ಸಿಇಟಿಗೆ ಪಿಯು ಅಂಕ ವಿವಾದ; ಕೌನ್ಸೆಲಿಂಗ್ ಆರಂಭಿಸಲ್ಲ ಎಂದ ಸರ್ಕಾರ
ಬೆಂಗಳೂರು, ಆಗಸ್ಟ್ 08; 2020-21ನೇ ಸಾಲಿನ ಪಿಯು ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು ಸಿಇಟಿಗೆ ಪರಿಗಣಿಸದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕ್ರಮ ಪ್ರಶ್ನಿಸಿ ಕೆಲ ವಿದ್ಯಾರ್ಥಿಗಳು ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದ್ದಾರೆ.
ಕೆಇಎ ಕ್ರಮ ಪ್ರಶ್ನಿಸಿ ಚಿಕ್ಕಮಗಳೂರಿನ ಆರ್. ಈಶ್ವರ್ ಸೇರಿ ಹಲವು ವಿದ್ಯಾರ್ಥಿಗಳು ಸಲ್ಲಿಸಿದ್ದ ಅರ್ಜಿಗಳನ್ನು ನ್ಯಾಯಮೂರ್ತಿ ಎಸ್. ಆರ್. ಕೃಷ್ಣ ಕುಮಾರ್ ಅವರಿದ್ದ ಏಕಸದಸ್ಯಪೀಠ ವಿಚಾರಣೆ ನಡೆಸಿತು. ಆಗ ಸರ್ಕಾರವು ಅರ್ಜಿಯ ಮುಂದಿನ ವಿಚಾರಣೆಯವರೆಗೆ 2022 ಸಾಲಿನಲ್ಲಿ ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗೆ ಕೌನ್ಸೆಲಿಂಗ್ ಪ್ರಕ್ರಿಯೆ ಆರಂಭಿಸುವುದಿಲ್ಲ ಎಂದು ಹೈಕೋರ್ಟ್‌ಗೆ ತಿಳಿಸಿದೆ.
ಸರ್ಕಾರದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಧ್ಯಾನ್ ಚಿನ್ನಪ್ಪ, 2022ನೇ ಸಾಲಿನಲ್ಲಿ ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗೆ ಕೌನ್ಸೆಲಿಂಗ್ ಪ್ರಕ್ರಿಯೆ ಇನ್ನೂ ಆರಂಭವಾಗಿಲ್ಲ. ಸದ್ಯ ದಾಖಲೆ ಪರಿಶೀಲನೆ ಪ್ರಕ್ರಿಯೆ ಆರಂಭಿಕ ಹಂತದಲ್ಲಿದೆ. ಈ ಅರ್ಜಿ ಕುರಿತ ಮುಂದಿನ ವಿಚಾರಣೆಯವರೆಗೆ ಕೆಇಎ ನೈಜ ಕೌನ್ಸೆಲಿಂಗ್ ಪ್ರಕ್ರಿಯೆ ಆರಂಭಿಸುವುದಿಲ್ಲ ಎಂದು ನ್ಯಾಯಪೀಠಕ್ಕೆ ತಿಳಿಸಿದರು.

ಈ ಹೇಳಿಕೆ ದಾಖಲಿಸಿಕೊಂಡ ನ್ಯಾಯಪೀಠ, ಕೆಇಎ ಯಾವುದೇ ತೆರನಾದ ದಾಖಲೆಗಳನ್ನು ಪರಿಶೀಲಿಸುವುದು ಅರ್ಜಿದಾರ ವಿದ್ಯಾರ್ಥಿಗಳ ಹಕ್ಕು ಮತ್ತು ವಾದಕ್ಕೆ ತೊಂದರೆ ಉಂಟು ಮಾಡುವಂತಿರಬಾರದು. ಇದು ನ್ಯಾಯಾಲಯದ ಮುಂದಿನ ಆದೇಶಕ್ಕೆ ಒಳಪಟ್ಟಿರುತ್ತದೆ. ಹಾಗೆಯೇ, ಮುಂದಿನ ವಿಚಾರಣೆಯೊಳಗೆ ಅರ್ಜಿಗೆ ಆಕ್ಷೇಪಣೆ ಇದ್ದರೆ ಕೆಇಎ ಸಲ್ಲಿಸಬಹುದು ಎಂದು ಸೂಚಿಸಿ ವಿಚಾರಣೆಯನ್ನು ಆಗಸ್ಟ್ 18ರ ಮಧ್ಯಾಹ್ನ 2.30ಕ್ಕೆ ಮುಂದೂಡಿತು.
