Property Good News: ಕರ್ನಾಟಕದ ಈ ಆಸ್ತಿದಾರರಿಗೆ ಭರ್ಜರಿ ಗುಡ್‌ನ್ಯೂಸ್ ಕೊಟ್ಟ ಸರ್ಕಾರ!
Property Good News: ಕರ್ನಾಟಕ ಸರ್ಕಾರವು ಇ ಖಾತಾ ಹಾಗೂ ಇ ಸ್ವತ್ತಿಗೆ ಸಂಬಂಧಿಸಿದಂತೆ ಮಹತ್ವದ ಅಪ್ಡೇಟ್ಸ್ ನೀಡಿದೆ. ಕರ್ನಾಟಕ ಸರ್ಕಾರವು ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಇ-ಸ್ವತ್ತು 2.0 ತಂತ್ರಾಂಶ ಪ್ರಮುಖ ಬದಲಾವಣೆಗಳನ್ನು ಮಾಡಿದೆ.
ಈ ಮೂಲಕ ಸಾರ್ವಜನಿಕರು ಇ-ಸ್ವತ್ತು ಪೋರ್ಟಲ್ ಮೂಲಕ ಮನೆಯಿಂದಲೇ ಆಸ್ತಿ ದಾಖಲೆಗಳನ್ನು ಪಡೆಯಬಹುದಾಗಿದೆ. ಇ-ಖಾತಾ ವಿತರಣೆಯಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರ ಅನುಮೋದನೆಗೆ ಅವಕಾಶ ಕಲ್ಪಿಸಲಾಗಿದೆ. ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ತೆರಿಗೆಗೆ ಒಳಪಡದ ಎಲ್ಲಾ ಆಸ್ತಿಗಳನ್ನು ತೆರಿಗೆ ವ್ಯಾಪ್ತಿಗೆ ಒಳಪಡಿಸಲು ಅವಕಾಶ ಕಲ್ಪಿಸಲಾಗಿದೆ.

ಇ -ಸ್ವತ್ತು ನಮೂನೆಗಳನ್ನು ನಿಗದಿತ ಕಾಲಾವಧಿಯೊಳಗೆ ಪಡೆಯಬಹುದಾಗಿದೆ. ಗ್ರಾಮ ಪಂಚಾಯತಿ ಸೇವೆಗಳ ಶುಲ್ಕ ಹಾಗೂ ಮ್ಯುಟೇಶನ್ ಶುಲ್ಕ ತಂತ್ರಾಂಶದ ಮೂಲಕವೇ ನಿರ್ಧರಣೆಯಾಗಲಿದೆ. ನಿಗದಿತ ಅವಧಿಯಲ್ಲಿ ಅಧಿಕಾರಿಗಳು ಅನುಮೋದನೆ ನೀಡದಿದ್ದಲ್ಲಿ ಸ್ವಯಂಚಾಲಿತ ಅನುಮೋದನೆಗೆ ಅವಕಾಶ ಕಲ್ಪಿಸಲಾಗಿದೆ. ಮುಂದುವರಿದು ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ಏಕರೂಪದ/ಮಾದರಿಯ ತೆರಿಗೆ ಹಾಗೂ ಶುಲ್ಕಗಳನ್ನು ನಿಗದಿಪಡಿಸಲಾಗಿದೆ.
ಇ-ಸ್ವತ್ತು ಸಹಾಯವಾಣಿ ಸಂಖ್ಯೆ 9483476000 ಗೆ ಕರೆ ಮಾಡಿ. ಇ-ಸ್ವತ್ತು ಪೋರ್ಟಲ್ https://eswathu.karnataka.gov.in/ ಗೆ ಭೇಟಿ ನೀಡಿ, ಮನೆಯಿಂದಲೇ ಇ-ಖಾತಾ ಪಡೆಯುವುದು ಈಗ ಸುಲಭ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರವು ಹೇಳಿದೆ.
ಇ- ಸ್ವತ್ತು ಸಹಾಯವಾಣಿ: ಇ - ಸ್ವತ್ತು ಪಡೆಯಲು ಇರುವ ಎಲ್ಲಾ ಆಡಳಿತಾತ್ಮಕ, ತಾಂತ್ರಿಕ ಸಮಸ್ಯೆಗಳಿಗೆ ಪರಿಹಾರ ನೀಡಲು ಇ - ಸ್ವತ್ತು ಸಹಾಯವಾಣಿ 9483476000 ಸ್ಥಾಪಿಸಲಾಗಿದೆ. ಗ್ರಾಮೀಣ ಭಾಗದ ಜನರು ತಮ್ಮ ಆಸ್ತಿಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಸುಲಭವಾಗಿ ಮತ್ತು ಡಿಜಿಟಲ್ ರೂಪದ ಇ - ಖಾತಾ ಪಡೆಯಲು ಇಲಾಖೆಯು ಅವಕಾಶ ಕಲ್ಪಿಸಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಗ್ರಾಮೀಣ ಭಾಗದ ಆಸ್ತಿದಾರರಿಗೆ ಬಂಪರ್: ಇನ್ನು ಇ - ಸ್ವತ್ತು ಬದಲಾವಣೆಗಳಿಂದಾಗಿ ಕರ್ನಾಟಕದ ಗ್ರಾಮೀಣ ಭಾಗದ ಆಸ್ತಿದಾರರಿಗೆ ಅನುಕೂಲವಾಗಲಿದೆ ಎಂದು ನಿರೀಕ್ಷೆ ಮಾಡಲಾಗಿದೆ. ಇ ಖಾತಾದ ನಂತರ, ಬಿ ಖಾತಾ ಹಾಗೂ ಇ ಸ್ವತ್ತು ವಿಚಾರದಲ್ಲೂ ಗುಡ್‌ನ್ಯೂಸ್ ಕೊಡಲಾಗಿದೆ. ಆದರೆ ಇ ಸ್ವತ್ತು ಬದಲಾವಣೆಗಳ ಬಗ್ಗೆ ಆಸ್ತಿದಾರರಲ್ಲಿ ಹಾಗೂ ಗ್ರಾಮೀಣ ಭಾಗದ ಜನರಲ್ಲಿ ಇನ್ನೂ ಗೊಂದಲದ ವಾತಾವರಣ ಮುಂದುವರಿದಿದೆ.












Click it and Unblock the Notifications