ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಾರ್ಮಿಕರ ಮುಷ್ಕರ; ನಾಳೆ ರಾಜ್ಯಾದ್ಯಂತ ಸರ್ಕಾರಿ ಬಸ್ ಸಂಚಾರ ಬಂದ್?

|
Google Oneindia Kannada News

ಬೆಂಗಳೂರು, ಫೆಬ್ರವರಿ 20: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಒಕ್ಕೂಟ ಕರೆ ಕೊಟ್ಟಿರುವ ಗುರುವಾರದ ಮುಷ್ಕರಕ್ಕೆ ಬಿಎಂಟಿಸಿ ಎನ್‌ಡಬ್ಲೂಕೆಆರ್‌ಟಿಸಿ (ಹುಬ್ಬಳ್ಳಿ) ಹಾಗೂ ಎನ್‌ಇಕೆಆರ್‌ಟಿಸಿ (ಕಲಬುರಗಿ) ಕಾರ್ಮಿಕ ಒಕ್ಕೂಟಗಳೂ ಕೂಡ ಬೆಂಬಲ ವ್ಯಕ್ತಪಡಿಸಿದ್ದು, ಫೆ 20 ರಂದು ರಾಜ್ಯಾದ್ಯಂತ ಸಾರಿಗೆ ವ್ಯತ್ಯಯ ಆಗಬಹುದೆಂದು ನಿರೀಕ್ಷಿಸಲಾಗಿದೆ.

ಫೆಬ್ರವರಿ 20ರಂದು ಮುಷ್ಕರ ಹಮ್ಮಿಕೊಳ್ಳಲು ಬಿಎಂಟಿಸಿ ಹಾಗೂ ಕೆಎಸ್‌ಆರ್‌ಟಿಸಿ ಕಾರ್ಮಿಕ ಸಂಘಟನೆಗಳು ಮಾತ್ರ ನಿರ್ಧಾರ ಮಾಡಿದ್ದವು. ಆದರೆ ಈಗ ರಾಜ್ಯದ ಎಲ್ಲ ನಾಲ್ಕೂ ನಿಗಮಗಳು ನಿರ್ಧರಿಸಿದ್ದು, ಕೆಲಸಕ್ಕೆ ರಜೆ ಹಾಕಿ ಪ್ರತಿಭಟನೆ ಮಾಡಲು ನಿರ್ಧರಿಸಿದ್ದಾರೆ. ಇತ್ತೀಚೆಗಷ್ಟೇ ನೌಕರರು ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಿದ್ದರು. ಆದರೆ ಕೆಲಸಕ್ಕೆ ರಜೆ ಹಾಕದೆ ಪಾಳಿಯಂತೆ ಪ್ರತಿಭಟನೆ ನಡೆಸಿದ್ದರು. ಆದರೆ ಯಾವುದೇ ಪ್ರಯೋಜನವಾಗಿಲ್ಲ.

ಸಹಕಾರ ಸಾರಿಗೆ ಮುಷ್ಕರ; ಕೆಎಸ್ಆರ್‌ಟಿಸಿಯಿಂದ ಬಸ್ ಸೇವೆಸಹಕಾರ ಸಾರಿಗೆ ಮುಷ್ಕರ; ಕೆಎಸ್ಆರ್‌ಟಿಸಿಯಿಂದ ಬಸ್ ಸೇವೆ

ನಾಲ್ಕೂ ನಿಗಮಗಳ ಕಾರ್ಮಿಕರು ಒಟ್ಟಿಗೆ ಮುಷ್ಕರ ನಡೆಸುತ್ತಿರುವುದರಿಂದ ರಾಜ್ಯದ್ಯಂತ ಸರ್ಕಾರಿ ಸಾರಿಗೆ ಸಂಚಾರದಲ್ಲಿ ವ್ಯತ್ಯಯ ಉಂಟಾಗಬಹುದೆಂದು ಹೇಳಲಾಗಿದೆ.

ಪ್ರಮಖ ಬೇಡಿಕೆಗಳೇನು?

ಪ್ರಮಖ ಬೇಡಿಕೆಗಳೇನು?

ನಾಳೆ ಕರೆ ನೀಡಿರುವ ಮುಷ್ಕರದಲ್ಲಿ ಸಾರಿಗೆ ನಿಗಮಗಳ ಕಾರ್ಮಿಕರು ಹಾಗೂ ಇತರ ಸಿಬ್ಬಂದಿಯನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸುವಂತೆ ಒತ್ತಾಯಿಸಿ ಉಪವಾಸ ಸತ್ಯಾಗ್ರಹ ನಡೆಸಲಿದ್ದಾರೆ. ಕಳೆದ ಐದು ದಶಕಗಳಿಂದ ನಿಗಮಗಳ ಕಾರ್ಮಿಕರು ಕೆಲಸ ಮಾಡುತ್ತಿದ್ದರೂ ಅಲ್ಲಿ ಕೆಲಸ ಮಾಡುವ ಕಾರ್ಮಿಕರ ಪರಿಸ್ಥಿತಿ ಹೀನಾಯವಾಗಿದೆ. ಹಾಗಾಗಿ ಸರ್ಕಾರ ತಮ್ಮನ್ನು ಸಂಪೂರ್ಣ ಸರ್ಕಾರಿ ನೌಕರರನ್ನಾಗಿ ಮಾಡಬೇಕು ಎಂದು ಬೆಂಗಳೂರಿನ ಫ್ರಿಡಂ ಪಾರ್ಕ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸಲಿದ್ದಾರೆ

