Property: ಈ 4 ತಾಲೂಕುಗಳ ಆಸ್ತಿ ಮೌಲ್ಯ ಭರ್ಜರಿ ಹೆಚ್ಚಳ: ಡಿ ಕೆ ಶಿವಕುಮಾರ್
ಬೆಂಗಳೂರು, ಜೂನ್ 25: ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಹೆಸರು ಬದಲಾವಣೆ ಕಾರಣಕ್ಕೆ ಏನೆಲ್ಲಾ ಬದಲಾವಣೆಯಾಗುತ್ತಿದೆ ಎಂಬುದು ಜನರಿಗೆ ಅರ್ಥವಾಗುತ್ತಿದೆ. ಹಾರೋಹಳ್ಳಿ, ಕೋಡಹಳ್ಳಿ, ಸಾತನೂರು, ಕನಕಪುರ ಮುಖ್ಯರಸ್ತೆಗಳನ್ನು ಈ ಹಿಂದೆ ಅಗಲ ಮಾಡಲಾಯಿತು. ಆದ ಕಾರಣಕ್ಕೆ ಆಸ್ತಿ ಮೌಲ್ಯ ಹೆಚ್ಚಾಗಿದೆ. ರಸ್ತೆ ಅಗಲೀಕರಣ ಮಾಡಿದಷ್ಟು ಆಸ್ತಿ ಮೌಲ್ಯ ಹೆಚ್ಚಾಗಲಿದೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಹೇಳಿದರು.
ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಹೆಸರು ಬದಲಾವಣೆಗೆ ಕೆಲವೊಬ್ಬರು ಇದನ್ನು ಟೀಕೆ ಮಾಡುತ್ತಿದ್ದಾರೆ. ಅವರುಗಳಿಗೆ ನಾನು ಉತ್ತರ ನೀಡಲು ಹೋಗುವುದಿಲ್ಲ. ನಾವು ನಮಗೆ ಇರುವ ಹೆಸರನ್ನು ಉಳಿಸಿಕೊಂಡಿದ್ದೇವೆ. ಯಾರ ಹೆಸರನ್ನು ಕಿತ್ತುಕೊಂಡಿಲ್ಲ. ಪಿ.ಜಿ.ಆರ್.ಸಿಂಧ್ಯಾ ಅವರು ಮತಗಳು ಹೋಗುತ್ತವೆ ಎಂದು ರಸ್ತೆ ಅಗಲೀಕರಣ ಮಾಡಿರಲಿಲ್ಲ. 500 ಮತಗಳನ್ನು ನೋಡಲು ಹೋದರೆ 5 ಸಾವಿರ ಮತಗಳನ್ನು ಕಳೆದುಕೊಳ್ಳಬೇಕಾಗುತ್ತದೆ ಎಂದು ಹೇಳಿದರು.

ನಾನು ಈ ಹಿಂದೆ ಬೆಂಗಳೂರು ಗ್ರಾಮಾಂತರದ ಜಿಲ್ಲಾ ಪಂಚಾಯತ್ ಸದಸ್ಯನಾಗಿದ್ದೆ. ಸುರೇಶ್ ಅವರು ಬೆಂಗಳೂರು ಹಾಲು ಒಕ್ಕೂಟದ ಸದಸ್ಯರಾಗಿದ್ದಾರೆ. ಸಂಸತ್ ಕ್ಷೇತ್ರವನ್ನು ಬೆಂಗಳೂರು ಗ್ರಾಮಾಂತರ ಎಂದು ಕರೆಯಲಾಗುತ್ತದೆ. ಎಲ್ಲಿಂದ ಎಲ್ಲಿಗೆ ಹೋದರು ಅಮೇರಿಕಾ ಎನ್ನುತ್ತಾರೆ. ಅದೇ ರೀತಿ ಇದೂ ಕೂಡ ಬೆಂಗಳೂರು. ಈಗಾಗಲೇ ರಾಮನಗರ ಕ್ಷೇತ್ರಕ್ಕೆ 1 ಸಾವಿರ ಕೋಟಿಯಷ್ಟು ಅನುದಾನ ನೀಡಲಾಗಿದೆ. ಇದರ ಬಗ್ಗೆ ಅವರು ಪಟ್ಟಿ ಬಿಡುಗಡೆ ಮಾಡುತ್ತಾರೆ. ಚನ್ನಪಟ್ಟಣ ಉಪಚುನಾವಣೆ ವೇಳೆ 300 ಕೋಟಿಗೂ ಹೆಚ್ಚು ಹಣ ಕ್ಷೇತ್ರಕ್ಕೆ ನೀಡಲಾಗಿದೆ. ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯವನ್ನು ಪ್ರಾರಂಭ ಮಾಡಲಾಗಿದೆ ಎಂದು ತಿಳಿಸಿದರು.
