Government Employee: ಸರ್ಕಾರಿ ನೌಕರರ ಆಸ್ತಿ: ರಾಜ್ಯ ಸರ್ಕಾರದಿಂದ ಸರ್ಕಾರಿ ನೌಕರರಿಗೆ ಮಹತ್ವದ ಆದೇಶ, ಏನದು ?
Government Employee: ಕರ್ನಾಟಕದ ಸರ್ಕಾರಿ ನೌಕರರಿಗೆ ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಮಹತ್ವದ ಆದೇಶವೊಂದನ್ನು ಮಾಡಿದೆ. ಅಲ್ಲದೇ ಎಲ್ಲಾ ಸರ್ಕಾರಿ ನೌಕರರು ಈ ನಿಯಮವನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು. ಪಾಲನೆ ಮಾಡದೆ ಇರುವವರ ಮೇಲೆ ಕಠಿಣ ಹಾಗೂ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎನ್ನುವ ಮುನ್ನೆಚ್ಚರಿಕೆಯನ್ನು ಸಹ ಕೊಡಲಾಗಿದೆ. ಹಾಗಾದರೆ ರಾಜ್ಯದ ಸರ್ಕಾರಿ ನೌಕರರಿಗೆ ರಾಜ್ಯ ಕಾಂಗ್ರೆಸ್ ಸರ್ಕಾರವು ನೀಡರುವ ಎಚ್ಚರಿಕೆ ಏನು ಎನ್ನುವ ಸಂಪೂರ್ಣ ವಿವರ ಇಲ್ಲಿದೆ.
ರಾಜ್ಯದಲ್ಲಿ ಸರ್ಕಾರಿ ನೌಕರರಿಗೆ ಸಂಬಂಧಿಸಿದಂತೆ ದೂರುಗಳು ಹೆಚ್ಚಾಗಿರುವುದು ಹಾಗೂ ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಇತ್ತೀಚಿನ ದಿನಗಳಲ್ಲಿ ಹೆಚ್ಚು ಚರ್ಚೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೆಲವೊಂದು ಪ್ರಮುಖ ನಿರ್ಧಾರವನ್ನು ರಾಜ್ಯ ಸರ್ಕಾರ ತೆಗೆದುಕೊಂಡಿದೆ. ಈ ಸಂಬಂಧ ಸರ್ಕಾರಿ ನೌಕರರಿಗೆ ಸುತ್ತೋಲೆಯನ್ನು ಹೊರಡಿಸಲಾಗಿದ್ದು. ಇದನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು ಇಲ್ಲದಿದ್ದಾರೆ, ಆಯಾ ಇಲಾಖೆಯ ಮುಖ್ಯಸ್ಥರನ್ನೇ ಹೊಣೆಗಾರರನ್ನಾಗಿ ಮಾಡುವುದಾಗಿ ಎಚ್ಚರಿಕೆಯನ್ನೂ ನೀಡಲಾಗಿದೆ.

ಸರ್ಕಾರಿ ನೌಕರರ ಬಗ್ಗೆ ಸಾರ್ವಜನಿಕ ವಲಯದಿಂದ ಇತ್ತೀಚಿನ ದಿನಗಳಲ್ಲಿ ಗಂಭೀರವಾದ ಆರೋಪ ಕೇಳಿ ಬರುತ್ತಿದೆ. ಅಲ್ಲದೇ ಲೋಕಾಯುಕ್ತಗೆ ಕೆಲವು ಸರ್ಕಾರಿ ನೌಕರರು ಮಾಹಿತಿ ನೀಡುತ್ತಿಲ್ಲ ಎನ್ನುವ ಬಗ್ಗೆಯೂ ದೂರುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಆಸ್ತಿ ಮಾಹಿತಿಯನ್ನು ಹಂಚಿಕೊಳ್ಳುವುದಕ್ಕೆ ಸೂಚನೆ ನೀಡಲಾಗಿದೆ. ರಾಜ್ಯದ ಎಲ್ಲಾ ಸರ್ಕಾರಿ ನೌಕರರು ಪ್ರತಿ ವರ್ಷ ಅವರ ಆಸ್ತಿ ವಿವರಗಳನ್ನು ಸಲ್ಲಿಕೆ ಮಾಡುವುದು ಕಡ್ಡಾಯ ಎಂದು ರಾಜ್ಯ ಸರ್ಕಾರ ಆದೇಶ ಮಾಡಿದೆ. ಈ ಆದೇಶವನ್ನು ಯಾವುದೇ ಕಾರಣಕ್ಕೂ ಉಲ್ಲಂಘನೆ ಮಾಡಬಾರದು ಎನ್ನುವ ಸೂಚನೆಯನ್ನೂ ಇದೇ ಸಂದರ್ಭದಲ್ಲಿ ಕೊಡಲಾಗಿದೆ.
