Property Good News: ಮನೆ ಬಾಗಿಲಿಗೆ ಇ - ಪೌತಿ ಖಾತೆ: ಸಚಿವ ಕೃಷ್ಣ ಬೈರೇಗೌಡ
Property Good News: ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿ, ಗ್ರಾಮ ಸೇವಕರು ಮನೆ ಬಾಗಿಲಿಗೆ ಬಂದು ಮೃತ ವ್ಯಕ್ತಿಗಳ ಹೆಸರಿನಲ್ಲಿರುವ ಜಮೀನುಗಳನ್ನು ಅವರ ವಾರಸುದಾರರ ಹೆಸರಿಗೆ ಪೌತಿ ಖಾತೆ ಮಾಡಿಕೊಡುವ ಅಭಿಯಾನ ಕೈಗೊಂಡಿದ್ದು ವಾರಸುದಾರರು ಇದಕ್ಕೆ ಸಹಕರಿಸಬೇಕೆಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ಮನವಿ ಮಾಡಿದ್ದಾರೆ.
ಗುರುವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದ್ದು, ಇ-ಪೌತಿ ಖಾತೆ ಮಾಡಿಸುವ ಸಂಬಂಧ ವಿಎಓಗಳು ವಾರಸುದಾರರನ್ನು ಗುರುತು ಮಾಡಿ ವಿವರಗಳನ್ನು ಪಡೆದು ಕ್ರಮ ಕೈಗೊಳ್ಳಬೇಕು. ಓಟಿಪಿ ಸಮಸ್ಯೆ, ಕೋರ್ಟ್ ವ್ಯಾಜ್ಯ, ಹೆಣ್ಣು ಮಕ್ಕಳಿಗೆ ಆಸ್ತಿ ಕೊಡಬೇಕಾಗುತ್ತದೆಂದು ವಾರಸುದಾರರು ಮಾಹಿತಿ ನೀಡುತ್ತಿಲ್ಲ, ಎರಡು, ಮೂರು ತಲೆಮಾರಗಳ ಪ್ರಕರಣಗಳು ಕಷ್ಟ ಎಂಬ ಸಾಮಾನ್ಯ ಕಾರಣ ನೀಡದೇ ಪ್ರತಿ ಪ್ರಕರಣದಲ್ಲಿ ನಿಖರವಾದ ಕಾರಣ ತಿಳಿದು, ವಾರಸುದಾರರ ಮನವೊಲಿಸಿ ಕ್ರಮ ವಹಿಸಬೇಕು. ಹಾಗೂ 2021ರ ಸುತ್ತೋಲೆ ಪ್ರಕಾರ ಅಭಿಯಾನ ಮಾದರಿಯಲ್ಲಿ ಪ್ರಕರಣಗಳನ್ನು ಇತ್ಯರ್ಥಪಡಿಸುವಂತೆ ನಿರ್ದೇಶನ ನೀಡಿದ್ದಾರೆ.

