ರಾಜ್ಯದ 5,6,7 ನೇ ತರಗತಿ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಗುಡ್ ನ್ಯೂಸ್: ರಾಜ್ಯ ಸರ್ಕಾರದ ಮಹತ್ವ ಆದೇಶ ಇಲ್ಲಿದೆ
ಬೆಂಗಳೂರು, ಮೇ 22: ಸರ್ವೋಚ್ಚ ನ್ಯಾಯಾಲಯವು 2024ರ ಏಪ್ರಿಲ್ 08ರಂದು ಪಬ್ಲಿಕ್ ಪರೀಕ್ಷೆಗೆ ತಡೆಯಾಜ್ಞೆ ನೀಡಿತ್ತು. ಈಗ ಈ ಸಂಬಂಧ ತೀರ್ಪು ಪ್ರಕಟವಾಗುವ ಮೂಲಕ ಪಬ್ಲಿಕ್ ಪರೀಕ್ಷೆಯ ಬಗ್ಗೆ ನಿರ್ಧಾರವಾಗಬೇಕಿದೆ.ರಾಜ್ಯ ಸರ್ಕಾರದ ನಿರ್ಧಾರದಿಂದಾಗಿ ಭಾರಿ ವಿವಾದಕ್ಕೆ ಕಾರಣವಾಗಿರುವ 5,8 ಮತ್ತು 9ನೇ ತರಗತಿ ಪಬ್ಲಿಕ್ ಪರೀಕ್ಷೆ ನಡೆದಿದ್ದರೂ, ಸುಪ್ರೀಂ ಕೋರ್ಟ್‌ನಲ್ಲಿ ಇದರ ಭವಿಷ್ಯ ಇನ್ನೂ ನಿರ್ಧಾರ ಇನ್ನೂ ಆಗಿಲ್ಲ. ಇದು ಶಾಲಾ ಆಡಳಿತ ಮಂಡಳಿ, ವಿದ್ಯಾರ್ಥಿಗಳು ಹಾಗೂ ಪೋಷಕರನ್ನು ಇಕ್ಕಟ್ಟಿಗೆ ಸಿಲುಕಿಸಿದೆ.
2023-24ನೇ ಸಾಲಿನ 5, 8 ಮತ್ತು 9ನೇ ತರಗತಿ SA-2 ಮೌಲ್ಯಾಂಕನ ಕಾರ್ಯ ಮುಗಿದಿದ್ದು, ರಾಜ್ಯದ ಎಲ್ಲ ಶಾಲೆಗಳಲ್ಲಿ ದಿನಾಂಕ: 08-04-2024ರಂದು ಫಲಿತಾಂಶವನ್ನು ಪ್ರಕಟಿಸಲು ತಿಳಿಸಲಾಗಿತ್ತು. ಬಳಿಕ ಫಲಿತಾಂಶವನ್ನು ಪ್ರಕಟಿಸಲು ಸರ್ವೋಚ್ಚ ನ್ಯಾಯಾಲಯವು ತಡೆಯಾಜ್ಞೆಯನ್ನು ನೀಡಿದ್ದು, ಅಂತಿಮ ತೀರ್ಪು ಬಾಕಿ ಇದೆ. ಹೀಗಾಗಿ ಮುಂದಿನ ಪ್ರವೇಶಾತಿಯ ದೃಷ್ಟಿಯಿಂದ ಮಹತ್ವದ ನಿರ್ಧಾರಕ್ಕೆ ಬರಲಾಗಿದೆ.

5,8 ಮತ್ತು 9ನೇ ತರಗತಿ ವಿದ್ಯಾರ್ಥಿಗಳನ್ನು ಮುಂದಿನ ತರಗತಿಗಳಿಗೆ ದಾಖಲಿಸುವ ಗೊಂದಲದಲ್ಲಿ ಶಿಕ್ಷಣ ಇಲಾಖೆ ಇದೆ. ಈಗ ಈ ಸಂಬಂಧ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದ್ದು, ಈಗಾಗಲೇ ಶಾಲೆಗಳಲ್ಲಿ ಮಾಸಿಕವಾಗಿ, ಅರ್ಧ ವಾರ್ಷಿಕವಾಗಿ ನಡೆಸಲಾಗಿರುವ ಪರೀಕ್ಷೆಗಳಲ್ಲಿ ಪಡೆದ ಅಂಕಗಳನ್ನು ಅಗ್ರಿಗೇಟ್ ಮಾಡಿ ಮುಂದಿನ ತರಗತಿಗಳಿಗೆ ದಾಖಲಿಸಲು ಮುಂದಾಗಲಾಗಿದೆ.
ಶಿಕ್ಷಣ ಇಲಾಖೆ ಸುತ್ತೋಲೆಯಲ್ಲಿ ಏನಿದೆ?
