ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದ್ವಿತೀಯ ಪಿಯುಸಿ ಉತ್ತರ ಪತ್ರಿಕೆ: ಮಂಡಳಿಯ ಮಹತ್ವದ ಆದೇಶ

|
Google Oneindia Kannada News

ಬೆಂಗಳೂರು, ನ 28: 'ಕಾಲಕ್ಕೆ ತಕ್ಕಹಾಗೇ ಬದಲಾಗಬೇಕು' ಎನ್ನುವ ಹಾಗೇ, ಹಲವು ಹೊಸ ಪದ್ದತಿಗಳನ್ನು ಜಾರಿಗೆ ತರಲು ಮುಂದಾಗಿರುವ ಶಿಕ್ಷಣ ಇಲಾಖೆ, ಮತ್ತೊಂದು ಮಹತ್ವದ ನಿರ್ಧಾರಕ್ಕೆ ಮುಂದಾಗಿದೆ.

ಮುಂಬರುವ (ಮಾರ್ಚ್ 2020) ವಾರ್ಷಿಕ ಪರೀಕ್ಷೆಯಲ್ಲಿ ಬುಕ್ ಲೆಟ್ ಪುಟಗಳನ್ನು ಹೆಚ್ಚಿಸಲು ಇಲಾಖೆ ನಿರ್ಧರಿಸಿದೆ. ಹೆಚ್ಚುವರಿ ಉತ್ತರ ಪ್ರತ್ರಿಕೆಗಳನ್ನು ಮೌಲ್ಯಮಾಪನ ಮಾಡಲು ಶಿಕ್ಷಕರು ತೊಂದರೆ ಅನುಭವಿಸುತ್ತಿರುವುದರಿಂದ, ಇಲಾಖೆ ಈ ನಿರ್ಧಾರಕ್ಕೆ ಬಂದಿದೆ.

ದ್ವಿತೀಯ ಪಿಯುಸಿ ಪರೀಕ್ಷೆ; ಆನ್‌ಲೈನ್ ಪ್ರಶ್ನೆ ಪತ್ರಿಕೆ ಇಲ್ಲದ್ವಿತೀಯ ಪಿಯುಸಿ ಪರೀಕ್ಷೆ; ಆನ್‌ಲೈನ್ ಪ್ರಶ್ನೆ ಪತ್ರಿಕೆ ಇಲ್ಲ

ಈ ಹಿಂದೆ 14 ಪುಟಗಳ, ಅದಾದ ನಂತರ 22 ಪುಟಗಳ ಉತ್ತರ ಪತ್ರಿಕೆಯನ್ನು ನೀಡಲಾಗುತ್ತಿತ್ತು. ಮುಂಬರುವ ಪರೀಕ್ಷೆಯಲ್ಲಿ 42 ಪುಟಗಳ ಬುಕ್ ಲೆಟ್ ನೀಡಲು ಶಿಕ್ಷಣ ಇಲಾಖೆ ನಿರ್ಧರಿಸಿದೆ.

PUC Board Decided To Give 42 Page Booklet During March 2020, Annual Examination

ಪರೀಕ್ಷಾ ಕೊಠಡಿಯಲ್ಲಿ ಹೆಚ್ಚುವರಿಯಾಗಿ ತೆಗೆದುಕೊಳ್ಳುವ ಉತ್ತರಪತ್ರಿಕೆಗಳು, ಮೌಲ್ಯಮಾಪನದ ವೇಳೆ, ಕಳೆದುಹೋದ ಉದಾಹರಣೆಗಳು ಇರುವುದೂ, ಶಿಕ್ಷಣ ಇಲಾಖೆಯ ಈ ನಿರ್ಧಾರಕ್ಕೆ ಕಾರಣವಾಗಿದೆ.

ಮುಂಬರುವ ದ್ವಿತೀಯ ಪಿಯುಸಿ ಪರೀಕ್ಷೆಗೆ ಆನ್‌ಲೈನ್ ಮೂಲಕ ಪ್ರಶ್ನೆ ಪತ್ರಿಕೆ ಕಳುಹಿಸಲು ಸಾಧ್ಯವಿಲ್ಲ ಎಂದು ಇಲಾಖೆ ಈಗಾಗಲೇ ಸ್ಪಷ್ಟನೆಯನ್ನು ನೀಡಿದೆ. ಆನ್‌ಲೈನ್ ಮೂಲಕ ಪ್ರಶ್ನೆ ಪತ್ರಿಕೆ ಕಳಿಸಿದರೆ ನಿರಂತರ ವಿದ್ಯುತ್ ಪೂರೈಕೆ ಇರಬೇಕು. ಇಂಟರ್ ನೆಟ್ ಸಂಪರ್ಕ ಬೇಕು. ಫೋಟೋ ಕಾಪಿ ಮಾಡಲು ಯಂತ್ರ ಸೇರಿದಂತೆ ಇತರ ಸೌಲಭ್ಯಗಳು ಬೇಕು, ಹಾಗಾಗಿ, ಆನ್‌ಲೈನ್ ಮೂಲಕ ಪ್ರಶ್ನೆ ಪತ್ರಿಕೆ ಕಳುಹಿಸದಿರುವ ನಿರ್ಧಾರಕ್ಕೆ ಬರಲಾಗಿತ್ತು.

ವಾರ್ಷಿಕ ಪರೀಕ್ಷೆ: ಮಹತ್ವದ ನಿರ್ಧಾರದತ್ತ ಪಿಯುಸಿ ಬೋರ್ಡ್ವಾರ್ಷಿಕ ಪರೀಕ್ಷೆ: ಮಹತ್ವದ ನಿರ್ಧಾರದತ್ತ ಪಿಯುಸಿ ಬೋರ್ಡ್

ಪ್ರಸಕ್ತ ಶೈಕ್ಷಣಿಕ ವರ್ಷದ (ಮಾರ್ಚ್ 2020) ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಸ್ವಲ್ಪ ತಡವಾಗಿ ಪ್ರಕಟಿಸಲು ಪಿಯುಸಿ ಬೋರ್ಡ್ ಚಿಂತನೆ ನಡೆಸಿದೆ. ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ (ನೀಟ್) ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡ ನಂತರ, ಪಿಯುಸಿ ಫಲಿತಾಂಶವನ್ನು ಪ್ರಕಟಿಸುವ ಬಗ್ಗೆ ಶಿಕ್ಷಣ ಇಲಾಖೆಯಲ್ಲಿ ಮಾತುಕತೆ ನಡೆದಿದ್ದು, ಅಂತಿಮ ನಿರ್ಧಾರ ಇನ್ನೂ ಹೊರಬಿದ್ದಿಲ್ಲ.

English summary
PUC Board Decided To Give 42 Page Booklet During March 2020, Annual Examination.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X