ಪಿಎಸ್ಐ & ಪಿಸಿ ನೇಮಕಾತಿ ಭರ್ಜರಿ ಗುಡ್‌ನ್ಯೂಸ್ ಕೊಟ್ಟ ರಾಜ್ಯ ಸರ್ಕಾರ
ಪಿಎಸ್ಐ & ಪಿಸಿ ನೇಮಕಾತಿ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಭರ್ಜರಿ ಗುಡ್‌ನ್ಯೂಸ್ ನೀಡಿದೆ. ನೇಮಕಾತಿ ಸೇರಿದಂತೆ ವಿವಿಧ ವಿಚಾರಗಳ ಬಗ್ಗೆ ಗೃಹ ಸಚಿವ ಜಿ ಪರಮೇಶ್ವರ್ ಅವರು ಮಾತನಾಡಿದ್ದಾರೆ. ಬೆಂಗಳೂರು ನಗರದಲ್ಲಿ ಹೊಸದಾಗಿ ಮೂರು ವಿಭಾಗಗಳನ್ನು ಮಾಡಲಾಗಿದೆ. ಸಿಐಡಿಯಲ್ಲಿ ಠೇವಣಿ ವಂಚನೆ ಮತ್ತು ಕ್ರಿಮಿನಲ್ ಗುಪ್ತಚರ ಘಟಕವನ್ನು ಮಾಡಲಾಗಿದೆ. ಬೆಳ್ತಂಗಡಿಯಲ್ಲಿ ಸಿಐಡಿ ಉಪ ವಿಭಾಗವನ್ನು ಸ್ಥಾಪನೆ ಮಾಡಲಾಗಿದೆ. ಅನೇಕ ಘಟನೆಗಳು ಮತ್ತು ಪ್ರಕರಣಗಳು ಬರುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು ಸಿಐಡಿ ಉಪವಿಭಾಗ ಸ್ಥಾಪಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಎಮೆರ್ಜೆನ್ಸಿ ರೆಸ್ಪಾನ್ಸ್ ಸಪೋರ್ಟ್ ಸಿಸ್ಟಮ್ 112 ಸಹಾಯವಾಣಿಗೆ ಪ್ರತಿದಿನ ರಾಜ್ಯದಾದ್ಯಂತ 24 ಸಾವಿರ ಕರೆಗಳು ಬರುತ್ತಿವೆ. 1400 ದೂರುಗಳಿಗೆ ನಮ್ಮ ಸಿಬ್ಬಂದಿಗಳು ಸ್ಪಂದಿಸಿ ಮುಂದಿನ ಕ್ರಮ ಕೈಗೊಳ್ಳುತ್ತಿದ್ದಾರೆ. ಬೆಂಗಳೂರು ನಗರದಲ್ಲಿ 112 ಸಹಾಯವಾಣಿ ದೂರುಗಳಿಗೆ 6.59 ನಿಮಿಷದಲ್ಲಿ ಸ್ಪಂದಿಸುತ್ತಾರೆ. ಗ್ರಾಮೀಣ ಭಾಗದಲ್ಲಿ 13.58 ನಿಮಿಷದಲ್ಲಿ ಘಟನಾ ಸ್ಥಳಗಳಿಗೆ ಭೇಟಿ ನೀಡುತ್ತಿದ್ದಾರೆ ಎಂದರು.

ಇಲಾಖೆಯ ಪೊಲೀಸ್ ಸಿಬ್ಬಂದಿಗಳಿಗೆ ಪೊಲೀಸ್ ಗೃಹ ಯೋಜನೆಯಡಿ 10,034 ಮನೆಗಳನ್ನು ನಿರ್ಮಿಸಿ ಕೊಡಲಾಗಿದೆ. ಶೇ. 33ರಷ್ಟು ಸಿಬ್ಬಂದಿಗಳಿಗೆ ಪೊಲೀಸ್ ವಸತಿ ಲಭ್ಯವಾಗಿದೆ. ಶೇ.60 ರಿಂದ 80ರಷ್ಟು ಸಿಬ್ಬಂದಿಗಳಿಗೆ ವಸತಿ ಕಲ್ಪಿಸುವ ಗುರಿ ಹೊಂದಲಾಗಿದ್ದು, ಹಂತಹಂತವಾಗಿ ಈಡೇರಿಸಲಾಗುವುದು ಎಂದಿದ್ದಾರೆ.
