PSI Exam: ಸೆಪ್ಟೆಂಬರ್ 22ರಂದೇ ಪಿಎಸ್‌ಐ ಪರೀಕ್ಷೆ: ಮುಂದೂಡುವ ಮಾತಿಲ್ಲ ಎಂದ KEA
ಬೆಂಗಳೂರು ಸೆಪ್ಟೆಂಬರ್ 4: ಪಿಎಸ್‌ಐ ಪರೀಕ್ಷೆ ದಿನಾಂಕ ಮುಂದೂಡಿಕೆ ಇಲ್ಲ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸ್ಪಷ್ಟಪಡಿಸಿದೆ. ಇದರಿಂದಾಗಿ ನಿಗಧಿಯಾಗಿರುವಂತೆ ಸೆಪ್ಟೆಂಬರ್ 22ರಂದು ಪಿಎಸ್‌ಐ ಪರೀಕ್ಷೆ ನಡೆಯಲಿದೆ ಎಂದು ಕೆಇಎ ತಿಳಿಸಿದೆ. ಈಗಾಗಲೇ ಇದಕ್ಕೆ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕರನ್ನು ತಪಾಸಣೆಗೆ ಒಳಪಡಿಸುವ ಮಾದರಿಯಲ್ಲೇ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲೂ ತಪಾಸಣೆ ನಡೆಸಲಾಗುತ್ತಿದೆ.
ಪರೀಕ್ಷೆಯಲ್ಲಿ ಯಾವುದೇ ಲೋಪ ಆಗದಂತೆ ಕಟ್ಟಿನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಅಧಿಕ ಸಂಖ್ಯೆಯ ಪೊಲೀಸರನ್ನು ನಿಯೋಜಿಸಲು ಕೋರಿ ಗೃಹ ಸಚಿವರು ಹಾಗೂ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಪತ್ರ ಬರೆಯಲಾಗಿದೆ ಎಂದು ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ.

ಕಲಬುರಗಿ, ಧಾರವಾಡ, ಶಿವಮೊಗ್ಗ, ಬೆಂಗಳೂರು, ದಾವಣಗೆರೆ, ವಿಜಯಪುರ ಜಿಲ್ಲೆಗಳ 164 ಕೇಂದ್ರಗಳಲ್ಲಿ ಪರೀಕ್ಷೆ ಆಯೋಜಿಸಲಾಗಿದೆ. ದೇಹಿಕ ಪರೀಕ್ಷೆಯಲ್ಲಿ ಅರ್ಹತೆ ಪಡೆದಿರುವ 66,990 ಅಭ್ಯರ್ಥಿಗಳು ಲಿಖಿತ ಪರೀಕ್ಷೆ ಬರೆಯಲಿದ್ದಾರೆ. ಇವರಲ್ಲಿ ಕೆಲವರು ಪರೀಕ್ಷೆ ಮುಮದೂಡುವಂತೆ ಒತ್ತಡ ಹೇರುವ ಪ್ರಯತ್ನ ನಡೆಸಿದ್ದರು. ಆದರೆ ಈಗಾಗಲೇ ಸಾಕಷ್ಟು ವಿಳಂಬವಾಗಿರುವ ಕಾರಣ ಪರೀಕ್ಷೆಯನ್ನು ಮುಂದುಡುವುದಿಲ್ಲ ಎಂದು ಪ್ರಾಧಿಕಾರ ಹೇಳಿತ್ತು. ಹೀಗಾಗಿ ದಿನಾಂಕ ನಿಗಧಿಯಾಗಿರುವಂತೆ ಪರೀಕ್ಷೆ ನಡೆಸಲಾಗುವುದು ಎಂದು ಕೆಇಎ ತಿಳಿಸಿದೆ.
ಸೆಪ್ಟೆಂಬರ್ 22ರಂದು 402 ಪೊಲೀಸ್ ಸಬ್‌ಇನ್‌ಸ್‌ಪೆಕ್ಟರ್ ಹುದ್ದೆಗಳಿಗೆ ಪರೀಕ್ಷೆ ನಡೆಯಲಿದೆ. ಈ ಕುರಿತು ಮಾಹಿತಿ ನೀಡಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪರೀಕ್ಷೆಗೆ ಒಂದು ವಾರ ಮೊದಲು ಪ್ರವೇಶ ಪತ್ರ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದೆ.

