Get Updates
Get notified of breaking news, exclusive insights, and must-see stories!

PSI recruitment scam; ವರದಿ ಸಲ್ಲಿಸಿದ ನ್ಯಾ. ಬಿ. ವೀರಪ್ಪ ಸಮಿತಿ

ಬೆಂಗಳೂರು, ಜನವರಿ 22: ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಭಾರೀ ಸದ್ದು ಮಾಡಿದ್ದು ಪಿಎಸ್‌ಐ ನೇಮಕಾತಿ ಹಗರಣ. 545 ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಸಿವಿಲ್) ನೇಮಕಾತಿ ಲಿಖಿತ ಪರೀಕ್ಷೆಯಲ್ಲಿ ಭಾರೀ ಅಕ್ರಮ ನಡೆದಿದೆ ಎಂಬುದು ಆರೋಪವಾಗಿದೆ.

ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ಮುಗಿದು ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಪಿಎಸ್‌ಐ ನೇಮಕಾತಿ ಹಗರಣದ ತನಿಖೆಗೆ ಸರ್ಕಾರ ಆದೇಶ ಹೊರಡಿಸಿತು. ಕರ್ನಾಟಕ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ. ವೀರಪ್ಪ ನೇತೃತ್ವದ ಏಕಸದಸ್ಯ ಸಮಿತಿಯನ್ನು ರಚನೆ ಮಾಡಲಾಯಿತು.

PSI Recruitment Scam Justice B Veerappa Commission Submits Repor

ಈ ಸಮಿತಿ ತನಿಖೆಯನ್ನು ಪೂರ್ಣಗೊಳಿಸಿದೆ. ಸೋಮವಾರ ನ್ಯಾಯಮೂರ್ತಿ ಬಿ. ವೀರಪ್ಪ ಅವರು ಆಯೋಗದ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸಲ್ಲಿಕೆ ಮಾಡಿದರು. ಈ ಸಂದರ್ಭದಲ್ಲಿ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಎಲ್. ಕೆ. ಅತೀಕ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಮತ್ತು ನಸೀರ್ ಅಹಮದ್ ಉಪಸ್ಥಿತರಿದ್ದರು.

ಸರ್ಕಾರ ಯಾವ ಕ್ರಮ ಕೈಗೊಳ್ಳಲಿದೆ?; ಕರ್ನಾಟಕ ಕಾಂಗ್ರೆಸ್ ಬಿಜೆಪಿ ಸರ್ಕಾರದ ವಿರುದ್ಧ ಚುನಾವಣೆಯಲ್ಲಿ ಪ್ರಯೋಗ ಮಾಡಿದ ಅಸ್ತ್ರಗಳಲ್ಲಿ 545 ಪಿಎಸ್‌ಐ ನೇಮಕಾತಿ ಹಗರಣ ಸಹ ಒಂದು. ಈಗ ಸರ್ಕಾರದ ಆದೇಶದಂತೆ ಏಕ ಸದಸ್ಯ ಸಮಿತಿ ತನಿಖೆ ನಡೆಸಿ ವರದಿ ಸಲ್ಲಿಕೆ ಮಾಡಿದೆ. ಸರ್ಕಾರ ವರದಿಯನ್ನು ಪರಿಶೀಲಿಸಿ ಯಾವ ಕ್ರಮ ಕೈಗೊಳ್ಳಲಿದೆ? ಎಂದು ಕಾದು ನೋಡಬೇಕಿದೆ.

2023ರ ಜುಲೈನಲ್ಲಿ ಕರ್ನಾಟಕ ಸರ್ಕಾರ ನಿವೃತ್ತ ನ್ಯಾಯೂರ್ತಿ ಬಿ. ವೀರಪ್ಪ ನೇತೃತ್ವದಲ್ಲಿ ಸಮಿತಿ ರಚನೆ ಮಾಡಿತ್ತು. ಆಯೋಗದ ಕಾರ್ಯ ನಿರ್ವಹಣೆಗಾಗಿ ಬೆಂಗಳೂರು ನಗರದಲ್ಲಿಯೇ ಕಛೇರಿ ನೀಡಲಾಗಿತ್ತು. ಸಮಿತಿಗೆ ಅಗತ್ಯವಿರುವ ಅಧಿಕಾರಿ, ಸಿಬ್ಬಂದ ಮತ್ತು ಸೌಲಭ್ಯಗಳನ್ನು ಒದಗಿಸುವಂತೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಸರ್ಕಾರ ಸೂಚನೆ ನೀಡಿತ್ತು.

