ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬೆಂಗಳೂರಿನಲ್ಲಿ ಅತಿ ಕಡಿಮೆ ಭೂಕಬಳಿಕೆ ಪ್ರಕರಣಗಳು ದಾಖಲು ಆಗ್ತಿರೋದೇಕೆ?

|
Google Oneindia Kannada News

ಬೆಂಗಳೂರು, ಜ. 15: ರಾಜ್ಯದಲ್ಲಿಯೇ ಅತಿಹೆಚ್ಚು ರಿಯಲ್ ಎಸ್ಟೇಟ್ ದಂಧೆ ನಡೆಯುವ ಬೆಂಗಳೂರಿನಲ್ಲಿ ಅತ್ಯಂತ ಕಡಿಮೆ ಭೂಕಬಳಿಕೆ ಪ್ರಕರಣಗಳು ದಾಖಲಾಗಿವೆ ಎಂಬುವುದನ್ನು ನಂಬಲು ಕಷ್ಟವಾದರೂ ನಂಬಲೇ ಬೇಕಾಗಿದೆ. ಯಾಕಂದರೆ ಬೆಂಗಳೂರಿನಲ್ಲಿ ಅತಿ ಕಡಿಮೆ ಸರ್ಕಾರಿ ಭೂಕಬಳಿಕೆ ಪ್ರಕರಣಗಳು ದಾಖಲಾಗಿರವುದನ್ನು ವಿಧಾನಸಭೆಯ ಸಾರ್ವಜನಿಕ ಲೆಕ್ಕಪತ್ರ ಸಮಿತಿ ಪತ್ತೆ ಹಚ್ಚಿದೆ ಎಂದು ತಿಳಿದು ಬಂದಿದೆ.

ಬೆಂಗಳೂರಿನಲ್ಲಿ ಅಕ್ರಮ ಭೂಒತ್ತುವರಿ ಮಾಡಿರುವ 9,294 ಪ್ರಕರಣಗಳು ಪತ್ತೆಯಾಗಿದ್ದು, ದಾಖಲಾಗಿರುವುದು ಮಾತ್ರ ಕೇವಲ 127 ಪ್ರಕರಣಗಳು ಎಂಬುದನ್ನು ಪತ್ತೆ ಹಚ್ಚಿದ ಸಮಿತಿ, ಅದಕ್ಕೆ ತೀವ್ರ ಕಳವಳ ವ್ಯಕ್ತಪಡಿಸಿದೆ.

ಬಿಬಿಎಂಪಿ ಆಸ್ತಿಗಳ ಲೆಕ್ಕ ಕೇಳಿದ ಸಿಎಂ ಯಡಿಯೂರಪ್ಪಬಿಬಿಎಂಪಿ ಆಸ್ತಿಗಳ ಲೆಕ್ಕ ಕೇಳಿದ ಸಿಎಂ ಯಡಿಯೂರಪ್ಪ

ಮಾಜಿ ಸಚಿವ ಎಚ್.ಕೆ. ಪಾಟೀಲ್ ಅಧ್ಯಕ್ಷತೆಯ ಸಮಿತಿ ಮಂಗಳವಾರ ವಿಧಾನಸೌಧದಲ್ಲಿ ಸಭೆ ನಡೆಸಿದ್ದು, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ, ಕಾನೂನು ಇಲಾಖೆ ಕಾರ್ಯದರ್ಶಿ, ಭೂ ದಾಖಲೆಗಳ ಆಯುಕ್ತರು, ಸ್ಟಾಂಪ್ಸ್ ಆಂಡ್ ರಿಜಿಸ್ಟ್ರೇಶನ್ ಇನ್ಸಪೆಕ್ಟರ್ ಹಾಗೂ 14 ಜನ ಜಿಲ್ಲಾಧಿಕಾರಿಗಳು ಭಾಗವಹಿಸಿದ್ದರು.

