ಜ.23ಕ್ಕೆ ಪಿಎಸ್‌ಐ ನೇಮಕಾತಿ ಪರೀಕ್ಷೆ; ಡ್ರೆಸ್ ಕೋಡ್
ಬೆಂಗಳೂರು, ಜನವರಿ 16: ಕರ್ನಾಟಕ ಪೊಲೀಸ್ ಇಲಾಖೆಯ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಪಿಎಸ್ಐ) ನೇಮಕಾತಿ ಲಿಖಿತ ಪರೀಕ್ಷೆ ಜನವರಿ 23ರಂದು ನಡೆಯಲಿದೆ. ಈ ಹಿಂದೆ ನಡೆದ ಪರೀಕ್ಷೆಯಲ್ಲಿ ಅಕ್ರಮ ನಡೆದ ಕಾರಣಕ್ಕೆ ಹೈಕೋರ್ಟ್ ಆದೇಶದಂತೆ ಮರು ಪರೀಕ್ಷೆಯನ್ನು ನಡೆಸಲಾಗುತ್ತಿದೆ.
ಪಿಎಸ್‌ಐ ನೇಮಕಾತಿ ಲಿಖಿತ ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಐಎ) ನಡೆಸಲಿದೆ. ಜನವರಿ 23ರ ಮಂಗಳವಾರ ಬೆಳಗ್ಗೆ 10.30ರಿಂದ 12ರ ತನಕ ಪತ್ರಿಕೆ-1 ಮತ್ತು ಮಧ್ಯಾಹ್ನ 1ರಿಂದ 2.30ರ ತನಕ ಪತ್ರಿಕೆ-2ರ ಪರೀಕ್ಷೆಗಳು ನಡೆಯಲಿವೆ.

ಕೆಐಎ ಪತ್ರಿಕಾ ಪ್ರಕಟಣೆ ಮೂಲಕ ಪಿಎಸ್‌ಐ ನೇಮಕಾತಿ ಲಿಖಿತ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ಸೂಚನೆಗಳನ್ನು ನೀಡಿದೆ. ಈ ಹಿಂದೆ ಪರೀಕ್ಷೆಯ ವೇಳೆ ಬ್ಲೂ ಟುಥ್ ಡಿವೈಸ್ ಬಳಸಿದ ಆರೋಪದ ಹಿನ್ನಲೆಯಲ್ಲಿ ಅಕ್ರಮ ತಡೆಯಲು ಹಲವಾರು ಕ್ರಮಗಳನ್ನು ಕೈಗೊಳ್ಳಲಾಗಿದೆ.
ಪರೀಕ್ಷೆ ಬರೆಯಲು ಆಗಮಿಸುವ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳಿಗೆ ವಸ್ತ್ರ ಸಂಹಿತೆಯನ್ನು ಸಹ ನಿಗದಿಗೊಳಿಸಲಾಗಿದೆ. ಕೆಇಎ ನಿಯಮಗಳನ್ನು ಅಭ್ಯರ್ಥಿಗಳು ಕಡ್ಡಾಯವಾಗಿ ಪಾಲಿಸತಕ್ಕದ್ದು, ಇಲ್ಲವಾದಲ್ಲಿ ನಿಯಮಾನುಸಾರ ಅಭ್ಯರ್ಥಿಗಳ ಮೇಲೆ ಕ್ರಮವನ್ನು ಜರುಗಿಸಲಾಗುವುದು ಎಂದು ಎಚ್ಚರಿಕೆಯನ್ನು ಸಹ ನೀಡಲಾಗಿದೆ.
ವಸ್ತ್ರ ಸಂಹಿತೆ ವಿವರಗಳು: ದಿನಾಂಕ 23/1/2024ರಂದು ನಡೆಯುವ ಪರೀಕ್ಷೆಯ ವಸ್ತ್ರಸಂಹಿತೆ ಪುರುಷ ಅಭ್ಯರ್ಥಿಗಳಿಗೆ
* ಪರೀಕ್ಷೆಯ ದಿನದಂದು ಪೂರ್ಣ ತೋಳಿನ ಶರ್ಟ್‌ಗಳನ್ನು ಅನುಮತಿಸುವುದಿಲ್ಲ. ಆದ್ದರಿಂದ ಪುರುಷ ಅಭ್ಯರ್ಥಿಗಳು ಅರ್ಧ ತೋಳಿನ ಶರ್ಟ್‌ಗಳನ್ನು ಧರಿಸುವುದನ್ನು ಖಚಿತಪಡಿಸಿಕೊಳ್ಳಬೇಕು. ಸಾಧ್ಯವಾದಷ್ಟು ಕಾಲರ್ ರಹಿತ ಶರ್ಟ್ ಧರಿಸಲು ಆದ್ಯತೆ ನೀಡುವುದು.
