ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಕಂಟ್ರೋಲ್‌ಗೆ ಎಡಿಜಿಪಿ ಅಲೋಕ್ ಕುಮಾರ್ ಪ್ಲಾನ್

|
Google Oneindia Kannada News

ಬೆಂಗಳೂರು, ಜೂ. 11: ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಪೊಲೀಸರು ತೀವ್ರ ಕಟ್ಟೆಚ್ಚರಿಕೆಯನ್ನು ವಹಿಸುವಂತೆ ಕಾನೂನು ಸುವ್ಯವಸ್ಥೆಯ ಎಡಿಜಿಪಿ ಅಲೋಕ್ ಕುಮಾರ್ ಖಡಕ್ ಸೂಚನೆಯನ್ನು ಕೊಟ್ಟಿದ್ದಾರೆ. ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಪ್ರದೇಶಗಳನ್ನು ಪಟ್ಟಿ ಮಾಡಿಕೊಂಡು ಪೆಟ್ರೋಲಿಂಗ್ ಮಾಡಲು ಸೂಚನೆಯನ್ನು ನೀಡುವ ಜೊತೆಗೆ ಕಾನೂನು ಸುವ್ಯವಸ್ಥೆ ಹಾಳಾಗದಂತೆ ತಡೆಗಟ್ಟುವ ಬಗ್ಗೆ ಸೂಕ್ತ ಮಾರ್ಗದರ್ಶನವನ್ನು ನೀಡುತ್ತಿದ್ದಾರೆ.

ಬಿಜೆಪಿ ವಕ್ತಾರೆ ನೂಪರ್ ಶರ್ಮಾ ಮಹಮದ್ ಪೈಗಂಬರ್ ವಿರುದ್ದ ನೀಡಿದ್ದ ಹೇಳಿಕೆೆಯನ್ನು ಖಂಡಿಸಿ ರಾಜ್ಯವೂ ಸೇರಿದಂತೆ ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ. ಕೆಲವು ರಾಜ್ಯದಲ್ಲಿ ಪ್ರತಿಭಟನೆಯ ತೀವ್ರತೆ ಹೆಚ್ಚಾಾಗಿ ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ನಷ್ಟವನ್ನುಂಟು ಮಾಡುತ್ತಿದ್ದಾರೆ. ಈ ಬಗ್ಗ ಎಚ್ಚೆತ್ತಾ ಕೇಂದ್ರ ಗೃಹ ಇಲಾಖೆ ರಾಜ್ಯಗಳಿಗೆ ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ಎಚ್ಚರಿಕೆ ವಹಿಸುವಂತೆ ಸಂದೇಶವನ್ನು ರವಾಸಿತ್ತು.

ಕೇಂದ್ರ ಗೃಹಇಲಾಖೆಯ ಸಂದೇಶವನ್ನು ಗಂಭೀರವಾಗಿ ಪರಿಗಣಿಸಿದ ಮುಖ್ಯಮಂತ್ರಿಗಳು ಜೂನ್ 10ರಂದೇ ಪೊಲೀಸ್ ಹಿರಿಯ ಅಧಿಕಾರಿಗಳು ಮತ್ತು ಗೃಹ ಇಲಾಖೆಯ ಅಧಿಕಾರಿಗಳ ಸಭೆಯನ್ನು ನಡೆಸಿ ರಾಜ್ಯದಲ್ಲಿ ಕಟ್ಟುನಿಟ್ಟಿನ ಕ್ರಮಕ್ಕೆ ಮತ್ತು ಕಾನೂನು ಸುವ್ಯವಸ್ಥೆ ಹಾಳಾಗದಂತೆ ಸೂಕ್ತ ಕ್ರಮವನ್ನು ಸೂಚನೆಯನ್ನು ನೀಡಲಾಯಿತು.

ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸರ ಗಸ್ತು

ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸರ ಗಸ್ತು

ಸಿಎಂ ಬಸವರಾಜ ಬೊಮ್ಮಾಯಿ ಸಭೆಯ ಬಳಿಕ ಕಾನೂನು ಸುವ್ಯವಸ್ಥೆಯ ಎಡಿಜಿಪಿ ಅಲೋಕ್ ಕುಮಾರ್ ಖಡಕ್ ಸೂಚನೆಯನ್ನು ನೀಡಿದ್ದಾರೆ. ಎಸ್ಪಿ ರ್ಯಾಂಗಿಂಗ್ ಅಧಿಕಾರಿಗಳು ಸೇರಿಂದಂತೆ ಜಿಲ್ಲೆಯ ಪೊಲೀಸ್ ನಗರಗಳ ಪೊಲೀಸರಿಗೆ ಸೂಚನೆಯನ್ನು ನೀಡಿದ್ದಾರೆ. ಸೂಕ್ಷ್ಮ ಪ್ರದೇಶಗಳನ್ನು ಗಮನದಲ್ಲಿಟ್ಟುಕೊಂಡು ಪೆಟ್ರೋಲಿಂಗ್ ಅನ್ನು ಮಾಡುವಂತೆ ಸೂಚನೆಯನ್ನು ನೀಡಿದ್ದಾರೆ. ಬೆಳಗ್ಗೆ ಮತ್ತು ರಾತ್ರಿ ಏರಿಯಾಗಳಲ್ಲಿ ರೌಂಡ್‌ಗಳನ್ನು ಹೆಚ್ಚಿಸಲು ಸಲು ಸೂಚಿಸಲಾಗಿದೆ.

ನಿಯಮ ಉಲ್ಲಂಘಿಸಿದರೇ ಕಾನೂನು ಕ್ರಮ

ನಿಯಮ ಉಲ್ಲಂಘಿಸಿದರೇ ಕಾನೂನು ಕ್ರಮ

ಮುಸ್ಲಿಂರು ಪ್ರತಿಭಟನೆಯನ್ನು ಮಾಡಬೇಕಾದಲ್ಲಿ ಅನುಮತಿಯನ್ನು ಪಡೆಯಬೇಕು. ಅನುಮತಿಯನ್ನು ಪಡೆಯದೇ ಜನರು ಒಂದೆಡೆ ಗುಂಪನ್ನು ಸೇರಿರುವುದು ಕಂಡು ಬಂದರೆ ಕಾನೂನು ಕ್ರಮವನ್ನು ಕೈಗೊಳ್ಳಲಾಗುತ್ತದೆ. ಪೊಲೀಸರು ಜನರು ಗುಂಪು ಸೇರುವುದನ್ನು ತಡೆಯಲು ತಿಳಿಸಲಾಗಿದೆ. ಜಿಲ್ಲಾ ಕೇಂದ್ರಗಳನ್ನು ಗಮನದಲ್ಲಿಟ್ಟುಕೊಂಡು ಭದ್ರತೆಯನ್ನು ಕೈಗೊಳ್ಳಲು ಸೂಚಿಸಲಾಗಿದೆ.

ಮಸ್ಜೀದ್ ಸಮೀಪದಲ್ಲಿ ನಿಗಾ ಇಡುವಂತೆ ಸೂಚನೆ

ಮಸ್ಜೀದ್ ಸಮೀಪದಲ್ಲಿ ನಿಗಾ ಇಡುವಂತೆ ಸೂಚನೆ

ಸರ್ವೇ ಸಾಮಾನ್ಯವಾಗಿ ಮುಸ್ಲಿಂ ಸಮುದಾಯ ನಮಾಜ್ ಸಂದರ್ಭದಲ್ಲಿ ಸಾಮೂಹಿಕವಾಗಿ ಗುಂಪನ್ನು ಸೇರುತ್ತಾರೆ. ನಮಾಜ್ ಮಾಡಲು ಯಾವುದೇ ಅಡ್ಡಿ ಆತಂಕವಿಲ್ಲ. ಆದರೆ ನಮಾಜ್ ಸಂದರ್ಭ ಮತ್ತು ನಂತರದಲ್ಲಿ ಮುಸ್ಲಿಂ ಸಮುದಾಯ ಒಟ್ಟೋಟ್ಟಿಗೆ ಹೊರಬರುವ ಹಿನ್ನೆಲೆಯಲ್ಲಿ ಮಸ್ಜೀದ್ ಸಮೀಪದಲ್ಲಿ ನಿಗಾ ಇಡುವಂತೆ ಸೂಚನೆಯನ್ನು ನೀಡಲಾಗಿದೆ. ಆ ಮೂಲಕ ಸಾಮೂಹಿಕವಾಗಿ ಹೊರಬಂದವರು ಯಾವುದೇ ಗಲಭೆಗಳಲ್ಲಿ ಪಾಲ್ಗೊಳ್ಳದಿರಲು ಸೂಚನೆಯನ್ನು ನೀಡಲಾಗಿದೆ.