ಆದರೆ ದಾಖಲಾಗಿದ್ದು ಮಾತ್ರ ಅತಿ ಕಡಿಮೆ ಭೂಕಬಳಿಕೆ ಪ್ರಕರಣಗಳು

ಆದರೆ ದಾಖಲಾಗಿದ್ದು ಮಾತ್ರ ಅತಿ ಕಡಿಮೆ ಭೂಕಬಳಿಕೆ ಪ್ರಕರಣಗಳು

ರಾಜ್ಯದಲ್ಲಿ ಅತಿಹೆಚ್ಚು ರಿಯಲ್ ಎಸ್ಟೇಟ್ ದಂಧೆ ನಡೆಯುವುದು ಬೆಂಗಳೂರಿನಲ್ಲಿ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಆದರೆ ಅದ್ಯಾಕೊ ಅಧಿಕಾರಿಗಳಿಗೆ ಮಾತ್ರ ಅಕ್ರಮ ರಿಯಲ್ ಎಸ್ಟೇಟ್ ವ್ಯವಹಾರ ಮಾಡುವವರ ಮೇಲೆ ಕ್ರಮಕೈಗೊಳ್ಳಲು ಮನಸ್ಸಿಲ್ಲ ಎಂಬ ವಿಚಾರ ಬಹಿರಂಗವಾಗಿದೆ. ಸರ್ಕಾರಿ ಭೂಕಬಳಿಕೆಯ ಅತಿಹೆಚ್ಚು ಪ್ರಕರಣಗಳು ಬೆಂಗಳೂನಲ್ಲಿ ಪತ್ತೆ ಹಚ್ಚಿದ್ದಾರೆ. ಆದರೆ ಪತ್ತೆ ಹಚ್ಚಿದ ಪ್ರಕರಣಗಳನ್ನು ದಾಖಲಿಸುವಲ್ಲಿ ಮಾತ್ರ ಅದ್ಯಾಕೊ ಅಧಿಕಾರಿಗಳು ಹಿಂದೇಟು ಹಾಕಿದ್ದಾರೆ ಎಂದು ತಿಳಿದು ಬಂದಿದೆ.

2018ರ ಮಹಾಲೆಕ್ಕ ಪರಿಶೋಧಕರ (ಸಿಎಜಿ) ವರದಿ ಅನ್ವಯ ಬೆಂಗಳೂರಿನಲ್ಲಿ 9,294 ಅಕ್ರಮ ಒತ್ತುವರಿ ಪ್ರಕರಣಗಳು ಪತ್ತೆಯಾಗಿದ್ದು, 127 ಪ್ರಕರಣಗಳು ಮಾತ್ರ ದಾಖಲಾಗಿವೆ. ತಹಸೀಲ್ದಾರರು ಹಾಗೂ ಎಸಿಗಳು ಅಕ್ರಮ ಒತ್ತುವರಿ ಮಾಡಿರುವವರ ವಿರುದ್ಧ ಪ್ರಕರಣ ದಾಖಲಿಸದೇ ಇರುವುದೇ ಇದಕ್ಕೆ ಕಾರಣ ಎನ್ನಲಾಗಿದೆ. ಆದರಿಂದ ಇಲ್ಲಿ ಭೂಗಳ್ಳರು ಅಕ್ರಮವಾಗಿ ರಿಯಲ್ ಎಸ್ಟೇಟ್ ಉದ್ಯಮ ನಡೆಸುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಬೆಂಗಳೂರಿನಲ್ಲಿ ಲಕ್ಷಾಂತರ ಕೋಟಿ ರೂ.ಬೆಲೆ ಬಾಳುವ ಭೂಮಿ ಕಬಳಿಕೆ

ಬೆಂಗಳೂರಿನಲ್ಲಿ ಲಕ್ಷಾಂತರ ಕೋಟಿ ರೂ.ಬೆಲೆ ಬಾಳುವ ಭೂಮಿ ಕಬಳಿಕೆ

ಅಕ್ರಮ ಭೂ ಒತ್ತುವರಿ ಪ್ರಕರಣಗಳ ತನಿಖೆಗೆ ಅಕ್ರಮ ಗಣಿ ಪ್ರಕರಣದ ಮಾದರಿಯಲ್ಲಿ ವಿಶೇಷ ತನಿಖಾ ತಂಡ ರಚಿಸುವಂತೆ ಸಾರ್ವಜನಿಕ ಲೆಕ್ಕಪತ್ರ ಸಮಿತಿ ರಾಜ್ಯ ಸರ್ಕಾರಕ್ಕೆ ಶಿಫಾರಸ್ಸು ಮಾಡಿದೆ. ರಾಜ್ಯದಲ್ಲಿ 13 ಲಕ್ಷ ಎಕರೆ ಜಮೀನು ಭೂ ಕಬಳಿಕೆಯಾಗಿದ್ದು, ಅದರಲ್ಲಿ 7 ಲಕ್ಷ ಎಕರೆ ಭೂಮಿ ಸಣ್ಣ ಮತ್ತು ಅತಿ ಸಣ್ಣ ರೈತರು ಕೃಷಿ ಉದ್ದೇಶಕ್ಕೆ ಒತ್ತುವರಿ ಮಾಡಿಕೊಂಡಿದ್ದಾರೆ. 4.54 ಲಕ್ಷ ಎಕರೆ ಅಕ್ರಮ ಒತ್ತುವರಿದಾರರಿಂದ ಭೂ ಕಬಳಿಕೆಯಾಗಿದೆ. ಇದು ಕೃಷಿಯೇತರ ಚಟುವಟಿಕೆಗಳಿಗೆ ಬಳಕೆ ಆಗುತ್ತಿದೆ.

