ದ್ವಿತೀಯ ಪಿಯು: ಯಾವ ಜಾತಿಯ ಎಷ್ಟು ವಿದ್ಯಾರ್ಥಿಗಳು ಪಾಸಾಗಿದ್ದಾರೆ?
ಬೆಂಗಳೂರು, ಏಪ್ರಿಲ್ 15: ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಕಳೆದ ವರ್ಷಕ್ಕಿಂತಲೂ ಈ ಬಾರಿ ಎರಡು ಶೇಕಡಾ ಹೆಚ್ಚಿಗೆ ಫಲಿತಾಂಶ ಬಂದಿದೆ. ಕಳೆದ ಬಾರಿ ರಾಜ್ಯದ ಫಲಿತಾಂಶ 59.56% ಇದ್ದರೆ ಈ ಬಾರಿ 61.73% ಇದೆ.
ಮಾಮೂಲಿನಂತೆ ಈ ಬಾರಿಯೂ ಸಹ ಹೆಣ್ಣುಮಕ್ಕಳು ಫಲಿತಾಂಶದಲ್ಲಿ ಮುಂದಿದ್ದಾರೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆ ಮೊದಲೆರಡು ಸ್ಥಾನಗಳನ್ನು ಹಂಚಿಕೊಂಡಿವೆ.
ಯಾವ ಜಾತಿಯ ವಿದ್ಯಾರ್ಥಿಗಳು ಹೆಚ್ಚು ಮಂದಿ ಪಾಸಾಗಿದ್ದಾರೆ, ಯಾವ ಜಾತಿಯ ವಿದ್ಯಾರ್ಥಿಗಳು ಕಡಿಮೆ ಮಂದಿ ಪಾಸಾಗಿದ್ದಾರೆ ಎಂದು ದ್ವಿತೀಯ ಪಿಯು ಬೋರ್ಡ್ ಲೆಕ್ಕ ನೀಡಿದೆ. ಜಾತಿ ಆಧಾರದಲ್ಲಿ ಶಿಕ್ಷಣವನ್ನು ನೋಡುವುದು ಹೇಯ, ಆದರೆ ಪಿಯು ಮಂಡಳಿಯೇ ಈ ಮಾಹಿತಿಯನ್ನು ಮುದ್ರಿಸಿ ಹಂಚುತ್ತಿರುವಾಗ ಓದುಗರಿಗೆ ಇದರ ಮಾಹಿತಿ ನೀಡುವ ದೃಷ್ಟಿಯಿಂದ ಜಾತಿವಾರು ಅಂಕಿ-ಸಂಖ್ಯೆಯನ್ನು ಇಲ್ಲಿ ನೀಡಲಾಗುತ್ತಿದೆ.
ಈ ಬಾರಿ ಒಟ್ಟು 6,71,653 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದ್ದರು. ಅದರಲ್ಲಿ 4,14,587 ವಿದ್ಯಾರ್ಥಿಗಳು ಪಾಸಾಗಿದ್ದಾರೆ. ವಿದ್ಯಾರ್ಥಿಗಳ ಜಾತಿವಾರು ಅಂಕಿ-ಸಂಖ್ಯೆ ಕೆಳಗೆ ನೀಡಲಾಗಿದೆ.

ಪರಿಶಿಷ್ಟ ಜಾತಿ/ವರ್ಗದ ವಿದ್ಯಾರ್ಥಿಗಳು
ಪರಿಶಿಷ್ಟ ಜಾತಿಯ 1,19,865 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು, ಇದರಲ್ಲಿ 62,290 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಶೇಕಡಾವಾರು ಫಲಿತಾಂಶ 51.97% ಇದೆ. ಪರಿಶಿಷ್ಟ ಪಂಗಡದ 42,490 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದ್ದರು ಇದರಲ್ಲಿ 22,665 (53.34%) ವಿದ್ಯಾರ್ಥಿಗಳು ಪಾಸಾಗಿದ್ದಾರೆ.

ಸಿ-1 ಮತ್ತು 2-A ಫಲಿತಾಂಶ ಎಷ್ಟು
ಸಿ-1 ವರ್ಗಕ್ಕೆ ಸೇರಿದ 43,965 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದ್ದರು, 26,420 (60.09%) ವಿದ್ಯಾರ್ಥಿಗಳು ಪಾಸಾಗಿದ್ದಾರೆ, 2-A ವರ್ಗಕ್ಕೆ ಸೇರಿದ 1,37,240 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು, ಅದರಲ್ಲಿ 90,570 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ, ಶೇಕಡಾವಾರು 69.99% ವಿದ್ಯಾರ್ಥಿಗಳು ಪಾಸಾಗಿದ್ದಾರೆ.

2-B ಮತ್ತು 3-A ವಿದ್ಯಾರ್ಥಿಗಳ ಸಂಖ್ಯೆ
2-B ಜಾತಿಗೆ ಸೇರಿದ 71,762 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು ಇದರಲ್ಲಿ 40,963 ವಿದ್ಯಾರ್ಥಿಗಳು ಉತ್ತೀರ್ಣರಾಗಿ 57.07% ಫಲಿತಾಂಶ ತಂದಿದ್ದಾರೆ. 3-A ಜಾತಿಯ 72,045 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು, ಇದರಲ್ಲಿ 49,608 (68.86%) ವಿದ್ಯಾರ್ಥಿಗಳು ಪಾಸಾಗಿದ್ದಾರೆ.

3-B ಮತ್ತು ಸಾಮಾನ್ಯ ವರ್ಗದವರ ಫಲಿತಾಂಶ
3-B ಜಾತಿಗೆ ಸೇರಿದ 1,09,086 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು, ಇದರಲ್ಲಿ 70,938 ವಿದ್ಯಾರ್ಥಿಗಳು ಪಾಸಾಗಿದ್ದಾರೆ. ಇವರ ಶೇಕಡಾವಾರು ಫಲಿತಾಂಶ 65.03%. ಸಾಮಾನ್ಯ ವರ್ಗದ 75,200 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು, ಇದರಲ್ಲಿ 51,143 ವಿದ್ಯಾರ್ಥಿಗಳು ಪಾಸಾಗಿದ್ದಾರೆ ಇವರ ಶೇಕಡಾವಾರು ಫಲಿತಾಂಶ 68.01%.
-
ಮಾರ್ಚ್ 29ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 30ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್












Click it and Unblock the Notifications