ಕರ್ನಾಟಕದಲ್ಲಿ ಸರ್ಕಾರಿ ಕೆಲಸ ಮಾಡುತ್ತಿರುವವರು, ಸರ್ಕಾರಿ ನೌಕರರು ಹಾಗೂ ಸಿಬ್ಬಂದಿಯ ವಿರುದ್ಧ ಕೇಳಿ ಬಂದಿದ್ದ ಆರೋಪವನ್ನು ಕರ್ನಾಟಕ ಸರ್ಕಾರವು ಗಂಭೀರವಾಗಿ ಪರಿಗಣಿಸಿದೆ. ರಾಜ್ಯ ಸರ್ಕಾರಿ ನೌಕರರ ಮೇಲೆ ಇತ್ತೀಚಿನ ದಿನಗಳಲ್ಲಿ ಭ್ರಷ್ಟಾಚಾರ ಆರೋಪ ಕೇಳಿ ಬರುತ್ತಿವೆ. ಹೀಗಾಗಿ ಎಲ್ಲಾ ಸರ್ಕಾರಿ ನೌಕರರು ಅವರ ಚರಾಸ್ತಿ ಹಾಗೂ ಸ್ಥಿರಾಸ್ತಿಗಳನ್ನು ಘೋಷಿಸಬೇಕು ಎಂದು ಕರ್ನಾಟಕ ಲೋಕಾಯುಕ್ತ ಹೇಳಿತ್ತು. ಆದರೆ ಕೆಲವು ಸರ್ಕಾರಿ ನೌಕರರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದರು ಎನ್ನಲಾಗಿದ್ದು. ಇದೀಗ ಈ ವಿಚಾರವನ್ನು ರಾಜ್ಯ ಸರ್ಕಾರವು ಗಂಭೀರವಾಗಿ ಪರಿಗಣಿಸಿದೆ.
ಈ ರೀತಿ ಮಾಡದಿದ್ದರೆ ಕಠಿಣ ಕಾನೂನು ಕ್ರಮ: ಇನ್ನು ರಾಜ್ಯದ ಎಲ್ಲಾ ಸರ್ಕಾರಿ ನೌಕರರು ಅವರು ಕೆಲಸಕ್ಕೆ ಸೇರುವಾಗ ಎಷ್ಟು ಆಸ್ತಿ ಇತ್ತು ಹಾಗೂ ಇದಾದ ಮೇಲೆ ಪ್ರತಿ ವರ್ಷವೂ ಎಷ್ಟಿದೆ ಎನ್ನುವುದನ್ನು ಘೋಷಿಸಬೇಕು. ಈಗಾಗಲೇ ಈ ನಿಯಮ ಕಡ್ಡಾಯವಾಗಿ ಇದೆ. ಸರ್ಕಾರಿ ಕೆಲಸಕ್ಕೆ ಸೇರುವಾಗ ಸೇರಿದ ಮೇಲೆ ಅವರ ಹಾಗೂ ಅವರ ಕುಟುಂಬದವರ ಆಸ್ತಿ ವಿವರಗಳನ್ನು ಸಲ್ಲಿಕೆ ಮಾಡಬೇಕು.
ಲೋಕಾಯುಕ್ತಕ್ಕೆ ವಿಳಂಬ ಬೇಡ: ಇನ್ನು ಸರ್ಕಾರಿ ನೌಕರರು ಲೋಕಾಯುಕ್ತಗೆ ಆಸ್ತಿ ವಿವರ ಸಲ್ಲಿಕೆ ಮಾಡುವ ಬಗ್ಗೆಯೂ ಸೂಚನೆ ನೀಡಲಾಗಿದೆ. ಲೋಕಾಯಕ್ತದ ಅಧಿಕಾರಿಗಳು ಯಾವುದೇ ಸರ್ಕಾರಿ ನೌಕರರ ಆಸ್ತಿ ವಿವರ ಕೇಳಿದರೂ ಯಾವುದೇ ವಿಳಂಬವಿಲ್ಲದೆ ಸಕಾಲದಲ್ಲಿ ಸಲ್ಲಿಕೆ ಮಾಡಬೇಕು ಎಂದು ಸೂಚನೆ ನೀಡಲಾಗಿದೆ. ಒಂದೊಮ್ಮೆ ಯಾರಾದರೂ ಈ ನಿಯಮಗಳನ್ನು ಪಾಲನೆ ಮಾಡದೆ ಇದ್ದರೆ ಆಯಾ ಇಲಾಖೆಯ ಮುಖ್ಯಸ್ಥರು ಮತ್ತು ಸಕ್ಷಮ ಪ್ರಾಧಿಕಾರದ ಅಧಿಕಾರಿಗಳನ್ನೇ ನೇರ ಹೊಣೆಗಾರರನ್ನಾಗಿ ಮಾಡುವುದಾಗಿ ರಾಜ್ಯ ಸರ್ಕಾರವು ಎಚ್ಚರಿಕೆ ನೀಡಿದೆ.












Click it and Unblock the Notifications