ಕೇರಳದಂತೆ ಬೆಂಗಳೂರಲ್ಲೂ ಅಕ್ರಮ ಕಟ್ಟಡಗಳನ್ನು ನೆಲಸಮಗೊಳಿಸಬೇಕೆ?ಕೇರಳದಂತೆ ಬೆಂಗಳೂರಲ್ಲೂ ಅಕ್ರಮ ಕಟ್ಟಡಗಳನ್ನು ನೆಲಸಮಗೊಳಿಸಬೇಕೆ?

ಬೆಂಗಳೂರಿನಲ್ಲಿಯೇ ಸುಮಾರು 65 ಸಾವಿರ ಎಕರೆ ಭೂಮಿಯನ್ನು ಅನ್ಯ ಉದ್ದೇಶಕ್ಕೆ ಒತ್ತುವರಿ ಮಾಡಲಾಗಿದ್ದು, ಈ ಬಗ್ಗೆ ತನಿಖೆ ನಡೆಸಲು ಪೊಲೀಸ್ ಅಧಿಕಾರಿಗಳೊಂದಿಗೆ ವಿಶೇಷ ತನಿಖಾ ತಂಡ (ಎಸ್‍ಐಟಿ) ರಚನೆ ಮಾಡುವಂತೆ ಸಾರ್ವಜನಿಕ ಲೆಕ್ಕಪತ್ರ ಸಮಿತಿ ಸರ್ಕಾರಕ್ಕೆ ಶಿಫಾರಸ್ಸು ಮಾಡಿದೆ ಎಂದು ತಿಳಿದು ಬಂದಿದೆ.

ಮುಖ್ಯ ಕಾರ್ಯದರ್ಶಿಗಳು ಈ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಮುಂದಿನ ಸಭೆಗೆ ವರದಿ ನೀಡುವ ಭರವಸೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಸಂಕಷ್ಟದಲ್ಲಿ ಸಣ್ಣ ಹಿಡುವಳಿದಾರ ರೈತರು: ಸಮಿತಿ ಆಕ್ಷೇಪ

ಸಂಕಷ್ಟದಲ್ಲಿ ಸಣ್ಣ ಹಿಡುವಳಿದಾರ ರೈತರು: ಸಮಿತಿ ಆಕ್ಷೇಪ

ರಾಜ್ಯದಲ್ಲಿ ಅಕ್ರಮ ಭೂ ಒತ್ತುವರಿ ಪ್ರಕರಣಗಳ ವಿಚಾರಣಗೆ ರಾಜ್ಯ ಸರ್ಕಾರ ಈಗಾಗಲೇ ವಿಶೇಷ ನ್ಯಾಯಾಲಯ ಸ್ಥಾಪನೆ ಮಾಡಿದೆ.

ರಾಜ್ಯದಲ್ಲಿ ಸುಮಾರು 17732 ಭೂ ಒತ್ತುವರಿ ಪ್ರಕರಣಗಳಿದ್ದು, ಇಡೀ ರಾಜ್ಯಕ್ಕೆ ಒಂದೇ ವಿಶೇಷ ನ್ಯಾಯಾಲಯ ಬೆಂಗಳೂರಿನಲ್ಲಿ ಮಾತ್ರ ತೆರೆಯಲಾಗಿದ್ದು, ರಾಜ್ಯದ ಎಲ್ಲ ಭೂ ಒತ್ತುವರಿದಾರರೂ ಬೆಂಗಳೂರಿಗೆ ಅಲೆದಾಡುವಂತಾಗಿದೆ. ಕೃಷಿ ಉದ್ದೇಶಕ್ಕೆ ಅರಣ್ಯ ಭೂಮಿ ಒತ್ತುವರಿ ಮಾಡಿರುವ ಸಣ್ಣ ಹಿಡುವಳಿದಾರರು ಬೆಂಗಳೂರಿಗೆ ಅಲೆದಾಡುವಂತೆ ಆಗಿದೆ. ಸಣ್ಣ ಹಿಡುವಳಿದಾರರಿಗೆ ಇದರಿಂದ ಸಮಸ್ಯೆಯಾಗುತ್ತಿದೆ ಎಂದು ಸಮಿತಿ ಸಭೆಯಲ್ಲಿ ಆಕ್ಷೇಪ ವ್ಯಕ್ತವಾಗಿದೆ ಎನ್ನಲಾಗಿದೆ.

