ನಾಳೆ ರಾಜ್ಯಾದ್ಯಂತ ಜನರಿಗೆ ಈ ಸೇವೆ ಸಿಗೋದು ಡೌಟ್!
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯಾದ್ಯಂತ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ), ಗ್ರಾಮ ಪಂಚಾಯಿತಿಯ ಕಾರ್ಯದರ್ಶಿಗಳು ಹಾಗೂ ಇತರೆ ನೌಕರರು ಧರಣಿ ನಡೆಸುತ್ತಿದ್ದಾರೆ. ಈಗಾಗಲೇ ಎರಡು ದಿನಗಳಿಂದ ಬೆಂಗಳೂರಿನಲ್ಲಿ ಧರಣಿ ನಡೆಸಿರುವ ಇವರು, ನಾಳೆ ಎಲ್ಲ ಜಿಲ್ಲೆಗಳಲ್ಲೂ ಧರಣಿ ಮುಂದುವರಿಸುವುದಾಗಿ ಹೇಳಿದ್ದಾರೆ. ಹಾಗಾಗಿ ನಾಳೆ ಪಂಚಾಯಿತಿ ಸೇರಿದಂತೆ ಇನ್ನಿತರ ಸೇವೆಗಳು ಬಂದ್ ಆಗುವ ಸಾಧ್ಯತೆ ಇದೆ.
ಈಗಾಗಲೇ ಶುಕ್ರವಾರ ಹಾಗೂ ಶನಿವಾರದಂದು ಪಿಡಿಒ, ಗ್ರಾಮ ಪಂಚಾಯಿತಿಯ ಕಾರ್ಯದರ್ಶಿಗಳು ಹಾಗೂ ಇತರೆ ನೌಕರರು ಧರಣಿ ನಡೆಸಿದ ಕಾರಣ ಪಂಚಾಯಿತಿಗಳ ಎಲ್ಲ ಸೇವೆಗಳಲ್ಲಿ ವ್ಯತ್ಯಯವಾಗಿದೆ. ಕಚೇರಿಗಳಲ್ಲಿ ಸಿಬ್ಬಂದಿ ಇಲ್ಲದೆ ಸಾರ್ವಜನಿಕರು ಪರದಾಟ ಕೂಡ ನಡೆಸಿದ್ದಾರೆ. ಪಂಚಾಯಿತಿಗಳಲ್ಲಿ ಬರೋಬ್ಬರಿ ನಲವತ್ತಕ್ಕೂ ಹೆಚ್ಚು ಸೇವೆಗಳು ಬಂದ್ ಆಗಿರುವುದಾಗಿ ವರದಿಯಾಗಿದೆ.

ಕೇವಲ ಎರಡು ದಿನ ಮಾತ್ರ ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ಧರಣಿ ನಡೆಸಲು ಪೊಲೀಸರು ಅನುಮತಿ ನೀಡಿದ್ದರಿಂದ ನಾಳೆಯಿಂದ ಜಿಲ್ಲಾಮಟ್ಟದಲ್ಲಿ ಧರಣಿ ನಡೆಸಲು ನಿರ್ಧರಿಸಿದ್ದಾರೆ. ಧರಣಿ ಸ್ಥಳಕ್ಕೆ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಉಮಾ ಮಾಧವನ್ ಭೇಟಿ ನೀಡಿ ಮನವಿ ಸ್ವೀಕರಿಸಿದ್ದಾರೆ. ಆದರೂ ಧರಣಿ ಮುಂದುವರಿಸುವುದಾಗಿ ರಾಜ್ಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಕ್ಷೇಮಾಭಿವೃದ್ಧಿ ಸಂಘ ನಿರ್ಧರಿಸಿದೆ.
ಅಕ್ಟೋಬರ್ 10ರಂದು ಸಂಘದ ಅಧ್ಯಕ್ಷರ ಜೊತೆ ಸಭೆ ನಡೆಸುವುದಾಗಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಮಯ ನಿಗದಿ ಮಾಡಿದ್ದಾರೆ. ಆದರೆ, ಸರ್ಕಾರದಿಂದ ನಮ್ಮ ಬೇಡಿಕೆಗಳ ಬಗ್ಗೆ ಸ್ಪಷ್ಟ ಆದೇಶ ಬರುವತನಕ ಗ್ರಾಮ ಪಂಚಾಯ್ತಿ, ತಾಲ್ಲೂಕು ಪಂಚಾಯ್ತಿ ಹಾಗೂ ಜಿಲ್ಲಾ ಪಂಚಾಯ್ತಿಗಳ ಮುಂದೆ ಪ್ರತಿಭಟನೆ ಮಾಡಲು ನಿರ್ಧರಿಸಿದ್ದಾರೆ. ನಮ್ಮ ಸಮಸ್ಯೆಗಳಿಗೆ ಪರಿಹಾರ ಸಿಗುವವರೆಗೂ ಹೋರಾಟ ನಿಲ್ಲಿಸಲ್ಲ ಎಂದು ಸಂಘದ ಅಧ್ಯಕ್ಷ ರಾಜು ಹೇಳಿದ್ದಾರೆ.
ಗ್ರಾಮೀಣಾಭಿವೃದ್ಧಿ-ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಹುದ್ದೆಗಳ ಭರ್ತಿ, ಪಿಡಿಒ ಹುದ್ದೆಯನ್ನು ಬಿ ಗ್ರೂಪ್‌ಗೆ ಸೇರ್ಪಡೆ ಮಾಡುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿದ್ದಾರೆ. ನೌಕರರ ಈ ಹೋರಾಟಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕೂಡ ಸಾಥ್ ನೀಡಿದ್ದಾರೆ.

