Property Good News: ಇನ್ಮುಂದೆ ಈ ಕಟ್ಟಡಗಳ ನಿರ್ಮಾಣಕ್ಕೆ ಒಸಿ & ಸಿಸಿ ಬೇಡ!

Property Good News: ಕರ್ನಾಟಕದ ಆಸ್ತಿದಾರರಿಗೆ ರಾಜ್ಯ ಸರ್ಕಾರವು ಮಹತ್ವದ ಗುಡ್‌ನ್ಯೂಸ್‌ವೊಂದನ್ನು ನೀಡಿದೆ. ಕರ್ನಾಟಕದಲ್ಲಿ ಮನೆಗಳ ನಿರ್ಮಾಣದಲ್ಲಿ ಭಾರೀ ಗೊಂದಲಗಳು ನಿರ್ಮಾಣವಾಗಿದ್ದವು ಅದರಲ್ಲೂ ಮುಖ್ಯವಾಗಿ 30X40 ಮನೆಗಳ ನಿರ್ಮಾಣದ ವಿಚಾರದಲ್ಲಿ ಆಸ್ತಿದಾರರು ಸಂಕಷ್ಟಕ್ಕೆ ಒಳಗಾಗಿದ್ದರು. ಇದೀಗ ಈ ನಿರ್ದಿಷ್ಟ ಕಟ್ಟಡಗಳ ನಿರ್ಮಾಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಭರ್ಜರಿ ಗುಡ್ ನ್ಯೂಸ್ ನೀಡಿದೆ. ಈ ಮೂಲಕ ಕಟ್ಟಡ ನಿರ್ಮಾಣದಾರರಿಗೆ ಹಲವು ದಿನಗಳಿಂದ ಉಳಿದಿದ್ದ ಗೊಂದಲಕ್ಕೆ ಬ್ರೇಕ್ ಬಿದ್ದಂತೆ ಆಗಿದೆ.

ಕರ್ನಾಟಕ ಸರ್ಕಾರವು ಕಟ್ಟಡ ನಿರ್ಮಾಣ ಪ್ರಮಾಣ ಪತ್ರ (ಸಿಸಿ), ಸ್ವಾಧೀನಾನುಭವ ಪ್ರಮಾಣ ಪತ್ರ (ಒಸಿ) ಇಲ್ಲದೆ ಇರುವ ಕಟ್ಟಡಗಳಿಗೆ ವಿದ್ಯುತ್ ಹಾಗೂ ನೀರಿನ ಸಂಪರ್ಕ ಕಲ್ಪಿಸದಂತೆ ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಸಮಸ್ಯೆಗೆ ಸಿಲುಕಿದ್ದ ರಾಜ್ಯದ ಲಕ್ಷಾಂತರ ಕಟ್ಟಡ ಮಾಲೀಕರ ನೆರವಿಗೆ ರಾಜ್ಯ‌ ಕಾಂಗ್ರೆಸ್ ಸರ್ಕಾರ ಮುಂದಾಗಿದೆ ಎಂದು ಹೇಳಲಾಗಿದೆ. ಇದು ಹಲವು ದಿನಗಳಿಂದ ಭಾರೀ ಗೊಂದಲಕ್ಕೆ ಕಾರಣವಾಗಿತ್ತು. ಅಲ್ಲದೇ ಇದೀಗ ಹೊಸ ಆದೇಶದಿಂದಾಗಿ ಮನೆ ಕಟ್ಟಲು ಅನುಮತಿಗಾಗಿ ಅಲೆದಾಡುವುದು ತಪ್ಪಿದಂತೆ ಆಗಲಿದೆ.

Property Good News From now on OC and CC not Required for construction of these buildings

