ಚಳಿಗಾಲದ ಅಧಿವೇಶದಲ್ಲಿ ವಕೀಲರ ರಕ್ಷಣಾ ಮಸೂದೆ ಮಂಡನೆ: ಬಸವರಾಜ ಬೊಮ್ಮಾಯಿ
ಬೆಂಗಳೂರು, ಡಿಸೆಂಬರ್ 12: ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ವಕೀಲರ ರಕ್ಷಣಾ ಮಸೂದೆಯನ್ನು ಮಂಡಿಸುವುದಾಗಿ ವಕೀಲರ ಸಂಘದ ನಿಯೋಗಕ್ಕೆ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.
ಮುಖ್ಯಮಂತ್ರಿಗಳ ಸರ್ಕಾರಿ ನಿವಾಸದಲ್ಲಿ ಭಾನುವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನ ವಕೀಲರ ಸಂಘದ ನಿಯೋಗ ಭೇಟಿಯಾಗಿ ಮನವಿ ಸಲ್ಲಿಸಿ, ಚರ್ಚೆ ನಡೆಸಿದರು. ಇತ್ತೀಚಿನ ದಿನಗಳಲ್ಲಿ ಕರ್ತವ್ಯ ನಿರತ ವಕೀಲರ ಮೇಲೆ ದೌರ್ಜನ್ಯಗಳು ಹೆಚ್ಚುತ್ತಿದ್ದು, ಅನೇಕರನ್ನು ಕೊಲ್ಲಲಾಗಿದೆ. ಈ ಹಿನ್ನೆಲೆಯಲ್ಲಿ ವಕೀಲರ ರಕ್ಷಣಾ ಕಾಯ್ದೆಯ ಕರಡು ಮಸೂದೆಯನ್ನು ಡಿಸೆಂಬರ್ 19 ರಿಂದ ಪ್ರಾರಂಭವಾಗುತ್ತಿರುವ ಅಧಿವೇಶನದಲ್ಲಿ ಎರಡೂ ಸದನಗಳಲ್ಲಿ ಮಂಡಿಸುವಂತೆ ಮುಖ್ಯಮಂತ್ರಿಗಳನ್ನು ವಕೀಲರ ಸಂಘ, ಬೆಂಗಳೂರು ಹಾಗೂ ರಾಜ್ಯದ ವಿವಿಧ ವಕೀಲ ಸಂಘಗಳು ಕೋರಿವೆ.

ನವೆಂಬರ್ 5 ರಂದು ನಡೆದ ವಕೀಲರ ಸಂಘದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳು ಈ ಬಗ್ಗೆ ಭರವಸೆ ನೀಡಿದ್ದರು. ಕಾಯ್ದೆಯ ಅಂತಿಮ ಕರಡು ಕಾನೂನು ಇಲಾಖೆಯಲ್ಲಿರುವುದಾಗಿ ಸಂಘವು ಮನವಿ ಪತ್ರದಲ್ಲಿ ತಿಳಿಸಿದೆ.

ವಕೀಲರ ಸಂಘದ ಅಧ್ಯಕ್ಷ ವಿವೇಕ್ ಸುಬ್ಬಾ ರೆಡ್ಡಿ, ಕಾರ್ಯದರ್ಶಿ ಟಿ. ಜಿ.ರವಿ, ಖಜಾಂಚಿ ಹರೀಶ್ ಎಂ.ಟಿ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು












Click it and Unblock the Notifications