ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪಿಎಸ್‌ಐ ನೇಮಕ ಹಗರಣ; ಎಫ್‌ಐಆರ್ ರದ್ದು ಅರ್ಜಿ ಸಂಬಂಧ ಸರ್ಕಾರಕ್ಕೆ ನೋಟಿಸ್

By ಎಸ್ ಎಸ್ ಎಸ್
|
Google Oneindia Kannada News

ಬೆಂಗಳೂರು ಮೇ 19. ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿರುವ ಪಿಎಸ್ಐ ನೇಮಕ ಅಕ್ರಮ ಆರೋಪ ಪ್ರಕರಣದಲ್ಲಿ ಎಫ್ ಐಆರ್ ರದ್ದು ಕೋರಿದ್ದ ಅರ್ಜಿಯಲ್ಲಿ ಹೈಕೋರ್ಟ್ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.

ಇಬ್ಬರು ಆರೋಪಿಗಳಾದ ರಚನಾ, ಜಾಗೃತ್ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ರಜಾಕಾಲದ ನ್ಯಾಯಪೀಠ ಪ್ರತಿವಾದಿಗಳಾದ ರಾಜ್ಯ ಸರ್ಕಾರ, ದೂರುದಾರ ಡಿವೈಎಸ್ ಪಿ ನರಸಿಂಹ ಮೂರ್ತಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಮೇ. 25 ಕ್ಕೆ‌ ಮುಂದೂಡಿತು.

ಪಿಎಸ್‌ಐ ಹಗರಣ: ಮುಖ್ಯಪೇದೆ ಶ್ರೀಧರ್ ಮನೆಯಲ್ಲಿ 1.55 ಕೋಟಿ ನಗದು ಜಪ್ತಿಪಿಎಸ್‌ಐ ಹಗರಣ: ಮುಖ್ಯಪೇದೆ ಶ್ರೀಧರ್ ಮನೆಯಲ್ಲಿ 1.55 ಕೋಟಿ ನಗದು ಜಪ್ತಿ

ಅರ್ಜಿದಾರರ ಪರ ವಾದಿಸಿದ ವಕೀಲ ಎಂ.ಎಸ್.ಶ್ಯಾಮ್ ಸುಂದರ್, ನಿಯಮದಂತೆ ಎರಡನೇ ಎಫ್ಐಆರ್ ಕಾನೂನುಬಾಹಿರ, ಹಾಗಾಗಿ ಸಿಐಡಿಯ ಸ್ವಯಂ ಪ್ರೇರಿತ ಕೇಸ್ ರದ್ದು

PSI Recruitment Scam: Based on accused plea, HC ordered notice to state and also complaint

ಮಾಡಬೇಕೆಂದರು.

ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಪಿಎಸ್‌ಐ) ನೇಮಕ ಪ್ರಕರಣದಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್ ರದ್ದುಪಡಿಸುವಂತೆ ಕೋರಿ ಆರೋಪಿಗಳಾದ ಜಾಗೃತ್ ಮತ್ತು ರಚನಾ ಹನುಮಂತ ಹೈಕೋರ್ಟ್ ಮೊರೆ ಹೋಗಿದ್ದರು. ಕಳೆದ ವಾರ ಕೆಲ ಕಾಲ ಅರ್ಜಿ ವಿಚಾರಣೆ ನಡೆಸಿದ ನ್ಯಾಯಪೀಠ ಮೇ 19ರಂದು ವಿಚಾರಣೆಗೆ ಕೈಗೆತ್ತಿಕೊಳ್ಳುವುದಾಗಿ ತಿಳಿಸಿತ್ತು.

ಅರ್ಜಿದಾರರ ವಾದವೇನು?

"ಪರೀಕ್ಷಾ ಕೇಂದ್ರದಲ್ಲಿ ಸಿಸಿಟಿವಿ ಅಳವಡಿಸಲಾಗಿತ್ತು. ಮೇಲ್ವಿಚಾರಕರು ಮತ್ತು ವಿಚಕ್ಷಣಾ ಸ್ಕ್ವಾಡ್ ಪರೀಕ್ಷಾ ಕೇಂದ್ರದ ಮೇಲೆ ನಿಗಾಯಿಟ್ಟಿದ್ದರು. ಇಂತಹ ಸಂದರ್ಭದಲ್ಲಿ ಪರಿಕ್ಷಾ ಕೇಂದ್ರದಲ್ಲಿ ಯಾವುದೇ ರೀತಿ ನಕಲು ಹಾಗೂ ಅಕ್ರಮ ನಡೆಯಲು ಸಾಧ್ಯವಿಲ್ಲ. ಪರೀಕ್ಷೆ ನಡೆದು ಬಹುತೇಕ ಒಂದು ವರ್ಷ ಕಳೆದಿದೆ. ಫಲಿತಾಂಶ ಪ್ರಕಟಗೊಂಡ ನಂತರ ಎಫ್‌ಐಆರ್ ದಾಖಲಿಸಲಾಗಿದೆ'' ಎಂದು ಅರ್ಜಿದಾರರು ಆಕ್ಷೇಪಿಸಿದ್ದಾರೆ. ಅಲ್ಲದೆ, ಈ ಅರ್ಜಿ ನ್ಯಾಯಾಲಯದಿಂದ ಇತ್ಯರ್ಥಪಡಿಸುವರೆಗೂ ಪ್ರಕರಣ ಕುರಿತ ತನಿಖೆಗೆ ತಡೆಯಾಜ್ಞೆ ನೀಡಬೇಕು ಎಂದು ಅರ್ಜಿದಾರರು ಮಧ್ಯಂತರ ಮನವಿ ಮಾಡಿದ್ದಾರೆ.

