ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking; ಪಿಎಸ್‌ಐ ನೇಮಕಾತಿ ಹಗರಣ, ಮರು ಪರೀಕ್ಷೆಗೆ ತೀರ್ಮಾನ

|
Google Oneindia Kannada News

ಬೆಂಗಳೂರು, ಏಪ್ರಿಲ್ 29; ಕರ್ನಾಟಕದಲ್ಲಿ ಪಿಎಸ್‌ಐ ನೇಮಮಕಾತಿ ಹಗರಣದ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ. 545 ಹುದ್ದೆಗಳ ನೇಮಕಾತಿಗಾಗಿ ನಡೆದ ಪರೀಕ್ಷೆಯನ್ನು ಸರ್ಕಾರ ರದ್ದುಗೊಳಿಸಿದೆ. ಮರು ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ.

ಶುಕ್ರವಾರ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಈ ಕುರಿತು ಮಾಹಿತಿ ನೀಡಿದರು, "ಪ್ರಾಮಾಣಿಕವಾಗಿ ಪರೀಕ್ಷೆ ಬರೆದ ಅಭ್ಯರ್ಥಿಗಳಿಗೆ ಅನ್ಯಾಯವಾಗದಂತೆ ತಡೆಯಲು, ಪಿಎಸ್‌ಐ ನೇಮಕಾತಿಗಾಗಿ ಮರುಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ" ಎಂದರು.

Breaking; ದಿವ್ಯಾ ಹಾಗರಗಿ ಬಂಧನ; ಗೃಹ ಸಚಿವರ ಹೇಳಿಕೆBreaking; ದಿವ್ಯಾ ಹಾಗರಗಿ ಬಂಧನ; ಗೃಹ ಸಚಿವರ ಹೇಳಿಕೆ

"ಒಟ್ಟು 54,289 ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದರು. ಈ ಪರೀಕ್ಷೆಯನ್ನು ಸರ್ಕಾರ ರದ್ದುಗೊಳಿಸಿದ್ದು, ಆರೋಪಿಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಅಭ್ಯರ್ಥಿಗಳಿಗೆ ಮರು ಪರೀಕ್ಷೆ ನಡೆಸಲಾಗುತ್ತದೆ" ಎಂದು ಗೃಹ ಸಚಿವರು ಹೇಳಿದರು.

Breaking; ದಿವ್ಯಾ ಹಾಗರಗಿ ಪರಿಚಯ ಟ್ವೀಟ್‌ ಮಾಡಿದ ಕಾಂಗ್ರೆಸ್ Breaking; ದಿವ್ಯಾ ಹಾಗರಗಿ ಪರಿಚಯ ಟ್ವೀಟ್‌ ಮಾಡಿದ ಕಾಂಗ್ರೆಸ್

PSI Recruitment Scam Re Exam For Candidates Says Araga Jnanendra

545 ಪಿಎಸ್‌ಐ ಹುದ್ದೆಗಳ ನೇಮಕಾತಿಗೆ ನಡೆದ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವುದು ಪತ್ತೆಯಾಗಿದೆ. ಈ ಹಗರಣದ ತನಿಖೆಯನ್ನು ಸರ್ಕಾರ ಸಿಐಡಿಗೆ ನೀಡಿದೆ. ಈಗಾಗಲೇ 15ಕ್ಕೂ ಹೆಚ್ಚು ಆರೋಪಿಗಳನ್ನು ಬಂಧಿಸಲಾಗಿದೆ.

Breaking; ಪಿಎಸ್‌ಐ ನೇಮಕಾತಿ ಹಗರಣ; ತನಿಖೆ ಬಗ್ಗೆ ಖರ್ಗೆ ಅಸಮಾಧಾನBreaking; ಪಿಎಸ್‌ಐ ನೇಮಕಾತಿ ಹಗರಣ; ತನಿಖೆ ಬಗ್ಗೆ ಖರ್ಗೆ ಅಸಮಾಧಾನ

ಹಗರಣ ಬೆಳಕಿಗೆ ಬಂದ ಬಳಿಕ ಕರ್ನಾಟಕ ಸರ್ಕಾರ 545 ಹುದ್ದೆಗಳ ನೇಮಕಾತಿಯನ್ನು ಸ್ಥಗಿತಗೊಳಿಸಿತ್ತು. ಈಗ ಅಭ್ಯರ್ಥಿಗಳಿಗೆ ಮರು ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ. ಮರು ಪರೀಕ್ಷೆಯ ದಿನಾಂಕಗಳು ಶೀಘ್ರದಲ್ಲೇ ಘೋಷಣೆ ಮಾಡಲಾಗುತ್ತದೆ.

English summary
Karnataka home minister Araga Jnanendra said that re exam will be done for candidates in PSI recruitment scam.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X