ವಿವಾದಾತ್ಮಕ ಹೇಳಿಕೆ ಹಿನ್ನೆಲೆ: ರಾಜ್ಯದಲ್ಲಿ ಶಾಂತಿ ಸೌಹಾರ್ದತೆ ಕಾಪಾಡಲು ಸಿಎಂ ಮನವಿ
ಬೆಂಗಳೂರು, ಜೂನ್ 10: ಪ್ರವಾದಿ ಕುರಿತು ಬಿಜೆಪಿ ಮುಖಂಡರಾದ ನೂಪುರ್ ಶರ್ಮಾ ಹೇಳಿಕೆ ಖಂಡಿಸಿ ದೇಶದಾದ್ಯಂತ ವಿವಾದ ಭುಗಿಲುಗೊಂಡಿರುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿಯೂ ಹೈ ಅಲರ್ಟ್ ಘೋಷಿಸಲಾಗಿದೆ. ಈ ಮದ್ಯೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, "ಕರ್ನಾಟಕ ಶಾಂತಿಪ್ರಿಯ ರಾಜ್ಯ. ಶಾಂತಿ ಕದಡುವಂತಹ ಕ್ರಮಗಳನ್ನು ಬಿಟ್ಟು ಸೌಹಾರ್ದತೆ ಕಾಪಾಡುವುದು ಒಳ್ಳೆಯದು," ಎಂದು ಎಲ್ಲಾ ಸಂಘಟನೆಗಳಿಗೆ ಮನವಿ ಮಾಡಿದ್ದಾರೆ.
ದೇಶವ್ಯಾಪ್ತಿ ಶುಕ್ರವಾರ ನಡೆದ ಘಟನೆಯ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಶಾಂತಿ ಕಾಪಾಡಲು ಕ್ರಮ ವಹಿಸಲಾಗಿದೆ. ಇಂದು ಡಿಜಿಪಿ, ಎಡಿಜಿಪಿ (ಕಾನೂನು ಮತ್ತು ಸುವ್ಯವಸ್ಥೆ) ಗೃಹ ಇಲಾಖೆ ಕಾರ್ಯದರ್ಶಿಗಳು ಹಾಗೂ ಬೆಂಗಳೂರು ನಗರ ಪೊಲೀಸ್ ಆಯುಕ್ತರೊಂದಿಗೆ ಸಭೆ ನಡೆಸಲಾಗಿದ್ದು, ಕರ್ನಾಟಕದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಈ ಶಾಂತಿ ಸೌಹಾರ್ದತೆಯನ್ನು ಸಂಪೂರ್ಣವಾಗಿ ಕಾಪಾಡಿಕೊಳ್ಳಲು ಪ್ರತಿಯೊಂದು ಪೊಲೀಸ್ ಠಾಣೆಗೆ ಸೂಚನೆಯನ್ನು ನೀಡಬೇಕು. ಜಿಲ್ಲಾ ರಕ್ಷಣಾಧಿಕಾರಿಗಳು ಸಂಬಂಧಿಸಿದವರೊಂದಿಗೆ ಮಾತನಾಡಿ ಕೆ.ಎಸ್.ಆರ್.ಪಿ ತುಕಡಿಯನ್ನು ಸೂಕ್ಷ್ಮ ಪ್ರದೇಶಗಳಲ್ಲಿ ನಿಯೋಜಿಸಬೇಕು ಮತ್ತು ಹಿರಿಯ ಅಧಿಕಾರಿಗಳು ಈ ಬಗ್ಗೆ ಜವಾಬ್ದಾರಿಯನ್ನು ವಹಿಸಬೇಕು ಎಂದು ಸೂಚನೆ ನೀಡಲಾಗಿದೆ. ಕರ್ನಾಟಕದಲ್ಲಿ ಸಂಪೂರ್ಣ ಶಾಂತಿ ಸುವ್ಯವಸ್ಥೆಯ ಜೊತೆಗೆ ಕಾನೂನು ಸುವ್ಯವಸ್ಥೆಯ ನೆಲಸಲಿದೆ ಎಂಬ ಸಂಪೂರ್ಣ ವಿಶ್ವಾಸವಿದೆ ಎಂದರು.
ನಿರೀಕ್ಷೆಯಂತೆ ಬಿಜೆಪಿ ಅಭ್ಯರ್ಥಿಗಳ ಗೆಲುವು:
ಪಕ್ಷದ ನಿರೀಕ್ಷೆಯಂತೆ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಗಳು ರಾಜ್ಯಸಭೆಗೆ ಆರಿಸಿಬರುತ್ತಿದ್ದಾರೆ. ನಮ್ಮ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಯವರ ಶಕ್ತಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾ ಅವರ ಮಾರ್ಗದರ್ಶನ, ನಳಿನ್ ಕುಮಾರ್ ಕಟೀಲ್ ಅವರ ಸಹಕಾರದಿಂದ, ಒಗ್ಗಟ್ಟಾಗಿ ಶ್ರಮಿಸಿದ ಫಲದಿಂದ ಈ ಜಯ ಸಾಧಿಸಲು ಸಾಧ್ಯವಾಗಿದೆ. ಎಲ್ಲರಿಗೂ ಧನ್ಯವಾದಗಳನ್ನು ಅರ್ಪಿಸುವುದಾಗಿ ತಿಳಿಸಿದರು.

