Get Updates
Get notified of breaking news, exclusive insights, and must-see stories!

Government Employee; NPS ವಿರುದ್ಧ ಹೋರಾಟ, ಸಭೆ ಕರೆದ ಸಿಎಂ

ಬೆಂಗಳೂರು, ಫೆಬ್ರವರಿ 27; ಕರ್ನಾಟಕ ಕಾಂಗ್ರೆಸ್ 2023ರ ವಿಧಾನಸಭೆ ಚುನಾವಣೆ ಪ್ರಣಾಳಿಕೆಯಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ಹೊಸ ಪಿಂಚಣಿ ಯೋಜನೆ (NPS) ರದ್ದುಗೊಳಿಸಿ ಹಳೆಯ ಪಿಂಚಣಿ ಯೋಜನೆಯನ್ನು ಪುನಃ ಜಾರಿಗೆ ತರುವ ಭರವಸೆ ನೀಡಿತ್ತು. ಈ ಕುರತು ಸರ್ಕಾರಿ ನೌಕರರು ಈಗಲೂ ಬೇಡಿಕೆ ಮುಂದಿಟ್ಟಿದ್ದಾರೆ.

ಹಳೆಯ ಪಿಂಚಣಿ ಯೋಜನೆಯನ್ನು ಪುನಃ ಜಾರಿಗೆ ತರಬೇಕು ಎಂದು ಆಗ್ರಹಿಸಿ ಪ್ರತಿಭಟನೆ, ಧರಣಿಗಳನ್ನು ನಡೆಸುತ್ತಿರುವ ಹಿನ್ನಲೆಯಲ್ಲಿ ಸಭೆಯನ್ನು ಕರೆಯಲಾಗಿದೆ. ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಸಭೆ ಕರೆದಿದ್ದಾರೆ.

Protest Against NPS Siddaramaiah Calls Meeting On February 28

ಫೆಬ್ರವರಿ 28ರ ಬುಧವಾರ ಎನ್‌ಪಿಎಸ್‌ ನೌಕರರ ಸಂಘದ ಜೊತೆ ಮುಖ್ಯಮಂತ್ರಿಗಳು ಸಂಜೆ 6 ಗಂಟೆಗೆ ಸಭೆಯನ್ನು ನಡೆಸಲಿದ್ದಾರೆ. ಈ ಸಭೆಯಲ್ಲಿ ಸಂಘದ ರಾಜ್ಯ ಘಟಕದ ಅಧ್ಯಕ್ಷ ಶಾಂತಾರಾಂ ತೇಜ ನೇತೃತ್ವದಲ್ಲಿ ಪದಾಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ. ಆರ್ಥಿಕ ಇಲಾಖೆಯ ಅಧಿಕಾರಿಗಳು ಭಾಗವಹಿಸಲಿದ್ದಾರೆ.

ಬಜೆಟ್‌ನಲ್ಲಿ ಘೋಷಣೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ 2024-25ನೇ ಸಾಲಿನ ಬಜೆಟ್‌ ಅನ್ನು ಫೆಬ್ರವರಿ 16ರಂದು ಮಂಡಿಸಿದರು. ಆದರೆ ಬಜೆಟ್‌ನಲ್ಲಿ ರಾಜ್ಯ ಸರ್ಕಾರಿ ನೌಕರರ ಪ್ರಮುಖ ಬೇಡಿಕೆಯಾದ ಹಳೆ ಪಿಂಚಣಿ ಯೋಜನೆ ಮರು ಸ್ಥಾಪಿಸುವ ಕುರಿತು ಯಾವುದೇ ಘೋಷಣೆ ಮಾಡಿಲ್ಲ.

ಆದ್ದರಿಂದ ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘ ಈ ಕುರಿತು ಹೋರಾಟ ಮಾಡಲು ಸಿದ್ಧತೆ ಮಾಡಿಕೊಳ್ಳುತ್ತಿದೆ. ಎನ್‌ಪಿಎಸ್ ರದ್ದು ಕುರಿತು ಯಾವುದೇ ಘೋಷಣೆ ಮಾಡದ ಕಾರಣ ಹೋರಾಟ ಅನಿವಾರ್ಯ ಎಂದು ಹೇಳಿದ್ದಾರೆ. ಈ ಹಿನ್ನಲೆಯಲ್ಲಿ ಸಿದ್ದರಾಮಯ್ಯ ಸಭೆ ಕರೆದಿದ್ದಾರೆ.

ಕರ್ನಾಟಕ ಸರ್ಕಾರ ಈಗಾಗಲೇ ದಿನಾಂಕ 01/04/2006ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಂದು ಅಥವಾ ನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ನೌಕರರನ್ನು ಹಳಯ ಡಿಫೈನ್ಡ್‌ ಪಿಂಚಣಿ ಯೋಜನೆಗೆ ಒಳಪಡಿಸುವ ಕುರಿತು ಆದೇಶವನ್ನು ಹೊರಡಿಸಿದೆ.

