ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹೊಸ ವೇಳಾಪಟ್ಟಿ: ಡಿ.9ರಿಂದ ಪಿಯು ಮಧ್ಯವಾರ್ಷಿಕ ಪರೀಕ್ಷೆ

|
Google Oneindia Kannada News

ಬೆಂಗಳೂರು, ನ.19: ವಿದ್ಯಾರ್ಥಿ ಮತ್ತು ಉಪನ್ಯಾಸಕರ ಸಂಘಟನೆಗಳ ಒತ್ತಡಕ್ಕೆ ಮಣಿದಿರುವ ಪದವಿ ಪೂರ್ವ ಶಿಕ್ಷಣ ಇಲಾಖೆ, ಪಿಯು ಮಧ್ಯವಾರ್ಷಿಕ ಪರೀಕ್ಷೆಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಿ ಪರಿಷ್ಕೃತ ಆದೇಶ ಹೊರಡಿಸಲಾಗಿದೆ.

ವಾರ್ಷಿಕ ಪರೀಕ್ಷೆ ಮಾದರಿಯಲ್ಲಿ ಮಧ್ಯವಾರ್ಷಿಕ ಪರೀಕ್ಷೆಯನ್ನು ನಡೆಸುವುದು ಮತ್ತು ಅಂತರ ಜಿಲ್ಲಾ ಮಟ್ಟದಲ್ಲಿ ಮೌಲ್ಯಮಾಪನ ಮಾಡಿ ಫಲಿತಾಂಶ ಘೋಷಿಸುವುದಕ್ಕೆ ತೀವ್ರ ವಿರೋಧ ವ್ಯಕ್ತವಾಗಿತ್ತು. ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ, ಎಐಡಿಎಸ್‌ಓ ಸಹಿತ ಹಲವು ವಿದ್ಯಾರ್ಥಿ ಸಂಘಟನೆಗಳು ಇದಕ್ಕೆ ತಿವ್ರ ವಿರೋಧ ವ್ಯಕ್ತಪಡಿಸಿದ್ದವು. ಈ ಮಾದರಿಯಲ್ಲಿ ಪರೀಕ್ಷೆ ನಡೆಸಿದರೆ ವಿದ್ಯಾರ್ಥಿಗಳ ಭವಿಷ್ಯಕ್ಕೆ ತೊಂದರೆಯಾಗುತ್ತದೆ ಎಂಬುದನ್ನು ಸರ್ಕಾರ ಮತ್ತು ಪದವಿ ಪೂರ್ವ ಶಿಕ್ಷಣ ನಿರ್ದೇಶನಾಲಯ ಗಮನಕ್ಕೆ ತಂದಿದ್ದರು.

