Siddaramaiah: ಸಿದ್ದರಾಮಯ್ಯ ಮಂತ್ರಾಲಯ ಪ್ರವಾಸ ರದ್ದು, ಸೋಮವಾರದ ಕಾರ್ಯಕ್ರಮವೇನು?

ಬೆಂಗಳೂರು, ಆಗಸ್ಟ್ 18: ಕರ್ನಾಟಕದ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಬದಲಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ. ರಾಜ್ಯಪಾಲರ ತೀರ್ಮಾನದ ವಿರುದ್ಧ ಸಿದ್ದರಾಮಯ್ಯ ಕಾನೂನು ಹೋರಾಟವನ್ನು ನಡೆಸಲಿದ್ದಾರೆ. ಆದ್ದರಿಂದ ಸೋಮವಾರ ಸಿದ್ದರಾಮಯ್ಯ ಕಾರ್ಯಕ್ರಮಗಳೇನು? ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಯಚೂರು ಪ್ರವಾಸ ಕೈಗೊಳ್ಳಬೇಕಿತ್ತು. ಮಂತ್ರಾಲಯದಲ್ಲಿ ನಡೆಯುವ ಗುರು ರಾಘವೇಂದ್ರ ಸ್ವಾಮಿ ಆರಾಧನೆಯಲ್ಲಿ ಪಾಲ್ಗೊಳ್ಳಬೇಕಿತ್ತು. ಆದರೆ ಭಾನುವಾರದ ಮಾಹಿತಿ ಪ್ರಕಾರ ಈ ಕಾರ್ಯಕ್ರಮವನ್ನು ಅವರು ರದ್ದುಗೊಳಿಸಿದ್ದಾರೆ. ಬೆಂಗಳೂರಿನಲ್ಲಿಯೇ ಇರಲಿದ್ದು, ಗೃಹ ಕಚೇರಿ ಕೃಷ್ಣಾದಲ್ಲಿ ಸರಣಿ ಸಭೆಗಳನ್ನು ನಡೆಸಲಿದ್ದಾರೆ.

Prosecution Against Siddaramaiah CM August 19th Mantralayam Tour Cancelled

ರಾಜ್ಯಪಾಲರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯ ಸೆಕ್ಷನ್ 17-ಎ ಮತ್ತು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಸೆಕ್ಷನ್-2023ರ ಸೆಕ್ಷನ್ 218ರ ಅಡಿಯಲ್ಲಿ ವಿಚಾರಣೆಗೆ ಅನುಮತಿ ನೀಡಿ ಆದೇಶಿಸಿದ್ದಾರೆ. ಇದನ್ನು ಹೈಕೋರ್ಟ್ ಅಥವ ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನೆ ಮಾಡಬಹುದು. ಆದರೆ ಸೋಮವಾರ ಯಾವ ಕೋರ್ಟ್‌ಗೆ ಅರ್ಜಿ ಸಲ್ಲಿಕೆ ಮಾಡಲಾಗುತ್ತದೆ? ಎಂದು ಕಾದು ನೋಡಬೇಕು.

ಕಾನೂನು ಹೋರಾಟಕ್ಕೆ ಸಿದ್ಧತೆ: ಶನಿವಾರವೇ ಕಾನೂನು ಹೋರಾಟದ ಕುರಿತು ಸಿದ್ದರಾಮಯ್ಯ ಚರ್ಚೆ ನಡೆಸಿದ್ದಾರೆ. ಕಾಂಗ್ರೆಸ್ ನಾಯಕರು, ಸುಪ್ರೀಂಕೋರ್ಟ್ ವಕೀಲರಾದ ಅಭಿಷೇಕ್ ಮನು ಸಿಂಘ್ವಿ, ಕಪಿಲ್ ಸಿಬಲ್ ಬೆಂಗಳೂರಿಗೆ ಆಗಮಿಸಿದ್ದಾರೆ. ಸೋಮವಾರ ಕರ್ನಾಟಕ ಹೈಕೋರ್ಟ್‌ಗೆ ಅಭಿಷೇಕ್ ಮನು ಸಿಂಘ್ವಿ ಸಿದ್ದರಾಮಯ್ಯ ಪರವಾಗಿ ಅರ್ಜಿ ಸಲ್ಲಿಸಲಿದ್ದಾರೆ ಎಂಬ ಮಾಹಿತಿ ಇದೆ.

ರಾಜ್ಯಪಾಲರ ತೀರ್ಮಾನದ ಕಾನೂನು ಬಾಹಿರ ಎಂಬುದು ಕಾಂಗ್ರೆಸ್ ನಾಯಕರ ಅಭಿಪ್ರಾಯವಾಗಿದೆ. ಆದ್ದರಿಂದ ಇದರ ವಿರುದ್ಧ ಕಾನೂನು ಹೋರಾಟದ ಜೊತೆ ರಾಜಕೀಯವಾಗಿಯೂ ಹೋರಾಟ ಮಾಡಲು ಕಾಂಗ್ರೆಸ್ ನಾಯಕರು ತೀರ್ಮಾನಿಸಿದ್ದಾರೆ. ಆದ್ದರಿಂದ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಕೆ ಮಾಡಿ ರಾಷ್ಟ್ರಮಟ್ಟದಲ್ಲಿ ಸುದ್ದಿ ಮಾಡಲು ಕಾಂಗ್ರೆಸ್ ಮೊದಲು ತೀರ್ಮಾನಿಸಿತ್ತು.

