ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನೂಪುರ್ ಶರ್ಮಾ ಬಂಧನಕ್ಕೆ ದೇಶದಾದ್ಯಂತ ಪ್ರತಿಭಟನೆ: ಕರ್ನಾಟಕದಲ್ಲೂ ಹೈ ಅಲರ್ಟ್

|
Google Oneindia Kannada News

ಬೆಂಗಳೂರು, ಜೂ.10: ಬಿಜೆಪಿ ಮುಖಂಡರಾದ ನೂಪುರ್ ಶರ್ಮಾ ಮಹಮದ್ ಪೈಗಂಬರ್ ಬಗ್ಗೆ ನೀಡಿದ್ದ ಹೇಳಿಕೆಯ ಕಿಚ್ಚು ದೇಶವ್ಯಾಪಿ ಹಬ್ಬುತ್ತಿದೆ. ಮುಸ್ಲಿಂ ಸುಮುದಾಯ ಬೀದಿಗಿಳಿದು ಪ್ರತಿಭಟನೆಗಳನ್ನು ಮಾಡಿ ನೂಪುರ್ ಶರ್ಮಾ ಬಂಧನಕ್ಕೆ ಆಗ್ರಹಿಸುತ್ತಿವೆ. ಕೆಲವು ರಾಜ್ಯಗಳಲ್ಲಿ ಸಿಕ್ಕ ಸಿಕ್ಕ ವಸ್ತುಗಳಿಗೆ ಬೆಂಕಿದ್ದಾರೆ. ಇದರಿಂದ ಎಚ್ಚೆತ್ತಾ ಕೇಂದ್ರ ಗೃಹ ಇಲಾಖೆ ಎಲ್ಲಾ ರಾಜ್ಯಗಳಿಗೂ ಎಚ್ಚರ ವಹಿಸುವಂತೆ ಸೂಚನೆಯನ್ನು ನೀಡಿದೆ.

ಬಿಜೆಪಿಯ ನಾಯಕಿ ನೂಪುರ್ ಶರ್ಮಾ ಖಾಸಗಿ ಸುದ್ದಿವಾಹಿಯ ಚರ್ಚೆಯ ಸಂದರ್ಭದಲ್ಲಿ ಮಹಮದ್ ಪೈಗಂಬರ್ ಬಗ್ಗೆ ಅವಹೇಳನಕಾರಿಯಾದ ಹೇಳಿಕೆಯನ್ನು ಕೊಟ್ಟ ಬಗ್ಗೆ ಆಕ್ರೋಶ ಭುಗಿಲೆದ್ದಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಈ ವಿಚಾರ ಚರ್ಚೆಗೆ ಬಂದು ನೂಪುರ್ ಶರ್ಮಾ ಹೇಳಿಕೆಯನ್ನು ಸುಮಾರು 17ಕ್ಕೂ ಹೆಚ್ಚು ದೇಶಗಳು ಖಂಡನೆ ವ್ಯಕ್ತಪಡಿಸಿದ್ದರು. ಇದರಿಂದ ನೂಪುರ್ ಶರ್ಮಾ ಮೇಲೆ ಬಿಜೆಪಿ ಪಕ್ಷದ ವತಿಯಿಂದ ಕ್ರಮವನ್ನು ಕೈಗೊಂಡಿತ್ತು.

ದೇಶದ ಉತ್ತರಪ್ರದೇಶ, ದೆಹಲಿ, ತಲಂಗಾಣ, ಮಹಾರಾಷ್ಟ್ರ ಸೊಲ್ಲಾಪುರ ಸೇರಿದಂತೆ ದೇಶದ ಹಲವೆಡೆ ಸಾವಿರಾರು ಮುಸ್ಲಿಂ ಸಮುದಾಯದ ಜನರು ನೂಪುರ್ ಶರ್ಮಾ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರವಾದಿ ಮಹಮದ್ ಪೈಗಂಬರ್ ವಿರುದ್ದ ವಿವಾದಾತ್ಮಕ ಹೇಳಿಕೆಯನ್ನು ನೀಡಿರುವುದು ಸಮುದಾಯೊಂದರ ಆಕ್ರೋಶ ದೊಡ್ಡ ಮಟ್ಟದಲ್ಲಿಯೇ ವ್ಯಕ್ತವಾಗುತ್ತಿದೆ.

