ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪಿಎಸ್‌ಐ ಅಕ್ರಮ ನೇಮಕ: ಮರುಪರೀಕ್ಷೆ ಪ್ರಶ್ನಿಸಿರುವ ಅರ್ಜಿ ಕೆಎಟಿಯಲ್ಲಿ ಜೂ.9ಕ್ಕೆ ವಿಚಾರಣೆ

By ಎಸ್ ಎಸ್ ಎಸ್
|
Google Oneindia Kannada News

ಬೆಂಗಳೂರು ಜೂ.2: ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನೇಮಕದಲ್ಲಿ ಅಕ್ರಮ ನಡೆದಿರುವ ದೂರುಗಳ ಹಿನ್ನೆಲೆಯಲ್ಲಿ ಮರು ಪರೀಕ್ಷೆಗೆ ಆದೇಶ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ಕರ್ನಾಟಕ ಆಡಳಿತ ನ್ಯಾಯಮಂಡಳಿ(ಕೆಎಟಿ) ಜೂ.9ರಂದು ವಿಚಾರಣೆ ನಡೆಯಲಿದೆ.

ತಾತ್ಕಾಲಿಕ ಆಯ್ಕೆಪಟ್ಟಿಯಲ್ಲಿ ಸ್ಥಾನಪಡೆದಿದ್ದ ಪವಿತ್ರ ಸೇರಿ 28ಕ್ಕೂ ಅಧಿಕ ಅಭ್ಯರ್ಥಿಗಳು ಮರು ಪರೀಕ್ಷೆ ನಡೆಸುವ ಸಂಬಂಧ ಏ.29ರಂದು ಸರಕಾರ ಹೊರಡಿಸಿರುವ ಆದೇಶ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ಕೆಎಟಿ ಸದಸ್ಯರಾದ ಟಿ.ನಾರಾಯಣಸ್ವಾಮಿ ಮತ್ತು ಲತಾ ಕೃಷ್ಣರಾವ್ ಅವರಿದ್ದ ವಿಭಾಗೀಯಪೀಠದ ಮುಂದೆ ಗುರುವಾರ ವಿಚಾರಣೆಗೆ ಬಂದಿತು.

ಸುಮಾರು ಒಂದು ಗಂಟೆಗಳ ವಾದ ಆಲಿಸಿದ ಬಳಿಕ ನ್ಯಾಯಪೀಠ ಕೋರ್ಟ್ ಸಮಯಾವಧಿ ಮುಗಿದ ಕಾರಣ ವಿಚಾರಣೆಯನ್ನು ಜೂ.9ಕ್ಕೆ ಮುಂದೂಡಿತು. ಜೊತೆಗೆ ಅದೇ ವಿಚಾರಕ್ಕೆ ಸಂಬಂಧಿಸಿದ ಎಲ್ಲ ಅರ್ಜಿಗಳನ್ನು ಅಂದು ವಿಚಾರಣೆಗೆ ಕೈಗೆತ್ತಿಕೊಳ್ಳಲಾಗುವುದು ಎಂದು ನಿರ್ದೇಶನ ನೀಡಿತು.

PSI Recruitment Scam: KAT Will Continue Hearing on June 9

ಕಳಂಕಿತರನ್ನು ಪ್ರತ್ಯೇಕಿಸಿ:

ಅರ್ಜಿದಾರರ ಪರ ವಾದ ಮಂಡಿಸಿದ ವಕೀಲರು, ಪರೀಕ್ಷೆ ರದ್ದುಪಡಿಸಿ ಸರ್ಕಾರ ಹೊರಡಿಸಿರುವ ಆದೇಶ ರದ್ದುಪಡಿಸಬೇಕು. ಕಳಂಕಿತ ಹಾಗೂ ಕಳಂಕರಹಿತ ಅಭ್ಯರ್ಥಿಗಳನ್ನು ಪ್ರತ್ಯೇಕಿಸಿ, ಈ ಹಿಂದಿನ ಅಧಿಸೂಚನೆಯ ಪ್ರಕಾರವೇ ನೇಮಕ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಒಳಾಡಳಿತ ಇಲಾಖೆ ಹಾಗೂ ಪೊಲೀಸ್ ಮಹಾ ನಿರ್ದೇಶಕರಿಗೆ ಆದೇಶಿಸಬೇಕು ಎಂದರು.

ಮರು ಪರೀಕ್ಷೆ ನಿರ್ಧಾರ ಸುಪ್ರೀಂಕೋರ್ಟ್ ತೀರ್ಪಿಗೆ ವಿರುದ್ಧವಾದ ಮತ್ತು ಕಾನೂನು ಬಾಹಿರ ನಿರ್ಧಾರವಾಗಿದೆ ಎಂದೂ ಕೂಡ ಹೇಳಿ ಸುಪ್ರೀಂಕೋರ್ಟ್‌ನ ಹಲವು ತೀರ್ಪುಗಳನ್ನು ಉಲ್ಲೇಖಿಸಿದರು.

ನೇಮಕ ಪ್ರಕ್ರಿಯೆ ಬಹುತೇಕ ಪೂರ್ಣಗೊಂಡು ಅಂತಿಮ ಹಂತದಲ್ಲಿರುವಾಗ ಸರಕಾರ ಏಕಪಕ್ಷೀಯವಾಗಿ ಮರುಪರೀಕ್ಷೆಯ ನಿರ್ಧಾರ ಕೈಗೊಂಡಿರುವುದು ಸರಿಯಲ್ಲ. ಹಾಗಾಗಿ ಮರುಪರೀಕ್ಷೆ ಆದೇಶ ರದ್ದುಗೊಳಿಸಬೇಕು ಎಂದು ನ್ಯಾಯಪೀಠವನ್ನು ಕೋರಿದರು.

