ಮೋದಿ- ಸಿದ್ದು ಭೇಟಿ; ಮೊದಲು ರಾಜ್ಯದ ಬೊಕ್ಕಸದಿಂದ ನೆರೆ ಪರಿಹಾರ ಕೊಡಬೇಕಿತ್ತು: ಸಿ ಟಿ ರವಿ
ಬೆಂಗಳೂರು, ನವೆಂಬರ್17: ರಾಜ್ಯ ಸರಕಾರವು ಮೊದಲು ನೆರೆ ಪರಿಹಾರ ನೀಡಿ ಬಳಿಕ ಕೇಂದ್ರದಿಂದ ಪರಿಹಾರ ಕೇಳಬೇಕಿತ್ತು ಎಂದು ಬಿಜೆಪಿ ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು ತಿಳಿಸಿದ್ದಾರೆ. ಪ್ರಧಾನಿಯವರದು ಮತ್ತು ಮುಖ್ಯಮಂತ್ರಿಗಳದು ಸಾಂವಿಧಾನಿಕ ಹುದ್ದೆಗಳು. ಅವರ ಪರಸ್ಪರ ಭೇಟಿ, ಮಾತುಕತೆಯನ್ನು ರಾಜಕೀಯ ದೃಷ್ಟಿಯಿಂದ ನೋಡಲಾಗದು, ನೋಡಬಾರದು ಎಂದು ಪ್ರಶ್ನೆಗೆ ಉತ್ತರಿಸಿದರು.
ಮಾಧ್ಯಮಗಳ ಜೊತೆ ಇಂದು ಮಾತನಾಡಿದ ಅವರು, ನೆರೆ ಪರಿಹಾರವಾಗಿ ರಾಜ್ಯದ ಬೊಕ್ಕಸದಿಂದ ಹಣ ನೀಡಿ ಬಳಿಕ ಕೇಂದ್ರದಿಂದ ಕೇಳುವ ವಾಡಿಕೆಯನ್ನು ಮುಖ್ಯಮಂತ್ರಿಗಳಾಗಿದ್ದ ಯಡಿಯೂರಪ್ಪನವರು ಮಾಡಿದ್ದಾರೆ. ಬೇರೆ ಬೇರೆ ಮುಖ್ಯಮಂತ್ರಿಗಳೂ ಇದನ್ನೇ ಮಾಡಿದ್ದರು. ಕೇಂದ್ರ ಎನ್‍ಡಿಆರ್‍ಎಫ್ ನಿಯಮದಡಿ ಸಮೀಕ್ಷೆ ಮಾಡಿ ಕೊಡಬೇಕಾದುದನ್ನು ಕೊಟ್ಟೇ ಕೊಡುತ್ತದೆ. ಅದಕ್ಕೂ ಮೊದಲು ರಾಜ್ಯದ ಬೊಕ್ಕಸದಿಂದ ಬಿಡುಗಡೆ ಮಾಡುವುದು ಎಲ್ಲ ಮುಖ್ಯಮಂತ್ರಿಗಳು, ಸರಕಾರಗಳು ಪಾಲಿಸಿಕೊಂಡು ಬಂದ ಪದ್ಧತಿ. ಅದನ್ನು ಮುಖ್ಯಮಂತ್ರಿಗಳು ಮಾಡಬೇಕಿತ್ತು ಎಂದು ಹೇಳಿದರು.

ಕಬ್ಬಿನ ವಿಚಾರದಲ್ಲಿ ಕಬ್ಬು ತುಂಬಿಕೊಂಡ ನೂರಾರು ಟ್ರ್ಯಾಕ್ಟರ್‍ಗಳಿಗೆ ಬೆಂಕಿ ಹಾಕಿದ್ದರು. ಯಾರು ಬೆಂಕಿ ಹಾಕಿದ್ದರು? ಯಾರ ಹಿತಾಸಕ್ತಿ ಇದರ ಹಿಂದಿದೆ? ಎಂದು ಪ್ರಶ್ನಿಸಿದರು. ಮಾತುಕತೆ ವೇಳೆ ರೈತ ಪ್ರತಿನಿಧಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ; ಸಕ್ಕರೆ ಕಾರ್ಖಾನೆ ಮಾಲೀಕರೂ ನಿಮ್ಮ ತೀರ್ಮಾನ ಒಪ್ಪದಿದ್ದರೆ ನಿಮ್ಮ ಏಕಪಕ್ಷೀಯ ತೀರ್ಮಾನಕ್ಕೆ ಏನು ಬೆಲೆ ಎಂದು ಕೇಳಿದರು. ಸರಕಾರದ ದಪ್ಪ ಚರ್ಮದಿಂದ ರೈತರು ಇನ್ನೂ ಬೀದಿಯಲ್ಲೇ ಇದ್ದಾರೆ ಎಂದು ಗಮನ ಸೆಳೆದರು.