ಶಿವಮೊಗ್ಗ ಜಿಲ್ಲೆಯಲ್ಲಿ 89434 ಇ-ಪೌತಿ ಪ್ರಕರಣಗಳು ಇದ್ದು, 12726 ಪೂರ್ಣಗೊಂಡಿದೆ. 45470 ಪ್ರಕರಣಗಳು ಬಾಕಿ ಇದ್ದು ಸಂಬಂಧಿಸಿದ ಅಧಿಕಾರಿಗಳು ಮಿಷನ್ ಮೋಡ್‌ಲ್ಲಿ ಕೆಲಸ ಮಾಡಿ ಮೊದಲ ಹಂತದಲ್ಲಿ ಶೇ.75 ರಷ್ಟು ಕೆಲಸ ಮಾಡುವಂತೆ ಸೂಚಿಸಿದ್ದು, 5 ಕೋಟಿ ರೂಪಾಯಿಯನ್ನು ಗ್ರಾಮ ಆಡಳಿತ ಅಧಿಕಾರಿ ಮತ್ತು ಗ್ರಾಮ ಸೇವಕರಿಗೆ ಪ್ರೋತ್ಸಾಹ ಧನ ರೂಪದಲ್ಲಿ ನೀಡಲಾಗುವುದು. ಭೂ ಸುರಕ್ಷಾ ಯೋಜನೆಯನ್ನು ಸಮರ್ಪಕವಾಗಿ ಜಾರಿ ಮಾಡಬೇಕು. ಡಿಇಓಗಳ ಮೂಲಕ ದಾಖಲೆಗಳನ್ನು ಸ್ಕ್ಯಾನ್ ಮಾಡಿಸಬೇಕು. ಈ ಯೋಜನೆಯಡಿ ಸಾಗರ ತಾಲ್ಲೂಕಿನಲ್ಲಿ ನಿಗದಿತ ಪ್ರಮಾಣದಲ್ಲಿ ಪ್ರಗತಿಯಾಗಿಲ್ಲ. ರೆಕಾರ್ಡ್ ರೂಮ್ ಕೌಂಟರ್ ಮೂಲಕ ಪಡೆಯಲಾಗುವ ದಾಖಲಾತಿಗಳಲ್ಲಿ ಭದ್ರಾವತಿ ತಾಲ್ಲೂಕಿನಲ್ಲಿ ಕಡಿಮೆ ಪ್ರಗತಿ ಇದ್ದು, ಮ್ಯಾನುಯಲ್ ಆಗಿ ದಾಖಲಾತಿ ನೀಡಬಾರದು ಎಂದು ಸೂಚನೆ ನೀಡಿದ್ದಾರೆ.
ಕಂದಾಯ ಗ್ರಾಮಗಳ ರಚನೆ
ರಿಜಿಸ್ಟರ್ಡ್ ಸೇಲ್ ಡೀಡ್ ಇರುವುದನ್ನು ಬಿಟ್ಟು ಉಳಿದವರಿಗೆ ವಾಸಿಸುವ ಜಾಗಕ್ಕೆ ಹಕ್ಕು ಪತ್ರ ನೀಡಬೇಕು. 4000 ಅಡಿಗೆ ಒಂದು ಟೈಟಲ್ ಸಿಗುತ್ತದೆ. ಹಕ್ಕುಪತ್ರ ನೀಡುವುದರಿಂದ ವಾಸಿಸುವ ಮನೆಯಾದ್ರೂ ಸ್ವಂತ ಆಗುತ್ತದೆ. ಅಧಿಕಾರಿಗಳು ಕಾನೂನಿನಲ್ಲಿ ಅವಕಾಶ ಇರುವುದನ್ನು ಮಾಡಿಕೊಡಬೇಕು. ಅರ್ಹರನ್ನು ಗುರುತಿಸಿ ಮಾರ್ಚ್ 16ರ ಒಳಗೆ ಹಕ್ಕುಪತ್ರ ನೀಡಲು ಕ್ರಮವಹಿಸಿ ಸರ್ಕಾರಕ್ಕೆ ಸಲ್ಲಿಸಬೇಕು ಈ ಮೂಲಕ ಬಡವರಿಗೆ ಅನುಕೂಲ ಮಾಡಿಕೊಡಬೇಕು ಎಂದರು.
ಮೋಜಿನಿ ವರದಿ: ಮೋಜಿನಿ ಸರ್ವೆಗಾಗಿ 19462 ಅರ್ಜಿಗಳು ಬಂದಿದ್ದು, ಸರ್ವೇ ಇಲಾಖೆಯಲ್ಲಿ 10525 ಬಾಕಿ, ತಹಶಿಲ್ದಾರ್/ಎಸಿ ಕಚೇರಿಯಲ್ಲಿ 7032 ಬಾಕಿ ಸೇರಿದಂತೆ 13557 ಬಾಕಿ ಇದೆ. ಲಭ್ಯವಿರುವ ಸರ್ವೇಯರ್‌ಗಳು, ರೋವರ್‌ಗಳನ್ನು ಬಳಸಿಕೊಂಡು ಸಕಾಲಿಕವಾಗಿ ಸರ್ವೇ ಮಾಡಲು ಕ್ರಮ ವಹಿಸಬೇಕು. ಇಲಾಖೆ ಅಧಿಕಾರಿ, ನೌಕರರು ಆಸಕ್ತಿಯಿಂದ ಬಡವರ ಪರವಾಗಿ ಕೆಲಸ ಮಾಡಬೇಕು ಎಂದರು.