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ, ಗ್ರಾಮ ಪಂಚಾಯಿತಿಯ ಕಾರ್ಯದರ್ಶಿಗಳು, ಪಿಡಿಒಗಳು ಹಾಗೂ ಇತರೆ ನೌಕರರು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧೀ ಧರಣಿ ನಡೆಸುತ್ತಿರುವ ನ್ಯಾಯಸಮ್ಮತ ಹೋರಾಟವನ್ನು ರಾಜ್ಯ ಬಿಜೆಪಿ ಬೆಂಬಲಿಸುತ್ತದೆ ಎಂದು ವಿಜಯೇಂದ್ರ ಹೇಳಿದ್ದಾರೆ.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಯೋಜನೆಗಳ ಪರಿಣಾಮಕಾರಿ ಜಾರಿಗೆ ಗ್ರಾಮ ಪಂಚಾಯ್ತಿಗಳಿಗೆ ಶಕ್ತಿ ತುಂಬಬೇಕೆನ್ನುವ ಬೆಳವಣಿಗೆಗಳ ನಡುವೆ ಗ್ರಾಮೀಣ ಜನರ ಬದುಕು ಹಸನಾಗಿಸಲು ದುಡಿಯುವ ವರ್ಗದ ಸಮಸ್ಯೆಗಳನ್ನು ಆಲಿಸುವ ವ್ಯವಧಾನವನ್ನೂ ಕಳೆದುಕೊಂಡಿರುವ ದಪ್ಪಚರ್ಮದ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರ, ಸ್ವಜನ ಪಕ್ಷಪಾತದಲ್ಲೇ ಮುಳುಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಜನಸಾಮಾನ್ಯರ ನಿತ್ಯ ಸೌಲಭ್ಯ ಒದಗಿಸುವ, ಕುಂದು-ಕೊರತೆಗಳು ಹಾಗೂ ಮೂಲಭೂತ ಸೌಕರ್ಯಗಳ ಅಗತ್ಯತೆಗಳನ್ನು ಸುಲಭವಾಗಿ ಪರಿಹರಿಸಬಲ್ಲ ಗ್ರಾಮೀಣ ಶಕ್ತಿ ಕೇಂದ್ರಗಳ ಜನಪ್ರತಿನಿಧಿಗಳು, ನೌಕರರ ಪ್ರತಿಭಟನೆಯ ಕಿಚ್ಚು ರಾಜ್ಯವ್ಯಾಪಿ ಹಬ್ಬುವ ಮುನ್ನ ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ವಿವಿಧ ಬೇಡಿಕೆಗಳನ್ನು ಕೂಡಲೇ ಈಡೇರಿಸುವ ನಿಟ್ಟಿನಲ್ಲಿ ಜರೂರು ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಸರ್ಕಾರವನ್ನು ಆಗ್ರಹಿಸುತ್ತೇನೆ ಎಂದು ವಿಜಯೇಂದ್ರ ಹೇಳಿದ್ದಾರೆ.
-
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ












Click it and Unblock the Notifications