ಜೊತೆಗೆ ಗ್ರಾಮ ಆಡಳಿತಾಧಿಕಾರಿ ಹುದ್ದೆಗೆ ಕನ್ನಡ ಕಡ್ಡಾಯ ಪರೀಕ್ಷೆ ಸೆಪ್ಟೆಂಬರ್ 29ರಂದು ನಡೆಯಲಿದೆ. ಈ ಪರೀಕ್ಷೆಯಲ್ಲಿ ಉತ್ತೀರ್ಣರಾದವರು ಮಾತ್ರ ಅಕ್ಟೋಬರ್ 27ಕ್ಕೆ ನಡೆಯುವ ಪ್ರಮುಖ ಪರೀಕ್ಷೆಗೆ ಅರ್ಹತೆ ಪಡೆಯಲಿದ್ದಾರೆ. ಒಂದು ಸಾಔಇರ ಗ್ರಾಮ ಆಡಳಿತಾಧಿಕಾರಿ ಹುದ್ದೆಗಳಿಗೆ 5.7 ಲಕ್ಷ ಮಂದಿ ಅರ್ಜಿ ಸಲ್ಲಿಸಿದ್ದು ಈ ಪರೀಕ್ಷೆಗೂ ತಯಾರಿ ನಡೆಸಲಾಗಿದೆ ಎಂದು ಕೆಇಎ ಹೇಳಿದೆ.
ಇನ್ನೂ ಪೊಲೀಸ್ ಸಬ್‌ಇನ್‌ಸ್‌ಪೆಕ್ಟರ್ ಪರೀಕ್ಷೆಗೆ ಹೆಚ್ಚಿನ ನಿಗಾ ಇಡಲು ಪೊಲೀಸ್ ಇಲಾಖೆಯ ನೆರವು ಕೂಡ ಕೋರಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಹಕ ನಿರ್ದೇಶಕ ಹೆಚ್, ಪ್ರಸನ್ನ ತಿಳಿಸಿದ್ದಾರೆ. ಕೆಲವರು ಸಾಮಾಜಿಕ ಜಾಲತಾಣದಲ್ಲಿ ಪರೀಕ್ಷೆ ಮುಂದೂಡುವಂತೆ ಒತ್ತಡ ಹೇರುವ ಪ್ರಯತ್ನ ನಡೆಸಿದ್ದಾರೆ. ಇದಕ್ಕೆ ಯಾರೂ ಕಿವಿಗೊಡಬಾರದು ಎಂದು ಮನವಿ ಮಾಡಲಾಗಿದೆ.
ಈಗಾಗಲೇ ಲೋಕಸಭಾ ಚುನಾವಣೆಯಲ್ಲಿ ಪರೀಕ್ಷೆ ಮುಮದೂಡಲಾಗಿತ್ತು. ಪರೀಕ್ಷೆ ಮುಂದೂಡುತ್ತಲೇ ಇದ್ದರೆ ಪರೀಕ್ಷೆ ನಡೆಸುವುದು ಯಾಔಆಗ? ಇಷ್ಟಕ್ಕೂ ಯಾವುದಾದರೂ ಒಂದು ಪರೀಕ್ಷೆ ಇದ್ದೇ ಇರುತ್ತದೆ. ಹಾಗಂತ ಪರೀಕ್ಷೆಗೆ ದಿನ ಹುಡುಕುವುದು ಕಷ್ಟ ಎಂದು ಹೆಚ್, ಪ್ರಸನ್ನ ಹೇಳಿದ್ದಾರೆ.












Click it and Unblock the Notifications