ರಾಜ್ಯದಲ್ಲಿ ಮಹಿಳೆಯರ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆ ಸ್ಥಗಿತ : ಸಿದ್ದರಾಮಯ್ಯ ಸ್ಪಷ್ಟನೆ
ಬೆಂಗಳೂರು, ಅಕ್ಟೋಬರ್ 31: ಶಕ್ತಿ ಯೋಜನೆ ಪರಿಷ್ಕರಣೆ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ . ಆ ರೀತಿಯ ಉದ್ದೇಶವೂ ಸರ್ಕಾರಕ್ಕೆ ಇಲ್ಲ' ಎಂದು ಮುಖ್ಯಮಂತ್ರಿಗಳು ವಿಧಾನಸೌಧದಲ್ಲಿ ಮಾಧ್ಯಮಗಳ ಮುಂದೆ ಸ್ಪಷ್ಟಪಡಿಸಿದರು.
ಶಕ್ತಿ ಯೋಜನೆ ಪರಿಷ್ಕರಣೆ ಉದ್ದೇಶ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ. ಶಕ್ತಿ ಯೋಜನೆ ಪರಿಷ್ಕರಿಸುವುದು ಸರ್ಕಾರದ ಹಂತದಲ್ಲಿ ಇಲ್ಲ. ಶಕ್ತಿ ಯೋಜನೆ ಪರಿಷ್ಕರಿಸುವ ಉದ್ದೇಶ ಹಾಗೂ ಪ್ರಸ್ತಾವನೆ ಇಲ್ಲ. ಕೆಲ ಮಹಿಳೆಯರು ಹೇಳಿದ್ದಾರೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ಆದರೆ ಆ ಕಾರ್ಯಕ್ರಮದಲ್ಲಿ ನಾನು ಅಲ್ಲಿ ಇರಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ವಕ್ಫ್ ಆಸ್ತಿ ನೋಟೀಸುಗಳಿಗೆ ಸಂಬಂಧಿಸಿದಂತೆ ನವೆಂಬರ್ 4ರಂದು ಬಿಜೆಪಿ ಪ್ರತಿಭಟನೆ ಮಾಡುವುದರ ಕುರಿತು ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು, ಬಿಜೆಪಿ ಸರ್ಕಾರದ ಅವಧಿಯಲ್ಲಿಯೇ ಸುಮಾರು 200ಕ್ಕೂ ಹೆಚ್ಚು ನೋಟೀಸ್ ಗಳನ್ನು ನೀಡಿದ್ದಾರೆ. ಅವರದು ಇಬ್ಬದಿ ರಾಜಕೀಯ ನಡೆ. ಯಾವ ರೈತರನ್ನೂ ಒಕ್ಕಲೆಬ್ಬಿಸಿಸುವುದಿಲ್ಲ ಎಂದು ಈಗಾಗಲೇ ಹೇಳಿದ್ದೇವೆ. ಕೊಟ್ಟಿರುವ ನೋಟೀಸ್ ಗಳನ್ನು ಹಿಂಪಡೆಯಲು ಈಗಾಗಲೇ ಸೂಚಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.
ನವೆಂಬರ್ 4ರ ಅವರ ಪ್ರತಿಭಟನೆ ಉಪ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ಪ್ರೇರಿತವಾದದ್ದು, ಸಮಸ್ಯೆಗಳು ಇರದೆಡೆ ಸಮಸ್ಯೆಗಳನ್ನು ಸೃಷ್ಟಿಸುತ್ತಾರೆ. ಈಗ ಮುಡಾ ಪ್ರಕರಣದಲ್ಲಿ ಮಾಡಿಲ್ಲವೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶ್ನಿಸಿದರು.
ಶಿಗ್ಗಾಂವಿಯಲ್ಲಿ ಅಜ್ಜಂಪೀರ್ ಖಾದ್ರಿ ಅವರು ನಾಮಪತ್ರ ವಾಪಸ್ ಪಡೆದಿದ್ದು, ಉಪಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ಶ್ರಮಿಸುತ್ತಾರೆ. ಶಿಗ್ಗಾಂವಿ, ಸಂಡೂರು ಹಾಗೂ ಚನ್ನಪಟ್ಟಣ ಮೂರೂ ಕ್ಷೇತ್ರಗಳಲ್ಲಿಯೂ ಗೆಲುವು ನಮ್ಮದೇ ಎಂದು ಹೇಳಿದರು. ಇದೇ ಸಂದರ್ಭದಲ್ಲಿ ನಾಡಿನ ಜನತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೀಪಾವಳಿ ಶುಭಾಶಯಗಳನ್ನು ತಿಳಿಸಿದರು.
