ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಾರ್ವಜನಿಕ ಗಣೇಶೋತ್ಸವ ಆಚರಣೆ; ಮಾರ್ಗಸೂಚಿ

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 05; ಭಾರೀ ಒತ್ತಡಕ್ಕೆ ಮಣಿದಿರುವ ಕರ್ನಾಟಕ ಸರ್ಕಾರ ಸಾರ್ವಜನಿಕ ಗಣೇಶೋತ್ಸವಕ್ಕೆ ಷರತ್ತು ಬದ್ಧ ಅನುಮತಿ ನೀಡಿದೆ. ಗರಿಷ್ಠ 5 ದಿನದ ತನಕ ಮಾತ್ರ ಗಣೇಶೋತ್ಸವ ಆಚರಣೆ ಮಾಡಬೇಕು ಎಂದು ಕರ್ನಾಟಕ ಸರ್ಕಾರ ಸ್ಪಷ್ಟಪಡಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಭಾನುವಾರ ನಡೆದ ಸಭೆಯಲ್ಲಿ ಈ ಕುರಿತು ತೀರ್ಮಾನವನ್ನು ಕೈಗೊಳ್ಳಲಾಗಿದೆ.

ಸಾರ್ವಜನಿಕ ಗಣೇಶೋತ್ಸವ ಆಚರಣೆ ಬಗ್ಗೆ ಭಾನುವಾರ ಕಂದಾಯ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ತುಷಾರ್ ಗಿರಿನಾಥ್ ಮಾರ್ಗಸೂಚಿ ಹೊರಡಿಸಿದ್ದಾರೆ. ಮಾರ್ಗಸೂಚಿಯನ್ನು ಬಿಬಿಎಂಪಿ ಆಯುಕ್ತರು, ಪೊಲೀಸ್ ಆಯುಕ್ತರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಎಂದು ಸೂಚನೆ ನೀಡಲಾಗಿದೆ. ಮಾರ್ಗಸೂಚಿ ಉಲ್ಲಂಘನೆ ಮಾಡಿದರೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ಸಹ ನೀಡಲಾಗಿದೆ.

Ganesh Chaturthi 2021: ಗಣೇಶ ಚತುರ್ಥಿ ಪೂಜಾ ವಿಧಾನ, ಶುಭ ಮುಹೂರ್ತ ಹಾಗೂ ಮಹತ್ವGanesh Chaturthi 2021: ಗಣೇಶ ಚತುರ್ಥಿ ಪೂಜಾ ವಿಧಾನ, ಶುಭ ಮುಹೂರ್ತ ಹಾಗೂ ಮಹತ್ವ

ಗಣೇಶ ಚತುರ್ಥಿ ಹಬ್ಬವನ್ನು ಸರಳ ರೀತಿಯಲ್ಲಿ ಭಕ್ತಿ ಪೂರ್ವಕವಾಗಿ ದೇವಾಲಯದೊಳಗೆ ಮತ್ತು ತಮ್ಮ-ತಮ್ಮ ಮನೆಗಳಲ್ಲಿ ಅಥವ ಸರ್ಕಾರಿ/ ಖಾಸಗಿ ಸಾರ್ವಜನಿಕ ಬಯಲು ಪ್ರದೇಶಗಳಲ್ಲಿ ಕನಿಷ್ಠ ಸಂಖ್ಯೆಯೊಂದಿಗೆ ಆಚರಿಸಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ. ಗಣೇಶ ಉತ್ಸವ ಆಚರಣೆಯ ಸ್ಥಳಗಳಲ್ಲಿ ಸ್ಥಳೀಯ ಮಟ್ಟದಲ್ಲಿ ಆಯೋಜಕರು ಕೋವಿಡ್ ಲಸಿಕೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಬೇಕು. ಸಾಮಾಜಿಕ ಅಂತರ, ಮಾಸ್ಕ್ ಧರಿಸಬೇಕು ಎಂದು ತಿಳಿಸಲಾಗಿದೆ.

