Siddaramaiah: ಪ್ರಾಸಿಕ್ಯೂಷನ್‌ಗೆ ಅನುಮತಿ, ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ!

ಬೆಂಗಳೂರು, ಆಗಸ್ಟ್ 17: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಬದಲಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಶನಿವಾರ ಅನುಮತಿಯನ್ನು ನೀಡಿದ್ದಾರೆ. ಥಾವರಚಂದ್ ಗೆಹ್ಲೋಟ್ ನಡೆಯ ಬಳಿಕ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ "ನಾನು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ" ಎಂದು ಹೇಳಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯ ಸೆಕ್ಷನ್ 17-ಎ ಮತ್ತು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಸೆಕ್ಷನ್-2023ರ ಸೆಕ್ಷನ್ 218ರ ಅಡಿಯಲ್ಲಿ ರಾಜ್ಯಪಾಲರು ವಿಚಾರಣೆಗೆ ಅನುಮತಿ ನೀಡಿ ಆದೇಶಿಸಿದ್ದಾರೆ. ಪ್ರತಿಪಕ್ಷಗಳು ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸುತ್ತಿವೆ.

Prosecution Against Siddaramaiah I Will Not Submit Resignation Says CM

ಸಿದ್ದರಾಮಯ್ಯ ಹೇಳಿದ್ದೇನು?: ಮುಖ್ಯಮಂತ್ರಿ ಸಿದ್ದರಾಮಯ್ಯ, "ಮಾನ್ಯ ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದು, ನನ್ನ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ಅವರ ನಿರ್ಣಯ ಚುನಾಯಿತ ಸರ್ಕಾರವನ್ನು ಅಭದ್ರಗೊಳಿಸುವ ಷಡ್ಯಂತ್ರವಾಗಿದೆ" ಎಂದು ಹೇಳಿದ್ದಾರೆ.

"ನಮ್ಮ ಸರ್ಕಾರವನ್ನು ಅಭ್ರಗೊಳಿಸುವ ದೊಡ್ಡ ಷಡ್ಯಂತ್ರವನ್ನು ಮಾಡಲಾಗಿದೆ. ಬಿಜೆಪಿ, ಜೆಡಿಎಸ್ ಹಾಗೂ ರಾಜ್ಯದ ಕೆಲ ಮುಖಂಡರು ಈ ಷಡ್ಯಂತ್ರದ ಪಾಲುದಾರರು. ಉತ್ತರಾಖಂಡ, ಜಾರ್ಖಂಡ್, ನವದೆಹಲಿಯಲ್ಲಿ ಮಾಡಿದಂತೆ ಕರ್ನಾಟಕದಲ್ಲಿಯೂ ಷಡ್ಯಂತ್ರ ಮಾಡಿದ್ದಾರೆ" ಎಂದು ಆರೋಪಿಸಿದ್ದಾರೆ.

"ಮೇಲ್ನೋಟಕ್ಕೆ ನನ್ನ ಮೇಲೆ ಯಾವುದೇ ಪ್ರಕರಣವಿಲ್ಲ, ರಾಜ್ಯಪಾಲರ ನಿರ್ಣಯ ಸಂವಿಧಾನ ಬಾಹಿರವಾಗಿದ್ದು, ಪ್ರಾಸಿಕ್ಯೂನ್‌ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಕಾನೂನು ಹೋರಾಟ ಮಾಡಲಾಗುವುದು" ಎಂದರು.

"ನನ್ನ ವಿರುದ್ಧ ದೂರು ಬಂದ ದಿನವೇ ಶೋಕಾಸ್ ನೋಟೀಸ್ ನೀಡಲಾಗಿತ್ತು. ರಾಜ್ಯಪಾಲರ ಈ ನಡೆಯನ್ನು ನಿರೀಕ್ಷಿಸಲಾಗಿತ್ತು. ಶಾಸಕರು, ಸಂಪುಟ ಸಚಿವರು, ಪಕ್ಷದ ವರಿಷ್ಠರೆಲ್ಲರೂ ನನ್ನ ಪರವಾಗಿದ್ದಾರೆ. ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದಾರೆ. ಇದು ರಾಜಕೀಯ ಪಿತೂರಿಯಾಗಿದ್ದು, ನಾನು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ" ಎಂದು ಸ್ಪಷ್ಟಪಡಿಸಿದ್ದಾರೆ.