ಚುನಾವಣೆಗಾಗಿ ಬಿಜೆಪಿಯವರು ವಿವಾದದ ಸೃಷ್ಟಿ
ಬಿಜೆಪಿಯವರು ರಾಜಕೀಯ ಮಾಡಲು ಹೊರಟಿದ್ದು, ಯಾವುದೇ ವಿವಾದವಿಲ್ಲದಿದ್ದರೂ ಚುನಾವಣೆಯ ಉದ್ದೇಶದಿಂದ ವಿವಾದವನ್ನು ಸೃಷ್ಟಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬಿಜೆಪಿಯವರು ವಕ್ಫ್ ಆಸ್ತಿ ವಿಷಯದ ಬಗ್ಗೆ ಪ್ರತಿಭಟನೆ ನಡೆಸಲು ಸಜ್ಜಾಗುತ್ತಿದೆ.
ರೈತರ ಜಮೀನು ವಕ್ಫ್ ಆಸ್ತಿ ಎಂದು ನೋಟಿಸ್ ನೀಡಿರುವ ಬಗ್ಗೆ ಸಂಸದ ತೇಜಸ್ವಿ ಸೂರ್ಯ ಸೇರಿದಂತೆ ಬಿಜೆಪಿಯವರು ಧ್ವನಿಎತ್ತುತ್ತಿರುವ ಬಗ್ಗೆ ಉತ್ತರಿಸಿ, ಸರ್ಕಾರ ರೈತರನ್ನು ಅವರ ಜಮೀನುಗಳಿಂದ ಒಕ್ಕಲೆಬ್ಬಿಸುವುದಿಲ್ಲ ಹಾಗೂ ನೋಟಿಸ್ ಗಳನ್ನು ವಾಪಸ್ಸು ಪಡೆಯಲಾಗುವುದು ಎಂದು ತಿಳಿಸಿದರು.
ಮುಂದಿನ ಮಾರ್ಚ್ ವರೆಗೆ ಪ್ರತಿ ತಿಂಗಳು ರೂ. 2400 ಕೋಟಿ ರಾಜಸ್ವ ಸಂಗ್ರಹ ಗುರಿ ಸಾಧಿಸಲೇಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೋಂದಣಿ ಮತ್ತು ಮುದ್ರಾಂಕ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ನೋಂದಣಿ ಮತ್ತು ಮುದ್ರಾಂಕ ಇಲಾಖೆಯು 2024-25ರ ಸಾಲಿನಲ್ಲಿ ರೂ. 26000 ಕೋಟಿ ರಾಜಸ್ವ ಸಂಗ್ರಹ ಗುರಿ ಹೊಂದಿದ್ದು, ಅಕ್ಟೋಬರ್ ತಿಂಗಳ ಅಂತ್ಯದವರೆಗೆ ರೂ. 13,724 ಕೋಟಿ ಸಂಗ್ರಹ ಆಗಿದೆ.
ಮುoದಿನ ಮಾರ್ಚ್ ವರೆಗೆ ಪ್ರತಿ ತಿಂಗಳು ರೂ. 2400 ಕೋಟಿ ರಾಜಸ್ವ ಸಂಗ್ರಹ ಗುರಿಯನ್ನು ಸಾಧಿಸಬೇಕು. ನೋಂದಣಿಯೇತರ ದಾಸ್ತಾವೇಜುಗಳಿಗೆ ಸರಿಯಾದ ಮುದ್ರಾoಕ ಶುಲ್ಕವನ್ನು ಪಾವತಿಸಿಕೊoಡು ಹೆಚ್ಚಿನ ರಾಜಸ್ವ ಸoಗ್ರಹಿಸಬೇಕು ಎನ್ನುವ ಸೂಚನೆಯನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದರು.












Click it and Unblock the Notifications