ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪಿಎಸ್ಐ ನೇಮಕ ಪರೀಕ್ಷೆ ರದ್ದು ಪ್ರಶ್ನಿಸಿದ್ದ ಅರ್ಜಿಗಳನ್ನು ವಜಾಗೊಳಿಸಿದ ಕೆಎಟಿ

By ಎಸ್ ಎಸ್ ಎಸ್
|
Google Oneindia Kannada News

ಬೆಂಗಳೂರು,ಜು.19: 545 ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಪಿಎಸ್ಐ) ನೇಮಕ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ವರದಿಗಳ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ರದ್ದುಗೊಳಿಸಿದ್ದ ಸರ್ಕಾರ ಆದೇಶ ಪ್ರಶ್ನಿಸಿದ್ದ ಅರ್ಜಿಗಳನ್ನು ಕರ್ನಾಟಕ ಆಡಳಿತ ನ್ಯಾಯಮಂಡಳಿ ವಜಾಗೊಳಿಸಿದೆ. ಆ ಮೂಲಕ ಮರುಪರೀಕ್ಷೆ ನಡೆಸುವ ಸರ್ಕಾರದ ನಿರ್ಧಾರವನ್ನು ಕೆಎಟಿ ಎತ್ತಿ ಹಿಡಿದಿದೆ.

ಮರು ಪರೀಕ್ಷೆ ನಡೆಸುವ ಸಂಬಂಧ ಏ.29ರಂದು ಸರ್ಕಾರ ಹೊರಡಿಸಿರುವ ಆದೇಶ ಪ್ರಶ್ನಿಸಿ ಪವಿತ್ರ ಸೇರಿ 28ಕ್ಕೂ ಅಧಿಕ ಅಭ್ಯರ್ಥಿಗಳು ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿ ತೀರ್ಪು ಕಾಯ್ದಿರಿಸಿದ್ದ ನ್ಯಾಯಾಂಗ ಸದಸ್ಯ ನಾರಾಯಣಸ್ವಾಮಿ ಅವರಿದ್ದ ಕೆಎಟಿ ನ್ಯಾಯಪೀಠ ಮಂಗಳವಾರ ಈ ಆದೇಶ ನೀಡಿದೆ.

ಪರೀಕ್ಷೆ ರದ್ದು ಆದೇಶ ಪ್ರಶ್ನಿಸಿದ್ದ ಅಭ್ಯರ್ಥಿಗಳು, ತನಿಖೆ ಮೂಲಕ ಕಳಂಕಿತರನ್ನು ಪ್ರತ್ಯೇಕಿಸಲು ಮನವಿ ಮಾಡಿದ್ದರು. ಆದರೆ, ನೇಮಕಾತಿ ಪ್ರಾಧಿಕಾರದ ಮೇಲೆಯೇ ಆರೋಪಗಳಿರುವ ಹಿನ್ನಲೆ ಕಳಂಕಿತರಲ್ಲದ ಅಭ್ಯರ್ಥಿಗಳನ್ನು ಪ್ರತ್ಯೇಕಿಸಲು ಸಾಧ್ಯವಿಲ್ಲ ಎಂದು ಸರ್ಕಾರದ ಪರ ಹೆಚ್ಚುವರಿ ಅಡ್ವೊಕೇಟ್ ಜನರಲ್ ಆರ್. ಸುಬ್ರಹ್ಮಣ್ಯ ಆಕ್ಷೇಪಣೆ ಸಲ್ಲಿಸಿದ್ದರು.

PSI recruitment scam: KAT upheld Re examination order by the state government

ಇದೀಗ ಕೆಎಟಿ ಸರ್ಕಾರದ ವಾದ ಎತ್ತಿ ಹಿಡಿದು ಅಭ್ಯರ್ಥಿಗಳ ಅರ್ಜಿ ವಜಾಗೊಳಿಸಿದೆ. ಇದರಿಂದಾಗಿ ಮರು ಪರೀಕ್ಷೆ ನಡೆಸುವ ಸರ್ಕಾರದ ಆಶಯಕ್ಕೆ ಬೆಂಬಲ ಸಿಕ್ಕಿದಂತಾಗಿದೆ, ಆದರೆ ಅಭ್ಯರ್ಥಿಗಳಿಗೆ ಕಾನೂನು ಹೋರಾಟದಲ್ಲಿ ಹಿನ್ನೆಡೆಯಾಗಿದೆ.

ಜೊತೆಗೆ ಕೆಎಟಿಯ ಈ ತೀರ್ಪಿನಿಂದಾಗಿ ರಾಜ್ಯಾದ್ಯಂತ ತೀವ್ರ ಬಿರುಗಾಳಿ ಎಬ್ಬಿಸಿರುವ ಪಿಎಸ್ ಐಗಳ ನೇಮಕದಲ್ಲಿ ಅಕ್ರಮ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದಂತಾಗಿದೆ.

ಎನ್ನುವ ಪ್ರಕರಣದಲ್ಲಿ ಆಕ್ಷೇಪಣೆ ಸಲ್ಲಿಸಲು ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ- ಕೆಎಟಿ ಸರ್ಕಾರಕ್ಕೆ ಮೇ 24ರವರೆಗೆ ಕಾಲಾವಕಾಶ ನೀಡಿದೆ.

ಅರ್ಜಿದಾರರ ಮನವಿ ಏನು?