"ರಾಜ್ಯಪಾಲರನ್ನು ರಾಜಕೀಯ ದಾಳವಾಗಿ ಬಳಸಿಕೊಳ್ಳುತ್ತಿದ್ದಾರೆ. ಬಿಜೆಪಿಯವರಿಗೆ ನನ್ನ ರಾಜೀನಾಮೆ ಕೇಳಲು ಯಾವುದೇ ನೈತಿಕತೆ ಇಲ್ಲ. ಕಾಂಗ್ರೆಸ್ ಸರ್ಕಾರ ಹಾಗೂ ಗ್ಯಾರಂಟಿ ಯೋಜನೆಗಳ ಯಶಸ್ಸನ್ನು ಅವರಿಗೆ ಸಹಿಸಲಾಗುತ್ತಿಲ್ಲ. ಕೇಂದ್ರ ಸರ್ಕಾರ ಸಾಮಾಜಿಕ ನ್ಯಾಯ ಹಾಗೂ ಗ್ಯಾರಂಟಿ ಯೋಜನೆಗಳ ವಿರುದ್ಧವಾಗಿದೆ. ಬಿಜೆಪಿಯವರ ಈ ನಿಲುವಿಗ ಈಗ ಜೆಡಿಎಸ್‌ನವರೂ ಬೆಂಬಲ ನೀಡಿದ್ದಾರೆ" ಎಂದು ದೂರಿದ್ದಾರೆ.

"ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ, ಮುರುಗೇಶ್ ನಿರಾಣಿ, ಶಶಿಕಲಾ ಜೊಲ್ಲೆ, ಜನಾರ್ದನ ರೆಡ್ಡಿಯವರ ವಿರುದ್ಧ ದೂರು ನೀಡಲಾಗಿದ್ದರೂ, ಇದುವರೆಗೆ ಯಾವುದೇ ಕ್ರಮವಾಗಿಲ್ಲ. ನವೆಂಬರ್ ತಿಂಗಳಲ್ಲಿ ಎಚ್. ಡಿ. ಕುಮಾರಸ್ವಾಮಿಯವರ ಮೇಲೆ ಅನಧಿಕೃತ ಗಣಿಗಾರಿಕೆಗೆ ಪರವಾನಗಿ ನೀಡಿರುವ ವಿರುದ್ಧ ತನಿಖೆ ನಡೆಸಲು ಲೋಕಾಯುಕ್ತ ಅನುಮತಿ ಕೋರಿದ್ದರೂ ರಾಜ್ಯಪಾಲರಿಂದ ಯಾವುದೇ ಕ್ರಮವಾಗಿಲ್ಲ" ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಶನಿವಾರ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಗೃಹ ಕಛೇರಿ ಕೃಷ್ಣದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ. ಎಸ್. ಪೊನ್ನಣ್ಣ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌, ಗುಪ್ತಚರ ಇಲಾಖೆ ಮುಖ್ಯಸ್ಥ ಶರತ್ ಚಂದ್ರ ಜೊತೆ ತುರ್ತು ಸಭೆಯನ್ನು ನಡೆಸಿದರು.

ಬಳಿಕ ಸಿದ್ದರಾಮಯ್ಯ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಭೇಟಿಯಾದರು. ಬಳಿಕ ಸಚಿವರ ಜೊತೆ ಸಭೆಯನ್ನು ನಡೆಸಿದರು. ಈ ಸಭೆಗಳ ಬಳಿಕ ನಿಗದಿತ ಕಾರ್ಯಕ್ರಮಗಳಿಗೆ ತೆರಳಿದರು. ಸಿದ್ದರಾಮಯ್ಯ ಕಾನೂನು ಹೋರಾಟಕ್ಕೆ ಕಾಂಗ್ರೆಸ್ ಹೈಕಮಾಂಡ್ ನಾಯಕರು ಸಹ ಬೆಂಬಲ ನೀಡಿದ್ದಾರೆ.

ರಾಜ್ಯಪಾಲರ ತೀರ್ಮಾನವನ್ನು ಸಿದ್ದರಾಮಯ್ಯ ಹೈಕೋರ್ಟ್ ಅಥವ ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನೆ ಮಾಡಬಹುದು. ಸುಪ್ರೀಂಕೋರ್ಟ್‌ ವಕೀಲರಾದ ಅಭಿಷೇಕ್ ಮನು ಸಿಂಘ್ವಿ, ಕಪಿಲ್ ಸಿಬಲ್ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಭಾನುವಾರ ಸಿದ್ದರಾಮಯ್ಯ ಮುಂದಿನ ನಡೆ ಬಗ್ಗೆ ಮಾಹಿತಿ ತಿಳಿಯುವ ನಿರೀಕ್ಷೆ ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+