2021ರ ಜನವರಿ 21ರಂದು ಪಿಎಸ್ಐ ಆಯ್ಕೆ ಪ್ರಕ್ರಿಯೆ ಆರಂಭವಾಯಿತು. ಅಕ್ಟೋಬರ್ 21ರಂದು 92 ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆ ನಡೆದಿತ್ತು. ಈ ಪರೀಕ್ಷೆಯ ಸಂದರ್ಭದಲ್ಲಿ ಅಕ್ರಮ ನಡೆದಿದೆ ಎಂಬುದು ಆರೋಪವಾಗಿದೆ. ಅಂದಿನ ಸರ್ಕಾರ ಈ ಕುರಿತು ಸಿಐಡಿ ತನಿಖೆಗೆ ಆದೇಶ ನೀಡಿತ್ತು.

ಲಿಖಿತ ಪರೀಕ್ಷೆ ಅಕ್ರಮಕ್ಕೆ ಸಂಬಂಧಿಸಿದಂತೆ ಕರ್ನಾಟಕದ ವಿವಿಧ ಪೊಲೀಸ್ ಠಾಣೆಗಳಲ್ಲಿ 52 ಮಂದಿಯ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಐಪಿಎಸ್ ಅಧಿಕಾರಿ, ಪೊಲೀಸರು ಸಹ ಈ ಅಕ್ರಮದಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪವಿದ್ದು, ಅವರನ್ನು ಪೊಲೀಸರು ಬಂಧಿಸಿದ್ದರು.

ಈ ಪ್ರಕರಣದಲ್ಲಿ ಬಂಧನಕ್ಕೆ ಒಳಗಾದ 52 ಅಭ್ಯರ್ಥಿಗಳು ಮುಂದೆ ಕರ್ನಾಟಕ ಪೊಲೀಸ್ ಇಲಾಖೆ ನಡೆಸುವ ಯಾವುದೇ ಪರೀಕ್ಷೆ ಬರೆಯದಂತೆ ನಿಷೇಧ ಹೇರಲಾಗಿದೆ. ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಹಗರಣದ ತನಿಖೆಗೆ ಸಮಿತಿ ರಚನೆ ಮಾಡಿತ್ತು.

ಲಿಖಿತ ಪರೀಕ್ಷೆ ಬರೆಯುವಾಗ ಬ್ಲೂಟುಥ್ ಡಿವೈಸ್ ಬಳಕೆ ಮಾಡಲಾಗಿದೆ. ಉತ್ತರ ಪತ್ರಿಕೆಯನ್ನು ತಿದ್ದಲಾಗಿದೆ ಎಂಬುದು ಸೇರಿದಂತೆ ಹಲವು ಆರೋಪಗಳಿವೆ. ಈ ಕುರಿತು ಸಿಐಡಿ ತನಿಖೆ ನಡೆಸಿದೆ. ಕರ್ನಾಟಕ ಸರ್ಕಾರ ಲಿಖಿತ ಪರೀಕ್ಷೆಯನ್ನೇ ರದ್ದುಗೊಳಿಸಿ ಆದೇಶ ಹೊರಡಿಸಿತ್ತು. ಮರು ಪರೀಕ್ಷೆ ನಡೆಸುವಂತೆ ಆದೇಶ ಹೊರಡಿಸಿತ್ತು.

ಈ ಆದೇಶವನ್ನು ಪ್ರಶ್ನಿಸಿ ಕೆಲವು ಅಭ್ಯರ್ಥಿಗಳು ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದ್ದರು. ಹೈಕೋರ್ಟ್‌ ಮರು ಪರೀಕ್ಷೆಯನ್ನು ನಡೆಸುವಂತೆ ಆದೇಶ ನೀಡಿತ್ತು. ಜನವರಿ 23ರಂದು ಮರು ಪರೀಕ್ಷೆ ನಡೆಯಲಿದೆ. ಈಗ ಸರ್ಕಾರ ಸಮಿತಿಯ ವರದಿಯನ್ನು ಪಡೆದು ಯಾವ ಕ್ರಮ ಕೈಗೊಳ್ಳಲಿದೆ? ಎಂದು ಕಾದು ನೋಡಬೇಕು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+