ಇಡಿ ವಿಚಾರಣೆ ಎದುರಿಸಲು ನಮ್ಮ ಕುಟುಂಬ ಸದಾ ಸಿದ್ಧ. ಯಾರದ್ದೋ ಹೇಳಿಕೆ ಮೇಲೆ ಡಿ.ಕೆ. ಸುರೇಶ್ ಅವರನ್ನು ವಿಚಾರಣೆಗೆ ಕರೆದಿದ್ದಾರೆ. ಇದನ್ನು ಮಾಧ್ಯಮಗಳು ವೈಭವೀಕರಿಸುವ ಅಗತ್ಯವಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಈ ಹಿಂದೆ ನನ್ನ ಮೇಲೂ ಇಡಿ ಪ್ರಕರಣ ದಾಖಲಿಸಿತ್ತು. ಅದು ಏನಾಯ್ತು? ನಮ್ಮ ರಕ್ಷಣೆಗೆ ಯಾರೂ ಬರಲಿಲ್ಲ. ಕೊನೆಗೆ ನಮಗೆ ರಕ್ಷಣೆ ನೀಡಿದ್ದು ನ್ಯಾಯಾಂಗ ವ್ಯವಸ್ಥೆ. ಜನಪ್ರತಿನಿಧಿಗಳು ತಮ್ಮ ಕ್ಷೇತ್ರದ ಜನ ಬಂದಾಗ ಅವರನ್ನು ಭೇಟಿ ಮಾಡುವು ಸಹಜ. ಇಡಿ ತನಿಖೆಗೆ ಎಲ್ಲಾ ರೀತಿಯ ಸಹಕಾರ ನೀಡಲು ಸುರೇಶ್ ತಯಾರಿದ್ದಾರೆ. ಮಾಧ್ಯಮಗಳು ಹೆಚ್ಚು ಆದ್ಯತೆ ನೀಡಬೇಕಾದ ಪ್ರಕರಣಗಳನ್ನು ಬಿಟ್ಟು, ಇದನ್ನು ಹೆಚ್ಚು ಬಿಂಬಿಸಲು ಮುಂದಾಗಿದ್ದೀರಿ. ಇದರ ಅಗತ್ಯವಿಲ್ಲ ಎಂದು ತಿಳಿಸಿದರು.
ಶಾಸಕ ಬಿ.ಆರ್ ಪಾಟೀಲ್ ಅವರು ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಗ್ರಾಮ ಪಂಚಾಯ್ತಿ ಸದಸ್ಯರು ಕೂಡ ಅಧಿಕಾರಿಗಳು ಹಣ ಪಡೆದಿದ್ದಾರೆ ಎಂಬ ಹೇಳಿಕೆ ಬಗ್ಗೆ ಕೇಳಿದಾಗ, ನಾನು ಈ ವಿಚಾರವಾಗಿ ಏನು ಹೇಳಬೇಕೋ ಹೇಳಿದ್ದೇನೆ. ಉಳಿದಂತೆ ಈ ವಿಚಾರವಾಗಿ ಮುಖ್ಯಮಂತ್ರಿಗಳು ಹಾಗೂ ವಸತಿ ಸಚಿವರು ಸ್ಪಷ್ಟನೆ ನೀಡುತ್ತಾರೆ ಎಂದು ಹೇಳಿದರು.












Click it and Unblock the Notifications