ಜಿಲ್ಲೆಗಳಲ್ಲಿ ಗಣೇಶೋತ್ಸವ ಆಚರಣೆ; ಮಾರ್ಗಸೂಚಿ

ಧಾರವಾಡ, ಸೆಪ್ಟೆಂಬರ್ 07; ಕೋವಿಡ್ ಪರಿಸ್ಥಿತಿಯಲ್ಲಿಯೂ ಕರ್ನಾಟಕ ಸರ್ಕಾರ ಸಾರ್ವಜನಿಕ ಗಣೇಶೋತ್ಸವಕ್ಕೆ ಷರತ್ತು ಬದ್ಧ ಅನುಮತಿ ನೀಡಿದೆ. ಜಿಲ್ಲಾಡಳಿತಗಳು ಗಣೇಶೋತ್ಸವ ಆಚರಣೆಗೆ ಮಾರ್ಗಸೂಚಿ ಬಿಡುಗಡೆ ಮಾಡಿವೆ.

ಕೋವಿಡ್ ಹರಡದಂತೆ ಕ್ರಮ ಕೈಗೊಳ್ಳಬೇಕಾಗಿದೆ. ಆದ್ದರಿಂದ ಸಾರ್ವಜನಿಕರು ಜಿಲ್ಲಾಡಳಿತ ನೀಡಿರುವ ಮಾರ್ಗಸೂಚಿಗಳನ್ನು ಪಾಲಿಸುವುವ ಜೊತೆಗೆ ಗೌರಿ-ಗಣೇಶೋತ್ಸವ ಹಬ್ಬವನ್ನು ಆಚರಿಸಬೇಕೆಂದು ಮನವಿ ಮಾಡಲಾಗಿದೆ. ಗಣೇಶೋತ್ಸವ ಆಚರಣೆಗೆ ಗರಿಷ್ಠ 5 ದಿನ ನಿಗದಿ ಮಾಡಲಾಗಿದೆ.

ಪಾರಂಪರಿಕ ಗಣೇಶೋತ್ಸವಕ್ಕಾಗಿ ಗಣೇಶೋತ್ಸವ ಸಮಿತಿ, ಮಂಡಳಿಗಳು ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಲು ಮಹಾನಗರ ಪಾಲಿಕೆ, ಸ್ಥಳೀಯ ಆಡಳಿತದಿಂದ ಪೂರ್ವಾನುಮತಿಯನ್ನು ಪಡೆಯಬೇಕು. ಒಂದು ನಗರ ಪ್ರದೇಶಗಳಲ್ಲಿ ವಾರ್ಡಿಗೆ ಒಂದರಂತೆ ಸಾರ್ವಜನಿಕ ಗಣೇಶ ಮೂರ್ತಿ ಮಾತ್ರ ಇಡಲು ಪ್ರೋತ್ಸಾಹಿಸಬೇಕು.

ಹಬ್ಬಗಳು ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಮತ್ತು ಸಾಮರಸ್ಯಗಳು ಉಂಟಾಗಲು ಪೂರಕವಾಗಿವೆ. ಗಣೇಶೋತ್ಸವ ಹಬ್ಬವನ್ನು ಅದೇ ರೀತಿಯಿಂದ ಆಚರಿಸುವ ಮೂಲಕ ಸಮಾಜದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಯಾವುದೇ ಭಂಗ ಬಾರದಂತೆ ಕಾಪಾಡಬೇಕು.

ಕೋವಿಡ್ ನಿರ್ವಹಣೆ ಕುರಿತು ರಾಷ್ಟ್ರೀಯ ನಿರ್ದೇಶನಗಳನ್ನು ಹಾಗೂ ರಾಜ್ಯ ಸರ್ಕಾರದ ಆದೇಶ, ಮಾರ್ಗಸೂಚಿಗಳನ್ನು ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣೆ ಕಾಯ್ದೆ 2005 ಹಾಗೂ ಭಾರತೀಯ ದಂಡ ಸಂಹಿತೆ ಸೆಕ್ಷನ್ 188 ರ ಅಡಿಯಲ್ಲಿ ಶಿಸ್ತಿನ ಮತ್ತು ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ.