ಸರ್ಕಾರದ ಕಾನೂನು ಇಲಾಖೆಯ ಆದೇಶದಲ್ಲಿ ಆಗಿರುವ ಲೋಪದಿಂದ ಜನರು ಬೆಂಗಳೂರಿಗೆ ಅಲೆದಾಡುವಂತಾಗಿದ್ದು, ರಾಜ್ಯದ ಎಲ್ಲ ತಾಲೂಕುಗಳಲ್ಲಿಯೂ ಜೆಎಂಎಫ್‍ಸಿ ಗಳಲ್ಲಿಯೇ ವಿಚಾರಣೆ ನಡೆಸಿ ಪ್ರಕರಣ ಇತ್ಯರ್ಥಗೊಳಿಸಲು ಸರ್ಕಾರದ ಆದೇಶವನ್ನು ಮಾರ್ಪಾಡು ಮಾಡುವಂತೆ ಸಮಿತಿಯು ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಸಾರ್ವಜನಿಕ ಲೆಕ್ಕಪತ್ರ ಸಮಿತಿ ಸೂಚನೆಯಂತೆ ಸರ್ಕಾರ ಆದೇಶ ಪತ್ರವನ್ನು ಮಾರ್ಪಾಡಿದರೆ, ತಾಲೂಕು ನ್ಯಾಯಾಲಯದಲ್ಲಿಯೇ ಭೂ ಒತ್ತುವರಿ ಪ್ರಕರಣಗಳ ವಿಚಾರಣೆಗೆ ಅವಕಾಶ ದೊರೆಯಲಿದೆ. ಈ ರೀತಿಯ ಸುಮಾರು 14 ಪ್ರಕರಣಗಳು ರಾಜ್ಯಾದ್ಯಂತ ದಾಖಲಾಗಿವೆ.

ಕೃಷಿಯೇತರ ಉದ್ದೇಶಕ್ಕೆ ಭೂಕಬಳಿಕೆ ಎಸ್‌ಐಟಿ ತನಿಖೆಗೆ ಆದೇಶ

ಕೃಷಿಯೇತರ ಉದ್ದೇಶಕ್ಕೆ ಭೂಕಬಳಿಕೆ ಎಸ್‌ಐಟಿ ತನಿಖೆಗೆ ಆದೇಶ

ರಾಜ್ಯದಲ್ಲಿ ಲಕ್ಷಾಂತರ ಎಕರೆ ಜಮೀನು ಒತ್ತುವರಿಯಾಗಿದೆ. ಅದರಲ್ಲಿ ಕೃಷಿ ಮಾಡಲು ಹಾಗೂ ಅರಣ್ಯ ವಾಸಿಗಳು ಜೀವನೋಪಾಯಕ್ಕೆ ಅರಣ್ಯ ಪ್ರದೇಶದಲ್ಲಿ ಸಾಗುವಳಿ ಮಾಡಿಕೊಂಡಿದ್ದಾರೆ. ಅಂತಹ ಕೃಷಿ ಉದ್ದೇಶಕ್ಕೆ ಒತ್ತುವರಿ ಮಾಡಿರುವ ಪ್ರಕರಣಗಳನ್ನು ಹೊರತು ಪಡಿಸಿ, ಕೃಷಿಯೇತರ ಹಾಗೂ ವಾಣಿಜ್ಯ ಉದ್ದೇಶಕ್ಕೆ ಅದರಲ್ಲೂ ವಿಶೇಷವಾಗಿ ರಿಯಲ್ ಎಸ್ಟೇಟ್ ಉದ್ಯಮ ನಡೆಸಲು ಸರ್ಕಾರಿ ಜಮೀನು ಅಕ್ರಮವಾಗಿ ಒತ್ತುವರಿ ಮಾಡಿರುವ ಪ್ರಕರಣಗಳ ವಿರುದ್ಧ ತನಿಖೆ ನಡೆಸುವಂತೆ ಸಮಿತಿ ಸರ್ಕಾರಕ್ಕೆ ಸೂಚನೆ ಕೊಟ್ಟಿದೆ.

ಪ್ರಕರಣ ದಾಖಲಿಸಲು ವಿಶೇಷ ತನಿಖಾ ತಂಡ ರಚನೆ ಮಾಡುವಂತೆ ಸಮಿತಿ ಸರ್ಕಾರಕ್ಕೆ ಶಿಫಾರಸ್ಸು ಮಾಡಿದೆ.

English summary
The public accounts committee of karnataka legislative assembly finds more government land encroachment in bengaluru and strangely very less complaint filed in court.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X