ಆದರೆ ವಕೀಲರು, ಕಾನೂನು ತಜ್ಞರು ಕರ್ನಾಟಕ ಹೈಕೋರ್ಟ್‌ಗೆ ಮೊದಲು ಅರ್ಜಿ ಸಲ್ಲಿಕೆ ಮಾಡೋಣ ಎಂದು ಸಲಹೆ ನೀಡಿದ್ದಾರೆ. ಆದ್ದರಿಂದ ಸೋಮವಾರವೇ ಸಿದ್ದರಾಮಯ್ಯ ಪರವಾಗಿ ಅರ್ಜಿ ಸಲ್ಲಿಕೆ ಮಾಡಲಾಗುತ್ತದೆ. ಆದ್ದರಿಂದ ಸೋಮವಾರದ ಎಲ್ಲಾ ಕಾರ್ಯಕ್ರಮವನ್ನು ಸಿದ್ದರಾಮಯ್ಯ ರದ್ದುಗೊಳಿಸಿ ಬೆಂಗಳೂರಿನಲ್ಲಿಯೇ ಇರಲಿದ್ದಾರೆ.

ರಾಜೀನಾಮೆ ನೀಡುವುದಿಲ್ಲ: ಶನಿವಾರ ಸಚಿವ ಸಂಪುಟ ಸಭೆ ಬಳಿಕ ಮಾತನಾಡಿದ್ದ ಸಿದ್ದರಾಮಯ್ಯ, "ನನ್ನ ವಿರುದ್ಧ ತನಿಖೆ ನಡೆದಿಲ್ಲ. ತನಿಖೆಯಲ್ಲಿ ನನ್ನ ಪಾತ್ರದ ಉಲ್ಲೇಖವಿಲ್ಲ. ನನ್ನ ಪಾತ್ರದ ಬಗ್ಗೆ ಯಾರೂ ಯಾವುದೇ ದಾಖಲೆ ಕೊಟ್ಟಿಲ್ಲ. ನನ್ನ ಸರ್ಕಾರದ ಅವಧಿಯಲ್ಲಿ ನಡೆದ ವಿಚಾರ ಇದಲ್ಲ. ನನ್ನಿಂದ ಒಂದೂ ಪತ್ರ ಹೋಗಿಲ್ಲ. ನನ್ನ ಸಹಿ ಎಲ್ಲೂ ಇಲ್ಲ. ನನ್ನಿಂದ ಒಂದೂ ಮನವಿ ಪತ್ರವೂ ಹೋಗಿಲ್ಲ. ಎಲ್ಲವೂ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿರುವುದು. ನಾನು ಏಕೆ ರಾಜೀನಾಮೆ ನೀಡಬೇಕು?, ನನ್ನ ಪಾತ್ರದ ಬಗ್ಗೆ ಎಲ್ಲೂ, ಯಾರೂ ಹೇಳುತ್ತಿಲ್ಲ. ಆದರೂ ನಾನೇಕೆ ರಾಜೀನಾಮೆ ನೀಡಲಿ?" ಎಂದು ಪ್ರಶ್ನೆ ಮಾಡಿದ್ದರು.

"ನಮ್ಮ ಯಶಸ್ವಿ ಗ್ಯಾರಂಟಿ ಯೋಜನೆಗಳನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಕೂಡ ವಿರೋಧಿಸಿದ್ದರು. ಹೀಗಾಗಿ ಚುನಾಯಿತ ಸರ್ಕಾರವನ್ನು ಅಸ್ಥಿರಗೊಳಿಸುವ ಬಿಜೆಪಿಯ ಕುಟಿಲತನವನ್ನು ಯಶಸ್ವಿಯಾಗಿ ವಿರೋಧಿಸಿ ಸತ್ಯವನ್ನು ಗೆಲ್ಲಿಸುತ್ತೇವೆ. ಅಬ್ರಹಾಂ ಎನ್ನುವವರು 26/7/2024ರ ಬೆಳಗ್ಗೆ 11:30ಗೆ ದೂರು ನೀಡಿದರೆ ಅದೇ ದಿನ 10 ಗಂಟೆಗೆ ರಾಜ್ಯಪಾಲರು ಶೋಕಾಸ್ ನೋಟಿಸ್ ರೆಡಿ ಮಾಡಿದ್ದರು. ಆದರೆ ಶಶಿಕಲಾ ಜೊಲ್ಲೆ, ಎಚ್. ಡಿ. ಕುಮಾರಸ್ವಾಮಿ ಅವರ ಪ್ರಾಸಿಕ್ಯೂಷನ್‌ಗೆ ಅನುಮತಿ ಕೇಳಿ ದಾಖಲೆಗಳ ಸಮೇತ ರಾಜ್ಯಪಾಲರಿಗೆ ದೂರು ನೀಡಿದರೂ ಅವರ ವಿರುದ್ಧದ ತನಿಖೆಗೆ ಅನುಮತಿ ನೀಡಿಲ್ಲ. ಎಚ್. ಡಿ. ಕುಮಾರಸ್ವಾಮಿ ಅವರ ಪ್ರಕರಣದಲ್ಲಿ ತನಿಖೆ ನಡೆದು ಕುಮಾರಸ್ವಾಮಿ ತಪ್ಪಿತಸ್ಥ ಎಂದು ಉಲ್ಲೇಖವಾಗಿದ್ದರೂ, ತನಿಖೆಯ ದಾಖಲೆಗಳ ಸಮೇತ ರಾಜ್ಯಪಾಲರಿಗೆ ದೂರು ನೀಡಿದ್ದರೂ ರಾಜ್ಯಪಾಲರು ತನಿಖೆಗೆ ಅನುಮತಿ ನೀಡಿಲ್ಲ" ಎಂದು ಹೇಳಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+