ರೆವೆನ್ಯು ನಿವೇಶನಗಳಿಗೆ ಬಿ-ಖಾತೆ ನೀಡಬೇಕು. ಈ ಕುರಿತು ಅರಿವಿನ ಕೊರತೆ ಇದ್ದು ಅರಿವನ್ನು ಹೆಚ್ಚಿಸಬೇಕು. ಇಲ್ಲವಾದಲ್ಲಿ ಆಸ್ತಿ ವ್ಯವಹಾರಗಳಿಗೆ ಕಷ್ಟವಾಗುತ್ತದೆ. ಹಳೇ ಆಸ್ತಿಗಳಿಗೆ ಇಸ್ವತ್ತು ಸಿಗುತ್ತಿಲ್ಲ. ಆದ್ದರಿಂದ ಡಿಸಿ, ಸಿಇಓ, ಗಳು ಜನರಿಗೆ ತೊಂದರೆಯಾಗದಂತಮ ಅಂತಹ ಪ್ರಕರಣಗಳ ಕುರಿತು ಸೂಕ್ತ ಕ್ರಮ ವಹಿಸಬೇಕು ಎಂದು ತಿಳಿಸಿದ್ದಾರೆ.
ರಿಜಿಸ್ರ‍್ಡ್ ಸೇಲ್ ಡೀಡ್ ಇಲ್ಲದವರಿಗೆ ಕಂದಾಯ ಗ್ರಾಮ ರಚನೆ (ನಗರ ಸೇರಿ)ಮೂಲಕ ಮಾತ್ರ ಸಹಾಯ ಮಾಡಬಹುದು. ಇಲ್ಲವಾದಲ್ಲಿ ಅವರಿಗೆ ತ್ರಿಶಂಕು ಪರಿಸ್ಥಿತಿ ಉಂಟಾಗುತ್ತದೆ. ಅದೂ ಕೂಡ ಮಾರ್ಚ್ 16 ರೊಳಗೆ ಮಾಡಬೇಕು ಎಂದು ಹೇಳಿದ್ದಾರೆ.
ಇನ್ನು ಮುಂದೆ ಪಹಣಿಯೊಂದಿಗೆ ಸ್ಕೆಚ್, ಆಕಾರ್ ಬಂದ್ ಮತ್ತು ಮ್ಯುಟೇಷನ್ ಸೇರಿದಂತೆ ಸಮಗ್ರ ದಾಖಲೆಗಳು ಜನರಿಗೆ ಲಭ್ಯವಾಗುವಂತಹ ಭೂ ಆಧಾರ್ ಎಂಬ ಯೋಜನೆಗೆ ನೀಲಿನಕ್ಷೆ ಹಾಕಿಕೊಳ್ಳಲಾಗಿದೆ.
ನನ್ನ ಭೂಮಿ ಹೆಸರಿನಲ್ಲಿ ದರಕಾಸ್ತು ಜಮೀನುಗಳ ಪೋಡಿ ಅಭಿಯಾನ ಶುರು ಮಾಡಿದ್ದು, ಹಿಂದೆ ಸರ್ಕಾರದಿಂದ ರೈತರಿಗೆ ಮಂಜೂರಾಗಿರುವ ಭೂಮಿಗೆ ಪಕ್ಕಾ ದಾಖಲೆ ಇಲ್ಲದೇ, ಮಾರಾಟ ಮಾಡಲು, ಭಾಗ ಮಾಡಲು, ಬ್ಯಾಂಕ್ ಸೌಲಭ್ಯ ಪಡೆಯಲು ಆಗದೇ ಅತಂತ್ರ ಸ್ಥಿತಿಯಲ್ಲಿರುವ ರೈತರಿಗೆ ಸರ್ಕಾರವೇ ಜಮೀನಿಗೆ ಹೋಗಿ ದರಕಾಸ್ತು ಪೋಡಿ ಮಾಡಿಸುವ ಅಭಿಯಾನವನ್ನು ಕೈಗೊಂಡಿದೆ. ಈ ಯೋಜನೆಯಡಿ ವೇಗವಾಗಿ ಕೆಲಸ ಆಗುತ್ತಿದೆ. ಹಿಂದಿನ ಐದು ವರ್ಷದಲ್ಲಿ 8542 ಪೋಡಿಯಾಗಿದ್ದರೆ 2025 ರ ಜನವರಿಯಿಂದ 2026 ರ ಜನವರಿಯೊಳಗೆ 1.93 ಲಕ್ಷ ಪೋಡಿ ಮಾಡುವ ಮೂಲಕ ರೈತರ ಭೂಮಿ ಮಾಲೀಕತ್ವಕ್ಕೆ ಖಚಿತತೆ ನೀಡಲಾಗಿದೆ.