ಲೋಹಗಳಿಂದ ನಿರ್ಮಿತ ಗಣೇಶ ಮೂರ್ತಿಗಳ ಪ್ರದರ್ಶನ ಮತ್ತು ಮಾರಾಟಲೋಹಗಳಿಂದ ನಿರ್ಮಿತ ಗಣೇಶ ಮೂರ್ತಿಗಳ ಪ್ರದರ್ಶನ ಮತ್ತು ಮಾರಾಟ

ಸಾರ್ವಜನಿಕ ಗಣೇಶೋತ್ಸವ ಆಚರಣೆ ಸಂದರ್ಭದಲ್ಲಿ ಗಣೇಶ ಮೂರ್ತಿಯನ್ನು 4 ಅಡಿ ಎತ್ತರ ಮೀರದಂತೆ ಹಾಗೂ ಮನೆಯೊಳಗೆ 2 ಅಡಿ ಮೀರದಂತೆ ಪ್ರತಿಷ್ಠಾಪಿಸಬೇಕು. ಇಂತಹ ಸ್ಥಳಗಳಲ್ಲಿ 20 ಜನಕ್ಕೆ ಸೀಮಿತವಾದ ಆವರಣವನ್ನು ನಿರ್ಮಿಸುವುದು. ಒಮ್ಮೆಲೆ 20ಕ್ಕಿಂತ ಹೆಚ್ಚು ಜನರು ಸೇರದಂತೆ ಭಕ್ತರಿಗೆ ಅವಕಾಶ ಮಾಡಿಕೊಡುವುದು.

Breaking; ಸಾರ್ವಜನಿಕ ಗಣೇಶೋತ್ಸವಕ್ಕೆ ಒಪ್ಪಿಗೆ, ಷರತ್ತು ಅನ್ವಯBreaking; ಸಾರ್ವಜನಿಕ ಗಣೇಶೋತ್ಸವಕ್ಕೆ ಒಪ್ಪಿಗೆ, ಷರತ್ತು ಅನ್ವಯ

ಸಾರ್ವಜನಿಕ ಗಣೇಶೋತ್ಸವ ಆಚರಣೆಯ ಆಯೋಜಕರು ಕೋವಿಡ್ 19 ನೆಗೆಟಿವ್ ರಿಪೋರ್ಟ್ ಮತ್ತು ಲಸಿಕೆ ಪಡೆದಿರುವ ಬಗ್ಗೆ ಪ್ರಮಾಣ ಪತ್ರವನ್ನು ಹೊಂದಿರುವುದು ಕಡ್ಡಾಯ ಎಂದು ಮಾರ್ಗಸೂಚಿಯಲ್ಲಿ ಸರ್ಕಾರ ಸ್ಪಷ್ಟಪಡಿಸಿದೆ.

ವಾರ್ಡ್‌ಗೆ ಒಂದೇ ಗಣೇಶ

ವಾರ್ಡ್‌ಗೆ ಒಂದೇ ಗಣೇಶ

ಪಾರಂಪರಿಕ ಗಣೇಶೋತ್ಸವಕ್ಕಾಗಿ ಗಣೇಶೋತ್ಸವ ಸಮಿತಿಗಳು/ ಮಂಡಳಿಗಳು ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲು ಮುನಿಸಿಪಲ್ ಕಾರ್ಪೊರೇಷನ್/ ಸ್ಥಳೀಯ ಆಡಳಿತದಿಂದ ಪೂರ್ವಾನುಮತಿಯನ್ನು ಪಡೆಯತಕ್ಕದ್ದು. ಒಂದು ನಗರ ಪ್ರದೇಶಗಳಲ್ಲಿ ವಾರ್ಡ್‌ಗೆ ಒಂದರಂತೆ ಸಾರ್ವಜನಿಕ ಗಣೇಶೋತ್ಸವ ಮಾತ್ರ ಆಚರಿಸಲು ಪ್ರೋತ್ಸಾಹಿಸುವುದು. ಗಣೇಶ ಆಚರಣೆಯನ್ನು ಗರಿಷ್ಠ 5 ದಿನಗಳಿಗಿಂತ ಹೆಚ್ಚಿನ ದಿನ ಆಚರಿಸುವಂತಿಲ್ಲ.

