ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪಿಎಸ್ಐ ನೇಮಕಾತಿ ಅಕ್ರಮ: ಐಪಿಎಸ್ ಅಧಿಕಾರಿ ಅಮೃತ್ ಪೌಲ್‌ಗೆ ಸಂಕಷ್ಟ!

|
Google Oneindia Kannada News

ಬೆಂಗಳೂರು, ಮೇ. 30: ಪಿಎಸ್ಐ ನೇಮಕಾತಿ ಪರೀಕ್ಷಾ ಅಕ್ರಮ ನೇಮಕಾತಿ ವಿಭಾಗದ ಮುಖ್ಯಸ್ಥರಾಗಿದ್ದ ಹಿರಿಯ ಐಪಿಎಸ್ ಅಧಿಕಾರಿ ಅಮೃತ್ ಪೌಲ್ ಅವರನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ. ಈಗಾಗಲೇ ಎರಡು ಸಲ ವಿಚಾರಣೆ ನಡೆಸಿರುವ ಸಿಐಡಿ ಅಧಿಕಾರಿಗಳು ಇಂದು ವಿಚಾರಣೆ ನಡೆಸಲಿದ್ದಾರೆ. ಐಪಿಎಸ್ ಅಧಿಕಾರಿ ಈ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗುತ್ತಾರಾ ಎಂಬ ಪ್ರಶ್ನೆ ಇದೀಗ ಪೊಲೀಸ್ ವಲಯದಲ್ಲಿ ಭಾರಿ ಚರ್ಚೆ ಹುಟ್ಟು ಹಾಕಿದೆ.

ಪಿಎಸ್ಐ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಎರಡು ದಿನ ವಿಚಾರಣೆ ಎದುರಿಸಿದ್ದ ಐಪಿಎಸ್ ಅಧಿಕಾರಿ ಅಮೃತ್ ಪೌಲ್ ಮೂರನೇ ವಿಚಾರಣೆಗೆ ಗೈರು ಹಾಜರಾಗಿದ್ದಾರೆ. ಅನಾರೋಗ್ಯದ ಕಾರಣ ನೀಡಿ ವಿಚಾರಣೆಯಿಂದ ದೂರ ಉಳಿದಿದ್ದಾರೆ. ಇದೀಗ ಅವರನ್ನು ಪುನಃ ವಿಚಾರಣೆ ನಡೆಸಲು ಸಿಐಡಿ ತನಿಖಾಧಿಕಾರಿಗಳು ತಯಾರಿ ನಡೆಸಿದ್ದಾರೆ. ಮೇಲಾಧಿಕಾರಿಗಳ ಸಲಹೆ ಮೇರೆಗೆ ಪೌಲ್ ವಿಚಾರಣೆಗೆ ಲಭ್ಯವಿರುವ ಸಾಕ್ಷಾಧಾರಗಳ ಆಧಾರದ ಮೇಲೆ ಪ್ರಶ್ನಾವಳಿ ಸಿದ್ದಪಡಿಸಿಕೊಂಡಿದ್ದಾರೆ. ಪಿಎಸ್ಐ ನೇಮಕಾತಿ ಪರೀಕ್ಷಾ ಅಕ್ರಮದಲ್ಲಿ ಶಾಮೀಲಾಗಿರುವುದು ದೃಢಪಟ್ಟರೆ ಬಂಧಿನಕ್ಕೆ ಒಳಗಾದರೂ ಅಚ್ಚರಿ ಪಡಬೇಕಿಲ್ಲ.

