ಕಂಠೀರವ ಕ್ರೀಡಾಂಗಣದಲ್ಲಿ ಸಂಜೆ 5 ಗಂಟೆಯಿಂದ ಅಪ್ಪು ಅಂತಿಮ ದರ್ಶನಕ್ಕೆ ಅವಕಾಶ

ಬೆಂಗಳೂರು, ಅ. 19: ನಟ ಪುನೀತ್ ರಾಜ್ ಕುಮಾರ್ ಅವರ ಅಂತಿಮ ದರ್ಶನಕ್ಕೆ ಬೆಂಗಳೂರು ಹೃದಯ ಭಾಗದಲ್ಲಿರುವ ಕಂಠೀರವ ಕ್ರೀಡಾಂಗಣದಲ್ಲಿ ವ್ಯವಸ್ಥೆ ಮಾಡಲಾಗಿದೆ. ಶುಕ್ರವಾರ ಸಂಜೆಯಿಂದ ಶನಿವಾರ ಸಂಜೆ ವರೆಗೂ ಸಾರ್ವನಿಕರ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಇನ್ನು ಕಂಠೀರವ ಕ್ರೀಡಾಂಗಣ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಈಗಾಗಲೇ ಬೆಂಗಳೂರು ನಗರ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ಅಧಿಕಾರಿಗಳು ಕ್ರೀಡಾಂಗಣಕ್ಕೆ ಭೇಟಿ ನೀಡಿ ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ.

Recommended Video

      ಕರಾಳ ಶುಕ್ರವಾರ:ಪುನೀತ್ ರಾಜ್ ಕುಮಾರ್ ವಿಧಿವಶ | Oneindia Kannada

      ಬೆಂಗಳೂರಿನ ಸದಾಶಿವನಗರದಲ್ಲಿರುವ ಪುನೀತ್ ಅವರ ಮನೆಗೆ ಬಿಗಿ ಪೊಲೀಸ್ ಬಂದೋಬಸ್ತ ಏರ್ಪಡಿಸಲಾಗಿದೆ. ವಿಕ್ರಂ ಆಸ್ಪತ್ರೆಯಿಂದ ಪುನೀತ್ ಪಾರ್ಥೀವ ಶರೀರರವನ್ನು ಸದಾಶಿವನಗರದ ಮನೆಗೆ ರವಾನಿಸಿದ್ದು, ಅಲ್ಲಿ ಕುಟುಂಬಸ್ಥರ, ಸಂಬಂಧಿಕರ ಮತ್ತು ಗಣ್ಯರ ಅಂತಿಮ ದರ್ಶನ ಪಡೆಯಲಿದ್ದಾರೆ. ಬಳಿಕ ಅಭಿಮಾನಿಗಳ ಅಂತಿಮ ದರ್ಶನಕ್ಕಾಗಿ ಕಂಠೀರವ ಕ್ರೀಡಾಂಗಣದಲ್ಲಿ ವ್ಯವಸ್ಥೆ ಕಲ್ಪಿಸಲಾಗಿದೆ. ಕಂಠೀರವ ಕ್ರೀಡಾಂಗಣದ ಸುತ್ತಮುತ್ತಲು ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಹೆಚ್ಚಿನ ಭದ್ರತೆಗಾಗಿ ಅಗ್ನಿ ಶಾಮಕ ವಾಹನ, ಕೆಎಸ್ಆರ್‌ಪಿ ತುಕಡಿಗಳನ್ನು ನಿಯೋಜನೆ ಮಾಡಲಾಗಿದೆ. ಭದ್ರತಾ ಉಸ್ತುವಾರಿಯನ್ನು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ವಹಿಸಲಾಗಿದೆ. ಸರ್ಕಾರದ ವತಿಯಿಂದಲೇ ಸರ್ಕಾರದ ಸಕಲ ಗೌರವದೊಂದಿಗೆ ಅಂತಿಮ ಸಂಸ್ಕಾರ ನಡೆಸಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

      Public allowed to pay their last respects to Puneeth Rajkumar at Kanteerava Stadium

      ಶನಿವಾರ ಅಂತ್ಯಕ್ರಿಯೆ?:

      ಕಂಠೀರವ ಕ್ರೀಡಾಂಗಣದಲ್ಲಿ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಇವತ್ತು ಸಂಜೆ ಐದು ಗಂಟೆಯಂದಲೇ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಇನ್ನು ಅಂತ್ಯ ಸಂಸ್ಕಾರದ ಜಾಗದ ಬಗ್ಗೆ ಕುಟುಂಬ ನಿರ್ಣಯ ಮಾಡಲಿದೆ. ಅವರ ಭಾವನೆಗಳಿಗೆ ಸರ್ಕಾರ ಸ್ಪಂದಿಸಲಿದೆ. ಅವರು ಸೂಚಿಸಿದ ಜಾಗದಲ್ಲಿಯೇ ಅಂತ್ಯ ಸಂಸ್ಕಾರ ನೆರವೇರಲಿದೆ. ಸರ್ಕಾರದ ಸಕಲ ಗೌರವದೊಂದಿಗೆ ಅಂತ್ಯ ಸಂಸ್ಕಾರ ನೆರವೇರಲಿದ್ದು, ಯಾರೂ ಉದ್ವೇಗಕ್ಕೆ ಒಳಗಾಗಬಾರದು. ಸಾರ್ವಜನಿಕರು ಮತ್ತು ಅಭಿಮಾನಿಗಳು ಶಾಂತಚಿತ್ತರಾಗಿರಬೇಕು ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ಶನಿವಾರವೇ ಅಂತ್ಯ ಸಂಸ್ಕಾರ ನೆರವೇರಿಸುವ ಸಂಬಂಧ ಕುಟುಂಬಕ್ಕೆ ಮನವಿ ಮಾಡಲಾಗಿದೆ. ಡಾ. ರಾಜ್ ಕುಟುಂಬದ ಭಾವನೆಗಳಿಗೆ ಸ್ಪಂದಿಸಿ ಅದರಂತೆ ಮಾಡಲಾಗುವುದು.

      Public allowed to pay their last respects to Puneeth Rajkumar at Kanteerava Stadium

      ರಾಜ್ ಸ್ಮಾರಕದ ಬಳಿ ಪುನೀತ್ ಅಂತ್ಯ ಸಂಸ್ಕಾರ:

      ಡಾ. ರಾಜ್ ಕುಮಾರ್ ಅವರ ಸ್ಮಾರಕದ ಸಮೀಪವೇ ಪುನೀತ್ ರಾಜ್ ಕುಮಾರ್ ಅವರ ಅಂತ್ಯಕ್ರಿಯೆ ನಡೆಸಲು ಕುಟುಂಬ ನಿರ್ಧರಿಸಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ಅಣ್ಣ ಅವರ ಪ್ರೀತಿಯ ಮಗನಾಗಿದ್ದ ಅಪ್ಪು ಅಂದ್ರೆ ಪಂಚ ಪ್ರಾಣ. ಹೀಗಾಗಿಯೇ ಡಾ. ರಾಜ್ ಕುಮಾರ್ ಸಮಾಧಿ ಬಳಿಯೇ ಪುನೀತ್ ರಾಜ್ ಕುಮಾರ್ ಅವರ ಅಂತ್ಯಕ್ರಿಯೆ ನೆರವೇರಿಸಲು ಕುಟುಂಬ ಒಲವು ವ್ಯಕ್ತಪಡಿಸಿದೆ ಎನ್ನಲಾಗಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+