* ಪ್ಯಾಂಟ್ ಮತ್ತು ಸರಳ ಪ್ಯಾಂಟ್ (ಜೇಬುಗಳು ಇಲ್ಲದಿರುವ/ ಕಮ್ಮಿ ಜೇಬುಗಳಿರುವ) ಪುರುಷ ಅಭ್ಯರ್ಥಿಗಳಿಗೆ ಅದ್ಯತೆಯ ಡ್ರೆಸ್ ಕೋಡ್ ಆಗಿದೆ. ಕುರ್ತಾ ಪೈಜಾಮವನ್ನು, ಜೀನ್ಸ್ ಪ್ಯಾಂಟ್ ಅನುಮತಿಸುವುದಿಲ್ಲ.
* ಪುರುಷ ಅಭ್ಯರ್ಥಿಗಳು ಧರಿಸುವ ಬಟ್ಟೆಗಳು ಹಗುರವಾಗಿರಬೇಕು. ಅಂದರೆ ಜಿಪ್ ಪಾಕೆಟ್‌ಗಳು, ಪಾಕೆಟ್‌ಗಳು, ದೊಡ್ಡ ಬಟನ್‌ಗಳು ಮತ್ತು ವಿಸ್ತಾರವಾದ ಕಸೂತಿ ಇರುವ ಬಟ್ಟೆಗಳು ಇರಬಾರದು.
* ಪರೀಕ್ಷಾ ಹಾಲ್ ಒಳಗೆ ಶೂಗಳನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಅಭ್ಯರ್ಥಿಗಳು ಸ್ಯಾಂಡಲ್ ಅಥವಾ ತೆಳುವಾದ ಅಡಿಭಾಗ ಇರುವ ಚಪ್ಪಲಿಗಳನ್ನು ಧರಿಸುವುದು ಸೂಕ್ತ.
* ಅಭ್ಯರ್ಥಿಗಳು ಕುತ್ತಿಗೆಯ ಸುತ್ತ ಯಾವುದೇ ಲೋಹದ ಆಭರಣಗಳನ್ನು ಧರಿಸುವುದು ಅಥವಾ ಕಿವಿಯೋಲೆಗಳು, ಉಂಗುರಗಳು ಮತ್ತು ಕಡಗಗಳನ್ನು ಧರಿಸುವುದು ನಿಷೇಧಿಸಲಾಗಿದೆ.
ಮಹಿಳಾ ಅಭ್ಯರ್ಥಿಗಳ ವಸ್ತ್ರ ಸಂಹಿತೆ
* ಮಹಿಳಾ ಅಭ್ಯರ್ಥಿಗಳು ವಿಸ್ತಾರವಾದ ಕಸೂತಿ, ಹೂಗಳು, ಬ್ರೂಚ್‌ಗಳು ಅಥವಾ ಬಟನ್‌ಗಳು ಹೊಂದಿರುವ ಬಟ್ಟೆಗಳನ್ನು ಧರಿಸುವುದು ನಿಷೇಧಿಸಲಾಗಿದೆ.
* ಪರೀಕ್ಷೆಯ ದಿನದಂದು ಪೂರ್ಣ ತೋಳಿನ ಬಟ್ಟೆಗಳನ್ನು/ ಜೀನ್ಸ್ ಪ್ಯಾಂಟ್ ಧರಿಸಬಾರದು. ಆದರ ಬದಲಾಗಿ ಅರ್ಧ ತೋಳಿನ ಬಟ್ಟೆಗಳನ್ನು ಅವರಿಗೆ ಮುಜುಗರವಾಗದಂತೆ ಮತ್ತು ನಾವು ಉಲ್ಲೇಖಿಸಿರುವ ನಿಯಮದಂತೆ ಧರಿಸುವಂತೆ ನಿರ್ದೇಶಿಸಲಾಗಿದೆ.
* ಎತ್ತರವಾದ ಹಿಮ್ಮಡಿಯ ಶೂಗಳನ್ನು/ ಚಪ್ಪಲಿಗಳನ್ನು ಮತ್ತು ದಪ್ಪವಾದ ಅಡಿ ಭಾಗ ಹೊಂದಿರುವ ಶೂಗಳನ್ನಾಗಲಿ, ಚಪ್ಪಲಿಗಳನ್ನಾಗಲಿ ಧರಿಸಬಾರದು. ತೆಳುವಾದ ಅಡಿಭಾಗ ಹೊಂದಿರುವ ಚಪ್ಪಲಿಗಳು ಧರಿಸುವುದು ಕಡ್ಡಾಯವಾಗಿದೆ.