"ಸಿಐಡಿ ಪೊಲೀಸ್ ಅಧಿಕಾರಿ ನರಸಿಂಹ ಮೂರ್ತಿ ಪ್ರಕರಣ ಸಂಬಂಧ ದೂರು ದಾಖಲಿಸಿದ್ದಾರೆ. ಅವರೇ ತನಿಖಾ ತಂಡದಲ್ಲಿ ಸಹಕಾಯಕ ತನಿಖಾಧಿಕಾರಿಯಾಗಿದ್ದಾರೆ. ಈವರೆಗೂ ನಡೆದಿರುವ ಸಿಐಡಿ ತನಿಖೆಯಲ್ಲಿ ಅಕ್ರಮದಲ್ಲಿ ಭಾಗಿಯಾಗಿರುವ ಬಗ್ಗೆ ತಮ್ಮ ವಿರುದ್ಧ ಯಾವುದೇ ಆರೋಪ ಕೇಳಿಬಂದಿಲ್ಲ ಮತ್ತು ಸಾಕ್ಷ್ಯಾಧಾರಗಳೂ ಇಲ್ಲ. ಆದರೂ ಪ್ರಕರಣದಲ್ಲಿ ತಮ್ಮನ್ನು ಸಿಲುಕಿಸುವ ಉದ್ದೇಶದಿಂದ ಎಫ್‌ಐಆರ್ ದಾಖಲಿಸಲಾಗಿದೆ. ಆದ್ದರಿಂದ ತಮ್ಮ ವಿರುದ್ಧದ ಎಫ್ ಐಆರ್ ರದ್ದುಪಡಿಸಬೇಕು,"

ಎಂದು ಕೋರ್ಟ್ ಮೊರೆ ಹೋಗಿದ್ದಾರೆ.

ಪ್ರಕರಣದ ಹಿನ್ನೆಲೆ:

545 ಪಿಎಸ್ ಐ ಹುದ್ದೆಗಳ ನೇಮಕ ಅಕ್ರಮ ಹಗರಣದಲ್ಲಿ ಪಾಲ್ಗೊಂಡ ಆರೋಪ ಸಂಬಂಧ ಸಿಐಡಿ ಪೊಲೀಸ್ ಅಧಿಕಾರಿ ಪಿ.ನರಸಿಂಹಮೂರ್ತಿ ಎಂಬುವರ ನೀಡಿದ ದೂರು ಆಧರಿಸಿ ಹೈಗ್ರೌಂಡ್ಸ್ ಠಾಣಾ ಪೊಲೀಸರು ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಪಡೆದಿರುವ ಜಾಗೃತ್ ವಿರುದ್ಧ 2022ರ ಏ.9ರಂದು ಎಫ್‌ಐಆರ್ ದಾಖಲಿಸಿದ್ದರು. ಅಂತೆಯೇ ಮಹಿಳಾ ವಿಭಾಗದಲ್ಲಿ ಪ್ರಥಮ ಸ್ಥಾನ‌ಪಡೆದಿರುವ ರಚನಾ ಹನುಮಂತ ವಿರುದ್ಧ ಏ.30ರಂದು ಎಫ್‌ಐಆರ್ ದಾಖಲಿಸಿದ್ದರು.

Recommended Video

Umran Malik ಭಾರತಕ್ಕಿಂತ ಪಾಕಿಸ್ತಾನದಲ್ಲಿದ್ದಿದ್ರೆ ಎಂಥ ಅದೃಷ್ಟ ಒಲಿಯುತ್ತಿತ್ತು ಗೊತ್ತಾ? | Oneindia Kannada

English summary
PSI Recruitment Scam: Based on accused plea, HC ordered notice to state and also complaint.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X