ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

7ನೇ ತರಗತಿಗೆ ಪಬ್ಲಿಕ್ ಪರೀಕ್ಷೆ: ಸರ್ಕಾರ ಏನು ಹೇಳುತ್ತೆ ಒಮ್ಮೆ ಕೇಳಿ

|
Google Oneindia Kannada News

ಬೆಂಗಳೂರು, ಅಕ್ಟೋಬರ್ 5: ಏಳನೇ ತರಗತಿಗೆ ಪಬ್ಲಿಕ್ ಪರೀಕ್ಷೆ ನಡೆಸುವ ಕುರಿತು ಸರ್ಕಾರ ಚಿಂತನೆ ನಡೆಸುತ್ತಿದೆ. ಒಂದೊಮ್ಮೆ ಪಬ್ಲಿಕ್ ಪರೀಕ್ಷೆ ನಡೆಸಿದರೆ ಯಾರನ್ನೂ ಫೇಲ್ ಮಾಡುವುದಿಲ್ಲ ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ಏಳನೇ ತರಗತಿಗೆ ಈ ವರ್ಷ ಅಂದರೆ 2019-20 ನೇ ಶೈಕ್ಷಣಿಕ ಸಾಲಿನಲ್ಲಿ ಪಬ್ಲಿಕ್ ಪರೀಕ್ಷೆ ನಡೆಸಲಾಗುವುದು. ಆದರೆ ಈ ವರ್ಷ ಯಾವ ವಿದ್ಯಾರ್ಥಿಯನ್ನೂ ಅನುತ್ತೀರ್ಣಗೊಳಿಸುವುದಿಲ್ಲ ಎಂಬುದಾಗಿ ತಿಳಿಸಿದ್ದಾರೆ .

50 ವರ್ಷ ದಾಟಿದ ಶಿಕ್ಷಕಿಯರಿಗೆ ಸರ್ಕಾರದಿಂದ ಸಿಹಿಸುದ್ದಿ50 ವರ್ಷ ದಾಟಿದ ಶಿಕ್ಷಕಿಯರಿಗೆ ಸರ್ಕಾರದಿಂದ ಸಿಹಿಸುದ್ದಿ

ಆದರೆ ಮುಂದಿನ ಶೈಕ್ಷಣಿಕ ಸಾಲಿನಿಂದ ವಿದ್ಯಾರ್ಥಿ ನಿಗದಿತ ಅಂಕ ಗಳಿಸಿದರೆ ಮಾತ್ರ ಮುಂದಿನ ತರಗತಿಗೆ ತೇರ್ಗಡೆ ಮಾಡಲಾಡುಗುವುದು ಎಂದು ತಿಳಿಸಿದ್ದಾರೆ.

ಪೂರಕ ಪರೀಕ್ಷೆ ವ್ಯವಸ್ಥೆ

ಪೂರಕ ಪರೀಕ್ಷೆ ವ್ಯವಸ್ಥೆ

ಏಳನೇ ತರಗತಿಗೆ ಪಬ್ಲಿಕ್ ಪರೀಕ್ಷೆ ಆರಂಭಿಸಿದರೂ ಈ ವರ್ಷದ ಮಟ್ಟಿಗೆ ಯಾವುದೇ ವಿದ್ಯಾರ್ಥಿಗಳನ್ನು ಅನುತ್ತೀರ್ಣಗೊಳಿಸುವ ಪ್ರಕ್ರಿಯೆ ನಡೆಯುವುದಿಲ್ಲ. ಅನುತ್ತೀರ್ಣ ಪ್ರಕ್ರಿಯೆ 2020-21ನೇ ಸಾಲಿನಿಂದ ಆರಂಭವಾಗಲಿದ್ದು, ಆ ವರ್ಷದಿಂದ ಮಾರ್ಚ್‌ನಲ್ಲಿ ನಡೆಯುವ ಮುಖ್ಯ ಪರೀಕ್ಷೆಯಲ್ಲಿ ಅನುತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ನಂತರ ಜೂನ್ ನಲ್ಲಿ ಪೂರಕ ಪರೀಕ್ಷೆಯನ್ನೂ ನಡೆಸಲಾಗುವುದು ಎಂದು ವಿವರಿಸಿದ್ದಾರೆ.