ರಾಜ್ಯಗಳು ಕಾನೂನು ಸುವ್ಯವಸ್ಥೆ ಹದಗೆಡದಂತೆ ಕ್ರಮಕ್ಕೆ ಸೂಚನೆ

ರಾಜ್ಯಗಳು ಕಾನೂನು ಸುವ್ಯವಸ್ಥೆ ಹದಗೆಡದಂತೆ ಕ್ರಮಕ್ಕೆ ಸೂಚನೆ

ಬಿಜೆಪಿ ನಾಯಕಿ ನೂಪುರ್ ಶರ್ಮಾ ವಿರುದ್ದ ದೇಶಾದ್ಯಂತ ಆಕ್ರೋಶ ಭುಗಿಲೆದ್ದಿರುವುದರಿಂದ ಕೇಂದ್ರ ಗೃಹ ಇಲಾಖೆ ರಾಜ್ಯಗಳಿಗೆ ಎಚ್ಚರವಹಿಸುವಂತೆ ಸಂದೇಶವನ್ನು ಕಳಿಸಿದೆ. ಆಯಾ ರಾಜ್ಯಗಳು ಕಾನೂನು ಸುವ್ಯವಸ್ಥೆ ಹದಗೆಡದಂತೆ ಕ್ರಮವನ್ನು ವಹಿಸಲು ಸೂಚನೆಯನ್ನು ನೀಡಲಾಗಿದೆ. ಕೇಂದ್ರ ಗುಪ್ತಚರ ಇಲಾಖೆಗಳಿಂದಲೂ ರಾಜ್ಯ ಗುಪ್ತಚರ ಇಲಾಖೆಗಳಿಗೆ ಮಾಹಿತಿಯನ್ನು ನೀಡಿದ್ದು ಸೂಕ್ಷ್ಮ ಅತೀ ಸೂಕ್ಷ್ಮ ಪ್ರದೇಶಗಳಲ್ಲಿ ಕಣ್ಣಿಟ್ಟಿರುವಂತೆ ಸೂಚನೆಯನ್ನು ರವಾನಿಸಲಾಗಿದೆ.

ಅತಿ ಸೂಕ್ಷ್ಮ, ಸೂಕ್ಷ್ಮ ಪ್ರದೇಶಗಳನ್ನು ಪಟ್ಟಿ

ಅತಿ ಸೂಕ್ಷ್ಮ, ಸೂಕ್ಷ್ಮ ಪ್ರದೇಶಗಳನ್ನು ಪಟ್ಟಿ

ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಡಿಜಿ , ಐಜಿಪಿ ಪ್ರವೀಣ್ ಸೂದ್, ಕಾನೂನು ಸುವ್ಯವಸ್ಥೆಯ ಎಡಿಜಿಪಿ ಅಲೋಕ್ ಕುಮಾರ್, ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಪ್ರತಾಪ್ ರೆಡ್ಡಿಯನ್ನು ವಿಧಾನಸೌಧಕ್ಕೆ ಕರೆಸಿ ಮಾತುಕತೆ ನಡೆಸಿದ್ದಾರೆ. ರಾಜ್ಯದಲ್ಲಿಯೂ ಕಾನೂನು ಸುವ್ಯವಸ್ಥೆ ಹಾಳಾಗದಂತೆ ಪೊಲೀಸರು ಕಟ್ಟು ನಿಟ್ಟಿನ ಕ್ರಮವನ್ನು ಕೈಗೊಳ್ಳಲು ಸಿಎಂ ಖಡಕ್ ಸೂಚನೆಯನ್ನು ನೀಡಿದ್ದಾರೆ. ರಾಜ್ಯದಲ್ಲಿ ಅತಿ ಸೂಕ್ಷ್ಮ, ಸೂಕ್ಷ್ಮ ಪ್ರದೇಶಗಳನ್ನು ಪಟ್ಟಿ ಮಾಡಿ ಪೊಲೀಸ್ ಬಿಗಿ ಬಂದೋಬಸ್ತ್ ವ್ಯವಸ್ಥೆಯನ್ನು ಮಾಡುಬೇಕೆಂದು ಸೂಚಿಸಲಾಗುತ್ತಿದೆ.

ಆಯಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭದ್ರತೆ

ಆಯಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭದ್ರತೆ

ರಾಜಧಾನಿ ಬೆಂಗಳೂರಿನಲ್ಲೂ ಹಲವಾರು ಸೂಕ್ಷ್ಮ ಪ್ರದೇಶಗಳಿವೆ. ಕೋಮು ಸಂಘರ್ಷ ಹೆಚ್ಚಾಗುವ , ಕಾನೂನು ಸುವ್ಯವಸ್ಥೆ ಹದಗೆಡುವಂತಹ ಪ್ರದೇಶಗಳಲ್ಲಿ ಆಯಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭದ್ರತೆಯನ್ನು ಕೈಗೊಳ್ಳುವುದು. ಅಪಾಯದ ಮುನ್ಸೂಜನೆ ಸಿಕ್ಕ ಪಕ್ಷದಲ್ಲಿ ಆಯಾ ಡಿವಿಷನ್‌ನಿಂದ ಹೆಚ್ಚುವರಿ ಪೊಲೀಸರನ್ನು ಭದ್ರತೆ ನಿಯೋಜನೆ ಮಾಡಲು ನಗರ ಪೊಲೀಸ್ ಆಯುಕ್ತರು ಡಿಸಿಪಿಗಳಿಗೆ ಸೂಚನೆಯನ್ನು ನೀಡಿದ್ದಾರೆ.

ಸಿಎಂ ಬಸವರಾಜ ಬೊಮ್ಮಾಯಿಗೆ ಕಾನೂನು ಸುವ್ಯವಸ್ಥೆ ಬಗ್ಗೆ ಮಾಹಿತಿ

ಸಿಎಂ ಬಸವರಾಜ ಬೊಮ್ಮಾಯಿಗೆ ಕಾನೂನು ಸುವ್ಯವಸ್ಥೆ ಬಗ್ಗೆ ಮಾಹಿತಿ

ಸಿಎಂ ಬಸವರಾಜ ಬೊಮ್ಮಾಯಿ ಗೃಹ ಸಚಿವರಾಗಿಯೂ ಖಾತೆಯನ್ನು ನಿರ್ವಹಿಸಿರುವ ಅನುಭವ ಇರುವವರಾಗಿದ್ದಾರೆ. ಸಿಎಂ ಪೊಲೀಸ್ ಹಿರಿಯ ಅಧಿಕಾರಿಗಳ ಸಭೆಯನ್ನು ಕೆರದಿದ್ದು. ಯಾವ ರೀತಿಯಲ್ಲಿ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ. ಯಾವ ರೀತಿಯಲ್ಲಿ ಕ್ರಮಗೊಳ್ಳಬೇಕು ಎಂದು ಸೂಚನೆಯನ್ನು ನೀಡಲಿದ್ದಾರೆ. ಈ ಸಭೆಯಲ್ಲಿ ಗೃಹ ಇಲಾಖೆಯ ಹಿರಿಯ ಅಧಿಕಾರಿಗಳು ಸಹ ಭಾಗಿಯಾಗಲಿದ್ದಾರೆ.

ಬಿಜೆಪಿಯ ನಾಯಕಿ ಮಾತಿನಿಂದ ಹೊತ್ತಿದ ಕಿಡಿ ದೇಶದಾದ್ಯಂತ ವಿಸ್ತಾರಗೊಳ್ಳುತ್ತಿರುವುದು ದೇಶದ ಕಾನೂನು ಸುವ್ಯವಸ್ಥೆಗೆ ನಿಜಕ್ಕೂ ಆತಂಕಕಾರಿಯಾಗಿದ್ದು ಪೊಲೀಸರ ಕಠಿಣಕ್ರಮದ ಅವಶ್ಯಕವಾಗಿ ಬೇಕಿದೆ.

Recommended Video

ಪ್ರವಾದಿ ಬಗ್ಗೆ ವಿವಾದಿತ ಹೇಳಿಕೆ: ಜಾರ್ಖಂಡ್ನಲ್ಲಿ ಹಿಂಸಾರೂಪ ಪಡೆದ ಪ್ರತಿಭಟನೆ:ಇಬ್ಬರ ಸಾವು | Oneindia Kannada

English summary
BJP leader Nupur Sharma's statement about Mohammed Pygambar is raging all over the country. Muslim protests are taking to the streets and demanding the arrest of Nupur Sharma. In some states, there are fires for elusive objects. The Central home Department has been alerted to all the states, know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X