ಈ ಮೊದಲು ವೇಳಾಪಟ್ಟಿಯ ಪ್ರಕಾರ ನ.29ರಿಂದ ಡಿ.10ರ ವರೆಗೆ ದ್ವಿತೀಯ ಪಿಯು ಮಧ್ಯವಾರ್ಷಿಕ ಪರೀಕ್ಷೆ ಮತ್ತು ಡಿ.15ರಿಂದ 23ರವರೆಗೆ ಪ್ರಥಮ ಪಿಯು ಮಧ್ಯವಾರ್ಷಿಕ ಪರೀಕ್ಷೆ ವೇಳಾಪಟ್ಟಿ ಪ್ರಕಟಿಸಲಾಗಿತ್ತು. ಎರಡು ತರಗತಿಗಳ ಪರೀಕ್ಷೆಯನ್ನು ಪ್ರತ್ಯೇಕವಾಗಿ ನಡೆಸುವುದರಿಂದ ಒಂದು ತಿಂಗಳ ಅವಧಿ ಪರೀಕ್ಷೆಯಲ್ಲಿಯೇ ಕಳೆದು, ವಾರ್ಷಿಕ ಪರೀಕ್ಷೆಗೆ ಬೋಧನೆ ದಿನಗಳಲ್ಲಿ ಕೊರತೆಯಾಗುತ್ತದೆ. ಕಾಲೇಜುಗಳು ಇತ್ತೀಚೆಗಷ್ಟೇ ಪೂರ್ಣ ಪ್ರಮಾಣದಲ್ಲಿ ಆರಂಭವಾಗಿರುವುದರಿಂದ ನಿಗದಿತ ಪ್ರಕಾರದಲ್ಲಿ ಪಠ್ಯಕ್ರಮಗಳನ್ನು ಪೂರ್ಣಗೊಳಿಸಿಲ್ಲ. ಪರೀಕ್ಷೆಯ ಬಗ್ಗೆ ವಿದ್ಯಾರ್ಥಿಗಳಿಗೆ, ಉಪನ್ಯಾಸಕರಿಗೆ ಯಾವುದೇ ಮಾಹಿತಿಯನ್ನೂ ನೀಡಿಲ್ಲ. ಯಾವ ಮಾದರಿಯಲ್ಲಿ ಪರೀಕ್ಷೆ ನಡೆಯುತ್ತವೆ ಎಂಬುದರ ಸೂಚನೆಯನ್ನೂ ನೀಡದೆ ಪದವಿ ಪೂರ್ವ ಶಿಕ್ಷಣ ಇಲಾಖೆ ಏಕಾಏಕಿ ಮಧ್ಯವಾರ್ಷಿಕ ಪರೀಕ್ಷೆಯನ್ನು ಘೋಷಿಸಿದೆ. ಇದರಿಂದ ಅನುತ್ತೀರ್ಣ ಅಥವಾ ಕಡಿಮೆ ಅಂಕ ಪಡೆಯುವ ವಿದ್ಯಾರ್ಥಿಗಳು ಕಾಲೇಜು ತೊರೆಯುತ್ತಾರೆ ಎಂಬ ಆತಂಕವನ್ನು ಉಪನ್ಯಾಸಕರು ಮತ್ತು ವಿದ್ಯಾರ್ಥಿ ಸಂಘಟನೆಗಳು ವ್ಯಕ್ತಪಡಿಸಿದ್ದವು. ಈ ಹಿನ್ನೆಲೆಯಲ್ಲಿ ನಿರಂತರ ಸಭೆ ನಡೆಸಿದ ಪದವಿ ಪೂರ್ವ ಶಿಕ್ಷಣ ಇಲಾಖೆ ಕೆಲವೊಂದು ಮಾರ್ಪಾಡುಗಳನ್ನು ಮಾಡಿ, ಪರಿಷ್ಕೃತ ಆದೇಶ ಹೊರಡಿಸಿದೆ.

PUC revised time table: mid exam from dec 9

ಎರಡು ತರಗತಿಗೆ ಒಂದೇ ಬಾರಿ ಪರೀಕ್ಷೆ:

ಪ್ರಥಮ ಹಾಗೂ ದ್ವಿತೀಯ ಪಿಯು ಪರೀಕ್ಷೆಗೆ ಒಂದೇ ಬಾರಿ ಮಧ್ಯವಾರ್ಷಿಕ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ. ಡಿ.9ರಿಂದ 23ರವರೆಗೆ ಪರೀಕ್ಷೆಗಳು ಏಕಕಾಲದಲ್ಲಿ ನಡೆಯುತ್ತವೆ. ಪ್ರಶ್ನೆ ಪತ್ರಿಕೆಗಳನ್ನು ಪ್ರತಿ ಜಿಲ್ಲೆಯ ಜಿಲ್ಲಾ ಉಪನಿರ್ದೇಶಕರಿಗೆ ಒದಗಿಸಲಾಗುತ್ತದೆ. ಪ್ರಶ್ನೆ ಪತ್ರಿಕೆಗಳನ್ನು ಅಗತ್ಯಕ್ಕೆ ಅನುಗುಣವಾಗಿ ಮುದ್ರಿಸಿ, ನೋಡಲ್ ಕೇಂದ್ರಗಳ ಮೂಲಕ ಆಯಾ ವಿಷಯದ ಪರೀಕ್ಷಾ ದಿನದಂದ ಕಾಲೇಜುಗಳಿಗೆ ವಿತರಣೆ ಮಾಡಬೇಕು ಎಂದು ಸೂಚಿಸಲಾಗಿದೆ.

