ಚುನಾವಣೆಯಲ್ಲಿ ಸ್ಪರ್ಧೆ: ವಿಡಿಯೋ ರಿಲೀಸ್ ಮಾಡಿದ ಪಿಎಸ್ ಐ ಅಕ್ರಮ ಆರೋಪಿ ರುದ್ರಗೌಡ ಪಾಟೀಲ್

ಕಲಬುಗಿ,ಜನವರಿ 21: ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯಾಗಿರುವ ರುದ್ರಗೌಡ ಪಾಟೀಲ್ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಘೋಷಣೆ ಮಾಡಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಒಂದನ್ನ ಬಿಡುಗಡೆ ಮಾಡಿರುವ ರುದ್ರಗೌಡ ಪಾಟೀಲ್, ಜನ ಬಯಸಿದರೇ ಈ ಬಾರಿ ಅಫಜಲಪುರ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುವುದಾಗಿ ಹೇಳಿದ್ದಾರೆ.

ರುದ್ರಗೌಡ ಪಾಟೀಲ್ ಬಿಡುಗಡೆ ಮಾಡಿರುವ ವಿಡಿಯೋದಲ್ಲೇನಿದೆ.?

ನಾನು ಎಲ್ಲಿಯೂ ಓಡಿ ಹೋಗಿಲ್ಲಾ, ಇಲ್ಲೇ ಇದ್ದೇನೆ. ಇಡಿ ಅಧಿಕಾರಿಗಳು ಬಂದಾಗ ಅವರ ವಿಚಾರಣೆ ಎದುರಿಸಿದ್ದೇನೆ. ಇಡಿ ಅಧಿಕಾರಿಗಳು ಬಂದು ಹೋದ ಮೇಲೆ ನಾನು ಹೊರಗೆ ಹೋಗಿದ್ದೆ.

PSI Recruitment Scam Accused Rudre Gowda Announced To Stand For Assembly Election

ಆಗ ಸಿಐಡಿ ಅಧಿಕಾರಿಗಳು ಮನೆಗೆ ಬಂದಿದ್ದಾರೆ. ನಾನು ಸಿಐಡಿ ಅಧಿಕಾರಿಗಳನ್ನು ತಳ್ಳಿ ಓಡಿ ಹೋಗಿದ್ದೇನೆ ಅನ್ನೋದು ಸುಳ್ಳು ಸುದ್ದಿಯಾಗಿದೆ ಎಂದಿದ್ದಾರೆ. ಇನ್ನೂ ನಾನು ಈ ನೆಲದ ಕಾನೂನಿಗೆ ಗೌರವ ನೀಡುವ ಮನುಷ್ಯ. ರಾಜಕೀಯ ಕುತಂತ್ರದಿಂದ ಈ ಪ್ರಕರಣದಲ್ಲಿ ನನ್ನನ್ನು ಸಿಲುಕಿಸಿದ್ದಾರೆ. ಪಿಎಸ್‌ ಐ ಪ್ರಕರಣದಲ್ಲಿ ನನ್ನನ್ನು ಮತ್ತು ನನ್ನ ಸಹೋದರನನ್ನು ಸಿಲುಕಿಸಿದ್ದಾರೆ. ಸಮಾಜ ಸೇವೆ, ಚುನಾವಣೆಗೆ ಬರಬಹುದು ಅನ್ನೋ ಭಯದಿಂದ ಸಿಲುಕಿಸಿದ್ದಾರೆ. ನನ್ನ ಅಭಿಮಾನಿಗಳು ಯಾರು ಭಯ ಪಡಬಾರದು. ಇಂತಹ ಇನ್ನು ಹತ್ತು ಸುಳ್ಳು ಕೇಸ್ ಹಾಕಿದ್ರು ನಾನು ಹೆದರಲ್ಲ . ನನ್ನ ವಿರುದ್ದ ಕುತಂತ್ರ ಮಾಡಿರುವವರಿಗೆ ಉತ್ತರ ನೀಡಲು ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ ಎಂದು ಹೇಳಿದ್ದಾರೆ.

PSI Recruitment Scam Accused Rudre Gowda Announced To Stand For Assembly Election

ನನ್ನ ಮೇಲೆ ಹಲವು ಸುಳ್ಳು ಆರೋಪಗಳನ್ನ ಮಾಡಿದರು ನಾನು ಬೆದರೋದಿಲ್ಲಾ. ಅಫಜಲಪುರ ಜನರ ಸೇವೆಗಾಗಿ ನಾನು ಸದಾ ಸಿದ್ದ. ನನ್ನ ಅಭಿಮಾನಿಗಳು ಯಾರು ಭಯ ಪಡಬಾರದು. ಜಾಮೀನಿನ ಮೇಲೆ ಬಂದ ಮೇಲೆ ಸಿಐಡಿ ತನಿಖೆಗೆ ಸಹಕರಿಸುತ್ತಿಲ್ಲಾ ಅಂತ ಹೇಳ್ತಿದ್ದಾರೆ. ಆದ್ರೆ ಇದೆಲ್ಲವು ಸುಳ್ಳು. ನನ್ನ ಸಾಮಾಜಿಕ ಸೇವೆಯನ್ನು ನಿಲ್ಲಿಸೋದಿಲ್ಲಾ ಎಂದು ಹೇಳುವ ಮೂಲಕ ವಿಡಿಯೋ ಬಿಡುಗಡೆ ಮಾಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+