ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪೂರ್ವ ಪ್ರಾಥಮಿಕ ಶಾಲೆ: ಅಂಗನವಾಡಿ ಕಾರ್ಯಕರ್ತರೆಯರ ಪ್ರತಿಭಟನೆ

|
Google Oneindia Kannada News

ಬೆಂಗಳೂರು, ಜೂನ್ 10: ಸರ್ಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ಶಾಲೆಗಳನ್ನು ತೆರೆಯುವ ಸರ್ಕಾರದ ಆದೇಶದ ವಿರುದ್ಧ ಅಂಗನವಾಡಿ ಕಾರ್ಯಕರ್ತೆಯರು ಇಂದು ನಗರದ ಟೌನ್‌ ಹಾಲ್ ಬಳಿ ಬೃಹತ್ ಪ್ರತಿಭಟನೆ ಮಾಡಿದರು.

ಸರ್ಕಾರಿ ಪಬ್ಲಿಕ್ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು ಸ್ಥಾಪಿಸಲು ಈಗಾಗಲೇ ಸರ್ಕಾರ ಆದೇಶ ನೀಡಿದೆ. ಶಾಲೆಗಳ ಸ್ಥಾಪನೆಗೆ ಹಲವು ಷರತ್ತುಗಳನ್ನು ಸಹ ವಿಧಿಸಿದೆ. ಆ ಪೂರ್ವ ಪ್ರಾಥಮಿಕ ಶಾಲೆಗಳು ಅಂಗನವಾಡಿಗಳನ್ನು ಕೊಲ್ಲುತ್ತವೆ ಎಂಬುದು ಅಂಗನವಾಡಿ ಕಾರ್ಯಕರ್ತೆಯರ ಆತಂಕ.

ಮೈಸೂರು: 154 ಅಂಗನವಾಡಿ ಸಹಾಯಕ ಹುದ್ದೆಗಳಿವೆ, ಅರ್ಜಿ ಹಾಕಿ ಮೈಸೂರು: 154 ಅಂಗನವಾಡಿ ಸಹಾಯಕ ಹುದ್ದೆಗಳಿವೆ, ಅರ್ಜಿ ಹಾಕಿ

ಪೂರ್ವ ಪ್ರಾಥಮಿಕ ತರಗತಿ ಬದಲು ಅಂಗನವಾಡಿ ಕೇಂದ್ರಗಳನ್ನು ಮಕ್ಕಳ ಪಾಲನಾ ಕೇಂದ್ರವನ್ನಾಗಿಸಲು ಸೂಕ್ತ ವ್ಯವಸ್ಥೆ ಮಾಡಬೇಕು. ಪ್ರತಿ ಗ್ರಾಮಗಳಲ್ಲೂ ಶಿಶುಪಾಲನ ಕೇಂದ್ರಗಳನ್ನು ತೆರೆಯಬೇಕು. ಆ ಕೇಂದ್ರಗಳಲ್ಲಿ ಮೂರುವರೆ ವರ್ಷದೊಳಗಿನ ಮಕ್ಕಳು ಪ್ರವೇಶ ಪಡೆಯಬೇಕು ಎಂದು ಅವರು ಒತ್ತಾಯಿಸಿದರು.

 Protest by Anganwadi workers against state government

ಶಿಶುಪಾಲನಾ ಕೇಂದ್ರಗಳಿಗೆ ತರಬೇತಿ ಪಡೆದ ಶಿಕ್ಷಕಿ ಹಾಗೂ ಓರ್ವ ಸಹಾಯಕರನ್ನು ನೇಮಕ ಮಾಡಬೇಕು, ಆರೋಗ್ಯ ಕಾರ್ಯಕರ್ತೆಯರ ಗೌರವಧನ ಸಕಾಲಕ್ಕೆ ಸಿಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಅಂಗನವಾಡಿ ಕಾರ್ಯಕರ್ತೆಯರು ಬೇಡಿಕೆ ಇರಿಸಿದರು.

ರಾಜ್ಯದ ವಿವಿಧ ಜಿಲ್ಲೆಗಳಿಂದ ಅಂಗನವಾಡಿ ಕಾರ್ಯಕರ್ತೆಯರು ಆಗಮಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

English summary
Anganwadi workers did big protest against state government today near the town hall. Government planning to start LKG, UKG in government schools, Anganwadi workers opposing it.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X