ಕಾಲೇಜುಗಳಲ್ಲೇ ಮೌಲ್ಯಮಾಪನ:

ಈ ಮೊದಲು ಅಂತರ ಜಿಲ್ಲಾ ಮಟ್ಟದಲ್ಲಿ ಮಧ್ಯವಾರ್ಷಿಕ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ನಡೆಯಬೇಕು ಎಂದು ಸೂಚಿಸಲಾಗಿತ್ತು. ಇದನ್ನು ಬದಲಾಯಿಸಿ ಪರಿಷ್ಕೃತ ಆದೇಶದಲ್ಲಿ, ಆಯಾ ಕಾಲೇಜಿನಲ್ಲಿಯೇ ಮೌಲ್ಯಮಾಪನ ಮಾಡಲು ಸೂಚಿಸಲಾಗಿದೆ.

ದ್ವಿತೀಯ ಪಿಯು ಉತ್ತರ ಪತ್ರಿಕೆಗಳನ್ನು ಕಾಲೇಜು ಹಂತದಲ್ಲಿಯೇ ಆಯಾ ಕಾಲೇಜಿನ ಉಪನ್ಯಾಸಕರು ಮೌಲ್ಯಮಾಪನ ಮಾಡಬೇಕು. ಪ್ರಾಂಶುಪಾಲರು ನೇತೃತ್ವ ವಹಿಸಬೇಕು. ವಿದ್ಯಾರ್ಥಿಗಳಿಗೆ ವಿಷಯವಾರು ಅಂಕಗಳನ್ನು ಕಾಲೇಜು ಮಟ್ಟದಲ್ಲಿಯೇ ತಿಳಿಸಿ, ಬಳಿಕ 15 ದಿನಗಳ ಒಳಗೆ ಇಲಾಖೆಯ SATS Portal ನಲ್ಲಿ ನಮೂದಿಸಬೇಕು ಎಂದು ಸೂಚಿಸಲಾಗಿದೆ.

PUC revised time table: mid exam from dec 9

ಇನ್ನು ಪ್ರಥಮ ಪಿಯು ಮಧ್ಯವಾರ್ಷಿಕ ಪರೀಕ್ಷೆಯನ್ನು ಕಾಲೇಜು ಹಂತದಲ್ಲಿಯೇ ನಡೆಸಬೇಕು. ವಿಷಯವಾರು ಉಪನ್ಯಾಸಕರು ಪ್ರಶ್ನೆಪತ್ರಿಕೆ ಸಿದ್ಧಪಡಿಸಿ ಪರೀಕ್ಷೆ ನಡೆಸಬೇಕು. ಬಳಿಕ ಅವರೇ ಮೌಲ್ಯಮಾಪನ ನಡೆಸಿ, ವಿದ್ಯಾರ್ಥಿಗಳು ಪಡೆದ ಅಂಕವನ್ನು ಬಳಿಕ 15 ದಿನಗಳ ಒಳಗೆ ಇಲಾಖೆಯ SATS Portal ನಲ್ಲಿ ನಮೂದಿಸಬೇಕು ಎಂದು ಸೂಚಿಸಲಾಗಿದೆ.

ಪರಿಷ್ಕೃತ ವೇಳಾಪಟ್ಟಿ ಹೀಗಿದೆ:

* ಡಿಸೆಂಬರ್ 9ರ ಗುರುವಾರ: ಬೆಳಗಿನ ಅವಧಿಯಲ್ಲಿ ಇತಿಹಾಸ ಮತ್ತು ಭೌತಶಾಸ್ತ್ರ

* ಡಿಸೆಂಬರ್ 10ರ ಶುಕ್ರವಾರ: ಬೆಳಗಿನ ಅವಧಿಯಲ್ಲಿ ಪ್ರಥಮ ಭಾಷೆ ಕನ್ನಡ ಪರೀಕ್ಷೆ ನಡೆದರೆ, ಮಧ್ಯಾಹ್ನದ ಅವಧಿಯಲ್ಲಿ ತಮಿಳು, ತೆಲುಗು, ಮಲಯಾಳಂ, ಮರಾಠಿ, ಅರೇಬಿಕ್ ಮತ್ತು ಪ್ರೆಂಚ್ ಭಾಷೆಯ ಪರೀಕ್ಷೆ ನಡೆಯಲಿದೆ.

