ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

6 ಹಾಗೂ 8ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ?

|
Google Oneindia Kannada News

Recommended Video

ವಿದ್ಯಾರ್ಥಿಗಳು ಹಾಗೂ ಪಾಲಕರಲ್ಲಿ ಆತಂಕ ಮೂಡಿಸಿದ ಸಚಿವ ಸುರೇಶ ಕುಮಾರ್ | Oneindia Kannada

ಬೆಂಗಳೂರು, ಸೆಪ್ಟೆಂಬರ್ 26: ಈಗಾಗಲೇ ಶಿಕ್ಷಕರ ಕಡ್ಡಾಯ ವರ್ಗಾವಣೆ ರದ್ದತಿ ಕುರಿತು ಮಾತನಾಡಿ ಶಿಕ್ಷಕರ ಕೆಂಗಣ್ಣಿಗೆ ಗುರಿಯಾಗಿದ್ದ ಸಚಿವ ಸುರೇಶ್ ಕುಮಾರ್ ಈಗ ಮತ್ತೊಂದು ಹೇಳಿಕೆ ವಿದ್ಯಾರ್ಥಿಗಳು ಹಾಗೂ ಪಾಲಕರಲ್ಲಿ ಆತಂಕ ಮೂಡಿಸಿದೆ.

ಆರು ಮತ್ತು ಎಂಟನೇ ತರಗತಿಗೆ ಪಬ್ಲಿಕ್ ಪರೀಕ್ಷೆ ಹಾಗೂ ಸರ್ಕಾರಿ ಶಾಲೆಗಳಿಗೂ ಸೇರಿ ಎಲ್ಲಾ ಶಾಲೆಗಳಲ್ಲೂ ಮಕ್ಕಳಿಗೆ ವಿಮಾ ಸೌಲಭ್ಯ ಕಲ್ಪಿಸಲು ಚಿಂತನೆ ನಡೆಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಕಡ್ಡಾಯ ವರ್ಗಾವಣೆಗೆ ತಡೆ: ಶಿಕ್ಷಣ ಸಚಿವರ ಮನೆ ಮುಂದೆ ಶಿಕ್ಷಕರ ಪ್ರತಿಭಟನೆಕಡ್ಡಾಯ ವರ್ಗಾವಣೆಗೆ ತಡೆ: ಶಿಕ್ಷಣ ಸಚಿವರ ಮನೆ ಮುಂದೆ ಶಿಕ್ಷಕರ ಪ್ರತಿಭಟನೆ

ಕೆಲವು ವರ್ಷಗಳಿಂದ ಇದ್ದ ಕಾನೂನನ್ನು ಮತ್ತೆ ಜಾರಿಗೆ ತರಲು ಮುಂದಾಗಿದ್ದಾರೆ, ಇದೀಗ ಪೋಷಕರಿಗೆ ತಲೆನೋವು, ಆತಂಕ ಹೆಚ್ಚಾಗಿದೆ. 10ನೇ ತರಗತಿಗೆ ಟ್ಯೂಷನ್‌ಗೆ ಕಳುಹಿಸಿದರೆ ಸಾಕಿತ್ತು ಈಗ ಆರನೇ ತರಗತಿಗೂ ಟ್ಯೂಷನ್‌ಗೆ ಕಳುಹಿಸಬೇಕೇ ಎನ್ನುವ ಗೊಂದಲ ಉಂಟಾಗಿದೆ.

ವಿದ್ಯಾರ್ಥಿಗಳಲ್ಲಿ ಪರೀಕ್ಷೆ ಭಯ ಹೋಗಲಾಡಿಸಿ ಪರೀಕ್ಷೆ ಬಗ್ಗೆ ಆತ್ಮವಿಶ್ವಾಸ ಮೂಡಿಸುವ ಸಲುವಾಗಿ ಆರು ಮತ್ತು 8ನೇ ತರಗತಿಗೆ ಪಬ್ಲಿಕ್ ಪರೀಕ್ಷೆ ನಡೆಸಲು ಚಿಂತನೆ ನಡೆಸಲಾಗಿದೆ ಎಂದರು.

