ಪಿಯುಸಿ ಉಪನ್ಯಾಸಕರ ವರ್ಗಾವಣೆ; ಆನ್‌ಲೈನ್‌ನಲ್ಲಿ ಅರ್ಜಿ ಹಾಕಿ
ಬೆಂಗಳೂರು, ಜುಲೈ 24 : ಕರ್ನಾಟಕ ಸರ್ಕಾರ ಸರ್ಕಾರಿ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರನ್ನು ವಿಶೇಷ ಪ್ರಕರಣದಡಿ ವರ್ಗಾವಣೆ ಮಾಡುತ್ತಿದೆ. ಇದಕ್ಕಾಗಿ ಕೌನ್ಸೆಲಿಂಗ್ ನಡೆಸಲು ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
Recommended Video
'ಸಿ' ವಲಯದಲ್ಲಿ ಕಾರ್ಯ ನಿರ್ವಹಣೆ ಮಾಡುತ್ತಿರುವ ಪದವಿ ಪೂರ್ವ ಕಾಲೇಜು ಉಪನ್ಯಾಸಕರನ್ನು ವರ್ಗಾವಣೆ ಮಾಡಲಾಗುತ್ತಿದೆ. ಹೊಸದಾಗಿ ನೇಮಕಗೊಂಡ ಪಿಯುಸಿ ಉಪನ್ಯಾಸಕರನ್ನು ಮೊದಲು 'ಸಿ' ವಲಯದಲ್ಲಿ ನಿಯೋಜನೆ ಮಾಡಲಾಗುತ್ತದೆ.
ಈಗ ಸರ್ಕಾರ 1203 ಉಪನ್ಯಾಸಕರನ್ನು ನೇಮಕಾತಿ ಮಾಡಿಕೊಂಡಿದ್ದು, ಅಭ್ಯರ್ಥಿಗಳಿಗೆ ಅವಶ್ಯವಿರುವಷ್ಟು ಸ್ಥಳ ಖಾಲಿ ಇಲ್ಲ. ಆದ್ದರಿಂದ ಪ್ರಸ್ತುತ 'ಸಿ' ವಲಯದಲ್ಲಿ ಕಾರ್ಯ ನಿರ್ವಹಣೆ ಮಾಡುತ್ತಿರುವ ಉಪನ್ಯಾಸಕರನ್ನು ಜೇಷ್ಠತಾ ಆಧಾರದಲ್ಲಿ 'ಬಿ' ಮತ್ತು 'ಎ' ವಲಯಗಳಿಗೆ ವರ್ಗಾವಣೆ ಮಾಡಲಾಗುತ್ತಿದೆ.

ಇದಕ್ಕಾಗಿ ಉಪನ್ಯಾಸಕರು ಆನ್‌ಲೈನ್ ಮೂಲಕ ಜುಲೈ 28ರ ತನಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಆಕ್ಷೇಪಣೆಗಳನ್ನು ಸಲ್ಲಿಸಲು ಜುಲೈ 31 ಕೊನೆಯ ದಿನವಾಗಿದೆ.
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ವಿಳಾಸ












Click it and Unblock the Notifications