ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜೂ.29ರಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಆರಂಭ

By Nayana
|
Google Oneindia Kannada News

ಬೆಂಗಳೂರು, ಜೂನ್ 2: ವಿಧಾನ ಪರಿಷತ್ ಹಾಗೂ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಹಿನ್ನೆಲೆಯಲ್ಲಿ ಜೂ.8ರಂದು ನಡೆಸಬೇಕಿದ್ದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯನ್ನು ಪದವಿಪೂರ್ವ ಶಿಕ್ಷಣ ಇಲಾಖೆ ಮುಂದೂಡಿದೆ. ಜೂ.8ರ ಬದಲಾಗಿ ಜೂ.29ರಿಂದ ಆರಂಭಿಸಲಿದೆ.

ಜೂ.8ರಂದು ಶಿಕ್ಷಕರು ಮತ್ತು ಪದವೀಧರ ಕ್ಷೇತ್ರಗಳಿಂದ ವಿಧಾನಪರಿಷತ್ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಜೂ.11ರಂದು ಬೆಂಗಳೂರಿನ ಜಯನಗರ ವಿಧಾನಸಭಾ ಕ್ಷೇತ್ರದ ಚುನಾವಣೆ ನಡೆಯಲಿದೆ. ಹಾಗೂ ಜೂ.21ರಿಂದ 28ರವರೆಗೆ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ನಡೆಯಲಿದೆ.

ದ್ವಿತೀಯ ಪಿಯು ಫಲಿತಾಂಶ ಪ್ರಕಟ, ದಕ್ಷಿಣ ಕನ್ನಡ ಪ್ರಥಮ ದ್ವಿತೀಯ ಪಿಯು ಫಲಿತಾಂಶ ಪ್ರಕಟ, ದಕ್ಷಿಣ ಕನ್ನಡ ಪ್ರಥಮ

ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷಾ ಕೇಂದ್ರಗಳು ಮತ್ತು ದ್ವಿತೀಯ ಪಿಯುಸಿ ಪೂರಕ ಪರೀಕ್ಷಾ ಕೇಂದ್ರಗಳು ಬಹುತೇಕ ಒಂದೇ ಆಗಿದೆ ಈ ಕಾರಣದಿಂದಾಗಿ ಶಿಕ್ಷಣ ಇಲಾಖೆ ಪರೀಕ್ಷೆಯನ್ನು ಮುಂದೂಡಿದೆ.

PU second year supplementary exams postponed

ಹಾಗಾಗಿ ಹೊಸ ವೇಳಾಪಟ್ಟಿಯಂತೆ, ಜೂ.29ರ ಶುಕ್ರವಾರ ಸಮಾಜಶಾಸ್ತ್ರ, ಲೆಕ್ಕಶಾಸ್ತ್ರ ಹಾಗೂ ಗಣಿತ ಪರೀಕ್ಷೆಗಳು ನಡೆಯಲಿವೆ. ಜೂ.30ರ ಶನಿವಾರ ತರ್ಕಶಾಸ್ತ್ರ, ಶಿಕ್ಷಣ, ಗೃಹ ವಿಜ್ಞಾನ, ಬೇಸಿಕ್ ಮ್ಯಾಥ್ಸ್ , ಮಧ್ಯಾಹ್ನ 2.30ರಿಂದ ತಮಿಳು, ತೆಲುಗು, ಮಲೆಯಾಳಂ, ಮರಾಠಿ, ಅರೇಬಿಕ್, ಫ್ರೆಂಚ್, ಭಾಷೆಗಳ ಪರೀಕ್ಷೆ ನಡೆಯಲಿದೆ.

ಜು.2ರ ಸೋಮವಾರ ಅರ್ಥಶಾಸ್ತ್ರ, ಭೌತಶಾಸ್ತ್ರ, ಜು.3ರ ಮಂಗಳವಾರ ಊಚ್ಛಿಕ ಕನ್ನಡ, ಎಲೆಕ್ಟ್ರಾನಿಕ್ಸ್‌, ಕಂಪಪ್ಯೂಟರ್ ಸೈನ್ಸ್‌ ವಿಷಯಗಳು ಹಾಗೂ ಮಧ್ಯಾಹ್ನ ಮಾಹಿತಿ ಮತ್ತು ತಂತ್ರಜ್ಞಾನ, ರೀಟೇಲ್, ಆಟೋ ಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಮತ್ತು ವೆಲ್‌ನೆಸ್ ವಿಷಯಗಳಿಗೆ ಪರೀಕ್ಷೆ ನಡೆಯಲಿವೆ.

ಜು.4ರಂದು ಬುಧವಾರ ಬೆಳಗ್ಗೆ ಕನ್ನಡ, ಮಧ್ಯಾಹ್ನ ಉರ್ದು ಮತ್ತು ಸಂಸ್ಕೃತ, ಜು.5 ಗುರುವಾರ ಭೂಗೋಳ ಶಾಸ್ತ್ರ, ಹಿಂದೂಸ್ಥಾನಿ ಸಂಗೀತ, ಭೂಗರ್ಭ ಶಾಸ್ತ್ರ, ಮಧ್ಯಾಹ್ನ ಹಿಂದಿ ಪರೀಕ್ಷೆಗಳು ನಡೆಯಲಿದೆ. ಜು.6ರ ಶುಕ್ರವಾರ ಇತಿಹಾಸ, ಸಂಖ್ಯಾಶಾಸ್ತ್ರ, ಜೀವಶಾಸ್ತ್ರ, ಜು.7ರ ಶನಿವಾರ ವ್ಯವಹಾರ ಅಧ್ಯಯನ, ಮನಃಶಾಸ್ತ್ರ, ರಸಾಯನಶಾಸ್ತ್ರ, ಜು.9ರ ಸೋಮವಾರ ರಾಜ್ಯ ಶಾಸ್ತ್ರ ಹಾಗೂ ಜು.10 ಮಂಗಳವಾರ ಇಂಗ್ಲಿಷ್ ವಿಷಯಗಳಿಗೆ ಪರೀಕ್ಷೆ ನಡೆಯಲಿದೆ.

English summary
Following the assembly and council elections which will be held in second week of June, PU second year supplementary exams have been postponed to June 29 which scheduled June 8 earlier.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X