ಸಮುದಾಯ ಪೊಲೀಸ್ ವ್ಯವಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಮನೆಮನೆಗೆ ಪೊಲೀಸ್ ಕಾರ್ಯಕ್ರಮದ ಬಗ್ಗೆ ಸಾರ್ವಜನಿಕ ವಲಯದಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಪೊಲೀಸ್ ಅಂದ ತಕ್ಷಣ ಭಯದ ವಾತವಾರಣ ಇದೆ. ಇದನ್ನು ನಿವಾರಿಸಲು ಮನೆಮನೆಗೆ ಪೊಲೀಸ್ ಸಹಕಾರಿಯಾಗುತ್ತಿದೆ. ಮನೆಮನೆಗೆ ಪೊಲೀಸ್ ಕಾರ್ಯಕ್ರಮ ಶೇ. 95ರಷ್ಟು ಪೂರ್ಣಗೊಂಡಿದೆ. ಪೊಲೀಸ ಸುರಕ್ಷತೆ ಮತ್ತು ಪಾರದರ್ಶಕತೆಯ ನಿಟ್ಟಿನಲ್ಲಿ ಬಾಡಿವೋರ್ನ್ ಕ್ಯಾಮೆರಾಗಳನ್ನು ಒದಗಿಸಲಾಗಿದೆ ಎಂದರು.
ಒಂಬತ್ತು ಸಾವಿರ ಎಐ ಕ್ಯಾಮೆರಾ: ಬೆಂಗಳೂರು ನಗರದಲ್ಲಿ 160 ಪ್ರಮುಖ ಜಂಕ್ಷನ್‌ಗಳಲ್ಲಿ 9 ಸಾವಿರ ಎಐ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಯಾವುದೇ ರೀತಿಯ ಘಟನೆ ನಡೆದರ ಕಂಟ್ರೋಲ್ ರೂಮ್‌ಗೆ ಲೈವ್‌ಫೀಡ್ ಸಿಗುತ್ತಿದೆ. ಇತರೆ 7 ಲಕ್ಷ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ವಿಧಿ ವಿಜ್ಞಾನ ಪ್ರಯೋಗಾಲಯವನ್ನು ಆಧುನೀಕರಗೊಳಿಸಲಾಗಿದ್ದು, ಎರಡು ತಿಂಗಳಲ್ಲಿ ವರದಿ ಲಭ್ಯವಾಗುತ್ತಿದೆ. ಇಡೀ ದೇಶದಲ್ಲಿ ಉತ್ತಮ ವಿಧಿವಿಜ್ಞಾನ ಪ್ರಯೋಗಾಲಯವಿದೆ ಎಂದು ಹೇಳಿದರು.
600 ಪಿಎಸ್ಐ ನೇಮಕಾತಿ: ಹಿಂದಿನ ಸರ್ಕಾರ ಅವಧಿಯಲ್ಲಿ 545 ಪಿಎಸ್‌ಐ ನೇಮಕಾತಿಯಲ್ಲಿನ ಅಕ್ರಮದಿಂದ ಪೊಲೀಸ್ ನೇಮಕಾತಿಗೆ ತೊಂದರೆ ಉಂಟಾಯಿತು. ಸಾವಿರಾರು ಹುದ್ದೆಗಳು ಖಾಲಿ ಉಳಿದಿದ್ದವು. ರೂಲ್ 32 ಅಡಿ ಬಡ್ತಿ ನೀಡಲಾಯಿತು. 545 ಪಿಎಸ್‌ಐ ನೇಮಕಾತಿಯಲ್ಲಿಮ ಸಮಸ್ಯೆಯನ್ನು ಬಗೆಹರಿಸಿ ತರಬೇತಿಗೆ ಕಳುಹಿಸಲಾಗಿದೆ. 402 ಪಿಎಸ್‌ಐ ನೇಮಕಾತಿಯು ಪೂರ್ಣಗೊಂಡಿದ್ದು ತರಬೇತಿಗೆ ಕಳುಹಿಸಲಾಗುತ್ತಿದೆ. ಇನ್ನೂ 600 ಪಿಎಸ್ಐ ಹುದ್ದೆಗಳು ಖಾಲಿ ಇದ್ದು, ಅಧಿಸೂಚನೆ ಹೊರಡಿಸಲಾಗುವುದು.
4500 ಪಿಸಿ ನೇಮಕಾತಿ: 4500 ಪೊಲೀಸ್ ಕಾನ್‌ಸ್ಟೇಬಲ್‌ಗಳ ನೇಮಕಾತಿಗೆ ಆರ್ಥಿಕ ಇಲಾಖೆ ಅನುಮತಿ ನೀಡಿದೆ. ಒಳಮೀಸಲಾತಿ ಪ್ರಕ್ರಿಯೆಯಿಂದ ಒಟ್ಟು 75 ಸಾವಿರ ಹುದ್ದೆಗಳ ಭರ್ತಿಗೆ ಸಾಧ್ಯವಾಗಿಲ್ಲ. ನಾಳೆ ಸಂಜೆ ಸಿಎಂ ಅವರು ಸಭೆ ಕರೆದಿದ್ದಾರೆ. ಇದು ಬಗೆಹರಿದರೆ, ಇಲಾಖೆಯಲ್ಲಿನ ಒಟ್ಟು 8 ಸಾವಿರ ನೇಮಕಾತಿಗೂ ಅಧಿಸೂಚನೆ ಹೊರಡಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.












Click it and Unblock the Notifications