ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪಿಎಸ್‌ಐ ನೇಮಕ ಹಗರಣ: ಸಮರ್ಪಕ ತನಿಖೆಗೆ ಹೈಕೋರ್ಟ್ ಆದೇಶ

By ಎಸ್ ಎಸ್ ಎಸ್
|
Google Oneindia Kannada News

ಬೆಂಗಳೂರು, ಜೂ.30. ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಇಲಾಖೆಯ ಗೌರವ ಉಳಿಸುವ ರೀತಿ‌ ಸಮರ್ಪಕ ತನಿಖೆ ನಡೆಸಬೇಕು ಎಂದು ಹೈಕೋರ್ಟ್ ನಿರ್ದೇಶನ ನೀಡಿದೆ. ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿರುವ ಸಿಐಡಿ ಡಿಜಿ ಪಿಎಸ್ ಸಂಧು ಅವರಿಗೆ ಹೈಕೋರ್ಟ್ ಈ ನಿರ್ದೇಶನ ನೀಡಿದೆ.

ಪ್ರಕರಣದಲ್ಲಿ ಜಾಮೀನು ಕೋರಿ ಆರೋಪಿಗಳು ಸಲ್ಲಿಸಿರುವ ಅರ್ಜಿ ವಿಚಾರಣೆ ವೇಳೆ ನ್ಯಾ. ಹೆಚ್.ಪಿ.ಸಂದೇಶ್ ರವರಿದ್ದ ಏಕಸದಸ್ಯ ಪೀಠ ಸಿಐಡಿ ಡಿಜಿಗೆ ಸೂಚನೆ ನೀಡಿದೆ.

ನ್ಯಾಯಮೂರ್ತಿಗಳು, ''ಪಿಎಸ್ಐ ನೇಮಕಾತಿ ಹಗರಣದಲ್ಲಿ ಹಲವರ ಮೇಲೆ ಆರೋಪಗಳಿವೆ. ಪೊಲೀಸ್ ಅಧಿಕಾರಿಗಳು, ಮಧ್ಯವರ್ತಿಗಳಿದ್ದಾರೆ. ಹಾಗಾಗಿ ಸಮರ್ಪಕ ತನಿಖೆ ನಡೆಯುವ ಅವಶ್ಯಕತೆಯಿದೆ. ನಿಮ್ಮ ಇಲಾಖೆಯ ಗೌರವ ಉಳಿಸಿಕೊಳ್ಳುವುದು ನಿಮ್ಮ ಕೈಯಲ್ಲಿದೆ.ಕೋರ್ಟ್ ಪ್ರಕರಣದ ತನಿಖೆಯ ನಿಗಾ ವಹಿಸಲಿದೆ'' ಎಂದು ಹೇಳಿದರು.

ಅಲ್ಲದೆ, ಪಿಎಸ್ಐ ನೇಮಕದಲ್ಲೇ ಭ್ರಷ್ಟಾಚಾರ ಗಂಭೀರ ವಿಚಾರ, ತನಿಖೆಯಿಂದ ಸತ್ಯಸಂಗತಿ ಹೊರಬೀಳಬೇಕು. ಇದರ ಹಿಂದೆ ಯಾರೇ ಸಚಿವರಾಗಿರಲೀ, ಯಾವುದೇ ಅಧಿಕಾರಿಗಳಾಗಿರಲೀ ಭಾಗಿಯಾಗಿದ್ದರೆ ಅವರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು ಎಂದು ಸಿಐಡಿ ಡಿಜಿ ಪಿ.ಎಸ್ ಸಂಧು ಅವರಿಗೆ ಸೂಚಿಸಿದ ನ್ಯಾಯಪೀಠ ವಿಚಾರಣೆಯನ್ನು ಜು.7ಕ್ಕೆ ತನಿಖಾ ಪ್ರಗತಿ ವರದಿ ಸಲ್ಲಿಸುವಂತೆ ಆದೇಶಿಸಿತು.

PSI Recruitment scam: HC directed CID DGP to hold proper enquiry

ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಪಿಎಸ್‌ಐ) ನೇಮಕ ಪ್ರಕರಣದಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಎಫ್ ಐಆರ್ ರದ್ದುಪಡಿಸುವಂತೆ ಕೋರಿ ಆರೋಪಿಗಳಾದ ಜಾಗೃತ್ ಮತ್ತು ರಚನಾ ಹನುಮಂತ ಹೈಕೋರ್ಟ್ ಮೊರೆ ಹೋಗಿದ್ದರು.

