ಏಪ್ರಿಲ್ 30ರಂದು ಪಿಯು ಫಲಿತಾಂಶ

Posted By:
Subscribe to Oneindia Kannada

ಬೆಂಗಳೂರು, ಏಪ್ರಿಲ್ 14: ಮಾರ್ಚ್ ತಿಂಗಳಿನಲ್ಲಿ ನಡೆದ ದ್ವಿತೀಯ ಪಿಯು ಪರೀಕ್ಷೆಗಳ ಫಲಿತಾಂಶ ಏಪ್ರಿಲ್ 30ರಂದು ಪ್ರಕಟವಾಗಲಿದೆ.

ಫಲಿತಾಂಶವನ್ನು www.pue.kar.nic.in ವೆಬ್‌ಸೈಟ್‌ನಲ್ಲಿ ನೋಂದಣಿ ಸಂಖ್ಯೆಯನ್ನು ಬಳಸಿ ವೀಕ್ಷಿಸಬಹುದು.

SSLC ಪರೀಕ್ಷೆ:ರಾಜ್ಯದಲ್ಲಿ ಒಟ್ಟು 51 ವಿದ್ಯಾರ್ಥಿಗಳು ಡಿಬಾರ್

ಈ ತಿಂಗಳ ಅಂತ್ಯಕ್ಕೆ ಪಿಯು ಪರೀಕ್ಷೆಗಳ ಫಲಿತಾಂಶ ಪ್ರಕಟವಾಗಲಿದೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ಮೂಲಗಳು ತಿಳಿಸಿವೆ.

2017-18ನೇ ಸಾಲಿನ ದ್ವಿತೀಯ ಪಿಯು ಪರೀಕ್ಷೆಗಳು ಮಾರ್ಚ್ 1ರಿಂದ 17ರವರೆಗೆ ನಡೆದಿತ್ತು. ಸುಮಾರು 6.90 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತುಕೊಂಡಿದ್ದರು. ಅದರಲ್ಲಿ 3,53,000 ವಿದ್ಯಾರ್ಥಿಗಳು ಮತ್ತು 3,34,000 ವಿದ್ಯಾರ್ಥಿನಿಯರಿದ್ದರು.

pu exam result will be announced on April 30

ರಾಜ್ಯದಾದ್ಯಂತ 1,004 ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು. ಪರೀಕ್ಷಾ ಅಕ್ರಮಗಳನ್ನು ತಡೆಗಟ್ಟುವ ಸಲುವಾಗಿ ವಿದ್ಯಾರ್ಥಿಗಳು ತಾವು ಓದಿದ ಕಾಲೇಜಿನಲ್ಲಿಯೇ ಪರೀಕ್ಷೆ ಬರೆಯಲು ಅವಕಾಶ ನೀಡಿರಲಿಲ್ಲ. ಪ್ರಶ್ನೆ ಪತ್ರಿಕೆ ರವಾನಿಸುವ ವಾಹನಗಳಿಗೆ ಜಿಪಿಎಸ್ ಅಳವಡಿಸಲಾಗಿತ್ತು. ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿಯೂ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿತ್ತು.

ಮೇ 2ರಿಂದಲೇ ಪಿಯುಸಿ ತರಗತಿಗಳು ಆರಂಭ!

ಮೇ 7ರಂದು ಎಸ್ಸೆಸ್ಸೆಲ್ಸಿ ಫಲಿತಾಂಶ
ರಾಜ್ಯ ಚುನಾವಣೆ ಮತದಾನ ನಡೆದು ಫಲಿತಾಂಶ ಹೊರಬೀಳುವ ಒಂಬತ್ತು ದಿನಗಳ ಮೊದಲೇ ಎಸ್ಸೆಸ್ಸೆಲ್ಸಿ ಫಲಿತಾಂಶ ಹೊರಬೀಳಲಿದೆ.

pu exam result will be announced on April 30

ಏಪ್ರಿಲ್ 15ರಿಂದ 25ರವರೆಗೆ ಎಸ್ಸೆಸ್ಸೆಲ್ಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಪ್ರಕ್ರಿಯೆ ನಡೆಯಲಿದೆ. ಮೇ 7ರಂದು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಮತ್ತು ವೆಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಶಾಲೆಗಳಲ್ಲಿ ಮೇ 8ರಂದು ಪ್ರಕಟಿಸಲಾಗುತ್ತದೆ.

ಮಾರ್ಚ್ 23ರಿಂದ ಏಪ್ರಿಲ್ 6ರವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆದಿತ್ತು. ಒಟ್ಟು 8,54, 424 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Second Pu exam result will be announced on April 30, sources of karnataka Pre University Education Department said

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