ಸರ್ಕಾರದ ಪರ ಹಾಜರಾದ ಹೆಚ್ಚುವರಿ ಅಡ್ವೊಕೇಟ್ ಜನರಲ್ , ಸರ್ಕಾರ ಈಗಾಗಲೇ ಆಕ್ಷೇಪಣೆಯನ್ನು ಸಲ್ಲಿಸಿ ಪ್ರಕರಣದಲ್ಲಿ ವ್ಯಾಪಕ ಅಕ್ರಮ ನಡೆದಿರುವುದು ಮೇಲ್ನೋಟಕ್ಕೆ ಕಂಡುಬಂದಿರುವ ಹಿನ್ನೆಲೆಯಲ್ಲಿ ಮರುಪರೀಕ್ಷೆಯ ತೀರ್ಮಾನ ಕೈಗೊಂಡಿದೆ. ಆ ಬಗ್ಗೆ ವಿವರವಾದ ವಾದ ಮಂಡಿಸಲಾಗುವುದೆಂದರು.

ಪ್ರಕರಣದ ಹಿನ್ನೆಲೆ:

545 ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳನ್ನು ಭರ್ತಿ ಮಾಡಲು 2022ರ ಜ.21ರಂದು ಅಧಿಸೂಚನೆ ಹೊರಡಿಸಲಾಗಿತ್ತು. 3 ಹಂತದಲ್ಲಿ ನೇಮಕ ಪ್ರಕ್ರಿಯೆ ನಡೆಸಲು ಆದೇಶದಲ್ಲಿ ತಿಳಿಸಲಾಗಿತ್ತು. ಒಟ್ಟು 1.20 ಲಕ್ಷಕ್ಕೂ ಅಧಿಕ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಿದ್ದರು.

ಮೊದಲ ಹಂತದಲ್ಲಿ ದೈಹಿಕ ಪರೀಕ್ಷೆಯ ನಂತರ 54,104 ಅಭ್ಯರ್ಥಿಗಳು ಮುಖ್ಯ ಪರೀಕ್ಷೆಗೆ ಆಯ್ಕೆಯಾದರು. ಬಳಿಕ ಲಿಖಿತ ಪರೀಕ್ಷೆ ನಡೆಯಿತು. ಅದರಲ್ಲಿ ಎರಡು ಪತ್ರಿಕೆ, ಒಂದು 100 ಅಂಕಗಳಿಗೆ ಮತ್ತು ಮತ್ತೊಂದು 150 ಅಂಕಗಳಿಗೆ ಪರೀಕ್ಷೆಯನ್ನು ನಡೆಸಲಾಗಿತ್ತು. ನಂತರ 545 ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನಾ ಕಾರ್ಯವೂ ನಡೆಯುತ್ತಿದೆ.

ಈ ಮಧ್ಯೆ, ಕಲಬುರಗಿಯ ಜ್ಞಾನಜ್ಯೋತಿ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆಯ ವೇಳೆ ಅಕ್ರಮ ನಡೆದಿದ ಎಂಬ ದೂರು ಕೇಳಿಬಂದಿತು. ಆ ಬಗ್ಗೆ ವ್ಯಾಪಕ ಪ್ರಾಥಮಿಕ ತನಿಖೆ ನಡೆಸಿದೆ ಅದರಲ್ಲಿ ಸತ್ಯಾಂಶವಿರುವುದ ಸಂಗತಿ ಬಯಲಾಯಿತು. ಆ ಸಂಬಂಧ 22 ಅಭ್ಯರ್ಥಿಗಳ ವಿರುದ್ಧ ಎಫ್ ಐಅರ್ ದಾಖಲಾಗಿ ಹಲವು ಅಭ್ಯರ್ಥಿಗಳು ಮತ್ತು ರಾಜಕೀಯ ಮುಖಂಡರು ಬಂಧನಕ್ಕೆ ಒಳಗಾಗಿದ್ದಾರೆ. ನೇಮಕ ಪ್ರಕ್ರಿಯೆಯಲ್ಲಿ ಕೋಟ್ಯಂತರ ರೂ. ಹಣಕಾಸು ವ್ಯವಹಾರ ಹಾಗೂ ಭಾರಿ ಅಕ್ರಮ ನಡೆದಿರುವುದು ಮೇಲ್ನೋಟಕ್ಕೆ ಸಾಬೀತಾಗಿರುವ ಹಿನ್ನೆಲೆಯಲ್ಲಿ ಸರಕಾರ ಏ.29ರಂದು ನೇಮಕ ಪ್ರಕ್ರಿಯೆಯನ್ನು ರದ್ದುಗೊಳಿಸಿ, ಹೊಸದಾಗಿ ಮರು ಪರೀಕ್ಷೆ ನಡೆಸುವುದಾಗಿ ಆದೇಶಿಸಿದೆ. ಇದರಿಂದಾಗಿ ಆಯ್ಕೆ ಯಾದ ಅಭ್ಯರ್ಥಿಗಳು ಕೆಎಟಿ ಕದ ತಟ್ಟಿದ್ದಾರೆ.

English summary
Karnataka Administrative Tribunal (KAT) is to hear its applications for re-examination in the wake of complaints filed against the appointment of a PSI Posts.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X