ಈ ವಿಚಾರದಲ್ಲಿ ಆತಂಕಕ್ಕೆ ಒಳಗಾಗಿದ್ದ ನಿವೇಶನಗಳ ಮಾಲೀಕರಿಗೆ ರಿಲೀಫ್ ಸಿಕ್ಕಂತೆ ಆಗಿದೆ ಎಂದು ಸಹ ಹೇಳಲಾಗುತ್ತಿದೆ. ರಾಜ್ಯದಲ್ಲಿರುವ ಎಲ್ಲಾ ನಗರ ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ನಿರ್ಮಿಸುವ ಕಟ್ಟಡಗಳಿಗೆ ಸಿಸಿ ಹಾಗೂ ಒಸಿ ವಿತರಿಸುವ ವಿಚಾರದಲ್ಲಿ ಉಂಟಾಗಿರುವ ಸಮಸ್ಯೆ ನಿವಾರಿಸಲು ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. 1200 ಚದರ ಅಡಿ ವಿಸ್ತೀರ್ಣದವರೆಗಿನ ಕಟ್ಟಡಗಳಿಗೆ ಸಿಸಿ, ಒಸಿ ಪಡೆಯುವುದರಿಂದ ವಿನಾಯಿತಿ ನೀಡಲು ಕಾಯ್ದೆಗೆ ತಿದ್ದುಪಡಿ ತಂದು ನಿವೇಶನ ಮಾಲೀಕರ ಸಂಕಷ್ಟಕ್ಕೆ ಕೊನೆ ಹಾಡಲು ನಿರ್ಧರಿಸಲಾಗಿದೆ ಎಂದು ಕರ್ನಾಟಕ ಕಾಂಗ್ರೆಸ್‌ ಸರ್ಕಾರ ಮಾಹಿತಿ ಹಂಚಿಕೊಂಡಿದೆ.

ರಾಜ್ಯದ ಎಲ್ಲಾ ನಗರ ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಇರುವಂತಹ ಅಥವಾ ನಿರ್ಮಾಣ ಆಗಲಿರುವ ಕಟ್ಟಡಗಳಿಗೆ ಪ್ರಾರಂಭಿಕ ಪ್ರಮಾಣ ಪತ್ರ (ಸಿಸಿ) ಹಾಗೂ ಸ್ವಾಧೀನ ಪ್ರಮಾಣ ಪತ್ರ (ಒಸಿ) ವಿತರಿಸುವು ವಿಚಾರದಲ್ಲಿ ಭಾರೀ ಗೊಂದಲಗಳು ಏರ್ಪಟ್ಟಿತ್ತು. ಇದೀಗ ಈ ವಿಚಾರದಲ್ಲಿ ರಾಜ್ಯ ಸರ್ಕಾರವು ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಇನ್ಮುಂದೆ ಈ ಕಟ್ಟಡಗಳಿಗೆ ಸಿಸಿ ಹಾಗೂ ಒಸಿಯ ಅವಶ್ಯಕತೆ ಇಲ್ಲ ಎಂದು ಹೇಳಲಾಗಿದ್ದು. ಇದರಿಂದ ಈ ಕಟ್ಟಡಗಳ ನಿರ್ಮಾಣ ಮಾಡಲು ನಿರ್ಧರಿಸಿರುವ ಮಾಲೀಕರಿಗೆ ಲಾಭವಾಗಲಿದೆ ಎಂದೇ ಹೇಳಲಾಗಿದೆ.

3 ಹಂತಸ್ತಿನ ಕಟ್ಟಗಳಿಗೆ ವಿನಾಯಿತಿ: ಕರ್ನಾಟಕ ಸರ್ಕಾರದ ಈ ಹೊಸ ನಿರ್ಧಾರದಿಂದಾಗಿ ಗ್ರೇಟರ್ ಬೆಂಗಳೂರು ಸೇರಿದಂತೆ ರಾಜ್ಯದ ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ 1,200 ಚದರ ಅಡಿ ವಿಸ್ತೀಣದ ಮನೆಗಳಿಗೆ ಇನ್ಮುಂದೆ ಸಿಸಿ ಮತ್ತು ಒಸಿ ವಿನಾಯಿತಿ ಇರಲಿದೆ. ಇನ್ನು ಈ ವಿನಾಯಿತಿಯು ನೆಲ ಅಂತಸ್ತು, 2ನೇ ಮಹಡಿ ಅಥವಾ ಸ್ಟಿಲ್ಟ್ ಮತ್ತು 3ನೇ ಅಂತಸ್ತು ಕಟ್ಟಡಗಳಿಗೆ ಮಾತ್ರವೇ ಅನ್ವಯವಾಗಲಿದೆ. ಈ ಹೊಸ ಬದಲಾವಣೆಯಿಂದಾಗಿ ರಾಜ್ಯದ ಲಕ್ಷಾಂತರ ಸಂಖ್ಯೆಯ ಬಡ ಹಾಗೂ ಮಧ್ಯಮ ವರ್ಗದ ಆಸ್ತಿದಾರರಿಗೆ ಅನುಕೂಲವಾಗಲಿದೆ ಎಂದು ಹೇಳಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+