ಪಿಯುಸಿ ತರಗತಿಗಳು ಆರಂಭ: ಉಪನ್ಯಾಸಕರಿಂದ ತರಗತಿ ಬಹಿಷ್ಕಾರ
ಬೆಂಗಳೂರು, ಮೇ.2: ದ್ವಿತೀಯ ಪಿಯುಸಿ ತರಗತಿಗಳು ಇಂದಿನಿಂದ(ಮೇ.2) ರಿಂದ ಆರಂಭವಾಗಲಿವೆ ಆದರೆ ಉಪನ್ಯಾಸಕರು ತರಗತಿಗಳ ಬಹಿಷ್ಕಾರ ಎಚ್ಚರಿಕೆ ನೀಡಿದೆ. ಇದೇ ಮೊದಲ ಬಾರಿಗೆ ಬೇಸಿಗೆ ರಜೆಯನ್ನು ಕಡಿತಗೊಳಿಸಿ ತರಗತಿಗಳನ್ನು ಮುನ್ನವೇ ಆರಂಭಿಸಲಾಗುತ್ತಿದೆ.
ಈ ಬೆದರಿಕೆಗೆ ಜಗ್ಗದ ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕಿ ಸಿ. ಶಿಖಾ, ಮೇ 2ರಂದು ಕಡ್ಡಾಯವಾಗಿ ತರಗತಿಗಳಿಗೆ ಹಾಜರಾಗುವಂತೆ ಉಪನ್ಯಾಸಕರಿಗೆ ಸೂಚಿಸಿ ಸುತ್ತೋಲೆ ಹೊರಡಿಸಿದ್ದಾರೆ. ಅಲ್ಲದೆ, ಗೈರು ಹಾಜರಾದವರ ವಿರುದ್ಧ ಕ್ರಮ ಜರುಗಿಸುವುದಾಗಿಯೂ ಎಚ್ಚರಿಕೆ ನೀಡಿದ್ದಾರೆ.
ಪದವಿ ಪೂರ್ವ ಶಿಕ್ಷಣ ಇಲಾಖೆಯ ಈ ಕ್ರಮ ವಿರೋಧಿಸಿ ರಾಜ್ಯ ಸರಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರ ಸಂಘವು ಏ. 30ರಂದು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಸಾಂಕೇತಿಕ ಪ್ರತಿಭಟನೆ ನಡೆಸಿ, ಮೇ 2ರಿಂದ ತರಗತಿಗಳನ್ನು ಬಹಿಷ್ಕರಿಸುವುದಾಗಿ ಎಚ್ಚರಿಕೆ ನೀಡಿದೆ.

ಈ ವರ್ಷ ವಿಧಾನಸಭೆಗೆ ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಪ್ರಥಮ ಪಿಯುಸಿ ಪರೀಕ್ಷೆಗಳು ಫೆ. 21ರಂದೇ ಕೊನೆಗೊಂಡಿದ್ದು, ವಿದ್ಯಾರ್ಥಿಗಳಿಗೆ 69 ದಿನ ರಜೆ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಮೇ 2ರಿಂದಲೇ ದ್ವಿತೀಯ ಪಿಯುಸಿಗೆ ತರಗತಿ ಆರಂಭಿಸಲು ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ಧರಿಸಿದೆ.
ಜೂ.1ರಿಂದ ತರಗತಿ ಆರಂಭಿಸಿದರೆ 100 ದಿನ ರಜೆ ಸಿಕ್ಕಂತಾಗಲಿದ್ದು, ವಿದ್ಯಾರ್ಥಿಗಳಿಗೆ ಅಧ್ಯಯನ ಮಾಡಿದ್ದ ವಿಷಯವೇ ಪರಿಸ್ಥಿತಿ ನಿರ್ಮಾಣವಾಗಲಿದೆಎಂದು ಸಿ. ಶಿಖಾ ಪ್ರತಿಪಾದಿಸಿದ್ದಾರೆ.
ಏ. 30ರಂದು ನಡೆದ ಸಾಂಕೇತಿಕ ಪ್ರತಿಭಟನೆ ವೇಳೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ 24ರಿಂದ ತರಗತಿಗಳನ್ನು ಆರಂಭಿಸುವಂತೆ ಕೋರಿದೆವು. ಅದಕ್ಕೆ 20ರಿಂದಲೇ ಆರಂಭಿಸವುದಕ್ಕೆ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದು ಒಪ್ಪಿಗೆ ಪಡೆಯುವ ಭರವಸೆ ನೀಡಿದ್ದರು. ಆ ಬಗ್ಗೆ ಯಾವುದೇ ಮಾಹಿತಿ ಸಿಕ್ಕಿಲ್ಲ. ಹೀಗಾಗಿ ತರಗತಿಗಳನ್ನು ಬಹಿಷ್ಕರಿಸುತ್ತೇವೆ ಎಂದು ಪದವಿ ಪೂರ್ವ ಕಾಲೇಜು ಉಪನ್ಯಾಸಕರ ಸಂಘದ ಅಧ್ಯಕ್ಷ ತಿಮ್ಮಯ್ಯ ಪುರ್ಲೆ ತಿಳಿಸಿದ್ದಾರೆ.
-
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ












Click it and Unblock the Notifications