ಅರ್ಜಿದಾರರು ಪರೀಕ್ಷೆ ರದ್ದುಪಡಿಸಿ ಸರ್ಕಾರ ಹೊರಡಿಸಿರುವ ಆದೇಶ

ರದ್ದುಪಡಿಸಬೇಕು. ಕಳಂಕಿತ ಹಾಗೂ ಕಳಂಕರಹಿತ ಅಭ್ಯರ್ಥಿಗಳನ್ನು ಪ್ರತ್ಯೇಕಿಸಿ, ಈ ಹಿಂದಿನ ಅಧಿಸೂಚನೆಯ ಪ್ರಕಾರವೇ ನೇಮಕ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಒಳಾಡಳಿತ ಇಲಾಖೆ ಹಾಗೂ ಪೊಲೀಸ್ ಮಹಾ ನಿರ್ದೇಶಕರಿಗೆ ಆದೇಶಿಸಬೇಕು ಎಂದು ಮನವಿ ಮಾಡಿದ್ದಾರೆ.

ನೇಮಕ ಪ್ರಕ್ರಿಯೆ ಬಹುತೇಕ ಪೂರ್ಣಗೊಂಡು ಅಂತಿಮ ಹಂತದಲ್ಲಿರುವಾಗ ಸರ್ಕಾರ ಏಕಪಕ್ಷೀಯ ನಿರ್ಧಾರ ಕೈಗೊಂಡಿರುವುದು ಸರಿಯಲ್ಲ. ಅದು ಸುಪ್ರೀಂಕೋರ್ಟ್ ತೀರ್ಪಿಗೆ ವಿರುದ್ಧವಾದ ಮತ್ತು ಕಾನೂನು ಬಾಹಿರ ನಿರ್ಧಾರವಾಗಿದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ಪ್ರಕರಣದ ಹಿನ್ನೆಲೆ:

545 ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳನ್ನು ಭರ್ತಿ ಮಾಡಲು 2022ರ ಜ.21ರಂದು ಅಧಿಸೂಚನೆ ಹೊರಡಿಸಲಾಗಿತ್ತು. 3 ಹಂತದಲ್ಲಿ ನೇಮಕ ಪ್ರಕ್ರಿಯೆ ನಡೆಸಲು ಆದೇಶದಲ್ಲಿ ತಿಳಿಸಲಾಗಿತ್ತು. ಒಟ್ಟು 1.20 ಲಕ್ಷಕ್ಕೂ ಅಧಿಕ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಿದ್ದರು.

ಮೊದಲ ಹಂತದಲ್ಲಿ ದೈಹಿಕ ಪರೀಕ್ಷೆಯ ನಂತರ 54,104 ಅಭ್ಯರ್ಥಿಗಳು ಮುಖ್ಯ ಪರೀಕ್ಷೆಗೆ ಆಯ್ಕೆಯಾದರು. ಬಳಿಕ ಲಿಖಿತ ಪರೀಕ್ಷೆ ನಡೆಯಿತು. ಅದರಲ್ಲಿ ಎರಡು ಪತ್ರಿಕೆ, ಒಂದು 100 ಅಂಕಗಳಿಗೆ ಮತ್ತು ಮತ್ತೊಂದು 150 ಅಂಕಗಳಿಗೆ ಪರೀಕ್ಷೆಯನ್ನು ನಡೆಸಲಾಗಿತ್ತು. ನಂತರ 545 ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನಾ ಕಾರ್ಯವೂ ನಡೆಯುತ್ತಿದೆ.

ಈ ಮಧ್ಯೆ, ಕಲಬುರಗಿಯ ಜ್ಞಾನಜ್ಯೋತಿ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆಯ ವೇಳೆ ಅಕ್ರಮ ನಡೆದಿದ ಎಂಬ ದೂರು ಕೇಳಿಬಂದಿತು. ಆ ಬಗ್ಗೆ ವ್ಯಾಪಕ ಪ್ರಾಥಮಿಕ ತನಿಖೆ ನಡೆಸಿದೆ ಅದರಲ್ಲಿ ಸತ್ಯಾಂಶವಿರುವುದ ಸಂಗತಿ ಬಯಲಾಯಿತು. ಆ ಸಂಬಂಧ 22 ಅಭ್ಯರ್ಥಿಗಳ ವಿರುದ್ಧ ಎಫ್‌ಐಅರ್ ದಾಖಲಾಗಿ ಹಲವು ಅಭ್ಯರ್ಥಿಗಳು ಮತ್ತು ರಾಜಕೀಯ ಮುಖಂಡರು ಬಂಧನಕ್ಕೆ ಒಳಗಾಗಿದ್ದಾರೆ.

ನೇಮಕ ಪ್ರಕ್ರಿಯೆಯಲ್ಲಿ ಕೋಟ್ಯಂತರ ರೂ. ಹಣಕಾಸು ವ್ಯವಹಾರ ಹಾಗೂ ಭಾರಿ ಅಕ್ರಮ ನಡೆದಿರುವುದು ಮೇಲ್ನೋಟಕ್ಕೆ ಸಾಬೀತಾಗಿರುವ ಹಿನ್ನೆಲೆಯಲ್ಲಿ ಸರಕಾರ ಏ.29ರಂದು ನೇಮಕ ಪ್ರಕ್ರಿಯೆಯನ್ನು ರದ್ದುಗೊಳಿಸಿ, ಹೊಸದಾಗಿ ಮರು ಪರೀಕ್ಷೆ ನಡೆಸುವುದಾಗಿ ಆದೇಶಿಸಿದೆ. ಇದರಿಂದಾಗಿ ಆಯ್ಕೆ ಯಾದ ಅಭ್ಯರ್ಥಿಗಳು ಕೆಎಟಿ ಮೊರೆ ಹೋಗಿದ್ದರು..

English summary
The Karnataka Administrative Tribunal has dismissed the petitions challenging the government order canceling the examination in the wake of reports of irregularities in the recruitment of 545 police sub-inspectors (PSI).
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X