ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking; ಪಿಎಸ್‌ಐ ಹಗರಣ; ನೇಮಕಾತಿ ವಿಭಾಗದ 12 ಸಿಬ್ಬಂದಿ ವರ್ಗಾವಣೆ

|
Google Oneindia Kannada News

ಬೆಂಗಳೂರು, ಮೇ 08; ಪಿಎಸ್‌ಐ ನೇಮಕಾತಿ ಹಗರಣದ ಬಗ್ಗೆ ಸಿಐಡಿ ತನಿಖೆ ಚುರುಕುಗೊಂಡಿದೆ. ನೇಮಕಾತಿ ವಿಭಾಗದ 12 ಸಿಬ್ಬಂದಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಲಾಗಿದೆ.

ನೇಮಕಾತಿ ವಿಭಾಗದ ಎಡಿಜಿಪಿ ಹಿತೇಂದ್ರ ಈ ಕುರಿತು ಆದೇಶ ಹೊರಡಿಸಿದ್ದಾರೆ. ಕೆಲವು ದಿನಗಳ ಹಿಂದೆ ನೇಮಕಾತಿ ವಿಭಾಗದ ಎಡಿಜಿಪಿ ಅಮ್ರಿತ್‌ ಪೌಲ್, ಡಿವೈಎಸ್ಪಿ ಶಾಂತಕುಮಾರ್ ವರ್ಗಾವಗೊಳಿಸಿ ಸರ್ಕಾರ ವರ್ಗಾವಣೆಗೊಳಿಸಿತ್ತು.

ಪಿಎಸ್ಐ ನೇಮಕಾತಿ ಅಕ್ರಮ: ಬೆಂಗಳೂರಲ್ಲಿ ಮತ್ತಿಬ್ಬರು PSI ಅಭ್ಯರ್ಥಿಗಳು ಲಾಕ್! ಪಿಎಸ್ಐ ನೇಮಕಾತಿ ಅಕ್ರಮ: ಬೆಂಗಳೂರಲ್ಲಿ ಮತ್ತಿಬ್ಬರು PSI ಅಭ್ಯರ್ಥಿಗಳು ಲಾಕ್!

ನೇಮಕಾತಿ ವಿಭಾಗದಲ್ಲಿ 14 ಸಿಬ್ಬಂದಿ ಇದ್ದರು. ಇವರಲ್ಲಿ 12 ಸಿಬ್ಬಂದಿ ವರ್ಗಾವಣೆ ಮಾಡಲಾಗಿದೆ. ವರ್ಗಾವಣೆಗೊಂಡ ಸಿಬ್ಬಂದಿ ಸ್ಥಾನ ಖಾಲಿ ಇದ್ದು, ಹೊಸ ಸಿಬ್ಬಂದಿ ನಿಯೋಜನೆ ಮಾಡಬೇಕಿದೆ.

ಪಿಎಸ್‌ಐ ನೇಮಕ ಹಗರಣ; ಎಫ್ ಐಆರ್ ರದ್ದು ಕೋರಿದ ಆರೋಪಿಗಳು ಪಿಎಸ್‌ಐ ನೇಮಕ ಹಗರಣ; ಎಫ್ ಐಆರ್ ರದ್ದು ಕೋರಿದ ಆರೋಪಿಗಳು

PSI Recruitment Scam 12 Officials of Recruitment Division Transferred

ಪೊಲೀಸ್ ನೇಮಕಾತಿ ವಿಭಾಗದಿಂದಲೇ ಪಿಎಸ್‌ಐ ಲಿಖಿತ ಪರೀಕ್ಷೆ ಅಕ್ರಮ ನಡೆದಿದೆ ಎಂಬ ಆರೋಪವಿದೆ. ಈ ಹಿನ್ನಲೆಯಲ್ಲಿ ನೇಮಕಾತಿ ವಿಭಾಗದಲ್ಲಿದ್ದ ಸಿಬ್ಬಂದಿ, ಅಧಿಕಾರಿಗಳ ಮೇಲೆ ಸಹ ಸಿಐಡಿ ನಿಗಾವಹಿಸಿದೆ.

Breaking; ಪಿಎಸ್‌ಐ ಹಗರಣ, ಕಾಂಗ್ರೆಸ್‌ಗೆ ಜೋಶಿ ತಿರುಗೇಟು Breaking; ಪಿಎಸ್‌ಐ ಹಗರಣ, ಕಾಂಗ್ರೆಸ್‌ಗೆ ಜೋಶಿ ತಿರುಗೇಟು

ಪಿಎಸ್‌ಐ ನೇಮಕಾತಿ ಲಿಖಿತ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವುದು ರಾಜ್ಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಸರ್ಕಾರ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿದೆ. ಸಿಐಡಿ 15ಕ್ಕೂ ಅಧಿಕ ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸುತ್ತಿದೆ.

ಲಿಖಿತ ಪರೀಕ್ಷೆಯಲ್ಲಿ ಅಕ್ರಮ ಪತ್ತೆಯಾದ ಹಿನ್ನಲೆಯಲ್ಲಿ ಲಿಖಿತ ಪರೀಕ್ಷೆಯನ್ನು ಸರ್ಕಾರ ರದ್ದುಗೊಳಿಸಿ ಆದೇಶ ಹೊರಡಿಸಿದೆ. ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳು ಇದನ್ನು ಪ್ರಶ್ನಿಸಿ ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿ ಮೊರೆ ಹೋಗಿದ್ದಾರೆ.

English summary
ADGP Hitendra transferred 12 officials of the recruitment division of the Karnataka police after PSI recruitment scam come to light.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X