ಪಾಟೀಲ ಪುಟ್ಟಪ್ಪ ಬೆಂಬಲ

ಪಾಟೀಲ ಪುಟ್ಟಪ್ಪ ಬೆಂಬಲ

ಫೆ 20 ರಂದು ಕರೆ ನೀಡಿರುವ ಈ ಮುಷ್ಕರಕ್ಕೆ ನಾಡೋಜ ಪಾಟೀಲ ಪುಟ್ಟಪ್ಪ ಬೆಂಬಲ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ನಡೆಯುವ ಉಪವಾಸ ಸತ್ಯಾಗ್ರಹಕ್ಕೆ ಬೆಂಬಲ ಸೂಚಿಸಲಿದ್ದಾರೆ ಎಂದು ಕೆಎಸ್‌ಆರ್‌ಟಿಸಿ ಕಾರ್ಮಿಕ ಸಂಘಟನೆ ತಿಳಿಸಿವೆ. ಸಾರಿಗೆ ನಿಗಮಗಳ ಕಾರ್ಮಿಕರನ್ನು ಸರ್ಕಾರಿ ನೌಕರರೆಂದು ಘೋಷಿಸುವವರೆಗೂ ಹೋರಾಟ ನಿಲ್ಲುವುದಿಲ್ಲ ಎಂದು ಕರಾರಸಾ ನಿಗಮಗಳ ನೌಕರರ ಮೂಲಭೂತ ಹಕ್ಕುಗಳ ವಿಚಾರ ವೇದಿಕೆ ಪ್ರಧಾನ ಕಾರ್ಯದರ್ಶಿ ತಿಪ್ಪೇಶ್ವರ ಅಣಜಿ ಒನ್‌ಇಂಡಿಯಾ ಕನ್ನಡಕ್ಕೆ ತಿಳಿಸಿದ್ದಾರೆ

ಸರ್ಕಾರಕ್ಕೆ ಎಚ್ಚರಿಕೆಯ ಸಂದೇಶ

ಸರ್ಕಾರಕ್ಕೆ ಎಚ್ಚರಿಕೆಯ ಸಂದೇಶ

ಕಳೆದ ಸಮ್ಮಿಶ್ರ ಸರ್ಕಾರ ಬಿಎಂಟಿಸಿ ನೌಕಕರರ ಒತ್ತಾಯಕ್ಕೆ ಮಣಿಯದೇ ಇದ್ದ ಕಾರಣ ಮತ್ತೆ ಬಿಎಂಟಿಸಿ ನೌಕರರು ಉಪವಾಸ ಸತ್ಯಾಗ್ರಹ ಮಾಡುವುದರ ಮೂಲಕ ಸರ್ಕಾರದ ಮೇಲೆ ಒತ್ತಡ ಹೇರಲು ತೀರ್ಮಾನಿಸಿದ್ದಾರೆ. ಬಿಎಂಟಿಸಿ ನೌಕರರು ಉಪವಾಸ ಸತ್ಯಾಗ್ರಹ ಮಾಡುವ ಮೂಲಕ ಸರ್ಕಾರಕ್ಕೆ ಎಚ್ಚರಿಕೆಯ ಸಂದೇಶವನ್ನ ನೀಡಲಿದ್ದಾರೆ.

ಸಮ್ಮಿಶ್ರ ಸರ್ಕಾರದಿಂದಲೂ ಕಡೆಗಣನೆ

ಸಮ್ಮಿಶ್ರ ಸರ್ಕಾರದಿಂದಲೂ ಕಡೆಗಣನೆ

ಕಳೆದ ಬಾರಿ ಸಮ್ಮಿಶ್ರ ಸರ್ಕಾರ ಇದ್ದ ಸಂದರ್ಭದಲ್ಲಿ ಪತ್ರ ಚಳವಳಿ ಮಾಡಿ ನಮ್ಮನ್ನ ಸರ್ಕಾರಿ ನೌಕರರನ್ನಾಗಿ ಪರಿಗಣಿಸಬೇಕೆಂದು ಒತ್ತಾಯಿಸಿದ್ದದರು. ಅಂದು ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

English summary
Public Transport Employees Hold Strike On February 20 Across the Karnataka state Government bus Services May Be Disrupted.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X