ಕೋವಿಡ್: ಪರಿಸ್ಥಿತಿ ನಿಯಂತ್ರಣಕ್ಕೆ ಕ್ರಮ
ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವರು ಪರಿಸ್ಥಿತಿಯನ್ನು ಮೈಕ್ರೋ ಮಟ್ಟದಲ್ಲಿ ಗಮನಿಸುತ್ತಿದ್ದಾರೆ. ಪ್ರತಿ ಪಿಹೆಚ್‍ಸಿ ಕೇಂದ್ರದಲ್ಲಿ ಗಮನಿಸುತ್ತಿದ್ದಾರೆ. ಹಿಂದಿನ ಅನುಭವದ ಆಧಾರದ ಮೇಲೆ ಪರಿಸ್ಥಿತಿಯನ್ನು ಪ್ರಾರಂಭದಲ್ಲಿಯೇ ನಿಯಂತ್ರಿಸುವ ವಿಶ್ವಾಸವಿದೆ. ಬೂಸ್ಟರ್ ಡೋಸ್ ಹೆಚ್ಚು ನೀಡಲು ಮತ್ತೊಂದು ಅಭಿಯಾನವನ್ನು ಕೈಗೊಳ್ಳಲಾಗುವುದು. ಅಭಿಯಾನದಲ್ಲಿ ಸಂಘಸಂಸ್ಥೆಗಳನ್ನು ಸೇರ್ಪಡೆ ಮಾಡಿಕೊಳ್ಳಲಾಗುವುದು. ಕೋವಿಡ್ ಸೂಕ್ತ ನಡವಳಿಕೆಯನ್ನು ಎಲ್ಲರೂ ಪಾಲಿಸಬೇಕು. ಪಕ್ಕದ ರಾಜ್ಯಗಳಾದ ಮಹಾರಾಷ್ಟ್ರ ಹಾಗೂ ಕೇರಳ ರಾಜ್ಯಗಳಿಂದ ಆಗಮಿಸುವವರ ಮೇಲೆಯೂ ನಿಗಾ ವಹಿಸಲಾಗುವುದು. ಲಸಿಕೆಗಳನ್ನು ಉಚಿತವಾಗಿ ನೀಡುವ ಬಗ್ಗೆ ಕೇಂದ್ರ ಸರ್ಕಾರ ತೀರ್ಮಾನ ಮಾಡಬೇಕು ಎಂದರು.
Recommended Video
-
'Bagalkot: ರಾಜ್ಯದಲ್ಲಿ ಎಸ್ಸಿ, ಎಸ್ಟಿ, ಓಬಿಸಿ ವಿರೋಧಿ ಸರ್ಕಾರವಿದೆ; ಕಾಂಗ್ರೆಸ್ಗೆ ನಿಮ್ಮ ಶಕ್ತಿ ತೋರಿಸಿ'' -
ಪಾಪರ್ ಸರ್ಕಾರದ ಸಾಹುಕಾರ ಸಿದ್ದರಾಮಯ್ಯ: ಬಾಗಲಕೋಟೆ ಮೆಡಿಕಲ್ ಕಾಲೇಜ್ ಬಗ್ಗೆ ಬೊಮ್ಮಾಯಿ ಪ್ರಶ್ನೆ -
ಬಾಗಲಕೋಟೆಗೆ ಸಿದ್ದರಾಮಯ್ಯ ದ್ರೋಹ ಮಾಡಿದ್ರೆ ಪಕ್ಷ ಮತ್ತೆ ಗೆಲ್ಲುತ್ತಿತ್ತೇ? ಬಸವರಾಜ ಬೊಮ್ಮಾಯಿಗೆ ಕಾಂಗ್ರೆಸ್ ತಿರುಗೇಟು -
Basavaraj Bommai: ನಾನು ಗೌರವ ಡಾಕ್ಟರೇಟ್ ಸ್ವೀಕರಿಸುವುದಿಲ್ಲ ಎಂದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ -
Karnataka Rain: ಚಂಡಮಾರುತ ಪ್ರಸರಣ: ಬೆಂಗಳೂರು ಸೇರಿ ಕರ್ನಾಟಕದ ವಿವಿಧ ಭಾಗಗಳಲ್ಲಿ 6 ದಿನ ಮಳೆ: ಐಎಂಡಿ ವರದಿ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ -
April 5 Horoscope: ನಿಮ್ಮ ಅದೃಷ್ಟ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿ -
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್ -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
Gold and Silver Rate Today April 5: ಚಿನ್ನ - ಬೆಳ್ಳಿ ಪ್ರಿಯರಿಗೆ ಗುಡ್ನ್ಯೂಸ್, ಮುಂದಿನ ವಾರ ಹೇಗಿರಲಿದೆ ಬಂಗಾರದ ಬೆಲೆ -
Bengaluru Migration: ಅಸ್ಸಾಂನಿಂದ ಬೆಂಗಳೂರಿಗೆ ಬರುವವರ ಸಂಖ್ಯೆ ಕಡಿಮೆಯಾಗಿದೆ ಎಂದ ಸಂಸದ ತೇಜಸ್ವಿ ಸೂರ್ಯ












Click it and Unblock the Notifications