ಪಿಎಸ್ಐ ನೇಮಕಾತಿ ಅಕ್ರಮ: ಸಿಐಡಿಯಿಂದ 'ಬಿಗ್ ಸರ್'ಗೆ ಡ್ರಿಲ್!ಪಿಎಸ್ಐ ನೇಮಕಾತಿ ಅಕ್ರಮ: ಸಿಐಡಿಯಿಂದ 'ಬಿಗ್ ಸರ್'ಗೆ ಡ್ರಿಲ್!

ಅರ್ಜಿದಾರರ ವಾದವೇನು?: ''ಪರೀಕ್ಷಾ ಕೇಂದ್ರದಲ್ಲಿ ಸಿಸಿಟಿವಿ ಅಳವಡಿಸಲಾಗಿತ್ತು. ಮೇಲ್ವಿಚಾರಕರು ಮತ್ತು ವಿಚಕ್ಷಣಾ ಸ್ಕ್ವಾಡ್ ಪರೀಕ್ಷಾ ಕೇಂದ್ರದ ಮೇಲೆ ನಿಗಾ ಇಟ್ಟಿದ್ದರು. ಇಂತಹ ಸಂದರ್ಭದಲ್ಲಿ ಪರೀಕ್ಷಾ ಕೇಂದ್ರದಲ್ಲಿ ಯಾವುದೇ ರೀತಿ ನಕಲು ಹಾಗೂ ಅಕ್ರಮ ನಡೆಯಲು ಸಾಧ್ಯವಿಲ್ಲ. ಪರೀಕ್ಷೆ ನಡೆದು ಬಹುತೇಕ ಒಂದು ವರ್ಷ ಕಳೆದಿದೆ. ಫಲಿತಾಂಶ ಪ್ರಕಟಗೊಂಡ ನಂತರ ಎಫ್ಐಆರ್ ದಾಖಲಿಸಲಾಗಿದೆ'' ಎಂದು ಅರ್ಜಿದಾರರು ಆಕ್ಷೇಪಿಸಿದ್ದಾರೆ.

ಅಲ್ಲದೆ, ಈ ಅರ್ಜಿ ನ್ಯಾಯಾಲಯದಿಂದ ಇತ್ಯರ್ಥಪಡಿಸುವರೆಗೂ ಪ್ರಕರಣ ಕುರಿತ ತನಿಖೆಗೆ ತಡೆಯಾಜ್ಞೆ ನೀಡಬೇಕು ಎಂದು ಅರ್ಜಿದಾರರು ಮಧ್ಯಂತರ ಮನವಿ ಮಾಡಿದ್ದಾರೆ. ''ಸಿಐಡಿ ಪೊಲೀಸ್ ಅಧಿಕಾರಿ ನರಸಿಂಹ ಮೂರ್ತಿ ಪ್ರಕರಣ ಸಂಬಂಧ ದೂರು ದಾಖಲಿಸಿದ್ದಾರೆ. ಅವರೇ ತನಿಖಾ ತಂಡದಲ್ಲಿ ಸಹಕಾಯಕ ತನಿಖಾಧಿಕಾರಿಯಾಗಿದ್ದಾರೆ. ಈವರೆಗೂ ನಡೆದಿರುವ ಸಿಐಡಿ ತನಿಖೆಯಲ್ಲಿ ಅಕ್ರಮದಲ್ಲಿ ಭಾಗಿಯಾಗಿರುವ ಬಗ್ಗೆ ತಮ್ಮ ವಿರುದ್ಧ ಯಾವುದೇ ಆರೋಪ ಕೇಳಿಬಂದಿಲ್ಲ ಮತ್ತು ಸಾಕ್ಷ್ಯಾಧಾರಗಳೂ ಇಲ್ಲ. ಆದರೂ ಪ್ರಕರಣದಲ್ಲಿ ತಮ್ಮನ್ನು ಸಿಲುಕಿಸುವ ಉದ್ದೇಶದಿಂದ ಎಫ್‌ಐಆರ್ ದಾಖಲಿಸಲಾಗಿದೆ. ಆದ್ದರಿಂದ ತಮ್ಮ ವಿರುದ್ಧದ ಎಫ್‌ಐಆರ್ ರದ್ದುಪಡಿಸಬೇಕು" ಎಂದು ಕೋರ್ಟ್ ಮೊರೆ ಹೋಗಿದ್ದಾರೆ.