ಈ ಆದೇಶದ ಪ್ರಕಾರ ದಿನಾಂಕ 01/04/2006ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಂದು ಅಥವಾ ತದನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ಸರ್ಕಾರಿ ನೌಕರರು ಹಿಂದಿನ ಡಿಫೆನ್ಡ್‌ ಪಿಂಚಣಿ ಯೋಜನೆಗೆ ಒಳಪಡಲು ಇಚ್ಚಿಸಿದಲ್ಲಿ ತಮ್ಮ ಅಭಿಮತವನ್ನು ನಿಗದಿತ ನಮೂನೆಯಲ್ಲಿ ದಿನಾಂಕ 30/06/2024ರೊಳಗೆ ಸಕ್ಷಮ ನೇಮಕಾತಿ ಪ್ರಾಧಿಕಾರಕ್ಕೆ ನೇರವಾಗಿ ಸಲ್ಲಿಸತಕ್ಕದ್ದು.

ಈ ಆಯ್ಕೆಯನ್ನು ಒಂದು ಬಾರಿಗೆ ಮಾತ್ರ ಚಲಾಯಿಸಲು ಅವಕಾಶವಿರುತ್ತದೆ. ಆದರೆ ಇದು ಎಲ್ಲಾ ಸರ್ಕಾರಿ ನೌಕರರಿಗೆ ಅನ್ವಯವಾಗುವುದಿಲ್ಲ. ರಾಜ್ಯದ ಸುಮಾರು 13 ಸಾವಿರ ಸರ್ಕಾರಿ ನೌಕರರು ಈ ಮೂಲಕ ಎನ್‌ಪಿಎಸ್‌ನಿಂದ ಒಪಿಎಸ್‌ಗೆ ಸೇರಬಹುದು.

ಹೊಸ ಪಿಂಚಣಿ ಯೋಜನೆ ಕುರಿತು ಬಜೆಟ್ ಅಧಿವೇಶನದಲ್ಲಿ ಮುಖ್ಯಮಂತ್ರಿಗಳು ಉತ್ತರ ಕೊಟ್ಟಿದ್ದರು. ಆಗ ರಾಜ್ಯದಲ್ಲಿ ಇರುವ ರಾಷ್ಟ್ರೀಯ ಪಿಂಚಣಿ ಯೋಜನೆ (ಹೊಸ ಪಿಂಚಣಿ) ಯನ್ನು ರದ್ದು ಪಡಿಸುವ ಸಂಬಂಧ ಈಗಾಗಲೇ ಹಳೆ ಪಿಂಚಣಿ ಯೋಜನೆಯನ್ನು ಮರು ಜಾರಿ ಮಾಡಿರುವ ರಾಜ್ಯಗಳಲ್ಲಿ ಯೋಜನೆಯನ್ನು ಅನುಷ್ಠಾನ ಗೊಳಿಸಿರುವ ಕುರಿತು ಕೈಗೊಂಡಿರುವ ಕ್ರಮಗಳ ಬಗ್ಗೆ ಅಧ್ಯಯನ ನಡೆಸಿ ವರದಿ ಸಲ್ಲಿಕೆ ಮಾಡಲು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ, ಆದೇಶಿಸಲಾಗಿದೆ ಎಂದು ಹೇಳಿದ್ದರು.

ಸರ್ಕಾರದ ಮಾಹಿತಿ ಪ್ರಕಾರ ರಾಜ್ಯದಲ್ಲಿ 5,09,384 ಸರ್ಕಾರಿ ನೌಕರರು ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಹಳೆ ಪಿಂಚಣಿ ಯೋಜನೆಗೆ 2,41,260 ನೌಕರರು ಒಳಪಟ್ಟಿದ್ದಾರೆ. ರಾಷ್ಟ್ರೀಯ ಪಿಂಚಣಿ ಯೋಜನೆಗೆ 2,68,124 ನೌಕರರು ಒಳಪಟಿದ್ದಾರೆ. ಎಲ್ಲಾ ಸರ್ಕಾರಿ ನೌಕರರನ್ನು ಹಳೆ ಪಿಂಚಣಿ ಯೋಜನೆಗೆ ಒಳಪಡಿಸಬೇಕು ಎಂಬುದು ಪ್ರಮುಖ ಬೇಡಿಕೆಯಾಗಿದೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದು ರಾಜ್ಯ ಸರ್ಕಾರಿ ನೌಕರರ ಸಂಘ ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನ ಮತ್ತು ಆಡಳಿತದಲ್ಲಿ ಕಾರ್ಯಕ್ಷಮತೆ ಕಾರ್ಯಾಗಾರವನ್ನು ಆಯೋಜನೆ ಮಾಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಮಹಾ ಸಮ್ಮೇಳನವನ್ನು ಉದ್ಘಾಟಿಸಿ, ಮಾತನಾಡಲಿದ್ದಾರೆ.

ಈ ಸಮ್ಮೇಳನದ ಮೂರು ಪ್ರಮುಖ ಬೇಡಿಕೆಗಳಲ್ಲಿ ರಾಷ್ಟ್ರೀಯ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಿ ಎಲ್ಲಾ ಸರ್ಕಾರಿ ನೌಕರರನ್ನು ಹಳೆ ಪಿಂಚಣಿ ಯೋಜನೆಗೆ ಒಳಪಡಿಸುವ ಕುರಿತು ಶೀಘ್ರವೇ ಆದೇಶ ಹೊರಡಿಸಬೇಕು ಎಂಬುದು ಒಂದು ಬೇಡಿಕೆಯಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+