರೇಕ್: ಸಿಆರ್‌ಝಡ್ (CRZ) ಮತ್ತು ಅರಣ್ಯ ಇಲಾಖೆಯಿಂದ ಯೋಜನೆಗಳಿಗೆ ಎದುರಾಗುತ್ತಿರುವ ತಾಂತ್ರಿಕ ತೊಂದರೆಗಳಿಗೆ 15-20 ದಿನಗಳ ಒಳಗಾಗಿ ಪರಿಹಾರದ ವರದಿ ನೀಡಲು ಅಧಿಕಾರಿಗಳಿಗೆ ತಾಕೀತು ಮಾಡಲಾಗಿದೆ.

ಏಕ ಗವಾಕ್ಷಿ (ಸಿಂಗಲ್ ವಿಂಡೋ) ವ್ಯವಸ್ಥೆ: ಹೂಡಿಕೆದಾರರಿಗೆ ಇಲಾಖೆಗಳಿಂದ ಆಗುವ ಕಿರಿಕಿರಿಗಳನ್ನು ತಪ್ಪಿಸಿ, ಸುಗಮ ವ್ಯವಹಾರಕ್ಕಾಗಿ ಏಕ ಗವಾಕ್ಷಿ ಪದ್ಧತಿ ಜಾರಿಗೆ ಒಲವು ತೋರಲಾಗಿದೆ. ಉದ್ಯಮಿಗಳ ಬೇಡಿಕೆಯಂತೆ ಹೆಲಿ ಟೂರಿಸಂಗೆ ಉತ್ತೇಜನ.

ಉದ್ಯೋಗ ಸೃಷ್ಟಿಗೆ ಆದ್ಯತೆ: ಕರ್ನಾಟಕ ಪ್ರವಾಸೋದ್ಯಮ ನೀತಿಯಡಿ ಈಗಾಗಲೇ 7718.63 ಕೋಟಿ ಅಂದಾಜು ಹೂಡಿಕೆಯ 45 ಬೃಹತ್ ಯೋಜನೆಗಳನ್ನು ಅನುಮೋದಿಸಲಾಗಿದ್ದು, ಇದರಿಂದ 4,500 ಯುವಕರಿಗೆ ಉದ್ಯೋಗ ಸಿಗಲಿದೆ. ಈ ಪ್ರಮಾಣವನ್ನು ಮತ್ತಷ್ಟು ಹೆಚ್ಚಿಸಲಾಗುವುದು.

ಜಾಗತಿಕವಾಗಿ ನಮ್ಮ ಕರಾವಳಿ: ಕರಾವಳಿಯ ಸಂಸ್ಕೃತಿ, ಆಚರಣೆ, ಹೆಮ್ಮೆಯನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಸಾರ ಮತ್ತು ಪ್ರಚಾರ ಮಾಡಲಾಗುವುದು.

ಇ-ಖಾತಾ ತಿದ್ದುಪಡಿಗೆ ಹೊಸ ಫಾರ್ಮುಲಾ! ಉಪ ಆಯುಕ್ತರ ಹೆಗಲಿಗೆ ಮಹತ್ವದ ಜವಾಬ್ದಾರಿ
ಇ-ಖಾತಾ ತಿದ್ದುಪಡಿಗೆ ಹೊಸ ಫಾರ್ಮುಲಾ! ಉಪ ಆಯುಕ್ತರ ಹೆಗಲಿಗೆ ಮಹತ್ವದ ಜವಾಬ್ದಾರಿ

ಕಲೆ ಮತ್ತು ಸಿನಿಮಾಗೆ ಪ್ರೋತ್ಸಾಹ: ಖ್ಯಾತ ಚಲನಚಿತ್ರ ನಿರ್ದೇಶಕ ಮತ್ತು ನಟ ರಿಷಬ್ ಶೆಟ್ಟಿ ಅವರ ಸಮ್ಮುಖದಲ್ಲಿ ಕರಾವಳಿಯ ಸಿನಿಮಾ, ಜನಪದ ಕಲೆ, ಸಂಗೀತಕ್ಕೆ ಪ್ರಾಶಸ್ತ್ರ ನೀಡುವ ಬಗ್ಗೆ ಚರ್ಚಿಸಲಾಯಿತು. ಈ ಸರ್ಕಾರದ ಈ ಮಹತ್ವಾಕಾಂಕ್ಷಿ ಯೋಜನೆಗಳನ್ನು ಸಾಧಿಸಲು ಮತ್ತು ಬಂಡವಾಳಗಳನ್ನು ಆಕರ್ಷಿಸಲು ಹೂಡಿಕೆದಾರರಿಗೆ ಸಹಾಯಧನ, ಬಡ್ಡಿ ಸಹಾಯಧನ ಮತ್ತು ರಿಯಾಯ್ತಿಗಳ ಮೂಲಕ ಪ್ರೋತ್ಸಾಹಗಳನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಮಹತ್ವದ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಈ ಮೂಲಕ ಕರಾವಳಿ ಭಾಗದ ಜನರಿಗೆ ಭರ್ಜರಿ ಗುಡ್‌ನ್ಯೂಸ್ ಕೊಟ್ಟಿದ್ದಾರೆ.

ರಿಯಲ್ ಎಸ್ಟೇಟ್‌ಗೂ ಸಹಕಾರಿ

ಇನ್ನು ಪ್ರವಾಸೋದ್ಯಮ ಹಾಗೂ ಹೂಡಿಕೆ ಹೆಚ್ಚಳದಿಂದ ರಿಯಲ್ ಎಸ್ಟೇಟ್‌ಗೂ ಸಹಕಾರಿ ಆಗಲಿದೆ. ಪ್ರಾಪರ್ಟಿ ಬೆಲೆ ಹೆಚ್ಚಳ ಹಾಗೂ ಬೇಡಿಕೆ ಸಹ ಮುಂದಿನ ದಿನಗಳಲ್ಲಿ ಹೆಚ್ಚಾಗುವ ನಿರೀಕ್ಷೆ ಮೂಡಿದೆ. ಕರಾವಳಿಯ ಕೆಲವು ಭಾಗಗಳಲ್ಲಿ ಪ್ರಾಪರ್ಟಿಯ ಬೆಲೆಯು ಹೆಚ್ಚಿಲ್ಲ. ಇದೀಗ ಸರ್ಕಾರದ ಹೊಸ ಕ್ರಮಗಳಿಂದ ಪ್ರವಾಸೋದ್ಯಮ ಅಭಿವೃದ್ಧಿ ಆಗುವುದರೊಂದಿಗೆ ರಿಯಲ್ ಎಸ್ಟೇಟ್ ಸಹ ಬೂಸ್ಟ್‌ ಆಗುವ ಸಾಧ್ಯತೆ ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+