ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪಿಯು ಮರು ಮೌಲ್ಯಮಾಪನ: ಅರ್ಜಿ ಸಲ್ಲಿಸಲು ಅಂತಿಮ ದಿನಾಂಕ ನಿಗದಿ

|
Google Oneindia Kannada News

ಬೆಂಗಳೂರು, ಜುಲೈ 14: ಇಂದು ದ್ವಿತೀಯ ಪಿಯು ಫಲಿತಾಂಶ ಹೊರಬಿದ್ದಿದೆ, ತಮಗೆ ಬಂದಿರುವ ಅಂಕದ ಬಗ್ಗೆ ಅನುಮಾನಗಳಿದ್ದಲ್ಲಿ ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ.

Recommended Video

ಸದ್ಯಕ್ಕೆ ಸರಿಯಾಗೋದಿಲ್ಲ ಕೊರೊನ ಪರಿಸ್ಥಿತಿ - WHO | Oneindia Kannada

ಜುಲೈ 31 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.2019-20ನೇ ಸಾಲಿನ ದ್ವಿತೀಯ ಪಿಯು ಫಲಿತಾಂಶ ಪ್ರಕಟವಾಗಿದ್ದು, ಪರೀಕ್ಷೆಗೆ ಹಾಜರಾಗಿದ್ದ 6,75,277 ವಿದ್ಯಾರ್ಥಿಗಳ ಪೈಕಿ 4,17,297 ಮಂದಿ ಉತ್ತೀರ್ಣರಾಗಿದ್ದಾರೆ. ಮುಖ್ಯ ಪರೀಕ್ಷೆಯಲ್ಲಿ ಅನುತ್ತೀರ್ಣರಾದವರಿಗೆ ಮುಂದಿನ ತಿಂಗಳು ಅಂದರೆ ಆಗಸ್ಟ್​ನಲ್ಲಿ ಪೂರಕ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದ್ದು, ಜುಲೈ ಕೊನೇ ವಾರದಲ್ಲಿ ವೇಳಾಪಟ್ಟಿ ಪ್ರಕಟವಾಗಲಿದೆ.

ಕರ್ನಾಟಕ 2ನೇ ಪಿಯು ಫಲಿತಾಂಶ: 88 ಕಾಲೇಜುಗಳಲ್ಲಿ ಶೂನ್ಯ ಸಾಧನೆಕರ್ನಾಟಕ 2ನೇ ಪಿಯು ಫಲಿತಾಂಶ: 88 ಕಾಲೇಜುಗಳಲ್ಲಿ ಶೂನ್ಯ ಸಾಧನೆ

ಸಪ್ಲಿಮೆಂಟರಿ ಪರೀಕ್ಷೆಗೆ ಶುಲ್ಕ ಕಟ್ಟಿಸಿಕೊಳ್ಳಲು ಕಾಲೇಜಿನ ಪ್ರಾಂಶುಪಾಲರು ಅನುತ್ತೀರ್ಣ ಒಎಂಆರ್​ ಅರ್ಜಿಗಳಿಗಾಗಿ ಕಾಯಬೇಕಾದ ಅವಶ್ಯಕತೆ ಇಲ್ಲ. ಫಲಿತಾಂಶ ಪಟ್ಟಿ ಆಧಾರದ ಮೇರೆಗೆ ಅನುತ್ತೀರ್ಣ ವಿಷಯಗಳಿಗೆ ನಿಯಮಾನುಸಾರ ಪರೀಕ್ಷಾ ಶುಲ್ಕ ಕಟ್ಟಿಸಿಕೊಳ್ಳಬೇಕಿದೆ.

PU Department Set Deadline For Re Evaluation

ಪೂರಕ ಪರೀಕ್ಷೆಯ ಶುಲ್ಕ ಪಾವತಿಸಲು ಜು.31 ಕೊನೇ ದಿನ. ಕಾಲೇಜಿನವರು ಪರೀಕ್ಷಾ ಅರ್ಜಿಗಳನ್ನು ಮೂಲ ಚಲನ್​ ಸಹಿತ ಜಿಲ್ಲಾ ಉಪನಿರ್ದೇಶಕರ ಕಚೇರಿಗೆ ಕಡ್ಡಾಯವಾಗಿ ಆ. 3ರೊಳಗೆ ಕಳುಹಿಸಬೇಕಿದೆ.

ಉತ್ತರ ಪತ್ರಿಕೆಯ ಸ್ಕ್ಯಾನಿಂಗ್ ಪ್ರತಿಗಾಗಿ ಅರ್ಜಿ ಸಲ್ಲಿಸಲು ಜು.16ರಿಂದ ಜು.30ರವರೆಗೆ ಅವಕಾಶ ಕಲ್ಪಿಸಿದೆ. ಸ್ಕ್ಯಾನಿಂಗ್​ ಪ್ರತಿ ಪಡೆಯಲು ಪ್ರತಿ ವಿಷಯಕ್ಕೆ 530 ರೂ. ಶುಲ್ಕ ನಿಗದಿ ಪಡಿಸಲಾಗಿದೆ. ಉತ್ತರ ಪತ್ರಿಕೆಯ ಸ್ಕ್ಯಾನಿಂಗ್​ ಪ್ರತಿ ಡೌನ್​ಲೋಡ್​ ಮಾಡಿಕೊಳ್ಳಲು ಆ. 3ರಿಂದ 7ರವರೆಗೆ ಅವಕಾಶ ನೀಡಲಾಗಿದೆ. ಮರುಮೌಲ್ಯಮಾಪನಕ್ಕೆ ಮತ್ತು ಮರು ಏಣಿಕೆಗಾಗಿ ಆ.4ರಿಂದ 10ರವರೆಗೆ ಅರ್ಜಿ ಸಲ್ಲಿಸಬಹುದು. ಮರು ಮೌಲ್ಯಮಾಪನದ ಶುಲ್ಕ ಪ್ರತಿ ವಿಷಯಕ್ಕೆ 1670 ರೂಪಾಯಿ.

ಮರು ಮೌಲ್ಯಮಾಪನ: ಇನ್ನು ಫಲಿತಾಂಶ ತೃಪ್ತಿಯಾಗದ ವಿದ್ಯಾರ್ಥಿಗಳಿಗೆ ಉತ್ತರ ಪತ್ರಿಕೆಯ ಸ್ಕ್ಯಾನಿಂಗ್​ ಪ್ರತಿ ಪಡೆಯಲು, ಉತ್ತರ ಪತ್ರಿಕೆ ಮರು ಮೌಲ್ಯಮಾಪನಕ್ಕೆ ಹಾಗೂ ಅಂಕಗಳ ಮರು ಎಣಿಕೆಗೆ ಅವಕಾಶ ಕಲ್ಪಿಸಲಾಗಿದೆ.

English summary
Pre university board said the deadline for students to file re evaluation application For 2nd pu students. Students not satisfied with their Karnataka 2nd PUC results 2020 can apply for revaluation, verification and ask for scanned copy of their answer sheet beefore july 31.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X