* ಡಿಸೆಂಬರ್ 11ರ ಶನಿವಾರ: ಅರ್ಥಶಾಸ್ತ್ರ ಮತ್ತು ರಸಾಯನಶಾಸ್ತ್ರ ಪರೀಕ್ಷೆ ನಡೆಯಲಿದೆ.

PUC revised time table: mid exam from dec 9

* ಡಿಸೆಂಬರ್ 15ರ ಬುಧವಾರ: ಮಧ್ಯಾಹ್ನದ ಅವಧಿಯಲ್ಲಿ ಸಂಖ್ಯಾಶಾಸ್ತ್ರ ಪರೀಕ್ಷೆ.

* ಡಿಸೆಂಬರ್ 16ರ ಗುರುವಾರ: ಸಮಾಜಶಾಸ್ತ್ರ ಮತ್ತು ಗಣಿತ ಪರೀಕ್ಷೆ ನಡೆಯಲಿದೆ. ಮಧ್ಯಾಹ್ನ ಬೇಸಿಕ್ ವಿಜ್ಞಾನ.

* ಡಿಸೆಂಬರ್ 17ರ ಶುಕ್ರವಾರ: ಬೆಳಗಿನ ಅವಧಿಯಲ್ಲಿ ಹಿಂದಿ ಮತ್ತು ಮಧ್ಯಾಹ್ನದ ಅವಧಿಯಲ್ಲಿ ಉರ್ದು, ಸಂಸ್ಕೃತ ಪರೀಕ್ಷೆ ನಡೆಯಲಿದೆ.

* ಡಿಸೆಂಬರ್ 18ರ ಶನಿವಾರ: ಇಂಗ್ಲಿಷ್

* ಡಿಸೆಂಬರ್ 20ರ ಸೋಮವಾರ: ರಾಜ್ಯಶಾಸ್ತ್ರ, ಜೀವಶಾಸ್ತ್ರ, ಎಲೆಕ್ಟ್ರಾನಿಕ್ಸ್‍, ಕಂಪ್ಯೂಟರ್ ವಿಜ್ಞಾನ ಮತ್ತು ಭೂವಿಜ್ಞಾನ ಪರೀಕ್ಷೆ ನಡೆಯಲಿದೆ. ಮಧ್ಯಾಹ್ನದ ಅವಧಿಯಲ್ಲಿ ಹಿಂದೂಸ್ತಾನಿ ಸಂಗೀತ, ಅಂಕಿ ಅಂಶಗಳು ಪರೀಕ್ಷೆ ನಡೆಯಲಿದೆ.

* ಡಿಸೆಂಬರ್ 21ರ ಮಂಗಳವಾರ: ಅಕೌಂಟೆನ್ಸಿ, ಶಿಕ್ಷಣ ಮತ್ತು ಗೃಹ ವಿಜ್ಞಾನ ಪರೀಕ್ಷೆ ನಡೆಯಲಿದೆ.

* ಡಿಸೆಂಬರ್ 22ರ ಬುಧವಾರ: ಲಾಜಿಕ್ ಬಿಜಿನಸ್ ಸ್ಟಡೀಸ್, ಮಧ್ಯಾಹ್ನ ಐಚ್ಛಿಕ ಕನ್ನಡ

Recommended Video

600 ವರ್ಷಗಳ ನಂತರ ನಾಳೆ ಸಂಭವಿಸಲಿದೆ ಸುದೀರ್ಘ ಚಂದ್ರಗ್ರಹಣ | Oneindia Kannada

* ಡಿಸೆಂಬರ್ 23ರ ಗುರುವಾರ: ಬೆಳಗಿನ ಅವಧಿಯಲ್ಲಿ ಭೂಗೋಳಶಾಸ್ತ್ರ, ಮನಃಶಾಸ್ತ್ರ ಮತ್ತು ಮಧ್ಯಾಹ್ನದ ಅವಧಿಯಲ್ಲಿ ಮಾಹಿತಿ ತಂತ್ರಜ್ಞಾನ, ಆಟೋಮೊಬೈಲ್, ಆರೋಗ್ಯ ಸಲಹೆ ಪರೀಕ್ಷೆ ನಡೆಯಲಿದೆ.

English summary
Faced with pressure from student and lecturers' organizations, the Department of Undergraduate Education has made some changes to the PU mid-year exam and has issued a revised order.mid exam start from december 9.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X