* ಮಹಿಳಾ ಅಭ್ಯರ್ಥಿಗಳು ಯಾವುದೇ ರೀತಿಯ ಲೋಹದ ಆಭರಣಗಳನ್ನು ಧರಿಸುವುದನ್ನು ನಿಷೇಧಿಸಿದೆ. (ಮಂಗಳಸೂತ್ರ ಮತ್ತು ಕಾಲುಂಗುರ ಹೊರತುಪಡಿಸಿ).
ನಿಷೇಧಿತ ವಸ್ತುಗಳ ಪಟ್ಟಿ
* ಡ್ರೆಸ್ ಕೋಡ್ ಅನ್ನು ಅನುಸರಿಸುವುದರ ಜೊತೆಗೆ ಪರೀಕ್ಷಾ ಕೇಂದ್ರಕ್ಕೆ ಯಾವುದೇ ನಿಷೇಧಿತ ವಸ್ತುಗಳನ್ನು ತೆಗೆದುಕೊಂಡು ಹೋಗದಂತೆ, ಅಭ್ಯರ್ಥಿಗಳು ಖಚಿತಪಡಿಸಿಕೊಳ್ಳಬೇಕು.
* ಎಲೆಕ್ಟ್ರಾನಿಕ್ ವಸ್ತುಗಳು, ಮೊಬೈಲ್ ಫೋನ್‌ಗಳು, ಪೆನ್ ಡ್ರೈವ್‌ಗಳು, ಇಯರ್ ಫೋನ್‌ಗಳು, ಮೈಕ್ರೋಫೋನ್‌ಗಳು, ಬ್ಲೂ ಟೂಥ್ ಸಾಧನಗಳು ಮತ್ತು ಕೈ ಗಡಿಯಾರಗಳನ್ನು ಪರೀಕ್ಷಾ ಕೊಠಡಿಯೊಳಗೆ ಅನುಮತಿಸಲಾಗುವುದಿಲ್ಲ.
* ತಿನ್ನಬಹುದಾದ ಪದಾರ್ಥಗಳನ್ನು ಪರೀಕ್ಷಾ ಕೊಠಡಿಯೊಳಗೆ ತರುವುದನ್ನು ಹಾಗು ತಿನ್ನುವುದನ್ನು ನಿಷೇಧಿಸಲಾಗಿದೆ, ಕುಡಿಯುವ ನೀರಿನ ಬಾಟಲಿಗೂ ಸಹ ಅನುಮತಿ ಇರುವುದಿಲ್ಲ.
* ಪರೀಕ್ಷಾ ಕೇಂದ್ರದಲ್ಲಿಯೇ ಕುಡಿಯುವ ನೀರಿಗೆ ವ್ಯವಸ್ಥೆ ಕಲ್ಪಿಸಿಕೊಡಲಾಗುವುದು.
ಪೆನ್ಸಿಲ್, ಪೇಪರ್, ಎರೇಸರ್, ಜಾಮಿಟ್ರಿ ಬಾಕ್ಸ್ ಗಳು ಮತ್ತು ಲಾಗ್ ಟೇಬಲ್ ಗಳನ್ನು ಪರೀಕ್ಷಾ ಕೇಂದ್ರದೊಳಗೆ ತರುವಂತಿಲ್ಲ.
* ತಲೆಯ ಮೇಲೆ ಟೋಪಿ/ HAT ಧರಿಸಬಾರದು. ಯಾವುದೇ ರೀತಿಯ ಮಾಸ್ಕ್ ಅನ್ನು ಧರಿಸುವಂತಿಲ್ಲ.
ಈ ವಸ್ತುಗಳನ್ನು ಮಾತ್ರ ತರಲು ಅನುಮತಿಸಲಾಗಿದೆ
* ಪ್ರವೇಶ ಪತ್ರವನ್ನು ಎಲ್ಲಾ ಅಭ್ಯರ್ಥಿಗಳು ಕಡ್ಡಾಯವಾಗಿ ತರುವುದು.
* ಸರ್ಕಾರದಿಂದ ಮಾನ್ಯವಾದ ಫೋಟೋ ಗುರುತಿನ ಚೀಟಿಯನ್ನು ತರುವುದು ಕಡ್ಡಾಯಗೊಳಿಸಲಾಗಿದೆ.
* ಪರೀಕ್ಷೆಯ ಕೊನೆಯ ಬೆಲ್ ಆಗುವವರೆಗೂ ಅಭ್ಯರ್ಥಿಗಳು ಪರೀಕ್ಷಾ ಕೊಠಡಿಯಿಂದ ಹೊರಗೆ ಹೋಗಲು ಅನುಮತಿ ಇರುವುದಿಲ್ಲ.
-
ಮಾರ್ಚ್ 30ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ












Click it and Unblock the Notifications