 ಪಬ್ಲಿಕ್ ಪರೀಕ್ಷೆ ಭಯ ಹೋಗಲಾಡಿಸಲು ಈ ನಿರ್ಧಾರ

ಪಬ್ಲಿಕ್ ಪರೀಕ್ಷೆ ಭಯ ಹೋಗಲಾಡಿಸಲು ಈ ನಿರ್ಧಾರ

ವಿದ್ಯಾರ್ಥಿಗಳು ನೇರವಾಗಿ ಎಸ್ಸೆಸ್ಸೆಲ್ಸಿಯಲ್ಲಿ ಪಬ್ಲಿಕ್ ಪರೀಕ್ಷೆ ಎದುರಿಸಬೇಕಾಗುತ್ತದೆ. ಭಯ ಹೋಗಲಾಡಿಸಲು ಆರು ಹಾಗೂ ಎಂಟನೇ ತರಗತಿಯಿಂದಲೇ ಪಬ್ಲಿಕ್ ಪರೀಕ್ಷೆ ನಡೆಸುವಂತೆ ವಿಧಾನಪರಿಷತ್ ಸದಸ್ಯರು ಒತ್ತಾಯಿಸಿದ್ದಾರೆ.

 ವಿಮೆ ಕುರಿತು ಸಿಎಂ ಜೊತೆ ಚರ್ಚೆ

ವಿಮೆ ಕುರಿತು ಸಿಎಂ ಜೊತೆ ಚರ್ಚೆ

ರಾಜ್ಯದಲ್ಲಿ ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಾಲೆ ಯಾವುದೇ ಇರಲಿ ಎಲ್ಲಾ ಶಾಲಾಮಕ್ಕಳಿಗೂ ವಿಮಾ ಸೌಲಭ್ಯ ನೀಡುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸುತ್ತೇನೆ ಎಂದು ತಿಳಿಸಿದರು.

 ಪಠ್ಯಪುಸ್ತಕ, ಸಮವಸ್ತ್ರ ಗೊಂದಲ ನಿವಾರಿಸುತ್ತೇವೆ

ಪಠ್ಯಪುಸ್ತಕ, ಸಮವಸ್ತ್ರ ಗೊಂದಲ ನಿವಾರಿಸುತ್ತೇವೆ

ಸರ್ಕಾರಿ ಶಾಲೆಯಲ್ಲಿ ಸಮವಸ್ತ್ರ ಮತ್ತು ಪಠ್ಯಪುಸ್ತಕ ಕುರಿತಂತೆ ಆಗುತ್ತಿರುವ ಗೊಂದಲ ಪರಿಹಾರಕ್ಕೂ ಶೀಘ್ರ ಕ್ರಮ ಕೈಗೊಳ್ಳಲಾಗುತ್ತದೆ. ಶಾಲೆಗಳು ಪ್ರಾರಂಭವಾಗಿ ಮೂರು ತಿಂಗಳಾದರೂ ಶಾಲೆಯಲ್ಲಿ ಸಮವಸ್ತ್ರ ವಿತರಣೆಯಾಗಿಲ್ಲ. ಮುಂದಿನ ವರ್ಷದಿಂದಲೇ ಶಾಲೆ ಆರಂಭವಾದ ದಿನವೇ ಶಾಲಾ ಮಕ್ಕಳಿಗೆ ಸಮವಸ್ತ್ರ ಮತ್ತು ಪಠ್ಯಪುಸ್ತಕ ಒದಗಿಸುವಂತೆ ಸೂಚನೆ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

 ಕಡ್ಡಾಯ ವರ್ಗಾವಣೆ ತಡೆಗೆ ಆಕ್ರೋಶ

ಕಡ್ಡಾಯ ವರ್ಗಾವಣೆ ತಡೆಗೆ ಆಕ್ರೋಶ

ಕಡ್ಡಾಯ ವರ್ಗಾವಣೆ ಪ್ರಕ್ರಿಯೆಯನ್ನು ತಡೆ ಹಿಡಿದಿರುವ ಸರ್ಕಾರದ ಕ್ರಮವನ್ನು ಖಂಡಿಸಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮನೆಮುಂದೆ ಶಿಕ್ಷಕರು ಪ್ರತಿಭಟನೆ ನಡೆಸಿದ್ದರು.

ಬಸವೇಶ್ವರದಲ್ಲಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರ ಮನೆ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ರಾಜ್ಯದ ಹಲವು ಜಿಲ್ಲೆಗಳಿಂದ ನೂರಾರು ಸಂಖ್ಯೆಯಲ್ಲಿ ಶಿಕ್ಷಕರು ಬಂದಿದ್ದಾರೆ. ಸಚಿವ ಸುರೇಶ್ ಕುಮಾರ್ ಶಿಕ್ಷಕರ ಅಹವಾಲನ್ನು ಸ್ವೀಕರಿಸಿದ್ದಾರೆ.

English summary
Education Minister Suresh Kumar said that Government thinking that will conduct public exam for 6 and 8 class students.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X