ಪಿಟಿಐ ನಿರ್ದೇಶಕರ ಮಂಡಳಿ ಅಧ್ಯಕ್ಷರಾಗಿ ಕೆ.ಎನ್. ಶಾಂತಕುಮಾರ್ ಆಯ್ಕೆ: ಶುಭಕೋರಿದ ಸಿಎಂ
ಬೆಂಗಳೂರು, ಸೆಪ್ಟೆಂಬರ್ 30: ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (ಪಿಟಿಐ) ಸುದ್ದಿ ಸಂಸ್ಥೆಯ ನಿರ್ದೇಶಕರ ಮಂಡಳಿಯ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಕೆ.ಎನ್ ಶಾಂತಕುಮಾರ್ ಅವರಿಗೆ ಅಭಿನಂದನೆಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಭಕೋರಿದ್ದಾರೆ.
ಪ್ರಜಾವಾಣಿ ಸಂಸ್ಥೆಯ ನಿರ್ದೇಶಕರು ಮತ್ತು ಸಂಪಾದಕರೂ ಆಗಿರುವ ಶಾಂತಕುಮಾರ್ ಅವರು ತಮ್ಮ ಸುದೀರ್ಘ ಅನುಭವ ಮತ್ತು ಕಾರ್ಯದಕ್ಷತೆಯಿಂದ ಹೊಸ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸುತ್ತಾರೆ ಎಂಬ ಭರವಸೆ ಇದೆ. ಅವರಿಗೆ ಶುಭವಾಗಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್ ಮೂಲಕ ಶುಭಕೋರಿದ್ದಾರೆ.

ಇನ್ನೂ ಪ್ರಜಾವಾಣಿ ಮತ್ತು ಡೆಕ್ಕನ್ ಹೆರಾಲ್ಡ್‌ನ ಕೆ.ಎನ್. ಶಾಂತ್ ಕುಮಾರ್ ಅವರು ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (ಪಿಟಿಐ) ನಿರ್ದೇಶಕರ ಮಂಡಳಿಯ ಅಧ್ಯಕ್ಷರಾಗಿ ಒಂದು ವರ್ಷದ ಅವಧಿಗೆ ಆಯ್ಕೆಯಾಗಿದ್ದಾರ. ಇನ್ನೂ ಶುಕ್ರವಾರ ಹೊಸದಿಲ್ಲಿಯಲ್ಲಿ ಸುದ್ದಿ ಸಂಸ್ಥೆಯ ಪ್ರಧಾನ ಕಛೇರಿಯಲ್ಲಿ ನಡೆದ PTIಯ ನಿರ್ದೇಶಕರ ಮಂಡಳಿಯ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಶಾಂತ್ ಕುಮಾರ್ ಅವರನ್ನು ಆಯ್ಕೆ ಮಾಡಲಾಯಿತು.
ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (ಪಿಟಿಐ) ಸುದ್ದಿ ಸಂಸ್ಥೆಯ ನಿರ್ದೇಶಕರ ಮಂಡಳಿಯ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಕೆ.ಎನ್ ಶಾಂತಕುಮಾರ್ ಅವರಿಗೆ ಅಭಿನಂದನೆಗಳು.
— CM of Karnataka (@CMofKarnataka) September 30, 2023
ಪ್ರಜಾವಾಣಿ ಸಂಸ್ಥೆಯ ನಿರ್ದೇಶಕರು ಮತ್ತು ಸಂಪಾದಕರೂ ಆಗಿರುವ ಶಾಂತಕುಮಾರ್ ಅವರು ತಮ್ಮ ಸುದೀರ್ಘ ಅನುಭವ ಮತ್ತು ಕಾರ್ಯದಕ್ಷತೆಯಿಂದ ಹೊಸ ಜವಾಬ್ದಾರಿಯನ್ನು ಯಶಸ್ವಿಯಾಗಿ… pic.twitter.com/00CKEF3KrD
ಶಾಂತ್ ಕುಮಾರ್ ಮಾತನಾಡಿ, ಇತ್ತೀಚೆಗೆ ವೀಡಿಯೊ ಸೇವೆಯನ್ನು ಪ್ರಾರಂಭಿಸಿದ ನಂತರ ಹೊಸ ಶೈಲಿಯಲ್ಲಿ ಪಿಟಿಐ ಮುನ್ನಡೆಯುತ್ತಿದೆ, ಈ ಸಮಯದಲ್ಲಿ ಪಿಟಿಐ ಚುಕ್ಕಾಣಿ ಹಿಡಿದಿರುವುದು ವಿಶೇಷವಾಗಿದೆ ಎಂದು ಹೇಳಿದ್ದಾರೆ. ಕೆ.ಎನ್.ಶಾಂತಕುಮಾರ್ ಅವರು ಪ್ರಜಾವಾಣಿ, ಸುಧಾ, ಮಯೂರ, ಡೆಕ್ಕನ್ ಹೆರಾಲ್ಡ್ ಪತ್ರಿಕೆಗಳ ಮಾತೃಸಂಸ್ಥೆಯಾದ 'ದಿ ಪ್ರಿಂಟರ್ಸ್ (ಮೈಸೂರು) ಪ್ರೈವೇಟ್ ಲಿಮಿಟೆಡ್'ನ (ಟಿಪಿಎಂಎಲ್) ಆಡಳಿತ ಮಂಡಳಿಯ ನಿರ್ದೇಶಕರಾಗಿದ್ದಾರೆ. ಮಯೂರ ಮಾಸಿಕದ ಸಂಪಾದಕರಾಗಿ ಕೆ.ಎನ್.ಶಾಂತಕುಮಾರ್ ಅವರೇ ಸೇವೆ ಸಲ್ಲಿಸುತ್ತಿದ್ದಾರೆ.












Click it and Unblock the Notifications