ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ನಿರ್ಧರಿಸಿದ ಗದಗ ಉಪನ್ಯಾಸಕರು

Posted By:
Subscribe to Oneindia Kannada

ಗದಗ,ಮಾರ್ಚ್,16: ಏಪ್ರಿಲ್ ತಿಂಗಳಿನಲ್ಲಿ ಜರುಗುವ ಪಿಯುಸಿ ಮೌಲ್ಯಮಾಪನ ಬಹಿಷ್ಕಾರಕ್ಕೆ ವಿವಿಧ ಸಂಘಟನೆಯವರು ನಿರ್ಣಯ ಕೈಗೊಂಡಿದ್ದು, ವೇತನ ತಾರತಮ್ಯ ಸರಿಪಡಿಪಡಿಸಬೇಕೆಂದು ವಿಧಾನಪರಿಷತ್ ಸದಸ್ಯ, ರಾಜ್ಯ ಪದವಿ ಪೂರ್ವ ನೌಕರರ ಸಂಘದ ಗೌರವಾಧ್ಯಕ್ಷ ಎಸ್.ವ್ಹಿ. ಸಂಕನೂರ ಸೇರಿದಂತೆ ನಾನಾ ಪದವಿ ಪೂರ್ವ ಕಾಲೇಜಗಳ ಉಪನ್ಯಾಸಕರು ಒತ್ತಾಯಿಸಿದ್ದಾರೆ.

ಮಂಗಳವಾರ ಕರ್ನಾಟಕ ರಾಜ್ಯ ಪದವಿಪೂರ್ವ ಮಹಾವಿದ್ಯಾಲಯಗಳ ನೌಕರರ ಸಂಘ, ಗದಗ ಪಪೂ ಮಹಾವಿದ್ಯಾಲಯದ ಪ್ರಾಚಾರ್ಯ ಸಂಘ, ರಾಜ್ಯ ಪಪೂ ಉಪನ್ಯಾಸಕರ ಸಂಘಗಳ ಸಂಯುಕ್ತಾಶ್ರಯದಲ್ಲಿ ಮುಖ್ಯಮಂತ್ರಿಗಳಿಗೆ ಜಿಲ್ಲಾಧಿಕಾರಿಗಳ ಮುಖಾಂತರ ಮನವಿ ಸಲ್ಲಿಸಿದ ನಂತರ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.[ದ್ವಿತೀಯ ಪಿಯುಸಿ ಪರೀಕ್ಷೆ ಬಗ್ಗೆ ಗೊಂದಲವಿದ್ದರೆ ಕರೆ ಮಾಡಿ]

PUC Lectures Boycott evaluation, demand better pay in Gadag

ಕಳೆದ 25 ವರ್ಷಗಳಿಂದ ಪದವಿ ಪೂರ್ವ ಕಾಲೇಜಗಳ ಉಪನ್ಯಾಸಕರು ವೇತನ ಸಮಸ್ಯೆ ಎದುರಿಸುತ್ತಿದ್ದಾರೆ. ಆದರೆ ಸರಕಾರ ಇದರ ಬಗ್ಗೆ ತಲೆಕೆಡಿಸಿಕೊಂಡಂತೆ ಕಾಣುತ್ತಿಲ್ಲ. ಆದ್ದರಿಂದ ಪಿಯು ಮೌಲ್ಯಮಾಪನ ಬಹಿಷ್ಕಾರ ನಿರ್ಣಯದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ವಿಧಾನಪರಿಷತ್ ಸದಸ್ಯ, ರಾಜ್ಯ ಪದವಿ ಪೂರ್ವ ನೌಕರರ ಸಂಘದ ಗೌರವಾಧ್ಯಕ್ಷ ಎಸ್.ವ್ಹಿ. ಸಂಕನೂರ ಹೇಳಿದ್ದಾರೆ.[ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ 2016]

ವೇತನ ತಾರತಮ್ಯದ ಜೊತೆಗೆ ಅತ್ಯಂತ ಜ್ವಲಂತ ಸಮಸ್ಯೆಯಾಗಿ ಕಾಡುತ್ತಿರುವ ಕಾಲ್ಪನಿಕ ವೇತನ ಸಮಸ್ಯೆ, ಪದವಿಪೂರ್ವ ಕಾಲೇಜುಗಳ ಪ್ರಾಚಾರ್ಯರಿಗೆ ಪ್ರತ್ಯೇಕ ವೇತನ ಶ್ರೇಣಿ, ಪಪೂ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಉಪನ್ಯಾಸಕರು ಎಂ.ಫಿಲ್, ಪಿ.ಎಚ್.ಡಿ. ಪದವಿ ಪಡೆದವರಿಗೆ ಹೆಚ್ಚುವರಿ ವೇತನ ಬಡ್ತಿ ಮುಂತಾದ ಅನೇಕ ಸಮಸ್ಯೆಗಳನ್ನು ಪರಿಹರಿಸಲು ಮುಖ್ಯಮಂತ್ರಿಗಳನ್ನು ಒತ್ತಾಯಿಸಿದರು.[ಶೀಘ್ರದಲ್ಲೇ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ಸಿಗಲಿದೆ]

ಈ ಸಂದರ್ಭದಲ್ಲಿ ಪಪೂ ಪ್ರಾಚಾರ್ಯರ ಸಂಘದ ಅಧ್ಯಕ್ಷ ಬಿ.ಎಚ್. ಗರಡಿಮನಿ, ಉಪಾಧ್ಯಕ್ಷ ಬಿ.ಎಸ್. ಜಾಧವ, ರಾಜ್ಯ ಪಪೂ ಕಾಲೇಜುಗಳ ನೌಕರರ ಸಂಘದ ಕಾರ್ಯಾಧ್ಯಕ್ಷ ಎಂ.ಸಿ. ಕಟ್ಟಿಮನಿ, ರಾಜ್ಯ ಪಪೂ ಕಾಲೇಜುಗಳ ಉಪನ್ಯಾಸಕರ ಸಂಘದ ಅಧ್ಯಕ್ಷ ಎಸ್. ಎಚ್. ಬಿರಕಬ್ಬಿ, ಎ.ಎಮ್. ಅಂಗಡಿ, ಸುರೇಶ ಸೋಮಣ್ಣವರ, ಎಚ್. ಬಿ. ಯಲಬುರ್ಗಿ ಮುಂತಾದವರು ಉಪಸ್ಥಿತರಿದ್ದರು

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
PUC Lectures Boycott evaluation, demand better pay in Gadag. They stage a protest under the banner of the Karnataka State PU college lectures association.
Please Wait while comments are loading...