ಸಾವಿರ ದಿನ ಸಾವಿರಾರು ಕೆಲಸ
ಸರ್ಕಾರ ಈ ಸಾವಿರ ದಿನಗಳಲ್ಲಿ ಇಲಾಖೆಯ ಎಲ್ಲರ ಸಹಕಾರದಿಂದ ಸಾಕಷ್ಟು ಕೆಲಸಗಳನ್ನು ಮಾಡಿದೆ. ಇಲಾಖೆಯಲ್ಲಿ ಸಾಕಷ್ಟು ಸುಧಾರಣೆಯಾಗಿದೆ. ದಾಖಲಾತಿಗಳಿಗಾಗಿ ಕೋರ್ಟ್, ಕಚೇರಿ ಅಲೆಯುತ್ತಿರುವ ಜನರಿಗೆ ಪರಿಹಾರ ನೀಡಲು ಕಂದಾಯ ಇಲಾಖೆ ಬದ್ದವಾಗಿದೆ. ದಾಖಲೆ ಇಲ್ಲದೆ ವಾಸಿಸುತ್ತಿರುವವರಿಗೆ ಕಂದಾಯ ಗ್ರಾಮಗಳ ರಚನೆ ಮೂಲಕ ಅವರ ಸೂರಿಗೆ ಗ್ಯಾರಂಟಿ ನೀಡಲಾಗುತ್ತಿದೆ. ರಾಜ್ಯದಲ್ಲಿ ಸುಮಾರು 2.20 ಲಕ್ಷ ಹಕ್ಕು ಪತ್ರಗಳನ್ನು ನೀಡುತ್ತಿದೆ. ತಹಶೀಲ್ದಾರ್ ಕಚೇರಿಯಲ್ಲಿ ಅವಧಿ ಮೀರಿದ 10774 ಪ್ರಕರಣಗಳು ಇದ್ದು ಪರಿಶೀಲಿಸಿ ವಿಲೇವಾರಿ ಮಾಡಿದ್ದು ಈಗ 492 ಮಾತ್ರ ಬಾಕಿ ಇವೆ. ಎಸಿ ಕಚೇರಿಯಲ್ಲಿದ್ದ 73624 ಅವಧಿ ಮೀರಿದ ಪ್ರಕರಣಗಳನ್ನು ವಿಲೇ ಮಾಡಲು ವಿಶೇಷ ಎಸಿ ಗಳನ್ನು ನೇಮಿಸಿ ಈ ಸಂಖ್ಯೆಯನ್ನು 11400 ಕ್ಕೆ ಇಳಿಸಲಾಗಿದೆ.