ಪಿಎಸ್ಐ ನೇಮಕಾತಿ ಪರೀಕ್ಷಾ ಅಕ್ರಮ: ಕಿಂಗ್‌ಪಿನ್ ಆರ್.ಡಿ. ಪಾಟೀಲ್ ಗ್ಯಾಂಗ್ ಅರೆಸ್ಟ್ಪಿಎಸ್ಐ ನೇಮಕಾತಿ ಪರೀಕ್ಷಾ ಅಕ್ರಮ: ಕಿಂಗ್‌ಪಿನ್ ಆರ್.ಡಿ. ಪಾಟೀಲ್ ಗ್ಯಾಂಗ್ ಅರೆಸ್ಟ್

ಪ್ರಕರಣದ ಹಿನ್ನೆಲೆ: 545 ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳನ್ನು ಭರ್ತಿ ಮಾಡಲು 2022ರ ಜ.21ರಂದು ಅಧಿಸೂಚನೆ ಹೊರಡಿಸಲಾಗಿತ್ತು. 3 ಹಂತದಲ್ಲಿ ನೇಮಕ ಪ್ರಕ್ರಿಯೆ ನಡೆಸಲು ಆದೇಶದಲ್ಲಿ ತಿಳಿಸಲಾಗಿತ್ತು. ಒಟ್ಟು 1.20 ಲಕ್ಷಕ್ಕೂ ಅಧಿಕ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಿದ್ದರು.

PSI Recruitment scam: HC directed CID DGP to hold proper enquiry

ಮೊದಲ ಹಂತದಲ್ಲಿ ದೈಹಿಕ ಪರೀಕ್ಷೆಯ ನಂತರ 54,104 ಅಭ್ಯರ್ಥಿಗಳು ಮುಖ್ಯ ಪರೀಕ್ಷೆಗೆ ಆಯ್ಕೆಯಾದರು. ಬಳಿಕ ಲಿಖಿತ ಪರೀಕ್ಷೆ ನಡೆಯಿತು. ಅದರಲ್ಲಿ ಎರಡು ಪತ್ರಿಕೆ, ಒಂದು 100 ಅಂಕಗಳಿಗೆ ಮತ್ತು ಮತ್ತೊಂದು 150 ಅಂಕಗಳಿಗೆ ಪರೀಕ್ಷೆಯನ್ನು ನಡೆಸಲಾಗಿತ್ತು. ನಂತರ 545 ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನಾ ಕಾರ್ಯವೂ ನಡೆಯುತ್ತಿದೆ. ಈ ಮಧ್ಯೆ, ಕಲಬುರಗಿಯ ಜ್ಞಾನಜ್ಯೋತಿ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆಯ ವೇಳೆ ಅಕ್ರಮ ನಡೆದಿದ ಎಂಬ ದೂರು ಕೇಳಿಬಂದಿತು. ಆ ಬಗ್ಗೆ ವ್ಯಾಪಕ ಪ್ರಾಥಮಿಕ ತನಿಖೆ ನಡೆಸಿದೆ ಅದರಲ್ಲಿ ಸತ್ಯಾಂಶವಿರುವುದ ಸಂಗತಿ ಬಯಲಾಯಿತು. ಆ ಸಂಬಂಧ 22 ಅಭ್ಯರ್ಥಿಗಳ ವಿರುದ್ಧ ಎಫ್ ಐಅರ್ ದಾಖಲಾಗಿ ಹಲವು ಅಭ್ಯರ್ಥಿಗಳು ಮತ್ತು ರಾಜಕೀಯ ಮುಖಂಡರು ಬಂಧನಕ್ಕೆ ಒಳಗಾಗಿದ್ದಾರೆ.


545 ಪಿಎಸ್ ಐ ಹುದ್ದೆಗಳ ನೇಮಕ ಅಕ್ರಮ ಹಗರಣದಲ್ಲಿ ಪಾಲ್ಗೊಂಡ ಆರೋಪ ಸಂಬಂಧ ಸಿಐಡಿ ಪೊಲೀಸ್ ಅಧಿಕಾರಿ ಪಿ.ನರಸಿಂಹಮೂರ್ತಿ ಎಂಬುವರ ನೀಡಿದ ದೂರು ಆಧರಿಸಿ ಹೈಗ್ರೌಂಡ್ಸ್ ಠಾಣಾ ಪೊಲೀಸರು ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಪಡೆದಿರುವ ಜಾಗೃತ್ ವಿರುದ್ಧ 2022ರ ಏ.9ರಂದು ಎಫ್‌ಐಆರ್ ದಾಖಲಿಸಿದ್ದರು. ಅಂತೆಯೇ ಮಹಿಳಾ ವಿಭಾಗದಲ್ಲಿ ಪ್ರಥಮ ಸ್ಥಾನ‌ಪಡೆದಿರುವ ರಚನಾ ಹನುಮಂತ ವಿರುದ್ಧ ಏ.30ರಂದು ಎಫ್‌ಐಆರ್ ದಾಖಲಿಸಿದ್ದರು.

English summary
PSI Recruitment scam: HC directed CID DGP to hold proper enquiry which will uphold the dignity of police department
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X