Breaking; ಪಿಎಸ್‌ಐ ಹಗರಣ; ನೇಮಕಾತಿ ವಿಭಾಗದ 12 ಸಿಬ್ಬಂದಿ ವರ್ಗಾವಣೆ

ಬೆಂಗಳೂರು, ಮೇ 08; ಪಿಎಸ್‌ಐ ನೇಮಕಾತಿ ಹಗರಣದ ಬಗ್ಗೆ ಸಿಐಡಿ ತನಿಖೆ ಚುರುಕುಗೊಂಡಿದೆ. ನೇಮಕಾತಿ ವಿಭಾಗದ 12 ಸಿಬ್ಬಂದಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಲಾಗಿದೆ.

ನೇಮಕಾತಿ ವಿಭಾಗದ ಎಡಿಜಿಪಿ ಹಿತೇಂದ್ರ ಈ ಕುರಿತು ಆದೇಶ ಹೊರಡಿಸಿದ್ದಾರೆ. ಕೆಲವು ದಿನಗಳ ಹಿಂದೆ ನೇಮಕಾತಿ ವಿಭಾಗದ ಎಡಿಜಿಪಿ ಅಮ್ರಿತ್‌ ಪೌಲ್, ಡಿವೈಎಸ್ಪಿ ಶಾಂತಕುಮಾರ್ ವರ್ಗಾವಗೊಳಿಸಿ ಸರ್ಕಾರ ವರ್ಗಾವಣೆಗೊಳಿಸಿತ್ತು.

ನೇಮಕಾತಿ ವಿಭಾಗದಲ್ಲಿ 14 ಸಿಬ್ಬಂದಿ ಇದ್ದರು. ಇವರಲ್ಲಿ 12 ಸಿಬ್ಬಂದಿ ವರ್ಗಾವಣೆ ಮಾಡಲಾಗಿದೆ. ವರ್ಗಾವಣೆಗೊಂಡ ಸಿಬ್ಬಂದಿ ಸ್ಥಾನ ಖಾಲಿ ಇದ್ದು, ಹೊಸ ಸಿಬ್ಬಂದಿ ನಿಯೋಜನೆ ಮಾಡಬೇಕಿದೆ.

PSI Recruitment Scam 12 Officials of Recruitment Division Transferred

ಪೊಲೀಸ್ ನೇಮಕಾತಿ ವಿಭಾಗದಿಂದಲೇ ಪಿಎಸ್‌ಐ ಲಿಖಿತ ಪರೀಕ್ಷೆ ಅಕ್ರಮ ನಡೆದಿದೆ ಎಂಬ ಆರೋಪವಿದೆ. ಈ ಹಿನ್ನಲೆಯಲ್ಲಿ ನೇಮಕಾತಿ ವಿಭಾಗದಲ್ಲಿದ್ದ ಸಿಬ್ಬಂದಿ, ಅಧಿಕಾರಿಗಳ ಮೇಲೆ ಸಹ ಸಿಐಡಿ ನಿಗಾವಹಿಸಿದೆ.

ಪಿಎಸ್‌ಐ ನೇಮಕಾತಿ ಲಿಖಿತ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವುದು ರಾಜ್ಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಸರ್ಕಾರ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿದೆ. ಸಿಐಡಿ 15ಕ್ಕೂ ಅಧಿಕ ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸುತ್ತಿದೆ.

ಲಿಖಿತ ಪರೀಕ್ಷೆಯಲ್ಲಿ ಅಕ್ರಮ ಪತ್ತೆಯಾದ ಹಿನ್ನಲೆಯಲ್ಲಿ ಲಿಖಿತ ಪರೀಕ್ಷೆಯನ್ನು ಸರ್ಕಾರ ರದ್ದುಗೊಳಿಸಿ ಆದೇಶ ಹೊರಡಿಸಿದೆ. ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳು ಇದನ್ನು ಪ್ರಶ್ನಿಸಿ ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿ ಮೊರೆ ಹೋಗಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+