ರಾಜ್ಯದ 5,8,9 ನೇ ತರಗತಿ ವಿದ್ಯಾರ್ಥಿಗಳಿಗೆ ಮೌಲ್ಯಾಂಕ ದಾಖಲಿಸಿ ಮುಂದಿನ ತರಗತಿಗಳಿಗೆ ದಾಖಲಿಸುವಂತೆ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. 2023-24ನೇ ಸಾಲಿನ 5, 8 ಮತ್ತು 9ನೇ ತರಗತಿ SA-2 ಮೌಲ್ಯಾಂಕನ ಕಾರ್ಯ ಮುಗಿದಿದ್ದು, ಉಲ್ಲೇಖ-2ರಂತೆ ರಾಜ್ಯದ ಎಲ್ಲಾ ಶಾಲೆಗಳಲ್ಲಿ ದಿನಾಂಕ: 08-04-2024ರಂದು ಫಲಿತಾಂಶವನ್ನು ಪ್ರಕಟಿಸಲು ತಿಳಿಸಲಾಗಿರುತ್ತದೆ. ತದನಂತರದಲ್ಲಿ ಫಲಿತಾಂಶವನ್ನು ಪ್ರಕಟಿಸಲು ಘನ ಸರ್ವೋಚ್ಚ ನ್ಯಾಯಾಲಯವು ತಡೆಯಾಜ್ಞೆಯನ್ನು ನೀಡಿದ್ದು ಅಂತಿಮ ತೀರ್ಪು ಬಾಕಿ ಇರುತ್ತದೆ.
ಪ್ರಸ್ತುತ 2023-24ನೇ ಸಾಲಿನ ಶೈಕ್ಷಣಿಕ ವರ್ಷ ಅಂತ್ಯಗೊಳ್ಳುತ್ತಿದ್ದು, ದಿನಾಂಕ: 29-05-2024 ರಿಂದ 2024- 25ನೇ ಸಾಲಿನ ಶೈಕ್ಷಣಿಕ ವರ್ಷ ಪ್ರಾರಂಭವಾಗಲಿದೆ. 2023-24ನೇ ಸಾಲಿನಲ್ಲಿ ವ್ಯಾಸಂಗ ಮಾಡಿದ 5, 8 ಮತ್ತು 9ನೇ ತರಗತಿಯ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟಿಸದೇ ಇರುವುದರಿಂದ ಅವರನ್ನು ಮುಂದಿನ ಶೈಕ್ಷಣಿಕ ವರ್ಷಕ್ಕೆ/ ತರಗತಿಗೆ ಶಾಲಾ ಪ್ರವೇಶ/ದಾಖಲಾತಿ ಮಾಡಲು, ಪ್ರವೇಶ ಶುಲ್ಕ ಪಾವತಿಸಲು ಹಾಗೂ ಬೇರೆ ಸ್ಥಳಗಳಿಗೆ ವರ್ಗಾವಣೆ ಹೊಂದಿರುವ ಪುಯುಕ್ತ ಮಕ್ಕಳ ವರ್ಗಾವಣೆ ಪ್ರಮಾಣಪತ್ರ, ಪುಗತಿ ಪತ್ರ ಮತ್ತು ವ್ಯಾಸಂಗ ಪ್ರಮಾಣಪತ್ರಗಳನ್ನು ವಿತರಿಸಲು ಸಾಧ್ಯವಾಗದ ಹಿನ್ನಲೆಯಲ್ಲಿ ಉಲ್ಲೇಖ-3ರನ್ನಯ ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಆಗತ್ಯ ಕ್ರಮ ವಹಿಸುವಂತೆ ಕೋರಿರುತ್ತಾರೆ. ಅದರಂತೆ ಮಕ್ಕಳ ಶೈಕ್ಷಣಿಕ ಭವಿಷ್ಯ ಸುಗಮಗೊಳಿಸಲು ಈ ಕೆಳಕಂಡಂತೆ ಕ್ರಮವಹಿಸುವುದು
ಸರ್ವೋಚ್ಚ ನ್ಯಾಯಾಲಯದಲ್ಲಿ ದಾಖಲಾಗಿರುವ ಪ್ರಕರಣ ಸಂಖ್ಯೆ:8142/2024, 8136/2024 ಮತ್ತು 8127/2024ರ ಮಧ್ಯಂತರ ತೀರ್ಪಿನಂತೆ 2023-24ನೇ ಸಾಲಿನ 5, 8 ಮತ್ತು 9ನೇ ತರಗತಿ SA-2 ಮೌಲ್ಯಾಂಕನವನ್ನು ತಡೆಹಿಡಿದಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಈಗಾಗಲೇ ಶಾಲೆಗಳಲ್ಲಿ ನಡೆದಿರುವ FA- 1, FA-2, FA-3, FA-4 SA-1 ತರಗತಿಗೆ ಮುಂದುವರೆಸಲು ಅವಕಾಶ ಕಲ್ಪಿಸುವುದು ಎಂದು ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.












Click it and Unblock the Notifications