ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಇಂದಿನಿಂದ ಸುಗಮವಾಗಿ ಆರಂಭಗೊಂಡ ಪಿಯುಸಿ ಪರೀಕ್ಷೆ

|
Google Oneindia Kannada News

ಬೆಂಗಳೂರು, ಮಾರ್ಚ್ 3; ದ್ವಿತೀಯ ಪಿಯ ಪರೀಕ್ಷೆ ಬುಧವಾರದಿಂದ ಮಾರ್ಚ್ 23 ರವರೆಗೆ ನಡೆಯಲಿದೆ. ರಾಜ್ಯದ 1,016 ಕೇಂದ್ರಗಳಲ್ಲಿ ಪರೀಕ್ಷೆ ಸುಗಮವಾಗಿ ಆರಂಭವಾಗಿದೆ.

Recommended Video

Karnataka PUC Examination starts from today | PUC EXAM | 04-03-2020 | Oneindia Kannada

ಕಳೆದ ವರ್ಷ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿ ವಿದ್ಯಾರ್ಥಿಗಳು ಹಾಗೂ ಪಾಲಕರಲ್ಲಿ ತೀವ್ರ ಆತಂಕ್ಕೆ ಕಾರಣವಾಗಿತ್ತು. ಈ ವರ್ಷ ಪ್ರಶ್ನೆಪತ್ರಿಕೆ ಸೋರಿಕೆಯಾಗದಂತೆ ವ್ಯಾಪಕ ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿದೆ. ಮೊದಲ ದಿನ ಇತಿಹಾಸ, ಭೌತಶಾಸ್ತ್ರ ಹಾಗೂ ಮೂಲ ಗಣಿತ ವಿಷಯದಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದರು.

ನಾಳೆಯಿಂದ ರಾಜ್ಯದಲ್ಲಿ ದ್ವಿತೀಯ ಪಿಯು ಪರೀಕ್ಷೆ ಆರಂಭನಾಳೆಯಿಂದ ರಾಜ್ಯದಲ್ಲಿ ದ್ವಿತೀಯ ಪಿಯು ಪರೀಕ್ಷೆ ಆರಂಭ

ಒಟ್ಟು 680049 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಇದರಲ್ಲಿ 341368 ಬಾಲಕಿಯರು, 338231 ಬಾಲಕರು ಇದ್ದಾರೆ. ಕಲಾ ವಿಭಾಗದಲ್ಲಿ 201445, ವಾಣಿಜ್ಯ ವಿಭಾಗದಲ್ಲಿ 261674 ಹಾಗೂ ವಿಜ್ಞಾನ ವಿಭಾಗದಲ್ಲಿ 216930 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ.

PUC Examination Starts From Today In Karnataka

ಪರೀಕ್ಷಾ ಕೇಂದ್ರಗಳ 200 ಮೀಟರ್‌ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ವಿಧಿಸಲಾಗಿದೆ. ಮಧ್ಯಾಹ್ನ 1.30ರವರೆಗೆ ಪರೀಕ್ಷೆ ನಡೆಯಲಿದೆ. ಮುಕ್ತವಾಗಿ ಪರೀಕ್ಷೆ ಬರೆಯುವ ವ್ಯವಸ್ಥೆ ಮಾಡಲಾಗಿದೆ. ವದಂತಿ ಹಬ್ಬಿಸುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್‌ ಕುಮಾರ್‌ ಹೇಳಿದ್ದಾರೆ.

English summary
PUC Examination Starts From Today In Karnataka. 680049 students accross the karnataka attending the puc exma of 2020.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X