ಡಿಜಟಲೀಕರಣ ಪ್ರಕ್ರಿಯೆ
ಜನರಿಗೆ ದಾಖಲಾತಿಗಳು ಸುಲಭವಾಗಿ ಲಭ್ಯವಾಗಬೇಕೆಂಬ ಉದ್ದೇಶದಿಂದ ಕಂದಾಯ ದಾಖಲೆಗಳನ್ನು ಡಿಜಿಟಲೀಕರಣಗೊಳಿಸಲಾಗುತ್ತಿದೆ. ಭೂ ಸುರಕ್ಷಾ ಯೋಜನೆಯಡಿ ದಾಖಲೆಗಳನ್ನು ಸ್ಕ್ಯಾನ್ ಮಾಡಲು ಎಲ್ಲ ತಾಲ್ಲೂಕುಗಳಿಗೆ ಕಂಪ್ಯೂಟರ್‌ಗಳು ಮತ್ತು ಸ್ಕ್ಯಾನರ್‌ಗಳನ್ನು ನೀಡಿದ್ದು ಕಾರ್ಯ ಪ್ರಗತಿಯಲ್ಲಿದೆ. ಮಾರ್ಚ್ನಿಂದ ಕಡ್ಡಾಯವಾಗಿ ಇ-ಆಫೀಸ್ ಜಾರಿ ಮಾಡಲು ಸೂಚಿಸಿದ್ದು ಎಲ್ಲ ವಿಎಓ ಗಳಿಗೆ ಟ್ಯಾಬ್‌ಗಳನ್ನು ನೀಡಲಾಗುವುದು ಎಂದು ಸಚಿವರು ಹೇಳಿದ್ದಾರೆ.
750 ಎಡಿಎಲ್‌ಆರ್ ನೇಮಕ ಮಾಡಲು ಅಧಿಸೂಚನೆ ಹೊರಡಿಸಿದ್ದು ಕೆಲ ತಾಂತ್ರಿಕ ಕಾರಣದಿಂದ ಬಾಕಿ ಇದೆ. ಇದು ಸರಿಹೋದ ಮೇಲೆ ನೇಮಕ ಪ್ರಕ್ರಿಯೆ ಆರಂಭವಾಗುತ್ತದೆ. ಇಲಾಖೆಯಲ್ಲಿ ಸಾಕಷ್ಟು ಟೆಕ್ನಾಲಜಿ ಬಳಕೆ ಮಾಡಲಾಗುತ್ತಿದ್ದು ಸರ್ವೇ ಕಾರ್ಯಕ್ಕೆ ರೋವರ್ಸ್ ನೀಡಲಾಗಿದೆ. ಮತ್ತೆ 600 ರೋವರ್‌ಗಳಿಗೆ ಕಾರ್ಯಾದೇಶ ನೀಡಲಾಗಿದೆ. ಒಟ್ಟು 5000 ರೋವರ್ ಖರೀದಿಗೆ ಸರ್ಕಾರ ಮಂಜೂರಾತಿ ನೀಡಿದ್ದು ಪೂರೈಕೆದಾರರು ಲಭ್ಯವಾದ ನಂತರ ಖರೀದಿಸಲಾಗುವುದು ಎಂದಿದ್ದಾರೆ.
ಭೂ ಸುರಕ್ಷೆ ಯೋಜನೆಯಡಿ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಡಿಟಿಜಲೀಕರಣ ಮಾಡಲಾಗುತ್ತಿದೆ ಬರುವ ವರ್ಷ ಹೊಸ ಸಾಫ್ಟ್ ವೇರ್ ಸಿದ್ದಪಡಿಸುತ್ತಿದ್ದು ಆಕಾರ್ ಬಂದ್ ಶೇ. 100 ಡಿಜಿಟಲ್ ಆಗಬೇಕು. 1857 ರಿಂದ 2004 ನೇ ಇಸವಿವರೆಗಿನ ದಾಖಲೆಗಳನ್ನು ಡಿಜಿಟಲ್ ಮಾಡಲಾಗುತ್ತಿದ್ದು ಇದರಿಂದ ಹಳೆಯ ದಾಖಲಾತಿ ಪಡೆಯಲು ಸುಲಭವಾಗಲಿದೆ ಮತ್ತು ಪಾರದರ್ಶಕತೆ ಇರಲಿದ್ದು ಭೂ ಗ್ಯಾರಂಟಿ ತರಲು ಪ್ರಯತ್ನಗಳು ಸಾಗಿವೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ತಿಳಿಸಿದ್ದಾರೆ.
-
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ












Click it and Unblock the Notifications