ಅರ್ಜಿದಾರರ ಪರ ಹಿರಿಯ ವಕೀಲರು, 2022ನೇ ಸಾಲಿನಲ್ಲಿ ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗೆ 2021-22ನೇ ಶೈಕ್ಷಣಿಕ ವರ್ಷದ ಪಿಯು ಅಂಕ ಅನ್ವಯಿಸುವುದಿಲ್ಲ ಎಂದು ಕೆಇಎ ಹೇಳಿದೆ. ಈ ಕುರಿತು ಸಂಬಂಧಪಟ್ಟ ಕಾಯ್ದೆಗೆ ತಿದ್ದುಪಡಿ ತರದೇ ಆದೇಶ ಮಾಡಿ, ಜಾರಿಗೊಳಿಸಲು ಮುಂದಾಗಿದೆ. ಪರೀಕ್ಷೆ ಮುಗಿದ್ದು, ಫಲಿತಾಂಶ ಪ್ರಕಟಿಸಿರುವಾಗ ಕೆಇಎ ನಿಯಮ ಬದಲಿಸಲಾಗದು. ಅಲ್ಲದೇ 2020-21, 2021-22 ನೇ ಸಾಲಿನಲ್ಲಿ ವಿದ್ಯಾರ್ಥಿಗಳು ಪಡೆದಿರುವ ಅಂಕಗಳನ್ನು ಆಧರಿಸಿ ಶ್ರೇಯಾಂಕ ಪ್ರಕಟಿಸಬೇಕು. ಇದರಿಂದ ಯಾರಿಗೂ ಸಮಸ್ಯೆಯಾಗುವುದಿಲ್ಲ ಎಂದು ಹೇಳಿದರು.
ಅರ್ಜಿದಾರರು 2020-21ನೇ ಸಾಲಿನಲ್ಲಿ ಪಿಯು ಪರೀಕ್ಷೆಯಲ್ಲಿ ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾದವರು ಹಾಗೂ ಇವರು 2022ನೇ ಸಾಲಿನ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಸಂಬಂಧಿಸಿದಂತೆ 20202ರ ಜುಲೈನಲ್ಲಿ ನಡೆಸಿದ ಸಿಇಟಿ ಪರೀಕ್ಷೆಯ ಪುನರಾವರ್ತಿತ ವಿದ್ಯಾರ್ಥಿಗಳಾಗಿದ್ದಾರೆ. ಸಿಇಟಿ ಪರೀಕ್ಷೆ ಫಲಿತಾಂಶವನ್ನು ಜು.30ರಂದು ಪ್ರಕಟಿಸಲಾಗಿದೆ ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.
ಅಲ್ಲದೇ ಅರ್ಜಿದಾರರು 2020-21ನೇ ಸಾಲಿನ ಪಿಯು ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು ಪರಿಗಣಿಸದೇ 2022ನೇ ಸಿಇಟಿ ಪರೀಕ್ಷೆಯಲ್ಲಿನ ಅವರ ಶ್ರೇಯಾಂಕ ಪ್ರಕಟಿಸಲಾಗಿದೆ. ಆದರೆ, 2021ನೇ ಸಾಲಿನ ಪಿಯು ಪರೀಕ್ಷೆ ಅರ್ಜಿದಾರರು ಪಡೆದ ಶೇ.50ರಷ್ಟು ಅಂಕಗಳನ್ನು ಪರಿಗಣಿಸಬೇಕಿತ್ತು. ಆದರೆ, ಕೇವಲ 2022ರ ಸಿಇಟಿಯಲ್ಲಿ ಪಡೆದ ಅಂಕಗಳನ್ನು ಮಾತ್ರ ಪರಿಗಣಿಸಿ ಪಟ್ಟಿ ಬಿಡುಗಡೆ ಮಾಡಲಾಗಿದೆ. ಇದು ತಾರತಮ್ಯ ನೀತಿಯಿಂದ ಕೂಡಿದೆ ಎಂದು ಅರ್ಜಿದಾರರು ದೂರಿದ್ದಾರೆ.
ಸಿಇಟಿ ಶ್ರೇಯಾಂಕಕ್ಕೆ 2021ನೇ ಸಾಲಿನ ಪಿಯು ಪರೀಕ್ಷೆಯಲ್ಲಿ ಅರ್ಜಿದಾರರು ಪಡೆದ ಅಂಕಗಳನ್ನು ಪರಿಗಣಿಸುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ನಿರ್ದೇಶಿಸಬೇಕು. ಅರ್ಜಿ ಇತ್ಯರ್ಥವಾಗುವರೆಗೂ 2022ನೇ ಸಾಲಿನ ಸಿಇಟಿ ಕೌನ್ಸಿಲಿಂಗ್‌ಗೆ ತಡೆಯಾಜ್ಞೆ ನೀಡಬೇಕು ಎಂದು ಅರ್ಜಿದಾರರು ಕೋರಿದ್ದಾರೆ.
-
ಖೇಲೋ ಇಂಡಿಯಾ ಬುಡಕಟ್ಟು ಕ್ರೀಡಾಕೂಟ: 23 ಚಿನ್ನದ ಪದಕ ಗೆದ್ದು ಸಮಗ್ರ ಚಾಂಪಿಯನ್ ಪಟ್ಟ ಅಲಂಕರಿಸಿದ ಕರ್ನಾಟಕ -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ












Click it and Unblock the Notifications