ಬಾಟಲ್ಗಳಲ್ಲಿ ಪೆಟ್ರೋಲ್ ತೆಗೆದುಕೊಂಡು ಹೋಗುವಂತಿಲ್ಲ

ಬಾಟಲ್ಗಳಲ್ಲಿ ಪೆಟ್ರೋಲ್ ತೆಗೆದುಕೊಂಡು ಹೋಗುವಂತಿಲ್ಲ

ಸಂಜೆ ಮತ್ತು ರಾತ್ರಿಯ ವೇಳೆಯಲ್ಲಿ ಪೊಲೀಸರು ಪೆಟ್ರೋಲಿಂಗ್ ಮಾಡುವ ಜೊತೆಗೆ ವಾಹನ ತಪಾಸಣೆಯನ್ನು ಮಾಡಲು ಸೂಚನೆಯನ್ನು ನೀಡಲಾಗಿದೆ. ವಾಹನಗಳಲ್ಲಿ ಯಾವುದಾದರೂ ಆಕ್ಷೇಪಾರ್ಹ ವಸ್ತುಗಳೋ ಮಾರಕಾಸ್ತ್ರಗಳೋ ಸಿಕ್ಕರೇ ತಕ್ಷಣವೇ ವ್ಯಕ್ತಿಗಳನ್ನು ಬಂಧಿಸುವಂತೆ ಸೂಚನೆಯನ್ನು ನೀಡಲಾಗಿದೆ. ಇನ್ನು ವಾಹನಗಳಲ್ಲಿ ಪೆಟ್ರೋಲ್‌ಗಳನ್ನು ಬಾಟಲ್‌ಗಳಲ್ಲಿ ತೆಗೆದುಕೊಂಡು ಹೋಗುವಂತಿಲ್ಲ. ಪೆಟ್ರೋಲ್ ಬಂಕ್‌ಗಳ ಮಾಲೀಕರಿಗೂ ಪೆಟ್ರೋಲ್ ಅನ್ನು ಬಾಟಲ್‌ಗೆ ಹಾಕುವಂತಿಲ್ಲ ಎಂದು ನಿರ್ದೇಶನವನ್ನು ನೀಡಲಾಗಿದೆ.

ಬಿಜೆಪಿಯ ವಕ್ತಾರೆಯಾಗಿದ್ದ ನೂಪುರ್ ಶರ್ಮಾರ ಹೇಳಿಕೆಯ ಕಿಚ್ಚು ದೇಶದಾದ್ಯಂತ ಹರಡಿ ಪ್ರತಿಭಟನೆಯ ಹಾದಿಯನ್ನು ಹಿಡಿದಿದ್ದುರು ರಾಜ್ಯದ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಜವಾಬ್ದಾರಿ ರಾಜ್ಯ ಸರ್ಕಾರದ್ದಾಗಿರುತ್ತದೆ. ಇದರಿಂದಾಗಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯ ಎಡಿಜಿಪಿಯಾಗಿರುವ ಅಲೋಕ್ ಕುಮಾರ್‌ರವರು ಕಾನೂನಿಗೆ ಭಂಗ ತರುವವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮವನ್ನು ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.

English summary
ADGP of law and order Alok Kumar has instructed police across the state, including Bangalore. Listing sensitive and sensitive areas, instructing them on patrolling, and providing proper guidance on how to prevent law and order., know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X