PSI Recruitment Scam: CID questions former AGDP -Recruitment Amrit Paul

ಪಿಎಸ್ಐ ನೇಮಕಾತಿ ವಿಭಾಗದ ಡಿವೈಎಸ್ಪಿ ಶಾಂತಕುಮಾರ್ ಸೇರಿದಂತೆ ಹಲವು ಸಿಬ್ಬಂದಿ ಬಂಧನಕ್ಕೆ ಒಳಗಾಗಿದ್ದರು. ಬಂಧಿತ ಆರೋಪಿಗಳಲ್ಲಿ ಒಬ್ಬನಾದ ಶ್ರೀಧರ್ ಮನೆಯಲ್ಲಿ ಒಂದೂವರೆ ಕೋಟಿ ರೂ. ಹಣ ಪತ್ತೆಯಾಗಿತ್ತು. ನೇಮಕಾತಿ ವಿಭಾಗದ ಸ್ಟ್ರಾಂಗ್ ರೂಮ್ ನಲ್ಲಿ ಅಕ್ರಮ ನಡೆದಿರುವುದು ಸಿಐಡಿ ತನಿಖೆಯಲ್ಲಿ ಬೆಳಕಿಗೆ ಬಂದಿತ್ತು. ಪೊಲೀಸ್ ಕಮೀಷನರ್ ಹುದ್ದೆ ನಿರೀಕ್ಷೆಯಲ್ಲಿದ್ದ ನೇಮಕಾತಿ ವಿಭಾಗದ ಎಡಿಜಿಪಿ ಅಮೃತ್ ಪೌಲ್ ಅವರನ್ನು ಆಂತರಿಕ ಭದ್ರತೆ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿತ್ತು. ಆದರೆ, ಆರಂಭದಲ್ಲಿ ಅಮೃತ್ ಪೌಲ್ ಕೈವಾಡದ ಬಗ್ಗೆ ಯಾವುದೇ ಸಾಕ್ಷಾಧಾರಗಳು ಲಭ್ಯವಾಗಿರಲಿಲ್ಲ. ಡಿವೈಎಸ್ಪಿ ಶಾಂತಕುಮಾರ್ ಬಂಧನದ ಬಳಿಕ ನೇಮಕಾತಿ ವಿಭಾಗದಲ್ಲಿ ನಡೆದಿರುವ ಅಕ್ರಮ ಬೆಳಕಿಗೆ ಬಂದಿತ್ತು.

PSI Recruitment Scam: CID questions former AGDP -Recruitment Amrit Paul

ಈಗಾಗಲೇ ಅಮಾನತು ಮಾಡಬೇಕಿತ್ತು:

Recommended Video

IPL ಫೈನಲ್ ಮ್ಯಾಚ್ ಗೂ ಮುನ್ನ ಸ್ಟೇಡಿಯಂನಲ್ಲಿ ಮಾರ್ದನಿಸಿತು KGF ನ ವಯಲೆನ್ಸ್ ಡೈಲಾಗ್ | OneIndia Kannada

ಪಿಎಸ್ಐ ನೇಮಕಾತಿ ಪರೀಕ್ಷಾ ಅಕ್ರಮದಲ್ಲಿ ಪೊಲೀಸ್ ನೇಮಕಾತಿ ವಿಭಾಗದ ಸಿಬ್ಬಂದಿ ಶಾಮೀಲಾಗಿರುವುದು ಈಗಾಗಲೇ ದೃಢಪಟ್ಟಿದೆ. ಆರೋಪಿತರು ಬಂಧನಕ್ಕೆ ಒಳಗಾಗಿದ್ದಾರೆ. ನೇಮಕಾತಿ ವಿಭಾಗದ ಮುಖ್ಯಸ್ಥರಾಗಿರುವ ಅಮೃತ್ ಪೌಲ್ ಅವರ ಮೂಗಿನ ನೇರಕ್ಕೆ ಅಕ್ರಮ ನಡೆದಿದೆ. ನೇಮಕಾತಿ ವಿಭಾಗದ ಸ್ಟ್ರಾಂಗ್ ರೂಮ್ ನಲ್ಲಿಯೇ ಒಎಂಆರ್ ಶೀಟ್ ಗಳನ್ನು ತಿದ್ದುಪಡಿ ಮಾಡಲಾಗಿದೆ. ಕಿಂಗ್ ಪಿನ್ ಗಳು ನೇಮಕಾತಿ ವಿಭಾಗದ ಡಿವೈಎಸ್ಪಿ ಶಾಂತಕುಮಾರ್ ಅವರ ಜತೆ ನಿರಂತರ ಸಂಪರ್ಕದಲ್ಲಿರುವುದು ತನಿಖೆ ವೇಳೆ ಬೆಳಕಿಗೆ ಬಂದಿದೆ. ಸದ್ಯ ಬಂಧನಕ್ಕೆ ಒಳಗಾಗಿರುವ ಶಾಂತಕುಮಾರ್ ಮತ್ತು ನೇಮಕಾತಿ ವಿಭಾಗದ ಮುಖ್ಯಸ್ಥರ ನಡುವೆ ಅನೇಕ ದೂರವಾಣಿ ಕರೆಗಳ ವಿನಿಮಯ ಆಗಿರುವುದನ್ನು ಸಿಐಡಿ ಪತ್ತೆ ಮಾಡಿದೆ. ಸತತ ಎರಡು ದಿನ ವಿಚಾರಣೆ ಎದುರಿಸಿರುವ ಅಮೃತ್ ಪೌಲ್ ಪಾಲಿಗೆ ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣ ಕಂಟಕವಾಗುವ ಎಲ್ಲಾ ಲಕ್ಷಣ ಗೋಚರಿಸುತ್ತಿದೆ.

English summary
PSI Recruitment Scam: CID questioned senior IPS officer and former chief of the police recruitment wing, Amrit Paul. Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X