ಯಾವುದೇ ಮೆರವಣಿಗೆ ಮಾಡುವಂತಿಲ್ಲ

ಯಾವುದೇ ಮೆರವಣಿಗೆ ಮಾಡುವಂತಿಲ್ಲ

ಸಾರ್ವಜನಿಕ ಗಣೇಶೋತ್ಸವ ಮೂರ್ತಿಗಳ ಪ್ರತಿಷ್ಠಾಪನೆ ಸ್ಥಳದಲ್ಲಿ ಸಾಂಸ್ಕೃತಿಕ/ ಸಂಗೀತ/ ನೃತ್ಯ ಮುಖ್ಯವಾಗಿ ಡಿ. ಜೆ. ಯ ಮೂಲಕ ಹಾಗೂ ಇನ್ನಿತರ ಯಾವುದೇ ಮನೋರಂಜನಾ ಕಾರ್ಯಕ್ರಮ ಆಯೋಜನೆ ಮಾಡುವಂತಿಲ್ಲ. ಯಾವುದೇ ಮೆರವಣಿಗೆಯನ್ನು ಮಾಡತಕ್ಕದ್ದಲ್ಲ.

ಸ್ಯಾನಿಟೈಸ್, ಥರ್ಮಲ್ ಸ್ಕ್ಯಾನಿಂಗ್ ಮಾಡುವುದು

ಸ್ಯಾನಿಟೈಸ್, ಥರ್ಮಲ್ ಸ್ಕ್ಯಾನಿಂಗ್ ಮಾಡುವುದು

ಗಣೇಶ ಚತುರ್ಥಿ ಆಚರಿಸುವ ದೇವಾಲಯ/ ಸಾರ್ವಜನಿಕ ಸ್ಥಳಗಳಲ್ಲಿ ದಿನನಿತ್ಯ ಸ್ಯಾನಿಟೈಸೇಷನ್ ಮಾಡುವುದು ಹಾಗೂ ಸಾರ್ವಜನಿಕ ದರ್ಶನಕ್ಕಾಗಿ ಆಗಮಿಸುವ ಭಕ್ತಾದಿಗಳಿಗೆ ಸ್ಯಾನಿಟೈಸರ್ ಹಾಗೂ ಥರ್ಮಲ್ ಸ್ಕ್ಯಾನಿಂಗ್‌ಗೆ ವ್ಯವಸ್ಥೆ ಮಾಡುವುದು.

ಭಕ್ತಾದಿಗಳು ಮತ್ತು ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸುವುದು.

Recommended Video

Virat Kohli ಬ್ಯಾಟ್‌ನಿಂದ ಶತಕ ನೋಡಲು ಕಾದು ಕುಳಿತ ಅಭಿಮಾನಿಗಳು | Oneindia Kannada
ಕಾನೂನು ಸುವ್ಯವಸ್ಥೆಗೆ ಧಕ್ಕೆ ಬರಬಾರದು

ಕಾನೂನು ಸುವ್ಯವಸ್ಥೆಗೆ ಧಕ್ಕೆ ಬರಬಾರದು

ಹಬ್ಬ-ಹರಿದಿನಗಳು ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಮತ್ತು ಸಾಮರಸ್ಯಗಳು ಉಂಟಾಗಲು ಪೂರಕವಾಗಿರುವುದರಿಂದ ಗಣೇಶೋತ್ಸವ ಹಬ್ಬವನ್ನು ಅದೇ ರೀತಿಯಿಂದ ಆಚರಿಸುವ ಮೂಲಕ ಸಮಾಜದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಯಾವುದೇ ಭಂಗ ಬಾರದಂತೆ ಕಾಪಾಡುವುದು.

ರಾಷ್ಟ್ರೀಯ ನಿರ್ದೇಶನಗಳನ್ನು ಹಾಗೂ ರಾಜ್ಯ ಸರ್ಕಾರದ ಆದೇಶ/ ಮಾರ್ಗಸೂಚಿಗಳನ್ನು ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005 ಹಾಗೂ ಭಾರತೀಯ ದಂಡ ಸಂಹಿತೆ ಸೆಕ್ಷನ್ 188ರ ಅಡಿಯಲ್ಲಿ ಶಿಸ್ತಿನಿ/ ಕಾನೂನು ಕ್ರಮ ಮತ್ತು ಅನ್ವಯವಾಗಬಹುದಾದ ಇತರೆ ಕಾನೂನು ಉಪಬಂಧಗಳ ಮೇರೆಗೆ ಕ್ರಮ ಜರುಗಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ.

English summary
Karnataka government allowed to public celebrations of Ganesha Chaturthi. Here are the guidelines.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X