ಜನಮಾನಸದಲ್ಲಿ ಒಂದು ಪ್ರಮುಖ ವಿಚಾರ ಚರ್ಚೆಗೆ ಬಂದಾಗ ಮುಖ್ಯಮಂತ್ರಿ ಬದಲಾವಣೆಯ ವಿಷಯವನ್ನು ಮುನ್ನೆಲೆಗೆ ತರುತ್ತಾರೆ. ಇದೊಂದು ರಾಜಕೀಯ ಕಾರ್ಯತಂತ್ರದಂತಿದೆ ಎಂದು ಸಿ.ಟಿ.ರವಿ ಅವರು ವಿಶ್ಲೇಷಿಸಿದರು. ನಮಗೇನು? ಯಾರು ಸಿಎಂ ಆದರೇನು? ಬಿಜೆಪಿಗೆ ಅದೇನೂ ಸಂಬಂಧವಿಲ್ಲ, ನಾವು ಕಾಂಗ್ರೆಸ್ ಥರ ಕಾಂಗ್ರೆಸ್ಸೇತರ ಸರಕಾರವನ್ನು ಅಸ್ಥಿರಗೊಳಿಸುವ ರಾಜಕಾರಣದ ವಿಷಯದಲ್ಲಿ ನಂಬಿಕೆ ಇಟ್ಟಿಲ್ಲ. 90ಕ್ಕೂ ಹೆಚ್ಚು ಬಾರಿ ಕಾಂಗ್ರೆಸ್ಸೇತರ ಸರಕಾರವನ್ನು ವಜಾ ಮಾಡಿದ ಕುಖ್ಯಾತಿ ಕಾಂಗ್ರೆಸ್ ಪಕ್ಷಕ್ಕಿದೆ. ಒಟ್ಟು 120- 122 ಬಾರಿ ರಾಷ್ಟ್ರಪತಿ ಆಡಳಿತ ಜಾರಿಯಾಗಿದ್ದರೆ ಅದರಲ್ಲಿ 90ಕ್ಕೂ ಹೆಚ್ಚು ಬಾರಿ ಕಾಂಗ್ರೆಸ್ ಪಕ್ಷವು ಕಾಂಗ್ರೆಸ್ಸೇತರ ಸರಕಾರವನ್ನು ರಾಜಕೀಯ ಕಾರಣಕ್ಕೆ ವಜಾ ಮಾಡಿದ ಕುಖ್ಯಾತಿ ಪಡೆದಿದೆ ಎಂದು ತಿಳಿಸಿದರು.
ನೆಹರೂ ಅವರು, ಕೇರಳದಲ್ಲಿ 1958ರಲ್ಲಿ ನಂಬೂದರಿಪಾಡ್ ನೇತೃತ್ವದ ಮೊದಲ ಕಾಂಗ್ರೆಸ್ಸೇತರ ಸರಕಾರವನ್ನು ವಜಾ ಮಾಡಿದ್ದರು. ಅಲ್ಲಿಂದ ರಾಜಕೀಯ ಕಾರಣಕ್ಕೆ ಕಾಂಗ್ರೆಸ್ಸೇತರ ಸರಕಾರವನ್ನು ವಜಾ ಮಾಡುವುದು ಆರಂಭವಾಗಿತ್ತು ಎಂದು ಗಮನ ಸೆಳೆದರು. ಕರ್ನಾಟಕದಲ್ಲಿ ಎಸ್.ಆರ್. ಬೊಮ್ಮಾಯಿಯವರ ಸರಕಾರವನ್ನು ವಜಾ ಮಾಡಿದ್ದರು. ಇಂಥ ಕುಖ್ಯಾತಿ ಕಾಂಗ್ರೆಸ್ಸಿಗಿದೆ. ಆದರೆ, ಮೋದಿಯವರು ಇಂಥ ಕ್ರಮ ಕೈಗೊಂಡಿದ್ದಾರಾ ಎಂದು ಕೇಳಿದರು. ಇದು ಕೆಟ್ಟ ಸರಕಾರ. ಶಾಸಕರ ಬಹುಮತ ಇದೆ. ಅದನ್ನು ಬೀಳಿಸುವುದರಲ್ಲಿ ನಮಗೇನೂ ಆಸಕ್ತಿ ಇಲ್ಲ ಎಂದು ತಿಳಿಸಿದರು. ಅವರಾಗಿಯೇ ಬಿದ್ದರೆ ಅದವರ ಹಣೆಬರೆಹ ಎಂದು ತಿಳಿಸಿದರು.
-
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್ -
IPL Free VIP Tickets: ಶಾಸಕರಿಗೆ ಐಪಿಎಲ್ ವಿಐಪಿ ಟಿಕೆಟ್ ಪಡೆಯುವ ಹಕ್ಕು ಇದೆ: ಡಿ.ಕೆ.ಶಿವಕುಮಾರ್ ಸಮರ್ಥನೆ -
By Election: ಸಿದ್ದರಾಮಯ್ಯರಿಂದ ಅಹಿಂದ ಜೊತೆಗೆ ಗುತ್ತಿಗೆ ರಾಜಕಾರಣ: ಮಾಜಿ ಸಿಎಂ ಗಡುಗು -
ಹಿಂದಿ ಹೆಚ್ಚು ಜನ ಮಾತನಾಡುವ ಭಾಷೆ, ವಿದ್ಯಾರ್ಥಿಗಳು ಎಲ್ಲ ಭಾಷೆ ಕಲಿಯಬೇಕು: ಶ್ರೀರಾಮುಲು -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ












Click it and Unblock the Notifications