ವಾರ್ಡ್‌ಗೊಂದು ಗಣೇಶ ಪ್ರತಿಷ್ಠಾಪನೆ

ವಾರ್ಡ್‌ಗೊಂದು ಗಣೇಶ ಪ್ರತಿಷ್ಠಾಪನೆ

ಗಣೇಶ ಚತುರ್ಥಿಯನ್ನು ಸರಳ ರೀತಿಯಲ್ಲಿ ಭಕ್ತಿಪೂರ್ವಕವಾಗಿ ದೇವಾಲದೊಳಗೆ ಮತ್ತು ತಮ್ಮ ತಮ್ಮ ಮನೆಗಳಲ್ಲಿ ಅಥವಾ ಸರ್ಕಾರಿ, ಖಾಸಗಿ, ಸಾರ್ವಜನಿಕ ಬಯಲು ಪ್ರದೇಶಗಳಲ್ಲಿ ಕನಿಷ್ಠ ಸಂಖ್ಯೆಯೊಂದಿಗೆ ಆಚರಿಸಬೇಕು.

ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಯನ್ನು 4 ಅಡಿ ಎತ್ತರ ಮೀರದಂತೆ ಹಾಗೂ ಮನೆಯೊಳಗೆ 2 ಅಡಿ ಮೀರದಂತೆ ಪ್ರತಿಷ್ಠಾಪನೆ ಮಾಡಬೇಕು. ಗಣೇಶ ಪ್ರತಿಷ್ಠಾಪನೆಗೆ ಮಹಾನಗರ ಪಾಲಿಕೆ, ಸ್ಥಳೀಯ ಆಡಳಿತದಿಂದ ಪೂರ್ವಾನುಮತಿಯನ್ನು ಪಡೆಯ ಬೇಕು. ಒಂದು ನಗರ ಪ್ರದೇಶಗಳಲ್ಲಿ ವಾರ್ಡಿಗೆ ಒಂದರಂತೆ ಸಾರ್ವಜನಿಕ ಗಣೇಶೋತ್ಸವವನ್ನು ಮಾತ್ರ ಆಚರಿಸಲು ಪ್ರೋತ್ಸಾಹಿಸಬೇಕು.

Recommended Video

    ಹಬ್ಬ ಹೇಗೆ ಮಾಡಬೇಕು ಅಂತ ತಿಳಿ ಹೇಳಿದ ಬಿಬಿಎಂಪಿ ಕಮಿಷನರ್!! | Oneindia Kannada
    20 ಜನರಿಗೆ ಸೀಮಿತವಾದ ಆವರಣ

    20 ಜನರಿಗೆ ಸೀಮಿತವಾದ ಆವರಣ

    ಗಣೇಶಮೂರ್ತಿ ಪ್ರತಿಷ್ಠಾಪನಾ ಸ್ಥಳಗಳಲ್ಲಿ 20 ಜನಕ್ಕೆ ಸೀಮಿತವಾದ ಆವರಣ ನಿರ್ಮಿಸಬೇಕು. ಒಮ್ಮೆ 20ಕ್ಕಿಂತ ಹೆಚ್ಚಿನ ಜನ ಸೇರದಂತೆ ನೋಡಿಕೊಳ್ಳಬೇಕು. ಆಯೋಜಕರು ಕೋವಿಡ್ ನೆಗೆಟಿವ್ ವರದಿ, ಲಸಿಕೆ ಪಡೆದಿರುವ ಬಗ್ಗೆ ಪ್ರಮಾಣ ಪತ್ರವನ್ನು ಹೊಂದಿರುವುದು ಕಡ್ಡಾಯ.

    ಆಯೋಜಿತ ಸ್ಥಳಗಳಲ್ಲಿ ಸ್ಥಳೀಯ ಮಟ್ಟದಲ್ಲಿ ಆಯೋಜಕರು ಲಸಿಕೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವುದು, ಸಾರ್ವಜನಿಕರಿಗೆ ಹಾಗೂ ವಾಹನ ಸಂಚಾರಕ್ಕೆ ಯಾವುದೇ ಅಡ್ಡಿ ಆಗದಂತೆ ನೋಡಿಕೊಳ್ಳುವುದು.

    ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ಸ್ಥಳದಲ್ಲಿ ಯಾವುದೇ ರೀತಿಯ ಸಾಂಸ್ಕೃತಿಕ, ಸಂಗೀತ, ನೃತ್ಯ ಹಾಗೂ ಮುಖ್ಯವಾಗಿ ಡಿಜೆ ಮೂಲಕ ಯಾವುದೇ ಮನರಂಜನಾ ಕಾರ್ಯಕ್ರಮಗಳನ್ನು ಆಯೋಜಿಸಲು ಅವಕಾಶವಿಲ್ಲ.

    ಯಾವುದೇ ಮೆರವಣಿಗೆ ನಡೆಸುವಂತಿಲ್ಲ

    ಯಾವುದೇ ಮೆರವಣಿಗೆ ನಡೆಸುವಂತಿಲ್ಲ

    ಗಣೇಶ ಮೂರ್ತಿ ತರುವಾಗ ಹಾಗೂ ವಿಸರ್ಜಿಸುವಾಗ ಯಾವುದೇ ಕಾರಣಕ್ಕೂ ಯಾವುದೇ ಮೆರವಣಿಗೆ ನಡೆಸುವಂತಿಲ್ಲ.
    ಗಣೇಶ ಮೂರ್ತಿ ಮತ್ತು ಮನೆಯಲ್ಲಿ ವಿಗ್ರಹಗಳನ್ನು ಪೂಜಿಸುವುದು, ಅವುಗಳನ್ನು ಮನೆಯಲ್ಲಿ ವಿಸರ್ಜಿಸುವುದು.
    ಸರ್ಕಾರಿ, ಖಾಸಗಿ, ಬಯಲು ಪ್ರದೇಶಗಳಲ್ಲಿ ಪ್ರತಿಷ್ಠಾಪಿಸುವ ಗಣೇಶ ಮೂರ್ತಿಗಳನ್ನು ಅತಿ ಕನಿಷ್ಠ ಜನರೊಂದಿಗೆ ಸಮೀಪವಾಗುವಂತಹ ಮಾರ್ಗಗಳನ್ನು ಬಳಸಿಕೊಂಡು ಮಹಾನಗರಪಾಲಿಕೆ, ಜಿಲ್ಲಾಡಳಿತ ಹತ್ತಿರದ ಸ್ಥಳೀಯ ಸಂಸ್ಥೆಗಳು, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ಈಗಾಗಲೇ ನಿರ್ಮಿಸಲಾದ ಹೊಂಡ ಅಥವಾ ಮೊಬೈಲ್ ಟ್ಯಾಂಕ್‍ಗಳಲ್ಲಿ ವಿಸರ್ಜಿಸಬೇಕು.

    ಭಕ್ತರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು

    ಭಕ್ತರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು

    ದೇವಾಲಯ, ಸಾರ್ವಜನಿಕ ಸ್ಥಳಗಳಲ್ಲಿ ದಿನನಿತ್ಯ ಸ್ಯಾನಿಟೈಸ್ ಮಾಡಬೇಕು ಹಾಗೂ ಸಾರ್ವಜನಿಕ ದರ್ಶನಕ್ಕಾಗಿ ಆಗಮಿಸುವ ಭಕ್ತಾದಿಗಳಿಗೆ ಸ್ಯಾನಿಟೈಜರ್ ಹಾಗೂ ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆಯನ್ನು ಕಲ್ಪಿಸಿರಬೇಕು. ದರ್ಶನಕ್ಕಾಗಿ ಬರುವ ಭಕ್ತಾದಿಗಳಿಗೆ ಕನಿಷ್ಠ 6 ಅಡಿ ಸಾಮಾಜಿಕ ಅಂತರವನ್ನು ಗುರುತಿಸುವುದು ಹಾಗೂ ಅದನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಲು ಎಲ್ಲ ಅಗತ್ಯ ಕ್ರಮ ಕೈಗೊಳ್ಳಬೇಕು. ಭಕ್ತಾದಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು.

    Notifications
    Settings
    Clear Notifications
    Notifications
    Use the toggle to switch on notifications
    • Block for 8 hours
    • Block for 12 hours
    • Block for 24 hours
    • Don't block
    Gender
    Select your Gender
    • Male
    • Female
    • Others
    Age
    Select your Age Range
    • Under 18
    • 18 to 25
    • 26 to 35
    • 36 to 45
    • 45 to 55
    • 55+