8-9ನೇ ತರಗತಿಗೆ ಈಗಿರುವ ಪ್ರಕ್ರಿಯೆಯೇ ಮುಂದುವರೆಯಲಿದೆ

8-9ನೇ ತರಗತಿಗೆ ಈಗಿರುವ ಪ್ರಕ್ರಿಯೆಯೇ ಮುಂದುವರೆಯಲಿದೆ

ಎಂಟು ಮತ್ತು ಒಂಬತ್ತನೇ ತರಗತಿಯಲ್ಲೂ ಈಗಿರುವ ಪರೀಕ್ಷಾ ವ್ಯವಸ್ಥೆ ಮುಂದುವರೆಯಲಿದೆ ಎಂದು ತಿಳಿಸಿದ್ದಾರೆ. ಕಾರಣಾಂತರಗಳಿಂದ2004-05ರ ನಂತರ ಏಳನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆಯನ್ನು ನಿಲ್ಲಿಸಲಾಗಿತ್ತು. ಶೈಕ್ಷಣಿಕ ಗುಣಮಟ್ಟ ಉತ್ತಮಪಡಿಸುವ ಸೃಷ್ಟಿಯಿಂದ 2019-20ನೇ ಶೈಕ್ಷಣಿಕ ಸಾಲಿನಿಂದ ಮತ್ತೆ ಏಳನೇ ತರಗತಿ ಹಂತದಲ್ಲಿ ಪಬ್ಲಿಕ್ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ.

ಮಕ್ಕಳ ಸುರಕ್ಷತೆಗೆ ಅಧಿಕಾರಿಗಳ ತಂಡ ರಚನೆ

ಮಕ್ಕಳ ಸುರಕ್ಷತೆಗೆ ಅಧಿಕಾರಿಗಳ ತಂಡ ರಚನೆ

ಶಾಲೆಗಳಲ್ಲಿ ಮಕ್ಕಳ ಸುರಕ್ಷತೆ ಸೃಷ್ಟಿಯಿಂದ ಡಿಸಿಪಿ ಮಟ್ಟದ ಪೊಲೀಸ್ ಅಧಿಕಾರಿಗಳು , ಸ್ಥಳೀಯ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಸಾರಿಗೆ ಇಲಾಖೆ ಅಧಿಕಾರಿಗಳನ್ನೊಳಗೊಂಡ ತಂಡ ರಚಿಸಲು ತೀರ್ಮಾನಿಸಿರುವುದಾಗಿ ತಿಳಿಸಿದ್ದಾರೆ.

ಮಕ್ಕಳಿಗೆ ಓದಿನಲ್ಲಿ ಗಂಭೀರತೆ

ಮಕ್ಕಳಿಗೆ ಓದಿನಲ್ಲಿ ಗಂಭೀರತೆ

ಮಕ್ಕಳಿಗೆ ಎಸ್‌ಎಸ್‌ಎಲ್‌ಸಿವರೆಗೆ ಬರುವವರೆಗೂ ಪಬ್ಲಿಕ್ ಪರೀಕ್ಷೆಯ ಕಲ್ಪನೆಯೂ ಇರುವುದಿಲ್ಲ. ಅಲ್ಲದೆ 10ನೇ ತರಗತಿಗೆ ಬಂದರೂ ಕೆಲ ಮಕ್ಕಳಿಗೆ ಸರಿಯಾಗಿ ಓದಲು, ಬರೆಯಲು ಬರುವುದಿಲ್ಲ ಎಂಬ ದೂರುಗಳು ಕೇಳಿಬಂದಿವೆ.

English summary
The government is contemplating a public exam for the seventh grade. Once a public exam is done, no one fails
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X